Site icon Vistara News

Paris Olympics: ಬೆಳ್ಳಿ ಗೆದ್ದು ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಶೂಟರ್​ ಮಹೇಶ್ವರಿ

Paris Olympics

ನವದೆಹಲಿ: ಪ್ಯಾರಿಸ್​ ಒಲಿಂಪಿಕ್ಸ್(Paris Olympics)​ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇದು ಹಲವು ಭಾರತೀಯ ಕ್ರೀಡಾಪಟುಗಳು ವಿವಿಧ ಸ್ಪರ್ಧೆಗಳ ವಿಭಾಗದಲ್ಲಿ ಅಮೋಘ ಪ್ರದರ್ಶನ ತೋರುವ ಮೂಲಕ ಒಲಿಂಪಿಕ್ಸ್​ ಅರ್ಹತೆ(Paris 2024 Olympic quota) ಪಡೆಯುತ್ತಿದ್ದಾರೆ. ಇದೀಗ ಭಾರತದ ಮಹೇಶ್ವರಿ ಚೌಹಾಣ್(Maheshwari Chauhan) ದೋಹಾದಲ್ಲಿ ನಡೆಯುತ್ತಿರುವ ಐಎಸ್‌ಎಸ್‌ಎಫ್ ಶೂಟಿಂಗ್ ಫೈನಲ್ ಒಲಿಂಪಿಕ್ ಅರ್ಹತಾ ಚಾಂಪಿಯನ್‌ಷಿಪ್‌ನ ಮಹಿಳಾ ಸ್ಕೀಟ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಒಲಿಂಪಿಕ್ಸ್​ ಟಿಕೆಟ್​ ಗಿಟ್ಟಿಸಿಕೊಂಡಿದ್ದಾರೆ. ಇದರೊಂದಿಗೆ ಪ್ಯಾರಿಸ್ ಒಲಿಂಪಿಕ್ಸ್‌ಗೆ ಭಾರತದ 21 ನೇ ಕೋಟಾ ಭರ್ತಿಯಾಗಿದೆ.

ಇದೇ ಮೊದಲ ಬಾರಿಗೆ ಐಎಸ್‌ಎಸ್‌ಎಫ್ ಫೈನಲ್‌ನಲ್ಲಿ ಸ್ಪರ್ಧಿಸಿದ್ದ ಮಹೇಶ್ವರಿ, ಭಾನುವಾರ ನಡೆದ ಚಿನ್ನದ ಪದಕದ ಹೋರಾಟದಲ್ಲಿ ಚಿಲಿಯ ಫ್ರಾನ್ಸಿಸ್ಕಾ ಕ್ರೊವೆಟ್ಟೊ ಚಾಡಿಡ್ ವಿರುದ್ಧ 3-4 ಸಣ್ಣ ಅಂತರದಲ್ಲಿ ಸೋತು ಬೆಳ್ಳಿಗೆ ತೃಪ್ತಿಪಟ್ಟರು. ಈ ಸಾಧನೆ ಬಳಿಕ ಮಾತನಾಡಿದ ಮಹೇಶ್ವರಿ, ‘ಇಲ್ಲಿಗೆ ಬರಲು ಬಹಳಷ್ಟು ಕಠಿಣ ಪರಿಶ್ರಮಪಟ್ಟಿದ್ದೇನೆ. ಒಟ್ಟಾರೆಯಾಗಿ ನನ್ನ ಈ ಪ್ರದರ್ಶನ ತೃಪ್ತಿಕರವಾಗಿದೆ’ ಎಂದು ಹೇಳಿದರು.

ಕುಸ್ತಿಯಲ್ಲಿ ವಿನೇಶ್, ಅಂಶು ಮಲಿಕ್​ಗೆ ಒಲಿಂಪಿಕ್ಸ್​ ಟಿಕೆಟ್​


ಕಳೆದ ವಾರ ನಡೆದಿದ್ದ ಕುಸ್ತಿ ಸ್ಪರ್ಧೆಯಲ್ಲಿ ಕಾಮನ್‌ವೆಲ್ತ್ ಮತ್ತು ಏಷ್ಯನ್ ಗೇಮ್ಸ್ ಚಾಂಪಿಯನ್ ವಿನೇಶ್ ಫೋಗಟ್(Vinesh Phogat) ಅವರು ಏಷ್ಯನ್ ಒಲಿಂಪಿಕ್ ಅರ್ಹತಾ ಸುತ್ತಿನ ಮಹಿಳೆಯರ 50 ಕೆಜಿ ಸ್ಪರ್ಧೆಯಲ್ಲಿ ಸೆಮಿಫೈನಲ್‌ನಲ್ಲಿ ಕಜಕಿಸ್ತಾನ್‌ನ ಲಾರಾ ಗ್ಯಾನಿಕಿಜಿ ಅವರನ್ನು 10-0 ಅಂತರದಿಂದ ಸೋಲಿಸುವ ಮೂಲಕ ಪ್ಯಾರಿಸ್​ ಒಲಿಂಪಿಕ್ಸ್​ಗೆ(Paris Olympics) ಅರ್ಹತೆ ಪಡೆದಿದ್ದಾರೆ. ಅತ್ಯಂತ ಶ್ರೇಷ್ಠ ಪ್ರದರ್ಶನ ತೋರಿದ ವಿನೇಶ್ ಎದುರಾಳಿಯನ್ನು ಕೇವಲ 4:18 ನಿಮಿಷದಲ್ಲಿ ಮಣಿಸಿದರು. 57 ಕೆಜಿ ವಿಭಾಗದಲ್ಲಿ ಅಂಶು ಮಲಿಕ್‌ ಕೂಡ ಒಲಿಂಪಿಕ್ಸ್​ಗೆ(Paris Olympics) ಅರ್ಹತೆ ಪಡೆದರು. ಇವರು ಉಜ್ಬೆಕ್ ಗ್ರಾಪ್ಲರ್ ಅವರನ್ನು 10-0 ಅಂತರದಿಂದ ಸೋಲಿಸಿ ಈ ಸಾಧನೆ ಮಾಡಿದರು.

ಇದನ್ನೂ ಓದಿ IPL 2024: ಗೆಲುವಿನಲ್ಲೂ ನೂತನ ದಾಖಲೆ ಬರೆದ ಆರ್​ಸಿಬಿ

ಜುಲೈ 26ಕ್ಕೆ ಒಲಿಂಪಿಕ್ಸ್​ ಆರಂಭ

ಮಹತ್ವದ ಕ್ರೀಡಾಕೂಡವಾದ ಪ್ಯಾರಿಸ್ ಒಲಿಂಪಿಕ್ಸ್‌ನ(Paris Olympics 2024) ಉದ್ಘಾಟನಾ ಸಮಾರಂಭಕ್ಕೆ(paris olympics 2024 opening ceremony) ದಿನಾಂಕ ನಿಗದಿಯಾಗಿದೆ. ಜುಲೈ 26ರಂದು ಸೀನ್ ನದಿಯಲ್ಲಿ ಸಂಜೆ 7.30ಕ್ಕೆ ಅದ್ಧೂರಿ ಕಾರ್ಯಕ್ರಮ ನೆರವೇರಲಿದೆ.

ಒಲಿಂಪಿಕ್ಸ್​ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕ್ರೀಡಾಂಗಣದ ಹೊರಗಡೆ ನಡೆಯುವ ಉದ್ಘಾಟನಾ ಸಮಾರಂಭ ಇದಾಗಿದೆ. 10,500ಕ್ಕೂ ಹೆಚ್ಚು ಅಥ್ಲೀಟ್‌ಗಳು ಪ್ಯಾರಿಸ್‌ನಿಂದ ಸುಮಾರು 6 ಕಿಲೋಮೀಟರ್‌ ವರೆಗೆ ಬೋಟ್‌ಗಳಲ್ಲೇ ಪರೇಡ್‌ ನಡೆಸಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

Exit mobile version