ನವದೆಹಲಿ: ಬಹುನಿರೀಕ್ಷಿತ ಪ್ಯಾರಿಸ್ ಒಲಿಂಪಿಕ್ಸ್(Paris Olympics) ಕ್ರೀಡಾಕೂಡಕ್ಕೆ ಅವಳಿ ಒಲಿಂಪಿಕ್ಸ್ ಪದಕ ವಿಜೇತೆ ಪಿವಿ ಸಿಂಧು(PV Sindhu) ಸೇರಿ 7 ಭಾರತೀಯ ಶಟ್ಲರ್ಗಳು ಅರ್ಹತೆ ಪಡೆದಿದ್ದಾರೆ. ಮಹಿಳಾ ಡಬಲ್ಸ್ನಲ್ಲಿ ಕನ್ನಡತಿ ಅಶ್ವಿನಿ ಪೊನ್ನಪ್ಪ ಅವರಿಗೂ ಒಲಿಂಪಿಕ್ಸ್ ಟಿಕೆಟ್ ಲಭಿಸಿದೆ. ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಫೆಡರೇಷನ್ನ ಒಲಿಂಪಿಕ್ಸ್ ಅರ್ಹತಾ ರ್ಯಾಂಕಿಂಗ್ ಅನ್ವಯ ಒಲಿಂಪಿಕ್ಸ್ ಅರ್ಹತೆ ಸಂಪಾದಿಸಲು ಸೋಮವಾರ ಅಂತಿಮ ಗಡುವು ಆಗಿತ್ತು.
ಒಲಿಂಪಿಕ್ಸ್ ಅರ್ಹತಾ ಶ್ರೇಯಾಂಕದ ಅನ್ವಯ ಸಿಂಗಲ್ಸ್ ವಿಭಾಗದಲ್ಲಿ ಅಗ್ರ 16 ಶಟ್ಲರ್ಗಳಿಗೆ ಅರ್ಹತೆ ನೀಡಲಾಗಿದೆ. ಮಹಿಳಾ ಸಿಂಗಲ್ಸ್ನಲ್ಲಿ ಸಿಂಧು 12ನೇ ಸ್ಥಾನದಲ್ಲಿದ್ದರೆ, ಪುರುಷರ ಸಿಂಗಲ್ಸ್ನಲ್ಲಿ ಪ್ರಣಯ್ ಮತ್ತು ಲಕ್ಷ್ಯ ಸೇನ್ ಕ್ರಮವಾಗಿ 9 ಮತ್ತು 13ನೇ ಸ್ಥಾನದಲ್ಲಿದ್ದಾರೆ. ಕಳೆದ ಟೋಕಿಯ ಒಲಿಂಪಿಕ್ಸ್ನಲ್ಲಿ ಕಂಚು ಗೆದ್ದ ಸಿಂಧು ಅವರ ಮೇಲೆ ಈ ಬಾರಿಯೂ ಪದಲ ಬರವಸೆ ಇರಿಸಲಾಗಿದ್ದರೂ ಕಳೆದೊಂದು ವರ್ಷದಿಂದ ಸಿಂಧು ನಿರೀಕ್ಷಿತ ಪ್ರದರ್ಶನ ತೋರಿಲ್ಲ.
Shuttlers through to #Paris2024!
— SAI Media (@Media_SAI) April 29, 2024
7️⃣ of our top #Badminton players🇮🇳 have qualified across four categories through the #RaceToParis🗼 rankings.
HS Prannoy and Lakshya Sen have sealed their places for the Men's Singles event, while 2-time Olympic medallist PV Sindhu 🥈🥉 will be… pic.twitter.com/xuHjOXP39Q
ಪುರುಷರ ಡಬಲ್ಸ್ನಲ್ಲಿ ಸಾತ್ವಿಕ್ ಸಾಯಿರಾಜ್ ಮತ್ತು ಚಿರಾಗ್ ಶೆಟ್ಟಿ ಈಗಾಗಲೇ ಹಲವು ಟೂರ್ನಿಗಳಲ್ಲಿ ಜಯ ಸಾಧಿಸಿ ಭಾರತಕ್ಕೆ ಐತಿಹಾಸಿಕ ಪದಕ ಕೂಡ ಗೆದ್ದು ಕೊಟ್ಟಿದ್ದಾರೆ. ಹೀಗಾಗಿ ಈ ಜೋಡಿಯ ಮೇಲೆ ಭಾರತ ಭಾರೀ ನಿರೀಕ್ಷೆಯೊಂದನ್ನು ಇಟ್ಟಿದೆ. ಮಹಿಳಾ ಡಬಲ್ಸ್ನಲ್ಲಿ ಅಶ್ವಿನಿ ಪೊನ್ನಪ್ಪ ಮತ್ತು ತನಿಷಾ ಕ್ರಾಸ್ಟೋ ಜೋಡಿ ಕಣಕ್ಕಿಳಿಯಲಿದೆ. ಆದರೆ, ಭಾರತದ ಇನ್ನೊಂದು ಮಹಿಳಾ ಡಬಲ್ಸ್ ಜೋಡಿಯಾದ ತ್ರಿಸಾ ಜೋಲಿ-ಗಾಯತ್ರಿ ಗೋಪಿಚಂದ್ಗೆ ಅರ್ಹತೆ ಲಭಿಸಿಲ್ಲ.
ಇದನ್ನೂ ಓದಿ Paris Olympics: ಬೆಳ್ಳಿ ಗೆದ್ದು ಪ್ಯಾರಿಸ್ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ಶೂಟರ್ ಮಹೇಶ್ವರಿ
ಅರ್ಹತೆ ಪಡೆದ ಶಟ್ಲರ್ಗಳು
ಪಿವಿ ಸಿಂಧು, ಲಕ್ಷ್ಯ ಸೇನ್, ಎಚ್ ಎಸ್ ಪ್ರಣಯ್, ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ, ಚಿರಾಗ್ ಶೆಟ್ಟಿ, ಅಶ್ವಿನಿ ಪೊನ್ನಪ್ಪ, ತನಿಶಾ ಕ್ರಾಸ್ಟೊ.
ಜುಲೈ 26ಕ್ಕೆ ಒಲಿಂಪಿಕ್ಸ್ ಆರಂಭ
ಮಹತ್ವದ ಕ್ರೀಡಾಕೂಡವಾದ ಪ್ಯಾರಿಸ್ ಒಲಿಂಪಿಕ್ಸ್‌ನ(Paris Olympics 2024) ಉದ್ಘಾಟನಾ ಸಮಾರಂಭಕ್ಕೆ(paris olympics 2024 opening ceremony) ದಿನಾಂಕ ನಿಗದಿಯಾಗಿದೆ. ಜುಲೈ 26ರಂದು ಸೀನ್ ನದಿಯಲ್ಲಿ ಸಂಜೆ 7.30ಕ್ಕೆ ಅದ್ಧೂರಿ ಕಾರ್ಯಕ್ರಮ ನೆರವೇರಲಿದೆ.
ಒಲಿಂಪಿಕ್ಸ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕ್ರೀಡಾಂಗಣದ ಹೊರಗಡೆ ನಡೆಯುವ ಉದ್ಘಾಟನಾ ಸಮಾರಂಭ ಇದಾಗಿದೆ. 10,500ಕ್ಕೂ ಹೆಚ್ಚು ಅಥ್ಲೀಟ್‌ಗಳು ಪ್ಯಾರಿಸ್‌ನಿಂದ ಸುಮಾರು 6 ಕಿಲೋಮೀಟರ್ ವರೆಗೆ ಬೋಟ್‌ಗಳಲ್ಲೇ ಪರೇಡ್ ನಡೆಸಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.