Site icon Vistara News

Paris Olympics: ಕಂಚಿನ ಪದಕ ಗೆದ್ದ ರೈಲ್ವೆ ಟಿಕೆಟ್ ಕಲೆಕ್ಟರ್ ಸ್ವಪ್ನಿಲ್‌ ಕುಸಾಲೆ

Paris Olympics:

Paris Olympics: Men's 50m rifle men's 3 positions final - Bronze for Swapnil Kusale!

ಪ್ಯಾರಿಸ್​: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ(Paris Olympics) ಭಾರತ ಸ್ವಪ್ನಿಲ್‌ ಕುಸಾಲೆ ಪುರುಷರ 50 ಮೀ. ರೈಫ‌ಲ್‌ 3 ಪೊಸಿಶನ್‌ನಲ್ಲಿ ಭಾರತಕ್ಕೆ ಕಂಚಿನ ಪದಕ ಗೆದ್ದಿದ್ದಾರೆ. ಈ ಮೂಲಕ ಭಾರತದ ಪದಕ ಸಂಖ್ಯೆ ಮೂರಕ್ಕೇರಿದೆ. ಈ ಮೂರು ಪದಕ ಕೂಡ ಒಲಿದದ್ದು ಶೂಟಿಂಗ್​ ವಿಭಾಗದಲ್ಲಿ.​

ಗುರುವಾರ ನಡೆದ 50 ಮೀ. ರೈಫ‌ಲ್‌ 3 ಪೊಸಿಶನ್‌ ಫೈನಲ್​ ಪಂದ್ಯದಲ್ಲಿ ಸ್ವಪ್ನಿಲ್ ಅವರು 451.4 ಅಂಕ ಗಳಿಸಿ ಕಂಚಿನ ಪದಕ ತಮ್ಮದಾಗಿಸಿಕೊಂಡರು. ಸ್ವಪ್ನಿಲ್‌ ಫೈನಲ್​ ಪಂದ್ಯದ ಪ್ರೋನ್‌ನಲ್ಲಿ 156.8, ನೀಲಿಂಗ್‌ನಲ್ಲಿ 153.3 ಮತ್ತು ಸ್ಟ್ಯಾಂಡಿಂಗ್‌ನಲ್ಲಿ 195 ಅಂಕಗಳಿಸಿ ಮೂರನೇ ಸ್ಥಾನ ಪಡೆದು ಕಂಚಿನ ಪದಕ್ಕಕೆ ಕೊರಳೊಡ್ಡಿದರು. 463.6 ಅಂಕ ಗಳಿಸಿದ ಚೀನಾದ ಲಿಯು ಯುಕುನ್ ಚಿನ್ನ ಮತ್ತು ಉಕ್ರೇನ್​ನ ಕುಲಿಶ್ ಸೆರ್ಹಿ(461.3) ಬೆಳ್ಳಿ ಪದಕ ಗೆದ್ದರು.

ಬುಧವಾರ ನಡೆದಿದ್ದ ಅರ್ಹತಾ ಸುತ್ತಿನಲ್ಲಿ ಸ್ವಪ್ನಿಲ್‌ ಕುಸಾಲೆ 7ನೇ ಸ್ಥಾನಿಯಾಗಿ ಫೈನಲ್‌ ಪ್ರವೇಶಿಸಿದ್ದರು. ಭೋಪಾಲ್‌ನಲ್ಲಿ ನಡೆದಿದ್ದ ಕೊನೆಯ ಅರ್ಹತಾ ಸುತ್ತಿನಲ್ಲಿ ಅವರು ಪ್ಯಾರಿಸ್‌ ಒಲಿಂಪಿಕ್ಸ್‌ ಅರ್ಹತೆ ಪಡೆದಿದ್ದರು. 2015ರ ಕುವೈತ್​ ಏಷ್ಯನ್‌ ಶೂಟಿಂಗ್‌ ಚಾಂಪಿಯನ್‌ಶಿಪ್‌ ಜೂನಿಯರ್‌ ವಿಭಾಗದಲ್ಲಿ ಚಿನ್ನ, 59ನೇ ಹಾಗೂ 61ನೇ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲೂ ಚಿನ್ನ ಗೆದ್ದ ಸಾಧನೆ ಮಾಡಿದ್ದಾರೆ. 50 ಮೀ. ರೈಫ‌ಲ್‌ 3 ಪೊಸಿಶನ್‌ನ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಶೂಟರ್​ ಎಂಬ ಕೀರ್ತಿಗೂ ಪಾತ್ರರಾಗಿದ್ದಾರೆ.

ರೈಲ್ವೆ ಟಿಕೆಟ್ ಕಲೆಕ್ಟರ್


ಮಹಾರಾಷ್ಟ್ರದ ಕೊಲ್ಹಾಪುರದ ಕಂಬಳವಾಡಿ ಗ್ರಾಮದ 28 ವರ್ಷದ ಸ್ವಪ್ನಿಲ್ ಕುಶಲೆ ಭಾರತ ಕ್ರಿಕೆಟ್​ ತಂಡದ ಮಾಜಿ ನಾಯಕ ಹಾಗೂ ಆಟಗಾರ ಮಹೇಂದ್ರ ಸಿಂಗ್​ ಅವರ ಅಪಟ್ಟ ಅಭಿಮಾನಿ. ಜತೆಗೆ ಧೋನಿಯಂತೆಯೇ ಇವರು ಕೂಡ ರೇಲ್ವೆ ಟಿಕೆಟ್ ನಿರೀಕ್ಷಕರಾಗಿ ಕಾರ್ಯನಿರ್ವಹಿಸಿದ್ದರು. ಧೋನಿಯವರ ಬಯೋಪಿಕ್ ಸಿನೆಮಾವನ್ನು ಪದೇ ಪದೇ ವೀಕ್ಷಿಸಿದ ಬಳಿಕ ಸ್ವಪ್ನಿಲ್ ಕೂಡ ಪೂರ್ಣಪ್ರಮಾಣದಲ್ಲಿ ಶೂಟಿಂಗ್‌ನಲ್ಲಿ ತೊಡಗಿಕೊಂಡರು. ಧೋನಿಯವರಂತೆ ಶಾಂತ ಸ್ವಾಭಾವದ ಈ ಶೂಟರ್​ ಇದೀಗ ಒಲಿಂಪಿಕ್ಸ್‌ ಪದಕವೊಂದನ್ನು ಗೆದ್ದು ಇತಿಹಾಸದ ಪುಟ ಸೇರಿದ್ದಾರೆ.

ಇದನ್ನೂ ಓದಿ Paris Olympics: ಇಂದು ಲಕ್ಷ್ಯ ಸೇನ್‌-ಪ್ರಣಯ್ ಮಧ್ಯೆ ಪ್ರೀ ಕ್ವಾರ್ಟರ್​ ಮುಖಾಮುಖಿ; ಭಾರತಕ್ಕೆ ಒಂದು ಪದಕ ನಷ್ಟ

ಫೈನಲ್​ ಪ್ರವೇಶಿಸಿದ ಬಳಿಕ ಮಾಧ್ಯಮದ ಜತೆ ಮಾತನಾಡಿದ್ದ ಸ್ವಪ್ನಿಲ್, ನನ್ನ ಮತ್ತು ಧೋನಿಯವರ ಜೀವನದಲ್ಲಿ ಹಲವು ಸಾಮ್ಯತೆಗಳು ಇವೆ. ನಾನು ಅವರ ಅಪ್ಪಟ ಅಭಿಮಾನಿ. ಅವರ ಬಯೋಪಿಕ್ ನೋಡಿಯೇ ನಾನು ಶೂಟಿಂಗ್​ನಲ್ಲಿ ಏನಾದರೂ ಸಾಧನೆ ಮಾಡಬೇಕು ಎಂದು ನಿರ್ಧರಿಸಿದ್ದು. ಅವರಂತೆಯೇ ನನ್ನದೂ ಕೂಡ ಶಾಂತಚಿತ್ತದ ಸ್ವಾಭಾವ. ನಾನು ಕೂಡ ರೈಲ್ವೆ ಟಿಕೆಟ್ ಕಲೆಕ್ಟರ್ ಆಗಿದ್ದೇನೆ’ ಎಂದು ಹೇಳಿದ್ದರು.

Exit mobile version