Site icon Vistara News

Mohammed Shami : ಆಸ್ಪತ್ರೆಯಲ್ಲಿರುವ ಮೊಹಮ್ಮದ್​ ಶಮಿಗೆ ಹಾರೈಕೆ ತಿಳಿಸಿದ ಪ್ರಧಾನಿ ಮೋದಿ

Narendra modi

ನವದೆಹಲಿ: ಗಾಯದ ಸಮಸ್ಯೆ ಪರಿಹಾರಕ್ಕಾಗಿ ಸರ್ಜರಿಗೆ ಒಳಗಾಗಿ ಆಸ್ಪತ್ರೆ ಸೇರಿರುವ ಭಾರತ ಕ್ರಿಕೆಟ್ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿ (Mohammed Shami) ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹಾರೈಸಿದ್ದಾರೆ. ದೀರ್ಘಕಾಲದ ಗಾಯದಿಂದಾಗಿ ಐಪಿಎಲ್ 2024 ಮತ್ತು ಟಿ20 ವಿಶ್ವಕಪ್ 2024 ಸೇರಿದಂತೆ ಮುಂಬರುವ ಹಲವಾರು ಟೂರ್ನಿಗಳಿಂದ ಹೊರಗುಳಿದಿರುವ ಶಮಿ ಲಂಡನ್​ನಲ್ಲಿ ಸ್ನಾಯುವಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅದರ ಚಿತ್ರವನ್ನು ಅವರು ತಮ್ಮ ಸೋಶಿಯಲ್ ಮೀಡಿಯಾಗಳಲ್ಲಿ ಹಾಕಿದ್ದರು. ಅದನ್ನು ನೋಡಿದ ಪರಧಾಣಿ ಮೋದಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಶಮಿ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಆಶಾವಾದವನ್ನು ವ್ಯಕ್ತಪಡಿಸಿದ ಪ್ರಧಾನಿ ಮೋದಿ, ಸಾಮಾಜಿಕ ಮಾಧ್ಯಮದಲ್ಲಿ ವೈಯಕ್ತಿಕವಾಗಿ ಸಂದೇಶವನ್ನು ರವಾನಿಸಿದ್ದಾರೆ. ಪ್ರಧಾನಿಯವರ ನಡೆಗೆ ಮೊಹಮ್ಮದ್​ ಶಮಿ ಮಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮೋದಿಯವರ ದಯೆ ಮತ್ತು ಚಿಂತನಶೀಲತೆಯನ್ನು ಶಮಿ ಮೆಚ್ಚಿದರು. ಪುನಶ್ಚೇತನ ಅವಧಿಯಲ್ಲಿ ಪ್ರಧಾನಿಯವರ ಬೆಂಬಲದ ಮಹತ್ವವನ್ನು ವಿವರಿಸಿದರು. ಆದಷ್ಟು ಶೀಘ್ರ ಚೇತರಿಸಿಕೊಳ್ಳುವುದಾಗಿ ಅವರು ಹೇಳಿದ್ದಾರೆ.

ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು ಯಾಕೆ?

ಲಂಡನ್:‌ ಭಾರತ ಕ್ರಿಕೆಟ್‌ ತಂಡದ ಅನುಭವಿ ವೇಗಿ, ಕಳೆದ ವಿಶ್ವಕಪ್‌ ಟೂರ್ನಿಯಲ್ಲಿ (World Cup 2023) ಮೊನಚಾದ ಪ್ರದರ್ಶನದ ಮೂಲಕವೇ ದೇಶದ ಗಮನ ಸೆಳೆದಿದ್ದ ಮೊಹಮ್ಮದ್‌ ಶಮಿ (Mohammed Shami) ಅವರು ಲಂಡನ್‌ನಲ್ಲಿ ಎಡಪಾದದ ಶಸ್ತ್ರಚಿಕಿತ್ಸೆಗೆ (Surgery) ಒಳಗಾಗಿದ್ದಾರೆ. ಯಶಸ್ವಿಯಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಕುರಿತು ಮೊಹಮ್ಮದ್‌ ಶಮಿ ಅವರೇ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದು, ಅಭಿಮಾನಿಗಳಿಗೆ ಸಂದೇಶವನ್ನೂ ರವಾನಿಸಿದ್ದಾರೆ.

ಇದನ್ನೂ ಓದಿ : WPL 2024 : ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಮೊದಲ ವಿಜಯ, ಯುಪಿಗೆ ಸೋಲು

“ನಾನು ಯಶಸ್ವಿಯಾಗಿ ಪಾದದ ಸ್ನಾಯುರಜ್ಜು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದೇನೆ. ಸಂಪೂರ್ಣವಾಗಿ ಗುಣಮುಖನಾಗಲು ಒಂದಷ್ಟು ಸಮಯ ಬೇಕಾಗುತ್ತದೆ. ಆದರೆ, ಶೀಘ್ರದಲ್ಲೇ ಗುಣಮುಖನಾಗುವ ವಿಶ್ವಾಸವಿದೆ” ಎಂದು ಫೋಟೊಗಳ ಸಮೇತ ಮೊಹಮ್ಮದ್‌ ಶಮಿ ಪೋಸ್ಟ್‌ ಮಾಡಿದ್ದಾರೆ. ಇವರ ಪೋಸ್ಟ್‌ಗೆ ಸಾವಿರಾರು ಅಭಿಮಾನಿಗಳು ಪ್ರತಿಕ್ರಿಯಿಸಿದ್ದು, ಶೀಘ್ರವೇ ಗುಣಮುಖರಾಗಿ ಬನ್ನಿ ಎಂದು ಹಾರೈಸಿದ್ದಾರೆ.

ಕಳೆದ ವರ್ಷ ಭಾರತದ ಆತಿಥ್ಯದಲ್ಲಿ ನಡೆದ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಶಮಿ ತಮ್ಮ ಮೊನಚಾದ ಬೌಲಿಂಗ್​ ದಾಳಿಯಿಂದ ತಂಡಕ್ಕೆ ಹಲವು ಗೆಲುವು ತಂದುಕೊಟ್ಟಿದ್ದರು. ಆರಂಭಿಕ ಮೂರು ಪಂದ್ಯಗಳಲ್ಲಿ ಆಡುವ ಅವಕಾಶ ಸಿಗದಿದ್ದರೂ, ಆ ಬಳಿಕ ಆಡಿದ 7 ಪಂದ್ಯಗಳಲ್ಲಿ 24 ವಿಕೆಟ್‌ ಉರುಳಿಸಿ ಟೂರ್ನಿಯಲ್ಲಿ ಅತ್ಯಧಿಕ ವಿಕೆಟ್​ ಕಿತ್ತ ಬೌಲರ್​ ಎನಿಸಿಕೊಂಡಿದ್ದರು. ವಿಶ್ವಕಪ್​ ಬಳಿಕ ಶಮಿ ಗಾಯದ ಸಮಸ್ಯೆಯಿಂದ ಭಾರತ ಪರ ಆಡಿಲ್ಲ.

Exit mobile version