ಕೊಚ್ಚಿ : ಐಪಿಎಲ್ 16ನೇ ಆವೃತ್ತಿಗೆ ಆಟಗಾರರ ಹರಾಜು ಪ್ರಕ್ರಿಯೆ ಕೊಚ್ಚಿಯಲ್ಲಿ ನಡೆಯುತ್ತಿದೆ. ಇದು ಮಿನಿ ಹರಾಜು ಪ್ರಕ್ರಿಯೆಯಾಗಿದ್ದು 10 ಫ್ರಾಂಚೈಸಿಗಳಲ್ಲಿ ಖಾಲಿ ಇರುವ 87 ಆಟಗಾರರ ಆಯ್ಕೆಗಾಗಿ ಬಿಡ್ ನಡೆಯುತ್ತಿದೆ. 25ಕ್ಕೂ ಹೆಚ್ಚು ಆಟಗಾರರ ಬಿಡ್ಡಿಂಗ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಆರಂಭದಲ್ಲೇ ಹಿಂದಿನ ಹಲವು ದಾಖಲೆಗಳು ಮುರಿದಿವೆ. ಪ್ರಮುಖವಾಗಿ ವಿದೇಶಿ ಆಟಗಾರರು ದೊಡ್ಡ ಮೊತ್ತದ ಥೈಲಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ನಿರೀಕ್ಷೆಯಂತೆ ಇಂಗ್ಲೆಂಡ್ ತಂಡದ ಬೌಲಿಂಗ್ ಆಲ್ರೌಂಡರ್ ಸ್ಯಾಮ್ ಕರ್ರನ್ ದೊಡ್ಡ ಮೊತ್ತ ಪಡೆದಿದ್ದಾರೆ. ಅವರು 18.25 ಕೋಟಿ ರೂಪಾಯಿ ಪಡೆದ ಪಂಜಾಬ್ ಕಿಂಗ್ಸ್ ತಂಡ ಸೇರಿಕೊಂಡಿದ್ದಾರೆ. ಈ ಮೊತ್ತ ಐಪಿಎಲ್ ಇತಿಹಾಸದಲ್ಲಿ ಇದುವರೆಗಿನ ಗರಿಷ್ಠ ಮೊತ್ತವೆಂಬದ ದಾಖಲೆ ಸೃಷ್ಟಿಸಿದೆ. ಇದೇ ವೇಳೆ 17.5 ಕೋಟಿ ರೂಪಾಯಿಗೆ ಆಸ್ಟ್ರೇಲಿಯಾದ ಆಲ್ರೌಂಡರ್ ಬೆನ್ ಸ್ಟೋಕ್ಸ್ ಮುಂಬಯಿ ಇಂಡಿಯನ್ಸ್ ಪಾಲಾಗಿದ್ದಾರೆ.
ಸ್ಯಾಮ್ ಕರ್ರನ್ ಅವರನ್ನು ಸಿಗದ ಹಿನ್ನೆಲೆಯಲ್ಲಿ ಬೆನ್ ಸ್ಟೋಕ್ಸ್ಗೆ ಭರ್ಜರಿ ಬಿಡ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 16.25 ಕೋಟಿ ರೂಪಾಯಿ ನೀಡಿ ಖರೀದಿ ಮಾಡಿದೆ. ಇದೇ ವೇಳೆ ವಿಕೆಟ್ಕೀಪರ್ ಬ್ಯಾಟರ್ 16.00 ಕೋಟಿ ರೂಪಾಯಿಗೆ ಲಖನೌ ಸೂಪರ್ ಜಯಂಟ್ಸ್ ತಂಡ ಸೇರಿಕೊಂಡಿದ್ದಾರೆ. ಅದಕ್ಕಿಂತ ಮೊದಲು ಇಂಗ್ಲೆಂಡ್ ಸ್ಫೋಟಕ ಬ್ಯಾಟರ್ ಹ್ಯಾರಿ ಬ್ರೂಕ್ 13.5 ಕೋಟಿ ರೂಪಾಯಿಗೆ ಸನ್ರೈಸರ್ಸ್ ಹೈದರಾಬಾದ್ ತಂಡ ಸೇರಿಕೊಂಡಿದ್ದಾರೆ.
ಪಂಜಾಬ್ ತಂಡದ ಮಾಜಿ ನಾಯಕ ಮಯಾಂಕ್ ಅಗರ್ವಾಲ್ ಕೂಡ ಭರ್ಜರಿ ಬೇಡಿಕೆ ಸೃಷ್ಟಿಸಿಕೊಂಡಿದ್ದರು. ಅವರು 8.25 ಕೋಟಿ ರೂಪಾಯಿಗೆ ಸನ್ ರೈಸರ್ಸ್ ಹೈದರಾಬಾದ್ ತಂಡ ಸೇರಿಕೊಂಡಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್, ಗುಜರಾತ್ ಟೈಟಾನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಗಳು ಖಾಲಿಯಿದ್ದ ಸ್ಥಾನವನ್ನು ತುಂಬಿಕೊಂಡವು.
ಆರ್ಸಿಬಿ ತಂಡ ಸೇರಿದ ಸೋನು ಯಾದವ್. 20 ಲಕ್ಷ ರೂಪಾಯಿ ಕೊಟ್ಟ ಫ್ರಾಂಚೈಸಿ.
60 ಲಕ್ಷ ರೂಪಾಯಿ ಕೊಟ್ಟು ಅವಿನಾಶ್ ಸಿಂಗ್ ಅವರನ್ನು ತಂಡಕ್ಕೆ ಸೇರಿಸಿಕೊಂಡ ಆರ್ಸಿಬಿ.
ಕೆಕೆಆರ್ ತಂಡದ ಪಾಲಾದ ಡೇವಿಡ್ ವೈಸ್. 1 ಕೋಟಿ ರೂಪಾಯಿ ಪಡೆದ ಇಂಗ್ಲೆಂಡ್ ಆಟಗಾರ.
ವೇಗದ ಬೌಲರ್ ಮೋಹಿತ್ ಶರ್ಮ 50 ಲಕ್ಷ ರೂಪಾಯಿ ಕೊಟ್ಟು ಗುಜರಾತ್ ಟೈಟನ್ಸ್ ತಂಡಕ್ಕೆ ಸೇರಿಸಿಕೊಂಡಿದ್ದಾರೆ.