ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್(Paris Olympics) ಕೂಟದಲ್ಲಿ ಭಾರತ ಈಗಾಗಲೇ ಶುಭಾರಂಭ ಮಾಡಿದೆ. ಗುರುವಾರ ನಡೆದಿದ್ದ ಆರ್ಚರಿ ಸ್ಪರ್ಧೆಯಲ್ಲಿ ಭಾರತದ ಮಹಿಳಾ ಮತ್ತು ಪುರುಷರ ತಂಡ ಉತ್ತಮ ಪ್ರದರ್ಶನ ತೋರುವ ಮೂಲಕ ಕ್ವಾರ್ಟರ್ ಫೈನಲ್ ಪ್ರವೇಶಿಸಿ ಐತಿಹಾಸಿಕ ಪದಕ ಭರವಸೆಯೊಂದನ್ನು ಮೂಡಿಸಿದೆ. ಇದೀಗ ನಾಳೆ(ಶನಿವಾರ) ನಡೆಯುವ ಹಲವು ವಿಭಾಗದ ಸ್ಪರ್ಧೆಗಳಲ್ಲಿ ಭಾರತೀಯ ಕ್ರೀಡಾಪಟುಗಳು ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ. ನಾಳೆ ಭಾರತ ಯಾವೆಲ್ಲ(Paris Olympics India schedule) ವಿಭಾಗದಲ್ಲಿ ಸ್ಪರ್ಧಿಸಲಿದೆ ಎನ್ನುವ ಮಾಹಿತಿ ಇಲ್ಲಿದೆ.
ಇಂದು ಉದ್ಘಾಟನಾ ಸಮಾರಂಭ ನಡೆಯುವ ಕಾರಣ ಯಾವುದೇ ಸ್ಪರ್ಧೆಗಳು ನಡೆಯುವುದಿಲ್ಲ. ಫ್ರಾನ್ಸ್ ಕಾಲಮಾನದಂತೆ ಸಾಯಂಕಾಲ 5.30ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ. ಭಾರತದಲ್ಲಿ ರಾತ್ರಿ 11 ಗಂಟೆಗೆ ಆರಂಭಗೊಳ್ಳಲಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾರತ ತಂಡ 84ನೇ ರಾಷ್ಟ್ರವಾಗಿ ಈ ಬಾರಿ ಕಾಣಿಸಿಕೊಳ್ಳಲಿದೆ. ಅವಳಿ ಒಲಿಂಪಿಕ್ಸ್ ಪದಕ ವಿಜೇತೆ ಪಿ.ವಿ ಸಿಂಧು ಮತ್ತು ಕಾಮನ್ವೆಲ್ತ್ ಗೇಮ್ಸ್‌ನಲ್ಲಿ 7 ಚಿನ್ನದ ಪದಕಗಳನ್ನು ಗೆದ್ದಿರುವ ಶರತ್ ಕಮಲ್ ಭಾರತದ ಧ್ವಜಧಾರಿಗಳಾಗಿ ಕಾಣಿಸಿಕೊಳ್ಳಲಿದ್ದಾರೆ.
ಬ್ಯಾಡ್ಮಿಂಟನ್
ಪುರುಷರ ಸಿಂಗಲ್ಸ್ ಗುಂಪು ಹಂತ: ಎಚ್ ಎಸ್ ಪ್ರಣಯ್, ಲಕ್ಷ್ಯ ಸೇನ್.
ಮಹಿಳೆಯರ ಸಿಂಗಲ್ಸ್ ಗುಂಪು ಹಂತ: ಪಿ.ವಿ ಸಿಂಧು.
ಪುರುಷರ ಡಬಲ್ಸ್ ಗುಂಪು ಹಂತ: ಸಾತ್ವಿಕ್ ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ.
ಮಹಿಳೆಯರ ಡಬಲ್ಸ್ ಗುಂಪು ಹಂತ: ತನೀಶಾ ಕ್ರಾಸ್ಟೊ ಮತ್ತು ಅಶ್ವಿನಿ ಪೊನ್ನಪ್ಪ. (ಮಧ್ಯಾಹ್ನ 12 ಗಂಟೆಯಿಂದ)
ರೋಯಿಂಗ್
ಪುರುಷರ ಸಿಂಗಲ್ ಸ್ಕಲ್ಸ್ ಹೀಟ್ಸ್: ಬಾಲರಾಜ್ ಪನ್ವಾರ್. ಆರಂಭ ಮಧ್ಯಾಹ್ನ 12:30 ರಿಂದ
ಶೂಟಿಂಗ್
10 ಮೀ ಏರ್ ರೈಫಲ್ ಮಿಶ್ರ ತಂಡ ಅರ್ಹತೆ: ಸಂದೀಪ್ ಸಿಂಗ್, ಅರ್ಜುನ್ ಬಾಬುತಾ, ಎಲವೆನಿಲ್ ವಲರಿವನ್, ರಮಿತಾ ಜಿಂದಾಲ್. ಮಧ್ಯಾಹ್ನ 12:30
10ಮೀ ಏರ್ ಪಿಸ್ತೂಲ್ ಪುರುಷರ ಅರ್ಹತೆ: ಸರಬ್ಜೋತ್ ಸಿಂಗ್, ಅರ್ಜುನ್ ಚೀಮಾ. (ಮಧ್ಯಾಹ್ನ 2 ಗಂಟೆ)
10ಮೀ ಏರ್ ರೈಫಲ್ ಮಿಶ್ರ ತಂಡ ಪದಕ ಸುತ್ತುಗಳು: (ಅರ್ಹತೆ ಪಡೆದರೆ) ಮಧ್ಯಾಹ್ನ 2 ಗಂಟೆ
10 ಮೀ ಏರ್ ಪಿಸ್ತೂಲ್ ಮಹಿಳೆಯರ ಅರ್ಹತೆ ಸುತ್ತು: ರಿದಮ್ ಸಾಂಗ್ವಾನ್, ಮನು ಭಾಕರ್. (ಸಂಜೆ 4 ಗಂಟೆಯಿಂದ)
ಟೆನಿಸ್; ಮೊದಲ ಸುತ್ತಿನ ಪಂದ್ಯಗಳು
ಪುರುಷರ ಸಿಂಗಲ್ಸ್: ಸುಮಿತ್ ನಗಾಲ್.
ಪುರುಷರ ಡಬಲ್ಸ್: ರೋಹನ್ ಬೋಪಣ್ಣ ಮತ್ತು ಎನ್. ಶ್ರೀರಾಮ್ ಬಾಲಾಜಿ. (ಮಧ್ಯಾಹ್ನ 3:30 ರಿಂದ)
ಟೇಬಲ್ ಟೆನ್ನಿಸ್
ಪುರುಷರ ಸಿಂಗಲ್ಸ್: ಶರತ್ ಕಮಲ್, ಹರ್ಮೀತ್ ದೇಸಾಯಿ
ಮಹಿಳೆಯರ ಸಿಂಗಲ್ಸ್: ಮಾಣಿಕಾ ಬಾತ್ರಾ, ಶ್ರೀಜಾ ಅಕುಲಾ. (ಸಂಜೆ 6:30 ರಿಂದ)
ಬಾಕ್ಸಿಂಗ್
ಮಹಿಳೆಯರ 54 ಕೆಜಿ ವಿಭಾಗ: ಪ್ರೀತಿ ಪವಾರ್, 32ರ ಸುತ್ತು. (ಸಂಜೆ 7 ರಿಂದ)
ಹಾಕಿ
ಪುರುಷರ ಗುಂಪು ‘ಬಿ’: ಭಾರತ ಮತ್ತು ನ್ಯೂಜಿಲ್ಯಾಂಡ್. (ರಾತ್ರಿ 9 ಗಂಟೆಗೆ)