Site icon Vistara News

Paris Paralympic 2024: ಪ್ಯಾರಾಲಿಂಪಿಕ್ಸ್ ಆರಂಭಕ್ಕೂ ಮುನ್ನವೇ ಭಾರತಕ್ಕೆ ಆಘಾತ; ಹಾಲಿ ಚಾಂಪಿಯನ್‌ ಪ್ರಮೋದ್ ಭಗತ್‌ಗೆ ಅಮಾನತು ಶಿಕ್ಷೆ

Paris Paralympic 2024

Paris Paralympic 2024: India's Pramod Bhagat Suspended From Paris Paralympics Over Breach Of Anti-Doping Regulations

ನವದೆಹಲಿ: ಪ್ಯಾರಿಸ್​ ಪ್ಯಾರಾಲಿಂಪಿಕ್ಸ್(Paris Paralympic 2024) ಕ್ರೀಡಾಕೂಟ ಆರಂಭಕ್ಕೂ ಮುನ್ನವೇ ಭಾರತಕ್ಕೆ ದೊಡ್ಡ ಹಿನ್ನಡೆ ಉಂಟಾಗಿದೆ. ಟೋಕಿಯೊ ಪ್ಯಾರಾಲಿಂಪಿಕ್ಸ್ ಬ್ಯಾಡ್ಮಿಂಟನ್​ ಪುರುಷರ ಸಿಂಗಲ್ಸ್ ಎಸ್‌ಎಲ್ 3 ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಪ್ರಮೋದ್ ಭಗತ್(Pramod Bhagat) ಅವರನ್ನು 18 ತಿಂಗಳ ಅವಧಿಗೆ ಅಮಾನತುಗೊಳಿಸಲಾಗಿದೆ. ಹೀಗಾಗಿ ಪ್ರಮೋದ್​ಗೆ ಈ ಬಾರಿಯ ಪ್ಯಾರಾಲಿಂಪಿಕ್ಸ್ ಕೈತಪ್ಪಿದೆ. ಡೋಪಿಂಗ್ ವಿರೋಧಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅವರಿಗೆ ಈ ಶಿಕ್ಷೆ ವಿಧಿಸಲಾಗಿದೆ ಎಂದು ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ (BWF) ತನ್ನ ಪ್ರಕಟನೆಯಲ್ಲಿ ತಿಳಿಸಿದೆ.

ಮಾರ್ಚ್ 1, 2024 ರಂದು, ಕೋರ್ಟ್ ಆಫ್ ಆರ್ಬಿಟ್ರೇಶನ್ ಆಫ್ ಸ್ಪೋರ್ಟ್ (CAS) ಡೋಪಿಂಗ್ ವಿರೋಧಿ ವಿಭಾಗವು ಬಿಡಬ್ಲ್ಯುಎಫ್​ ಡೋಪಿಂಗ್ ವಿರೋಧಿ ನಿಯಮಗಳ ಉಲ್ಲಂಘನೆಯಲ್ಲಿ ಭಗತ್, 12 ತಿಂಗಳೊಳಗೆ ಮೂರು ಬಾರಿ ವಿಫಲರಾಗಿದ್ದಾರೆ ಎಂದು ಬಿಡಬ್ಲ್ಯುಎಫ್​ ತನ್ನ ಹೇಳಿಕೆಯಲ್ಲಿ ತಿಳಿಸಿದೆ. “ಭಗತ್ ತಮ್ಮ ಅಮಾನತಿನ ನಿರ್ಧಾರವನ್ನು ಪ್ರಶ್ನಿಸಿ ಜುಲೈ 29 ರಂದು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ(CAS)ಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ, ಈ ಮನವಿಯನ್ನು ಸಿಎಎಸ್‌ ವಜಾಗೊಳಿಸಿದೆ.

ಇದನ್ನೂ ಓದಿ Paris Olympics 2024 : ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ಮೋದಿಯಿಂದ ಪ್ಯಾರಿಸ್ ಒಲಿಂಪಿಕ್ಸ್ ಸಾಧಕರಿಗೆ ಆತಿಥ್ಯ

ಮೂರು ಬಾರಿ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಗತ್‌ ಚಿನ್ನ ಗೆದ್ದಿದ್ದಾರೆ. ಕಳೆದ ಟೋಕಿಯೋದಲ್ಲಿಯೂ ಚಿನ್ನ ಗೆದ್ದಿದ್ದರು. ಆದರೆ, ಈ ಬಾರಿ ಅವರಿಗೆ ಪ್ರಶಸ್ತಿ ಗೆಲ್ಲಲು ಸಾಧ್ಯವಾಗುವುದಿಲ್ಲ. “ಇದು ಅತ್ಯಂತ ದುಃಖಕರ ಮತ್ತು ದುರದೃಷ್ಟಕರ ಸಂಗತಿ. ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಖಚಿತವಾದ ಒಂದು ಪದಕ ಈ ಬಾರಿ ಕೈತಪ್ಪಿದೆ. ಭಗತ್‌ ಬಲಶಾಲಿಯಾಗಿ ಮರಳುತ್ತಾರೆ ಎಂದು ನನಗೆ ಖಾತ್ರಿಯಿದೆ” ಎಂದು ಭಾರತದ ಪ್ಯಾರಾ-ಬ್ಯಾಡ್ಮಿಂಟನ್ ಮುಖ್ಯ ಕೋಚ್ ಗೌರವ್ ಖನ್ನಾ ಪಿಟಿಐಗೆ ತಿಳಿಸಿದ್ದಾರೆ.

ಐದನೇ ವಯಸ್ಸಿನಲ್ಲಿ ಎಡಗಾಲಿನ ಅಂಗವೈಕಲ್ಯಕ್ಕೆ ತುತ್ತಾಗಿ ಪೋಲಿಯೊಗೆ ಒಳಗಾದ ಭಗತ್ ಅವರು ಎರಡು ಬಾರಿ ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತರಾಗಿದ್ದಾರೆ ಮತ್ತು ಅವರ ವಿಭಾಗದಲ್ಲಿ ಪ್ರಸ್ತುತ ವಿಶ್ವ ನಂ 3 ಆಗಿದ್ದಾರೆ.

Exit mobile version