ಮೊನಾಕೊ: ಬಹುನಿರೀಕ್ಷಿತ ಪ್ಯಾರಿಸ್ ಒಲಿಂಪಿಕ್ಸ್(Paris Olympics) ಕ್ರೀಡಾಕೂಟ ಜುಲೈ 26ರಿಂದ ಆರಂಭಗೊಳ್ಳಲಿದೆ. ಕೂಟ ಆರಂಭಕ್ಕೂ ಮುನ್ನವೇ ಎಲ್ಲ ಕ್ರೀಡಾಪಡುಗಳಿಗೆ ಸಿಹಿ ಸುದ್ದಿಯೊಂದು ಲಭಿಸಿದೆ. ಟ್ರ್ಯಾಕ್ ಮತ್ತು ಫೀಲ್ಡ್(track & field gold medallists) ವಿಭಾಗದಲ್ಲಿ ಚಿನ್ನ ಜಯಿಸುವ ಅಥ್ಲೀಟ್‌ಗಳಿಗೆ 41.60 ಲಕ್ಷ ನಗದು ಪ್ರಶಸ್ತಿ ನೀಡಲು ವಿಶ್ವ ಅಥ್ಲೆಟಿಕ್ (ಡಬ್ಲ್ಯುಎ) ಸಂಸ್ಥೆ ತೀರ್ಮಾನಿಸಿದೆ. 2028ರಲ್ಲಿ ಲಾಸ್ ಏಂಜಲಿಸ್ನಲ್ಲಿ ನಡೆಯುವ ಒಲಿಂಪಿಕ್ ಕೂಟದಲ್ಲಿ ಮೊದಲ ಮೂರು ಸ್ಥಾನ ಪಡೆಯುವ ಎಲ್ಲರಿಗೂ ನಗದು ಪ್ರಶಸ್ತಿ ನೀಡುವುದಾಗಿಯೂ ಸಂಸ್ಥೆ ಘೋಷಿಸಿದೆ. ಇದೇ ಮೊದಲ ಬಾರಿಗೆ ಒಲಿಂಪಿಕ್ ಕೂಟದಲ್ಲಿ ನಗದು ಪ್ರಶಸ್ತಿ ನೀಡಲಾಗುತ್ತಿದೆ.
ಟೋಕಿಯೊ ಒಲಿಂಪಿಕ್ ಕೂಟದ ಜಾವೆಲಿನ್ ಥ್ರೋದಲ್ಲಿ ಚಿನ್ನದ ಪದಕ ಜಯಿಸಿದ್ದದ್ದ ನೀರಜ್ ಚೋಪ್ರಾ ಅವರು ಈ ಬಾರಿ ಚೆನ್ನ ಗೆದ್ದರೆ ಅವರಿಗೆ 50,000 ಅಮೆರಿಕನ್ ಡಾಲರ್ ಬಹುಮಾನ ದೊರೆಯಲಿದೆ. ನೀರಜ್ ಅವರು ಟ್ರ್ಯಾಕ್ ಮತ್ತು ಫೀಲ್ಡ್ ವಿಭಾಗದಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಕ್ರೀಡಾಪಟು ಎಂಬ ಹೆಗ್ಗಳಿಕೆ ಹೊಂದಿದ್ದಾರೆ. ಪ್ಯಾರಿಸ್‌ನಲ್ಲಿಯೂ ಅವರ ಮೇಲೆ ಚಿನ್ನದ ನಿರೀಕ್ಷೆ ಮಾಡಲಾಗಿದೆ.
The Paris Olympic Games will award $50,000 to each of this year's 48 athletics gold medalists, ending a 128-year tradition https://t.co/gvLGiTnTOE pic.twitter.com/4C0sj7NShL
— Reuters (@Reuters) April 10, 2024
“ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ)ಯಿಂದ ಬರುವ ಹಣವು ಒಲಿಂಪಿಕ್ ಕ್ರೀಡೆಗಳಿಗೆ ಮರಳಿ ಹೋಗುವಂತೆ ಮಾಡಿರುವುದು ಸಂತಸ ತಂದಿದೆ. ಡೈಮಂಡ್ ಲೀಗ್, ಕಾಂಟಿನೆಂಟಲ್ ಕಪ್‌ಗಳಲ್ಲಿ ಪದಕ ಗೆದ್ದಾಗ ನಗದು ಬಹುಮಾನ ಇರುತ್ತಿತ್ತು. ಆದರೆ ಒಲಿಂಪಿಕ್ಸ್ ಬಹುಮಾನದಲ್ಲಿ ಈ ಸೌಕರ್ಯ ಇರಲಿಲ್ಲ. ಇದೀಗ ಒಲಿಂಪಿಕ್ಸ್ನಲ್ಲಿಯೂ ಈ ನಿಯಮ ಬರಲಿದೆ” ಎಂದು ಡಬ್ಲ್ಯುಎ ಅಧ್ಯಕ್ಷ ಸೆಬಾಸ್ಟಿಯನ್ ಕೊ ಹೇಳಿದ್ದಾರೆ.
US broadcaster NBC is on track to hit a new ad sales record in Olympic history for this summer's Paris games, as fans are expected to fill stadiums for the first time since the COVID-19 pandemic https://t.co/fZcYhD9UYa pic.twitter.com/JYicWMYzmW
— Reuters (@Reuters) April 10, 2024
ಸೀನ್ ನದಿಯಲ್ಲಿ ಉದ್ಘಾಟನಾ ಸಮಾರಂಭ
ಉದ್ಘಾಟನಾ ಸಮಾರಂಭ(paris olympics 2024 opening ceremony) ಜುಲೈ 26ರಂದು ಸೀನ್ ನದಿಯಲ್ಲಿ ಸಂಜೆ 7.30ಕ್ಕೆ ಅದ್ಧೂರಿ ಕಾರ್ಯಕ್ರಮದೊಂದಿಗೆ ನೆರವೇರಲಿದೆ. ಇದಕ್ಕೆ ಬೇಕಾದ ಎಲ್ಲ ಸಿದ್ಧತೆಯನ್ನು ಈಗಾಗಲೇ ಕ್ರೀಡಾಕೂಟದ ಆಯೋಜಕರು ಮಾಡಿದ್ದಾರೆ. ಗೇಮ್ಸ್‌ಗಾಗಿಯೇ ಇಲ್ಲಿನ ಸೀನ್ ನದಿಯನ್ನು ಸಾರ್ವಜನಿಕ ನಿಧಿಯಿಂದ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಿ ಈ ನದಿಯನ್ನು ಸ್ನಾನಮಾಡಲು ಯೋಗ್ಯವೆನಿಸುವ ರೀತಿಯಲ್ಲಿ ಸ್ವಚ್ಛ ಮಾಡಲಾಗಿದೆ.
ಇದನ್ನೂ ಓದಿ Mirabai Chanu: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಮೀರಾಬಾಯಿ ಚಾನು
A picture is worth a thousand words, here is the official poster for our Games: Olympics and Paralympics. Together, they form one and the same great story, that of #Paris2024 #Olympics #OlympicsParis pic.twitter.com/srAtKhIgso
— Paris 2024 Olympics (English) (@OlympicsParis) March 5, 2024
ಬೋಟ್‌ಗಳಲ್ಲೇ ಪರೇಡ್
ಒಲಿಂಪಿಕ್ಸ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕ್ರೀಡಾಂಗಣದ ಹೊರಗಡೆ ನಡೆಯುವ ಉದ್ಘಾಟನಾ ಸಮಾರಂಭ ಇದಾಗಿದೆ. 10,500ಕ್ಕೂ ಹೆಚ್ಚು ಅಥ್ಲೀಟ್‌ಗಳು ಪ್ಯಾರಿಸ್‌ನಿಂದ ಸುಮಾರು 6 ಕಿಲೋಮೀಟರ್ ವರೆಗೆ ಬೋಟ್‌ಗಳಲ್ಲೇ ಪರೇಡ್ ನಡೆಸಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.