PBKS vs SRH: ಸೋಲಿನ ಮೂಲಕ ಅಭಿಯಾನ ಮುಗಿಸಿದ ಪಂಜಾಬ್​; ಹೈದರಾಬಾದ್​​ಗೆ 4 ವಿಕೆಟ್​ ಜಯ - Vistara News

ಕ್ರೀಡೆ

PBKS vs SRH: ಸೋಲಿನ ಮೂಲಕ ಅಭಿಯಾನ ಮುಗಿಸಿದ ಪಂಜಾಬ್​; ಹೈದರಾಬಾದ್​​ಗೆ 4 ವಿಕೆಟ್​ ಜಯ

PBKS vs SRH: ಈಗಾಗಲೇ ಪ್ಲೇ ಆಫ್​ ಪ್ರವೇಶಿಸಿರುವ ಹೈದರಾಬಾದ್​ ಈ ಗೆಲುವಿನೊಂದಿಗೆ 17 ಅಂಕದೊಂದಿಗೆ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ. ರಾತ್ರಿ ನಡೆಯುವ ಪಂದ್ಯದಲ್ಲಿ ರಾಜಸ್ಥಾನ್​ ತಂಡ ಕೆಕೆಆರ್​ ವಿರುದ್ಧ ಗೆದ್ದರೆ ಹೈದರಾಬಾದ್​ ಮೂರನೇ ಸ್ಥಾನಕ್ಕೆ ಕುಸಿದು ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಆಡಲಿದೆ. ​

VISTARANEWS.COM


on

PBKS vs SRH
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೈದರಾಬಾದ್​: ಎಡಗೈ ಬ್ಯಾಟರ್​ ಅಭಿಷೇಕ್​​ ಶರ್ಮ(66) ಬಾರಿಸಿದ ಸೊಗಸಾದ ಅರ್ಧಶತಕದ ನೆರವಿನಿಂದ ಸನ್​ರೈರ್ಸ್​ ಹೈದರಾಬಾದ್​(PBKS vs SRH) ತಂಡ ತವರಿನಲ್ಲೇ ನಡೆದ ತನ್ನ ಕೊನೆಯ ಲೀಗ್​ ಪಂದ್ಯದಲ್ಲಿ ಪಂಜಾಬ್​ ಕಿಂಗ್ಸ್​ ವಿರುದ್ಧ 4 ವಿಕೆಟ್ ಅಂತರದ ಗೆಲುವು ಸಾಧಿಸಿದೆ.​ ಈಗಾಗಲೇ ಪ್ಲೇ ಆಫ್​ ಪ್ರವೇಶಿಸಿರುವ ಹೈದರಾಬಾದ್​ ಈ ಗೆಲುವಿನೊಂದಿಗೆ 17 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ. ರಾತ್ರಿ ನಡೆಯುವ ಪಂದ್ಯದಲ್ಲಿ ರಾಜಸ್ಥಾನ್​ ತಂಡ ಕೆಕೆಆರ್​ ವಿರುದ್ಧ ಗೆದ್ದರೆ ಹೈದರಾಬಾದ್​ ಮೂರನೇ ಸ್ಥಾನಕ್ಕೆ ಕುಸಿದು ಎಲಿಮಿನೇಟರ್​​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಆಡಲಿದೆ. ​ಎಲಿಮಿನೇಟರ್ ಪಂದ್ಯ ಬುಧವಾರ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ.

ಬ್ಯಾಟಿಂಗ್​ ಸ್ನೇಹಿಯಾದ ಉಪ್ಪಳದ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಪಂಜಾಬ್​ ಕಿಂಗ್ಸ್​ 5 ವಿಕೆಟ್​ಗೆ 214 ರನ್​ ಬಾರಿಸಿ ತನ್ನ ಆಯ್ಕೆಯನ್ನು ಸಮರ್ಥಿಸಿಕೊಂಡಿತು. ಆದರೆ ಈ ಮೊತ್ತ ಹೈದರಾಬಾದ್​ ತಂಡವನ್ನು ಕಟ್ಟಿ ಹಾಕಲು ಸಾಕಾಗಲಿಲ್ಲ. ಗುರಿ ಬೆನ್ನಟ್ಟಿದ ಸನ್​ರೈಸರ್ಸ್​ ಹೈದರಾಬಾದ್ 19.1​ ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 215 ಬಾರಿಸಿ ತವರಿನಲ್ಲಿ ವಿಜಯ ಪತಾಕೆ ಹಾರಿಸಿತು. ಉಭಯ ತಂಡಗಳ ಜಿದ್ದಾಜಿದ್ದಿನ ಬ್ಯಾಟಿಂಗ್​ ಪರಾಕ್ರಮದಿಂದಾಗಿ ಈ ಪಂದ್ಯದಲ್ಲಿ ಒಟ್ಟು 429 ರನ್​ ದಾಖಲಾಯಿತು.

ಹೆಡ್​ ಕ್ಲೀನ್​ ಬೌಲ್ಡ್​


ಗುರಿ ಬೆನ್ನಟ್ಟಿದ ಹೈದರಾಬಾದ್​ ತಂಡ ಸ್ಫೋಟಕ ಬ್ಯಾಟಿಂಗ್​ಗೆ ಹೆಸರುವಾಸಿಯಾದ ಟ್ರಾವಿಸ್​ ಹೆಟ್​​ ಅವರನ್ನು ಮೊದಲ ಎಸೆತದಲ್ಲೇ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಒಳಗಾಯಿತು. ಹೆಡ್​​ ಅವರು ಅರ್ಶದೀಪ್​ ಸಿಂಗ್​ ಅವರ ಮೊದಲ ಎಸೆತಲ್ಲೇ ಕ್ಲೀನ್​ ಬೌಲ್ಡ್​ ಆದರು. ಹೆಡ್​ ವಿಕೆಟ್​ ಬಿದ್ದರೂ ಕೂಡ ವಿಚಲಿತರಾಗದ ಅಭಿಷೇಕ್​ ಶರ್ಮ ಬಿರುಸಿನ ಬ್ಯಾಟಿಂಗ್​ ಮೂಲಕ ಪಂಜಾಬ್​ ಬೌಲರ್​ಗಳ ಮೇಲೆರಗಿ ಸತತ ಸಿಕ್ಸರ್ ಮತ್ತು ಬೌಂಡರಿ ಬಾರಿಸಿ ತಮ್ಮ ಹಾಗೂ ತಂಡದ ಮೊತ್ತವನ್ನು ಹಿಗ್ಗಿಸಿದರು.

​ಅಭಿಷೇಕ್ ಶರ್ಮ ಅವರಿಗೆ ಮತ್ತೊಂದು ತುದಿಯಲ್ಲಿ ರಾಹುಲ್​ ತ್ರಿಪಾಠಿ ಕೂಡ ಉತ್ತಮ ಸಾಥ್​ ನೀಡಿದರು. ಉಭಯ ಆಟಗಾರರು ಸೇರಿಕೊಂಡು ದ್ವಿತೀಯ ವಿಕೆಟ್​ಗೆ 72 ರನ್​ ಬಾರಿಸಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಈ ಮೊತ್ತವನ್ನು ಈ ಜೋಡಿ ಕೇವಲ 4.6 ಓವರ್​ನಲ್ಲಿ ಬಾರಿಸಿದರು. ತಿಪಾಠಿ 18 ಎಸೆತ ಎದುರಿಸಿ 33(4 ಬೌಂಡರಿ, 2 ಸಿಕ್ಸರ್​) ಬಾರಿಸಿದರು.

ಮತ್ತೆ ಸಿಡಿದ ಅಭಿಷೇಕ್ ಶರ್ಮ

ಮೂರನೇ ವಿಕೆಟ್​ಗೂ ಅಭಿಷೇಕ್​, ನಿತೀಶ್​ ರೆಡ್ಡಿ ಜತೆಗೂಡಿ ಮತ್ತೊಂದು ಅರ್ಧಶತಕದ ಜತೆಯಾಟ ನಡೆಸಿ ಗಮನಸೆಳೆದರು. ಸಿಕ್ಸರ್​ಗಳ ಸುರಿಮಳೆ ಸುರಿಸಿದ ಅಭಿಷೇಕ್​ ಈ ಬಾರಿಯ ಟೂರ್ನಿಯಲ್ಲಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಆಟಗಾರನಾಗಿ ಹೊರಮೊಮ್ಮಿದರು. ಇದೇ ವೇಳೆ 37 ಸಿಕ್ಸರ್​ ಬಾರಿಸಿರುವ ವಿರಾಟ್​ ಕೊಹ್ಲಿಯ ದಾಖಲೆ ಪತನಗೊಂಡಿತು. ಒಟ್ಟು 28 ಎಸೆತ ಎದುರಿಸಿದ ಅಭಿಷೇಕ್​ ಬರೋಬ್ಬರಿ 6 ಸಿಕ್ಸರ್​ ಮತ್ತು 5 ಬೌಂಡರಿ ಸಿಡಿಸಿ 66 ರನ್​ ಬಾರಿಸಿದರು. 51 ಎಸೆತಗಳಲ್ಲಿ ಅರ್ಧಶತಕ ಪೂರ್ತಿಗೊಳಿಸಿದರು. ಇದು ಈ ಆವೃತ್ತಿಯ 3ನೇ ಅರ್ಧಶತಕವಾಗಿದೆ.

ಇದನ್ನೂ ಓದಿ RCB vs CSK: ಆನ್​ಲೈನ್​ ವೀಕ್ಷಣೆಯಲ್ಲೂ ದಾಖಲೆ ಬರೆದ ಆರ್​ಸಿಬಿ-ಚೆನ್ನೈ ಪಂದ್ಯ

ಅಭಿಷೇಕ್​ ವಿಕೆಟ್​ ಪತನದ ಬಳಿಕ ಉತ್ತಮವಾಗಿ ಆಡುತ್ತಿದ್ದ ನಿತೀಶ್​ ರೆಡ್ಡಿ 37 ರನ್​ಗೆ ವಿಕೆಟ್​ ಕಳೆದುಕೊಂಡರು. ಬಳಿಕ ಬಂದ ಶಾಬಾಜ್​ ಅಹ್ಮದ್​ 3 ರನ್​ಗೆ ವಿಕೆಟ್​ ಕೈಚೆಲ್ಲಿದರು. ಈ ವೇಳೆ ಹೈದರಾಬಾದ್​ ಕೊಂಚ ಆತಂಕಕ್ಕೆ ಸಿಲುಕಿತು. ಇದೇ ವೇಳೆ ಹೆನ್ರಿಚ್​ ಕ್ಲಾಸೆನ್​ ಜವಾಬ್ದಾರಿಯು ಬ್ಯಾಟಿಂಗ್​ ನಡೆಸಿ 42 ರನ್​ ಬಾರಿಸಿದರು. ಅಂತಿಮವಾಗಿ ಅಬ್ದುಲ್​ ಸಮದ್​(11*) ಮತ್ತು ಸನ್ವೀರ್ ಸಿಂಗ್(6*) ಅಜೇಯ ರನ್​ ಬಾರಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು. ಪಂಜಾಬ್​ ಬ್ಯಾಟರ್​ಗಳು ಬೃಹತ್​ ಮೊತ್ತ ಪೇರಿಸಿದರೂ ಬೌಲರ್​ಗಳಿಂದ ನಿರೀಕ್ಷಿತ ಪ್ರದರ್ಶನ ಕಂಡು ಬಾರದ ಕಾರಣ ಸೋಲಿಗೆ ತುತ್ತಾದರು.

ಪ್ರಭಾಸಿಮ್ರಾನ್ ಅರ್ಧಶತಕ ವ್ಯರ್ಥ


ಇದಕ್ಕೂ ಮುನ್ನ ಬ್ಯಾಟಿಂಗ್​ ನಡೆಸಿದ ಪಂಜಾಬ್​ ಕೂಡ ಅತ್ಯಂತ ಜೋಶ್​ನಲ್ಲಿ ಬ್ಯಾಟಿಂಗ್ ನಡೆಸಿತು. ಆರಂಭಿಕ ಆಟಗಾರರಾದ ​ಅಥರ್ವ ತೈಡೆ ಮತ್ತು ಪ್ರಭಾಸಿಮ್ರಾನ್ ಸಿಂಗ್ 10 ಸರಾಸರಿಯಲ್ಲಿ ರನ್​ ಗಳಿಸಿ ಮೊದಲ ವಿಕೆಟ್​ಗೆ 97 ರನ್​ ಒಟ್ಟುಗೂಡಿಸಿದರು. ಅಥರ್ವ ತೈಡೆ 46 ರನ್​ ಬಾರಿಸಿದರೆ, ಪ್ರಭಾಸಿಮ್ರಾನ್ 71 ರನ್(7 ಬೌಂಡರಿ, 4 ಸಿಕ್ಸರ್​)​ ಬಾರಿಸಿದರು. ಆ ಬಳಿಕ ಬಂದ ರೀಲಿ ರೋಸೊ ಕೂಡ ಆಕ್ರಮಣಕಾರಿ ಬ್ಯಾಟಿಂಗ್​ ನಡೆಸಿ 4 ಸಿಕ್ಸರ್​ ಮತ್ತು 3 ಬೌಂಡರಿ ನೆರವಿನಿಂದ 47 ರನ್​ ಗಳಿಸಿ ಔಟಾದರು. ಈ ಮೂಲಕ ಕೇವಲ 3 ರನ್​ ಅಂತರದಿಂದ ಅರ್ಧಶಕ ವಂಚಿತರಾದರು.

5 ನೇ ಕ್ರಮಾಂಕದಲ್ಲಿ ಆಡಲಿಳಿದ ಜಿತೇಶ್​ ಶರ್ಮ ಕೇವಲ 15 ಎಸೆತಗಳಿಂದ ಅಜೇಯ 32 ರನ್​ ಬಾರಿಸಿ ತಂಡದ ಬೃಹತ್​ ಮೊತಕ್ಕೆ ಕಾರಣರಾದರು. ಹೈದರಾಬಾದ್​ ಪರ ಎಡಗೈ ವೇಗಿ ಟಿ ನಟರಾಜ್​ 33 ರನ್​ಗೆ 2 ವಿಕೆಟ್​ ಉರುಳಿಸಿದರು. ನಾಯಕ ಪ್ಯಾಟ್​ ಕಮಿನ್ಸ್​ ಮತ್ತು ವಿಜಯಕಾಂತ್ ವ್ಯಾಸಕಾಂತ್ ತಲಾ ಒಂದು ವಿಕೆಟ್​ ಪಡೆದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೀಡೆ

T20 World Cup Winners: ಟಿ20 ವಿಶ್ವಕಪ್​ ಗೆದ್ದ ಭಾರತ ತಂಡಕ್ಕೆ ನಾಳೆ ಮುಂಬೈಯಲ್ಲಿ ಅದ್ಧೂರಿ ಸ್ವಾಗತ

T20 World Cup Winners: ತವರಿಗೆ ಬಂದಿಳಿದ ಆಟಗಾರರನ್ನು ಮುಂಬೈನಲ್ಲಿ ತೆರೆದ ಬಸ್​ನಲ್ಲಿ ಸಂಜೆ 4 ಗಂಟೆಗೆ ರೋಡ್​ ಶೋ ಮೂಲಕ ಭವ್ಯ ಸ್ವಾಗತ ಕೋರಲು(VICTORY PARADE IN MUMBA) ಸಿದ್ಧತೆ ನಡೆಸಲಾಗಿದೆ.​ ಜತೆಗೆ ಪ್ರಧಾನಿ ಮೋದಿ ಅವರು ಟೀಮ್​ ಇಂಡಿಯಾ ಆಟಗಾರರನ್ನು ಸನ್ಮಾನಿಸಲಿದ್ದಾರೆ ಎಂದು ವರದಿಯಾಗಿದೆ.

VISTARANEWS.COM


on

Team India
Koo

ನವದೆಹಲಿ: ಚಾರ್ಟರ್​ ಪ್ಲೈಟ್​ ಮೂಲಕ ಬುಧವಾರ ಬಾರ್ಬಡೋಸ್​ನಿಂದ ಹೊರಟಿರುವ ಟಿ20 ವಿಶ್ವಕಪ್​ ವಿಜೇತ(T20 World Cup Winners) ಟೀಮ್ ಇಂಡಿಯಾ(Team India) ನಾಳೆ(ಗುರುವಾರ) ನವದೆಹಲಿ ತಲುಪಲಿದೆ. ತವರಿಗೆ ಬಂದಿಳಿದ ಆಟಗಾರರನ್ನು ಮುಂಬೈನಲ್ಲಿ ತೆರೆದ ಬಸ್​ನಲ್ಲಿ ಸಂಜೆ 4 ಗಂಟೆಗೆ ರೋಡ್​ ಶೋ ಮೂಲಕ ಭವ್ಯ ಸ್ವಾಗತ ಕೋರಲು(VICTORY PARADE IN MUMBA) ಸಿದ್ಧತೆ ನಡೆಸಲಾಗಿದೆ.​ ಜತೆಗೆ ಪ್ರಧಾನಿ ಮೋದಿ ಅವರು ಟೀಮ್​ ಇಂಡಿಯಾ ಆಟಗಾರರನ್ನು ಸನ್ಮಾನಿಸಲಿದ್ದಾರೆ ಎಂದು ವರದಿಯಾಗಿದೆ.

ಬಿಸಿಸಿಐ ವ್ಯವಸ್ಥೆ ಮಾಡಿರುವ ವಿಶೇಷ ವಿಮಾನದಲ್ಲಿ ಆಟಗಾರರು ಮತ್ತವರ ಕುಟುಂಬಸ್ಥರು, ಬಿಸಿಸಿಐ ಅಧಿಕಾರಿಗಳು ಸೇರಿ ಇಡೀ ತಂಡ ಭಾರತಕ್ಕೆ ಮರಳಲಿದ್ದಾರೆ. ಟಿ 20 ವಿಶ್ವಕಪ್ ಫೈನಲ್​​ನಲ್ಲಿ ಭಾರತ ಗೆದ್ದ ಕೆಲವೇ ಗಂಟೆಗಳ ನಂತರ ಬೆರಿಲ್ ಚಂಡಮಾರುತವು ದ್ವೀಪ ರಾಷ್ಟ್ರಕ್ಕೆ ಅಪ್ಪಳಿಸಿತ್ತು. ಗಂಟೆಗೆ 130 ಕಿ.ಮೀ.ಗೂ ವೇಗವಾಗಿ ಗಾಳಿ ಬೀಸುತ್ತಿರುವುದರಿಂದ ಪ್ರವಾಸಿಗರಿಗೆ ಒಳಾಂಗಣದಲ್ಲೇ ಉಳಿದುಕೊಳ್ಳುವಂತೆ ಎಚ್ಚರಿಕೆ ನೀಡಲಾಗಿತ್ತು. ಅಲ್ಲದೇ ಬಾರ್ಬಡಾಸ್‌ನಲ್ಲಿ ನಿಷೇದಾಜ್ಞೆ ಜಾರಿ ಮಾಡಿ ಜನರಿಗೆ ಮನೆಗಳಿಂದ ಹೊರಬರದಂತೆ ಸೂಚಿಸಲಾಗಿತ್ತು. ಜತೆಗೆ ವಿಮಾನ ನಿಲ್ದಾಣಗಳು ಬಂದ್‌ ಆಗಿತ್ತು. ಹೀಗಾಗಿ ಭಾರತ ತಂಡ ಬಾರ್ಬಡೋಸ್​ನ ಹೊಟೇಲ್‌ನಲ್ಲಿ ತಂಗಿತ್ತು.

ಇದನ್ನೂ ಓದಿ T20 World Cup 2024: ಟಿ-20 ಸ್ವಯಂವರದ ಮಂಟಪದಲ್ಲಿ ವಿಶ್ವಸುಂದರಿಗೆ ಮಾಲೆ ತೊಡಿಸಿದ ರೋಹಿತ್ ಬಳಗ

ಶನಿವಾರ ನಡೆದಿದ್ದ ಫೈನಲ್​ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ(South Africa vs India) 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು. ಭಾರತ 7 ರನ್​ಗಳ ಗೆಲುವು ಸಾಧಿಸಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದು ಬೀಗಿತ್ತು.

ಚಂಡಮಾರುತದ ಅಬ್ಬರದ ದೃಶ್ಯವನ್ನು ವಿರಾಟ್​ ಕೊಹ್ಲಿ(virat kohli) ಅವರು ತಮ್ಮ ಪತ್ನಿ ಅನುಷ್ಕಾ ಶರ್ಮಗೆ(Virat- Anushka) ವಿಡಿಯೊ ಕಾಲ್ ಮೂಲಕ ತೋರಿಸುತ್ತಿರುವ ವಿಡಿಯೊ ಇದೀಗ ವೈರಲ್​ ಆಗಿದೆ.​

ವಿರಾಟ್​ ಕೊಹ್ಲಿ ತಾವು ತಂಗಿರುವ ಹೊಟೇಲ್‌ ಕಿಟಕಿಯಿಂದ ಸಮುದ್ರದಲ್ಲಿ ಅಪ್ಪಳಿಸುತ್ತಿರುವ ಭಾರೀ ಗಾತ್ರದ ಅಲೆಗಳನ್ನು, ಮತ್ತು ಅಲ್ಲಿನ ಪರಿಸ್ಥಿತಿ ಹೇಗಿದೆ ಎನ್ನುವುದನ್ನು ಪತ್ನಿ ಅನುಷ್ಕಾಗೆ(anushka sharma) ವಿಡಿಯೊ ಕಾಲ್​ ಮೂಲಕ ತೋರಿಸಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ. ಕುಟುಂಬಕ್ಕೆ ಮೊದಲ ಪ್ರಾಧಾನ್ಯತೆ ನೀಡುವ ಕೊಹ್ಲಿ ಯಾವುದೇ ಪಂದ್ಯ ಇರಲಿ ಇದು ಮುಕ್ತಾಯಗೊಂಡ ತಕ್ಷಣ ಪತ್ನಿಗೆ ವಿಡಿಯೊ ಕಾಲ್​ ಮಾಡಿ ಮಾತನಾಡುತ್ತಾರೆ. ಕೆಲವೊಮ್ಮೆ ಕ್ರಿಕೆಟ್​ ಸರಣಿ ಇದ್ದರೂ ಕೂಡ ಇದರಿಂದ ಹಿಂದೆ ಸರಿದು ಕುಟುಂಬದ ಜತೆ ಕಾಲ ಕಳೆಯುತ್ತಾರೆ. ಟಿ20 ವಿಶ್ವಕಪ್​ ಗೆದ್ದ ಬಳಿಕವೂ ಕೂಡ ಕೊಹ್ಲಿ ಪತ್ನಿಗೆ ಕರೆ ಮಾಡಿ ಮಕ್ಕಳ ಬಗ್ಗೆ ವಿಚಾರಿಸಿದ್ದಾರೆ. ಜತೆಗೆ ಪುಟ್ಟ ಮಗುವಿಗೆ ಫ್ಲೈಯಿಂಗ್ ಕಿಸ್ ನೀಡಿದ ವಿಡಿಯೊ ಕೂಡ ವೈರಲ್​ ಆಗಿತ್ತು.

Continue Reading

ಕ್ರೀಡೆ

Hardik Pandya: ಆಲ್​ರೌಂಡರ್​ ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕೇರಿದ ಹಾರ್ದಿಕ್​ ಪಾಂಡ್ಯ

Hardik Pandya: ಬ್ಯಾಟಿಂಗ್​ ಶ್ರೇಯಾಂಕದಲ್ಲಿ ಯಾವುದೇ ಮಹತ್ವದ ಬದಲಾವಣೆ ಸಂಭವಿಸಿಲ್ಲ. ಈ ಹಿಂದೆ ಇದ್ದಂತೆ ಆಸ್ಟ್ರೇಲಿಯಾದ ಟ್ರಾವಿಸ್​ ಹೆಡ್​ ಅಗ್ರಸ್ಥಾನ, ಸೂರ್ಯಕುಮಾರ್ ಯಾದವ್​ ದ್ವಿತೀಯ ಸ್ಥಾನದಲ್ಲೇ ಮುಂದುವರಿದಿದ್ದಾರೆ.

VISTARANEWS.COM


on

Hardik Pandya
Koo

ದುಬೈ: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅಮೋಘ ಬ್ಯಾಟಿಂಗ್​ ಮತ್ತು ಬೌಲಿಂಗ್​ ಪ್ರದರ್ಶನ ತೋರುವ ಮೂಲಕ ಭಾರತ ತಂಡ ವಿಶ್ವಕಪ್​ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಹಾರ್ದಿಕ್​ ಪಾಂಡ್ಯ(222 ರೇಟಿಂಗ್​ ಅಂಕ) ಅವರು ನೂತನ ಐಸಿಸಿ ಟಿ20 ಆಲ್​ರೌಂಡರ್​ ಶ್ರೇಯಾಂಕದಲ್ಲಿ(T20I all-rounder) ಅಗ್ರಸ್ಥಾನಕ್ಕೇರಿದ್ದಾರೆ.

ಈ ಬಾರಿಯ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಪಾಂಡ್ಯ(Hardik Pandya) ಒಟ್ಟು 144 ರನ್​ ಮತ್ತು 11 ವಿಕೆಟ್​ ಕಿತ್ತ ಸಾಧನೆ ಮಾಡಿದ್ದರು. ಅದರಲ್ಲೂ ಫೈನಲ್​ನಲ್ಲಿ ಸೋಲಿನ ಭೀತಿಯಲ್ಲಿದ್ದ ಭಾರತಕ್ಕೆ ಅಪಾಯಕಾರಿ ಕ್ಲಾಸೆನ್​ ಮತ್ತು ಮಿಲ್ಲರ್​ ವಿಕೆಟ್​ ಭೇಟೆಯಾಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಎಲ್ಲ ಪ್ರದರ್ಶನದ ಫಲವಾಗಿ ಅವರು ಆಲ್​ರೌಂಡರ್​ಗಳ ಪಟ್ಟಿಯಲ್ಲಿ ಜಂಟಿ ಅಗ್ರಸ್ಥಾನ ಪಡೆದರು. ಲಂಕಾದ ವನಿಂದು ಹಸರಂಗ ಕೂಡ 222 ರೇಟಿಂಗ್​ ಅಂಕದೊಂದಿಗೆ ಅಗ್ರಸ್ಥಾನ ಪಡೆದರು.

ಬ್ಯಾಟಿಂಗ್​ ಶ್ರೇಯಾಂಕದಲ್ಲಿ ಯಾವುದೇ ಮಹತ್ವದ ಬದಲಾವಣೆ ಸಂಭವಿಸಿಲ್ಲ. ಈ ಹಿಂದೆ ಇದ್ದಂತೆ ಆಸ್ಟ್ರೇಲಿಯಾದ ಟ್ರಾವಿಸ್​ ಹೆಡ್​ ಅಗ್ರಸ್ಥಾನ, ಸೂರ್ಯಕುಮಾರ್ ಯಾದವ್​ ದ್ವಿತೀಯ ಸ್ಥಾನದಲ್ಲೇ ಮುಂದುವರಿದಿದ್ದಾರೆ. ಆದರೆ ಬೌಲಿಂಗ್​ ಶ್ರೇಯಾಂಕದಲ್ಲಿ ದಕ್ಷಿಣ ಆಫ್ರಿಕಾದ ಅನ್ರಿಚ್​ ನೋರ್ಜೆ ಬರೋಬ್ಬರಿ 7 ಸ್ಥಾನಗಳ ಪ್ರಗತಿ ಸಾಧಿಸಿ 2ನೇ ಸ್ಥಾನಕ್ಕೇರಿದ್ದಾರೆ. ಇಂಗ್ಲೆಂಡ್​ ಸ್ಪಿನ್ನರ್​ ಆದೀಲ್​ ರಶೀದ್​ ಮೊದಲ ಸ್ಥಾನಿಯಾಗಿದ್ದಾರೆ. ಭಾರತೀಯ ಬೌಲರ್​ಗಳಾದ ಅಕ್ಷರ್​ ಪಟೇಲ್​ 7ನೇ, ಕುಲ್​ದೀಪ್​ ಯಾದವ್​ 8ನೇ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ Hardik Pandya : ಭಾರತಕ್ಕೆ ಆಡುವುದೇ ಕನಸು; ಹಾರ್ದಿಕ್ ಪಾಂಡ್ಯನ ಹಳೆ ವಿಡಿಯೊ ವೈರಲ್​

ಟಾಪ್​-5 ಆಲ್​ರೌಂಡರ್​ಗಳು


1. ಹಾರ್ದಿಕ್​ ಪಾಂಡ್ಯ- 222 ರೇಟಿಂಗ್​ ಅಂಕ

2. ವನಿಂದು ಹಸರಂಗ-222 ರೇಟಿಂಗ್​ ಅಂಕ

3. ಮಾರ್ಕಸ್​ ಸ್ಟೋಯಿನಿಸ್​-211 ರೇಟಿಂಗ್​ ಅಂಕ

4. ಸಿಕಂದರ್​ ರಾಜಾ-210 ರೇಟಿಂಗ್​ ಅಂಕ

5. ಶಕೀಬ್​ ಅಲ್​ ಹಸನ್​-206 ರೇಟಿಂಗ್​ ಅಂಕ


ಟಿ20 ವಿಶ್ವಕಪ್​ ಟೂರ್ನಿ ಆರಂಭಕ್ಕೂ ಮುನ್ನ ಹಾರ್ದಿಕ್ ಪಾಂಡ್ಯ(Hardik Pandya) ಅವರು ಪತ್ನಿ, ಸರ್ಬಿಯಾದ ನಟಿ ನತಾಶಾ ಸ್ಟಾನ್‌ಕೋವಿಕ್‌(Natasa Stankovic) ಅವರಿಗೆ ವಿಚ್ಛೇದನ ನೀಡಲಿದ್ದಾರೆ, ಜತೆಗೆ ವಿಚ್ಛೇದನ(Hardik Pandya and Natasa Stankovic divorce) ಪ್ರಕ್ರಿಯೆಯ ಭಾಗವಾಗಿ, ತಮ್ಮ ಆಸ್ತಿಯಲ್ಲಿ ಶೇ. 70 ರಷ್ಟು ಭಾಗವನ್ನು ನತಾಶಾಗೆ ವರ್ಗಾಯಿಸಬೇಕಿದೆ ಎನ್ನಲಾಗಿತ್ತು. ಈ ಎಲ್ಲ ಮಾತುಗಳ ಮಧ್ಯೆಯೂ ಪಾಂಡ್ಯ ದೇಶದ ಕರ್ತವ್ಯಕ್ಕೆ ಹಾಜರಾಗಿ ಟಿ20 ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು.

Continue Reading

ಕ್ರೀಡೆ

James Anderson: 41ನೇ ವಯಸ್ಸಿನಲ್ಲಿಯೂ 7 ವಿಕೆಟ್​ ಕಿತ್ತ ಜೇಮ್ಸ್ ಆಂಡರ್ಸನ್

James Anderson: 2003ರಲ್ಲಿ ಟೆಸ್ಟ್‌ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಆ್ಯಂಡರ್ಸನ್‌, ಈವರೆಗೂ 187 ಪಂದ್ಯಗಳಲ್ಲಿ 700 ವಿಕೆಟ್‌ ಗಳಿಸಿದ್ದಾರೆ. ಶ್ರೀಲಂಕಾದ ಮುತ್ತಯ್ಯ ಮುರಳೀಧರನ್‌ ಹಾಗೂ ಆಸ್ಟ್ರೇಲಿಯಾದ ಶೇನ್‌ ವಾರ್ನ್‌ ಬಳಿಕ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್‌ ಪಡೆದವರ ಸ್ಥಾನದಲ್ಲಿ ಆ್ಯಂಡರ್‌ಸನ್‌ ಇದ್ದಾರೆ

VISTARANEWS.COM


on

James Anderson
Koo

ಲಂಡನ್​: ವಿದಾಯದ ಸನಿಹದಲ್ಲಿರುವ ಇಂಗ್ಲೆಂಡ್​ ತಂಡದ ಹಿರಿಯ ವೇಗಿ ಜೇಮ್ಸ್ ಆಂಡರ್ಸನ್(James Anderson) ಅವರು ಪ್ರಸಕ್ತ ಸಾಗುತ್ತಿರುವ ಕೌಂಟಿ ಕ್ರಿಕೆಟ್​ ಟೂರ್ನಿಯಲ್ಲಿ ತಮ್ಮ ಕರಾರುವಾಕ್​ ಬೌಲಿಂಗ್​ ದಾಳಿಯ ಮೂಲಕ 7 ವಿಕೆಟ್​ ಕಿತ್ತು ಮಿಂಚಿದ್ದಾರೆ. 41ನೇ ವಯಸ್ಸಿನಲ್ಲಿಯೂ ಅವರ ಈ ಸಾಧನೆ ಯುವ ಆಟಗಾರರನ್ನು ಕೂಡ ನಾಚಿಸುವಂತೆ ಮಾಡಿದೆ.

ಈಗಾಗಲೇ ಕ್ರಿಕೆಟ್​ಗೆ ವಿದಾಯ ಘೋಷಿಸಿರುವ ಜೇಮ್ಸ್ ಆಂಡರ್ಸನ್, ಇದೇ ಜುಲೈನಲ್ಲಿ ನಡೆಯುವ ವೆಸ್ಟ್​ ಇಂಡೀಸ್​ ವಿರುದ್ಧದ ಟೆಸ್ಟ್​ ಸರಣಿಯ ಮೊದಲನೇ ಪಂದ್ಯ ಆಡುವ ಮೂಲಕ 20 ವರ್ಷಗಳ ತಮ್ಮ ಸುದೀರ್ಘ ಕ್ರಿಕೆಟ್‌ ಬದುಕಿಗೆ ತೆರೆ ಎಳೆಯಲಿದ್ದಾರೆ. ಸಾರ್ವಕಾಲಿಕ ಶ್ರೇಷ್ಠ ಬೌಲರ್‌ಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿರುವ 41 ವರ್ಷದ ಆಂಡರ್ಸನ್, ಇಂಗ್ಲೆಂಡ್‌ ಪರ ಅತಿ ಹೆಚ್ಚು ವಿಕೆಟ್‌ ಪಡೆದುಕೊಂಡಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ 700ಕ್ಕೂ ಅಧಿಕ ವಿಕೆಟ್‌ ಪಡೆದ ಮೂವರು ಬೌಲರ್‌ಗಳ ಪೈಕಿ ಆಂಡರ್ಸನ್ ಕೂಡ ಒಬ್ಬರು. ವೇಗಿಗಳ ಪೈಕಿ ಮೊದಲಿಗ.

3 ತಿಂಗಳ ಹಿಂದೆ ಆ್ಯಂಡರ್ಸನ್​ ಅವರು ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ತಮ್ಮ ನಿವೃತ್ತಿಯನ್ನು ಘೋಷಿಸಿದ್ದರು. “ಎಲ್ಲರಿಗೂ ನಮಸ್ಕಾರ, ಈ ಬೇಸಿಗೆಯಲ್ಲಿ ಲಾರ್ಡ್ಸ್‌ನಲ್ಲಿ ನಡೆಯುವ ವೆಸ್ಟ್‌ ಇಂಡೀಸ್‌ ವಿರುದ್ಧದ ಮೊದಲ ಟೆಸ್ಟ್ ಪಂದ್ಯ, ನನ್ನ ಕೊನೆಯ ಪಂದ್ಯವಾಗಿರಲಿದೆ. ಬಾಲ್ಯದಿಂದ ಇಷ್ಟಪಟ್ಟಿದ ಆಟವನ್ನು ಆಡಲು, ನನ್ನ ದೇಶವನ್ನು ಪ್ರತಿನಿಧಿಸಿದ 20 ಅದ್ಭುತ ವರ್ಷಗಳಿವು. ಇಂಗ್ಲೆಂಡ್ ತಂಡಕ್ಕಾಗಿ ಆಡುವುದನ್ನು ನಾನು ಮಿಸ್‌ ಮಾಡಿಕೊಳ್ಳುತ್ತೇನೆ’ ಎಂದು ಬರೆದುಕೊಂಡಿದ್ದರು. ಜುಲೈ 10ರಿಂದ ವೆಸ್ಟ್‌ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ.

ಇದನ್ನೂ ಓದಿ James Anderson : ಕೋಚ್ ಒತ್ತಡಕ್ಕೆ ಮಣಿದು ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​

2003ರಲ್ಲಿ ಟೆಸ್ಟ್‌ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಆ್ಯಂಡರ್ಸನ್‌, ಈವರೆಗೂ 187 ಪಂದ್ಯಗಳಲ್ಲಿ 700 ವಿಕೆಟ್‌ ಗಳಿಸಿದ್ದಾರೆ. ಶ್ರೀಲಂಕಾದ ಮುತ್ತಯ್ಯ ಮುರಳೀಧರನ್‌ ಹಾಗೂ ಆಸ್ಟ್ರೇಲಿಯಾದ ಶೇನ್‌ ವಾರ್ನ್‌ ಬಳಿಕ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್‌ ಪಡೆದವರ ಸ್ಥಾನದಲ್ಲಿ ಆ್ಯಂಡರ್‌ಸನ್‌ ಇದ್ದಾರೆ. 194 ಏಕದಿನ ಪಂದ್ಯಗಳನ್ನು ಆಡಿರುವ ಅವರು, 269 ವಿಕೆಟ್‌ಗಳನ್ನು ಪಡೆದಿದ್ದಾರೆ.

 ಆಸ್ಟ್ರೇಲಿಯಾದ ದಿವಂಗತ ಕ್ರಿಕೆಟಿಗ ಶೇನ್​ ವಾರ್ನ್ ಅವರು 708 ಟೆಸ್ಟ್​ ವಿಕೆಟ್ ಕಿತ್ತು ದ್ವಿತೀಯ ಸ್ಥಾನಿಯಾಗಿದ್ದಾರೆ. ಆ್ಯಂಡರ್ಸನ್​ಗೆ ವಾರ್ನ್ ಅವರ ಟೆಸ್ಟ್​​ ವಿಕೆಟ್​ ದಾಖಲೆ ಮುರಿಯುವು ಕಷ್ಟವಾಗದು. ಏಕೆಂದರೆ ಅವರು ಇನ್ನೊಂದು ವರ್ಷ ಕ್ರಿಕೆಟ್​ ಆಡಿದರೂ ಈ ದಾಖಲೆ ಮುರಿಯಬಹುದು. ಈ ದಾಖಲೆಯನ್ನು ಮುರಿಯಲು ಅವರಿಗೆ ಬೇಕಿರುವುದು 8 ವಿಕೆಟ್. ವಿಂಡೀಸ್​ ವಿರುದ್ಧದ ಪಂದ್ಯದಲ್ಲಿ ಈ ಸಾಧನೆ ಮಾಡುವ ಅವಕಾಶ ಅವರಿಗಿದೆ.

Continue Reading

ಕ್ರೀಡೆ

IPL 2025: ಮುಂದಿನ ವರ್ಷ ಆರ್​ಸಿಬಿಗೆ ವಿರಾಟ್​ ಕೊಹ್ಲಿ ನಾಯಕ?

IPL 2025: ಟಿ20ಗೆ ನಿವೃತ್ತಿ ಹೇಳಿ ಎಲ್ಲ ಒತ್ತಡ ಕಡಿಮೆ ಮಾಡಿರುವ ಕೊಹ್ಲಿ ಮತ್ತೆ ನಾಯಕನಾದರೂ ಅಚ್ಚರಿಯಿಲ್ಲ. ಸದ್ಯದ ಮಾಹಿತಿ ಪ್ರಕಾರ ಕೊಹ್ಲಿ ನಾಯಕನಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬಂದರೂ ಕೂಡ ಕೊಹ್ಲಿ ಇದಕ್ಕೆ ಒಪ್ಪಲಿದ್ದಾರಾ ಎನ್ನುವುದು ಕುತೂಹಲ.

VISTARANEWS.COM


on

IPL 2025
Koo

ಬೆಂಗಳೂರು: ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿರುವ ವಿರಾಟ್​ ಕೊಹ್ಲಿ(Virat Kohli) ಅವರು ಮತ್ತೆ ಐಪಿಎಲ್​ನಲ್ಲಿ ಆರ್​ಸಿಬಿ ತಂಡದ ನಾಯಕನಾಗಲಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಇದು ಆರ್​ಸಿಬಿ ಮತ್ತು ಕೊಹ್ಲಿ ಅಭಿಮಾನಿಗಳಿಗೆ ಕುತೂಹಲ ಮೂಡಿಸುವಂತೆ ಮಾಡಿದೆ.

ಮುಂದಿನ ವರ್ಷ ಮೆಗಾ ಹರಾಜು ಕೂಡ ನಡೆಯಲಿದೆ. (IPL 2025)​ 18ನೇ ಆವೃತ್ತಿಯಲ್ಲಿ ಬೆಂಗಳೂರು ತಂಡದಲ್ಲಿ ಕೂಡ ದೊಡ್ಡ ಬದಲಾವಣೆಯೊಂದು ಸಂಭವಿಸುವ ಮುನ್ಸೂಚನೆಯೊಂದು ಲಭಿಸಿದೆ. ಈ ಹಿಂದೆ ತಂಡದ ನಾಯಕನಾಗಿದ್ದ ದಕ್ಷಿಣ ಆಫ್ರಿಕಾದ ಡುಪ್ಲೆಸಿಸ್​ ಅವರನ್ನು ಕೈ ಬಿಟ್ಟು ಮಾಜಿ ನಾಯಕ ವಿರಾಟ್​ ಕೊಹ್ಲಿ(Virat Kohli)ಗೆ ಮತ್ತೆ ನಾಯಕತ್ವ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ವಿರಾಟ್​ ಕೊಹ್ಲಿ ಅವರು ಭಾರತ ತಂಡದ ಮೂರು ಮಾದರಿಯ ನಾಯಕತ್ವ ವಹಿಸಿಕೊಂಡಿದ್ದ ವೇಳೆ ಐಪಿಎಲ್​ನಲ್ಲಿಯೂ ತಂಡವನ್ನು ಮುನ್ನಡೆಸುವುದು ಕಷ್ಟವಾಗುತ್ತದೆ, ಕೆಲಸದ ಒತ್ತಡದಿಂದಾಗಿ ಆಟದ ಕಡೆ ಸರಿಯಾಗಿ ಗಮನ ಕೊಡಲು ಸಾಧ್ಯವಾಗುತ್ತಿಲ್ಲ ಎಂದು ಐಪಿಎಲ್​ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ ಸೂಕ್ತ ನಾಯಕನ ಸ್ಥಾನಕ್ಕೆ ಚೆನ್ನೈ ತಂಡದಲ್ಲಿದ್ದ ಫಾಫ್​ ಡುಪ್ಲೆಸಿಸ್​ ಅವರನ್ನು ಖರೀದಿ ಮಾಡಿ ಅವರಿಗೆ ನಾಯಕತ್ವ ನೀಡಲಾಗಿತ್ತು.

ಕಳೆದ ಮೂರು ಸೀಸನ್​ನಲ್ಲಿ ಡುಪ್ಲೆಸಿಸ್ ಆರ್​ಸಿಬಿ ತಂಡವನ್ನು ಮುನ್ನಡೆಸಿದರೂ ತಂಡದ ಭವಿಷ್ಯ ಮಾತ್ರ ಬದಲಾಗಲಿಲ್ಲ. ಕಳೆದ ಬಾರಿಯಂತೂ ಲೀಗ್​ನಿಂದಲೇ ಹೊರಬಿದ್ದಿತ್ತು. ಇದೀಗ ಟಿ20ಗೆ ನಿವೃತ್ತಿ ಹೇಳಿ ಎಲ್ಲ ಒತ್ತಡ ಕಡಿಮೆ ಮಾಡಿರುವ ಕೊಹ್ಲಿ ಮತ್ತೆ ನಾಯಕನಾದರೂ ಅಚ್ಚರಿಯಿಲ್ಲ. ಸದ್ಯದ ಮಾಹಿತಿ ಪ್ರಕಾರ ಕೊಹ್ಲಿ ನಾಯಕನಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬಂದರೂ ಕೂಡ ಕೊಹ್ಲಿ ಇದಕ್ಕೆ ಒಪ್ಪಲಿದ್ದಾರಾ ಎನ್ನುವುದು ಕುತೂಹಲ. ಈ ಐಪಿಎಲ್​ನಲ್ಲಿ ಕೊಹ್ಲಿ ಪ್ರಚಂಡ ಬ್ಯಾಟಿಂಗ್​ ಮೂಲಕ 700ಕ್ಕೂ ಅಧಿಕ ರನ್​ ಕಲೆ ಹಾಕಿ ಟೂರ್ನಿಯ ಅತ್ಯಧಿಕ ಸ್ಕೋರ್​ ಎನಿಸಿಕೊಂಡಿದ್ದರು.

ಇದನ್ನೂ ಓದಿ Virat Kohli: ಬುರ್ಜ್‌ ಖಲೀಫಾದಲ್ಲಿ ಕಣ್ಮನ ಸೆಳೆದ ವಿರಾಟ್​ ಕೊಹ್ಲಿಯ ಫೋಟೊ; ವಿಡಿಯೊ ವೈರಲ್​

ಕನ್ನಡಿಗ ಕೆ.ಎಲ್​ ರಾಹುಲ್​ ಕೂಡ ಆರ್​ಸಿಬಿ ತಂಡಕ್ಕೆ ಬರಲಿದ್ದಾರೆ ಎನ್ನುವ ಮಾತುಗಳು ಕೂಡ ಕೆಲ ತಿಂಗಳಿನಿಂದ ಕೇಳಿರುತ್ತಿದೆ. ಒಂದೊಮ್ಮೆ ಕೊಹ್ಲಿ ನಾಯಕನ ಸ್ಥಾನ ತಿರಸ್ಕರಿಸಿದರೆ, ರಾಹುಲ್​ ಆರ್​ಸಿಬಿ ಸೇರಿದರೆ ನಾಯಕತ್ವ ಅವರ ಪಾಲಾಗುವು ಸಾಧ್ಯತೆ ಇದೆ.

ಕೊಹ್ಲಿಯ ನಾಕಯತ್ವ ಸಾಧನೆ ಹೇಗಿದೆ?

ವಿರಾಟ್​ ಕೊಹ್ಲಿ 2013ರಲ್ಲಿ ಆರ್​ಸಿಬಿಯ ಪೂರ್ಣ ಪ್ರಮಾಣದ ನಾಯಕನಾಗಿ ನೇಮಕಗೊಂಡಿದ್ದರು. 2021ರ ತನಕ ಅವರು ಆರ್​ಸಿಬಿಯನ್ನು ಮುನ್ನಡೆಸಿದ್ದರು. ಕೊಹ್ಲಿ ನಾಯಕತ್ವದಲ್ಲಿ ಒಟ್ಟು 140 ಪಂದ್ಯಗಳನ್ನು ಆಡಿದ್ದ ಆರ್​​ಸಿಬಿ 66 ಪಂದ್ಯಗಳನ್ನು ಜಯಿಸಿದೆ. 70 ಪಂದ್ಯಗಳಲ್ಲಿ ಸೋಲು ಕಂಡಿದೆ. ಐಪಿಎಲ್​ ಇತಿಹಾಸದಲ್ಲಿ ವಿನ್ನಿಂಗ್ಸ್​ ಸರಾಸರಿಯಲ್ಲಿ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಅವರ ನಾಯಕತ್ವದ ಸರಾಸರಿ ಗೆಲುವು ಶೇ. 46.15 ರಷ್ಟಿದೆ. ದಾಖಲೆ ಧೋನಿ ಹೆಸರಿನಲ್ಲಿದೆ. ಧೋನಿ ನಾಯಕತ್ವದ ಗೆಲುವಿನ ಸರಾಸರಿ 60.38 ರಷ್ಟಿದೆ.

Continue Reading
Advertisement
Monsoon Jacket Styling Tips
ಫ್ಯಾಷನ್9 mins ago

Monsoon Jacket Styling Tips: ಮಳೆಗಾಲದ ಜಾಕೆಟ್‌ನಲ್ಲೂ ಸ್ಟೈಲಿಶ್‌ ಆಗಿ ಕಾಣಿಸುವುದು ಹೇಗೆ?

Dengue fever
ಕರ್ನಾಟಕ14 mins ago

Dengue fever: ಡೆಂಗ್ಯೂ ಪರೀಕ್ಷೆಗೆ ದರ ನಿಗದಿ ಮಾಡಿದ ರಾಜ್ಯ ಸರ್ಕಾರ

mamatheya thottilu inauguration programme at gangavathi
ಕರ್ನಾಟಕ16 mins ago

Koppala News: ʼಮಮತೆಯ ತೊಟ್ಟಿಲುʼವಿನ 4 ಅನಾಥ ಮಕ್ಕಳು ವಿದೇಶಿ ದಂಪತಿಗಳ ಮಡಿಲಿಗೆ!

Viral Video
Latest25 mins ago

Viral Video: ಸಾವು ಹೇಗೆಲ್ಲ ಹೊಂಚು ಹಾಕುತ್ತದೆ! ಈ ವಿಡಿಯೊ ನೋಡಿ

Viral Video
ವೈರಲ್ ನ್ಯೂಸ್30 mins ago

Viral Video: ವಿಮಾನದಲ್ಲಿ ದಢೂತಿ ಹೆಂಗಸಿನ ಡ್ಯಾನ್ಸ್‌! ನಗಲಾರದೆ ಅಳಲಾರದೆ ತೊಳಲಾಡಿದ ಪ್ರಯಾಣಿಕರು!

OTT Releases
ಸಿನಿಮಾ39 mins ago

OTT Releases: ಒಟಿಟಿಯಲ್ಲಿ ಈ ವಾರ ಮಿರ್ಜಾಪುರ ಸೀಸನ್ 3 ಸೇರಿದಂತೆ ಹಲವು ಸಿನಿಮಾ, ಸಿರೀಸ್‌ಗಳು!

Sexual Harassment
Latest46 mins ago

Sexual Harassment: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿಗೆ ಅಶ್ಲೀಲ ವಿಡಿಯೊ ತೋರಿಸಿ ಲೈಂಗಿಕ ಕಿರುಕುಳ

Woman Doctor
ದೇಶ57 mins ago

ಬೇರೆ ಹುಡುಗಿಗೆ ಮೋಸ ಆಗಬಾರದು; ಮದುವೆಯಾಗಲ್ಲ ಎಂದ ಗೆಳೆಯನ ಗುಪ್ತಾಂಗ ಕತ್ತರಿಸಿದ ಯುವತಿ! Video ಇದೆ

Designer Hairpins Fashion
ಫ್ಯಾಷನ್1 hour ago

Designer Hairpins Fashion: ಗ್ರ್ಯಾಂಡ್‌ ಲುಕ್‌ಗೆ ಸಾಥ್‌ ನೀಡುವ ಡಿಸೈನರ್‌ ಹೇರ್‌ಪಿನ್ಸ್

Amritpal Singh
ದೇಶ2 hours ago

Amritpal Singh: ಜೈಲಿನಲ್ಲಿರುವ ಖಲಿಸ್ತಾನಿ ಪ್ರತ್ಯೇಕತಾವಾದಿ ಅಮೃತ್‌ಪಾಲ್‌ ಸಿಂಗ್‌ಗೆ ಪೆರೋಲ್‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ1 day ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌