ಕೊಚ್ಚಿ : ಐಪಿಎಲ್ 16ನೇ ಆವೃತ್ತಿಗೆ ಆಟಗಾರರ ಹರಾಜು ಪ್ರಕ್ರಿಯೆ ಕೊಚ್ಚಿಯಲ್ಲಿ ನಡೆಯುತ್ತಿದೆ. ಇದು ಮಿನಿ ಹರಾಜು ಪ್ರಕ್ರಿಯೆಯಾಗಿದ್ದು 10 ಫ್ರಾಂಚೈಸಿಗಳಲ್ಲಿ ಖಾಲಿ ಇರುವ 87 ಆಟಗಾರರ ಆಯ್ಕೆಗಾಗಿ ಬಿಡ್ ನಡೆಯುತ್ತಿದೆ. 25ಕ್ಕೂ ಹೆಚ್ಚು ಆಟಗಾರರ ಬಿಡ್ಡಿಂಗ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಆರಂಭದಲ್ಲೇ ಹಿಂದಿನ ಹಲವು ದಾಖಲೆಗಳು ಮುರಿದಿವೆ. ಪ್ರಮುಖವಾಗಿ ವಿದೇಶಿ ಆಟಗಾರರು ದೊಡ್ಡ ಮೊತ್ತದ ಥೈಲಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ನಿರೀಕ್ಷೆಯಂತೆ ಇಂಗ್ಲೆಂಡ್ ತಂಡದ ಬೌಲಿಂಗ್ ಆಲ್ರೌಂಡರ್ ಸ್ಯಾಮ್ ಕರ್ರನ್ ದೊಡ್ಡ ಮೊತ್ತ ಪಡೆದಿದ್ದಾರೆ. ಅವರು 18.25 ಕೋಟಿ ರೂಪಾಯಿ ಪಡೆದ ಪಂಜಾಬ್ ಕಿಂಗ್ಸ್ ತಂಡ ಸೇರಿಕೊಂಡಿದ್ದಾರೆ. ಈ ಮೊತ್ತ ಐಪಿಎಲ್ ಇತಿಹಾಸದಲ್ಲಿ ಇದುವರೆಗಿನ ಗರಿಷ್ಠ ಮೊತ್ತವೆಂಬದ ದಾಖಲೆ ಸೃಷ್ಟಿಸಿದೆ. ಇದೇ ವೇಳೆ 17.5 ಕೋಟಿ ರೂಪಾಯಿಗೆ ಆಸ್ಟ್ರೇಲಿಯಾದ ಆಲ್ರೌಂಡರ್ ಬೆನ್ ಸ್ಟೋಕ್ಸ್ ಮುಂಬಯಿ ಇಂಡಿಯನ್ಸ್ ಪಾಲಾಗಿದ್ದಾರೆ.
ಸ್ಯಾಮ್ ಕರ್ರನ್ ಅವರನ್ನು ಸಿಗದ ಹಿನ್ನೆಲೆಯಲ್ಲಿ ಬೆನ್ ಸ್ಟೋಕ್ಸ್ಗೆ ಭರ್ಜರಿ ಬಿಡ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 16.25 ಕೋಟಿ ರೂಪಾಯಿ ನೀಡಿ ಖರೀದಿ ಮಾಡಿದೆ. ಇದೇ ವೇಳೆ ವಿಕೆಟ್ಕೀಪರ್ ಬ್ಯಾಟರ್ 16.00 ಕೋಟಿ ರೂಪಾಯಿಗೆ ಲಖನೌ ಸೂಪರ್ ಜಯಂಟ್ಸ್ ತಂಡ ಸೇರಿಕೊಂಡಿದ್ದಾರೆ. ಅದಕ್ಕಿಂತ ಮೊದಲು ಇಂಗ್ಲೆಂಡ್ ಸ್ಫೋಟಕ ಬ್ಯಾಟರ್ ಹ್ಯಾರಿ ಬ್ರೂಕ್ 13.5 ಕೋಟಿ ರೂಪಾಯಿಗೆ ಸನ್ರೈಸರ್ಸ್ ಹೈದರಾಬಾದ್ ತಂಡ ಸೇರಿಕೊಂಡಿದ್ದಾರೆ.
ಪಂಜಾಬ್ ತಂಡದ ಮಾಜಿ ನಾಯಕ ಮಯಾಂಕ್ ಅಗರ್ವಾಲ್ ಕೂಡ ಭರ್ಜರಿ ಬೇಡಿಕೆ ಸೃಷ್ಟಿಸಿಕೊಂಡಿದ್ದರು. ಅವರು 8.25 ಕೋಟಿ ರೂಪಾಯಿಗೆ ಸನ್ ರೈಸರ್ಸ್ ಹೈದರಾಬಾದ್ ತಂಡ ಸೇರಿಕೊಂಡಿದ್ದಾರೆ.
ಸ್ಯಾಮ್ ಕರ್ರನ್ಗೆ 18.25 ಕೋಟಿ ರೂಪಾಯಿ.
15 ಕೋಟಿ ರೂಪಾಯಿ ದಾಟಿದ ಸ್ಯಾಮ್ ಕರ್ರನ್ ಬಿಡ್. ನೂತನ ದಾಖಲೆ ಸೃಷ್ಟಿಸುವ ಸಾಧ್ಯತೆ
ಇಂಗ್ಲೆಂಡ್ ತಂಡ ಆಲ್ರೌಂಡರ್ ಖರೀದಿಗೆ ಪೈಪೋಟಿ. 10 ಕೋಟಿ ರೂಪಾಯಿ ದಾಟಿದ ಬೆಲೆ.
ನಿರೀಕ್ಷೆಯಂತೆ ಸ್ಯಾಮ್ ಕರ್ರನ್ಗೆ ಭರ್ಜರಿ ಬೇಟೆ ಶುರುವಾಗಿದೆ. ರಾಜಸ್ಥಾನ, ಮುಂಬಯಿ ತಂಡಗಳ ನಡುವೆ ಪೈಪೋಟಿ ಶುರುವಾಗಿದೆ.
ಬಾಂಗ್ಲಾದೇಶ ತಂಡದ ಆಲ್ರೌಂಡರ್ ಶಕಿಬ್ ಅಲ್ ಹಸನ್ ಅವರೂ ಮೊದಲ ಸುತ್ತಿನ ಹರಾಜಿನಲ್ಲಿ ಅನ್ ಸೋಲ್ಡ್ ಆಗಿದ್ದಾರೆ.