Site icon Vistara News

Vistara Top 10 News : ಬೃಹತ್​ ರೈಲ್ವೆ ಪ್ರಾಜೆಕ್ಟ್‌ಗಳಿಗೆ ಮೋದಿ ಚಾಲನೆ, ಜಿಲ್ಲಾ ಮಟ್ಟದಲ್ಲೂ ಉದ್ಯೋಗ ಮೇಳ ಇತ್ಯಾದಿ ಪ್ರಮುಖ ಸುದ್ದಿಗಳು

Top 10 news

1.2000 ರೈಲ್ವೆ ಪ್ರಾಜೆಕ್ಟ್‌ಗಳಿಗೆ ಪಿಎಂ ಚಾಲನೆ; ಜೂನ್‌ನಿಂದ 3ನೇ ಅವಧಿಗೆ ಸರ್ಕಾರ ಎಂದ ಮೋದಿ
ನವದೆಹಲಿ: 41 ಸಾವಿರ ಕೋಟಿ ರೂ. ವೆಚ್ಚದ 2000 ರೈಲ್ವೆ ಪ್ರಾಜೆಕ್ಟ್‌ಗಳನ್ನು (2000 Railway Projects) ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಸೋಮವಾರ ಲೋಕಾರ್ಪಣೆ ಮಾಡಿದರು. ಈ ವೇಳೆ ಮಾತನಾಡಿದ ಮೋದಿ ಅವರು, ಈ ಮೊದಲು ರೈಲ್ವೆ ಇಲಾಖೆ (Railway Department) ಎಂದರೆ ನಷ್ಟ ಎಂದು ಹೇಳಲಾಗುತ್ತಿತ್ತು. ಆದರೆ, ಈಗ ಅದೇ ರೈಲ್ವೆ ಪರಿವರ್ತನೆಯ ಬಹುದೊಡ್ಡ ಶಕ್ತಿಯಾಗಿ ಬದಲಾಗಿದೆ ಎಂದು ಹೇಳಿದರು. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್ ಮಾಡಿ.
ಈ ಸುದ್ದಿಯನ್ನೂ ಓದಿ : Railway Projects : ರಾಜ್ಯದಲ್ಲಿ ರೈಲ್ವೆ ಕ್ರಾಂತಿಗೆ ಮುನ್ನುಡಿ ಬರೆದ ಮೋದಿ,‌ 15 ನಿಲ್ದಾಣ ಮೇಲ್ದರ್ಜೆಗೆ

2. Job Fair: ಇನ್ನು ಪ್ರತಿ ವರ್ಷ ಜಿಲ್ಲಾ ಮಟ್ಟದಲ್ಲೂ ಉದ್ಯೋಗ ಮೇಳ; ಪೂರಕ ತರಬೇತಿ
ಬೆಂಗಳೂರು: ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಮೂಲಕ “ಯುವ ಸಮೃದ್ಧಿ ಸಮ್ಮೇಳನ – 2024” ಅಡಿ ಉದ್ಯೋಗ ಮೇಳ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಉದ್ಯೋಗ ಮೇಳದಲ್ಲಿ (Job Fair) 1,10,000ಕ್ಕೂ ಅಧಿಕ ಉದ್ಯೋಗವಕಾಶಗಳಿದ್ದು, 600ಕ್ಕೂ ಅಧಿಕ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಿವೆ. ಈ ಸರ್ಕಾರದ ಅವಧಿವರೆಗೆ ಕೌಶಲ್ಯಾಧಾರಿತ ತರಬೇತಿಯೊಂದಿಗೆ ಉದ್ಯೋಗ ಮೇಳಗಳನ್ನು ನಿರಂತರವಾಗಿ ಆಯೋಜಿಸುವ ಗುರಿಯನ್ನು ಹಾಕಿಕೊಳ್ಳಲಾಗಿದೆ. ಪ್ರಸ್ತುತ ರಾಜ್ಯ ಮಟ್ಟದಲ್ಲಿ ಉದ್ಯೋಗ ಮೇಳವನ್ನು ವರ್ಷಕ್ಕೆ ಒಮ್ಮೆ ಆಯೋಜಿಸಲಾಗುವುದರ ಜತೆಗೆ ಜಿಲ್ಲಾ ಮಟ್ಟದಲ್ಲಿಯೂ ಆಯೋಜಿಸಲು ತೀರ್ಮಾನಿಸಲಾಗಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್ ಮಾಡಿ.

3. Rajya Sabha Election: ಮೂರು ಪಕ್ಷಗಳಲ್ಲಿ ವಿಪ್‌ ಜಾರಿ; ಕಾಂಗ್ರೆಸ್‌ ಶಾಸಕರು ರೆಸಾರ್ಟ್‌ಗೆ ಶಿಫ್ಟ್
ಬೆಂಗಳೂರು: ಮಂಗಳವಾರ (ಫೆ. 26) ನಡೆಯಲಿರುವ ರಾಜ್ಯಸಭಾ ಚುನಾವಣಾ (Rajya Sabha Election) ಕಣ ರಂಗೇರಿದೆ. ಇದಕ್ಕಾಗಿ ಈಗಾಗಲೇ “ನಂಬರ್‌ ಗೇಮ್‌” ಸಹ ಆರಂಭವಾಗಿದೆ. ಮೂರೂ ರಾಜಕೀಯ ಪಕ್ಷಗಳೂ ತಂತ್ರಗಾರಿಕೆಯಲ್ಲಿ ತೊಡಗಿವೆ. ಆಡಳಿತ ಪಕ್ಷ ಕಾಂಗ್ರೆಸ್‌ಗೆ ಮೂವರು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುವಷ್ಟು ಸಂಖ್ಯಾಬಲ ಇದೆ. ಆದರೆ, ಇದಕ್ಕೆ ಶಾಸಕರೊಬ್ಬರ ನಿಧನದಿಂದ ಒಂದು ಮತದ ಕೊರತೆ ಎದುರಾಗಿದೆ. ಅಡ್ಡ ಮತದಾನದ (Cross voting) ಭೀತಿಯೂ ಎದುರಾಗಿದ್ದರಿಂದ ರೆಸಾರ್ಟ್‌ಗೆ ಶಿಫ್ಟ್‌ (Resort Politics) ಆಗಿದೆ. ಈ ನಡುವೆ ಮೂರೂ ರಾಜಕೀಯ ಪಕ್ಷಗಳಾದ ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್‌ ತಮ್ಮ ತಮ್ಮ ಶಾಸಕರಿಗೆ ವಿಪ್‌ ಜಾರಿ (Whip issue) ಮಾಡಿವೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್ ಮಾಡಿ.

4. 2024: ಕೆಎಎಸ್‌ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌; 384 ಹುದ್ದೆಗಳಿಗೆ ಅರ್ಜಿ ಆಹ್ವಾನ!
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) (kpsc recruitment 2024) ಗೆಜೆಟೆಡ್‌ ಪ್ರೊಬೆಷನರಿಯ (ಕೆಎಎಸ್) (KAS Recruitment 2024) ಗ್ರೂಪ್‌ “ಎ” ಮತ್ತು ಗ್ರೂಪ್‌ “ಬಿ” ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹೈದರಾಬಾದ್‌ ಕರ್ನಾಟಕ ಹಾಗೂ ಉಳಿಕೆ ವೃಂದಗಳಲ್ಲಿ ಅರ್ಜಿ ಆಹ್ವಾನ ಮಾಡಲಾಗಿದ್ದು, ಒಟ್ಟು 384 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸುಮಾರು ಆರು ವರ್ಷಗಳ ನಂತರ ಈ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್ ಮಾಡಿ.

5. ದೇಶದಲ್ಲಿ ಬಡವರ ಸಂಖ್ಯೆ 5%ಕ್ಕಿಂತ ಇಳಿಕೆ; ಆಹಾರಕ್ಕಿಂತ ಓಡಾಟ, ಮನರಂಜನೆಗೇ ಹೆಚ್ಚು ಖರ್ಚು!
ಹೊಸದಿಲ್ಲಿ: ದೇಶದಲ್ಲಿ ಬಡವರ ಜನಸಂಖ್ಯೆಯು (India Poverty) ಈಗ ಶೇಕಡಾ 5ಕ್ಕಿಂತ ಕಡಿಮೆಯಾಗಿದೆ ಎಂದು ನೀತಿ ಆಯೋಗದ (NITI Aayog) ʼಬಳಕೆ ಮತ್ತು ವೆಚ್ಚದ ಸಮೀಕ್ಷೆಯ ವರದಿ’ ತಿಳಿಸಿದೆ. ಭಾರತೀಯರು ಆಹಾರಕ್ಕಿಂತ ಸಾರಿಗೆ ಹಾಗೂ ಇತರ ಸಂಗತಿಗಳ ಮೇಲೆಯೇ ಹೆಚ್ಚು ಖರ್ಚು ಮಾಡುತ್ತಾರೆ ಎಂಬುದನ್ನೂ ಈ ವರದಿ ತಿಳಿಸಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್ ಮಾಡಿ.

6. Arvind Kejriwal : ʼತಪ್ಪಾಯ್ತುʼ ಎಂದ ಕೇಜ್ರಿವಾಲ್;‌ ʼಆಯ್ತು ಬಿಡಿʼ ಎಂದ ಸುಪ್ರೀಂ ಕೋರ್ಟ್;‌ ಯಾವ ಕೇಸ್?
ಹೊಸದಿಲ್ಲಿ: 2018ರ ಮಾನನಷ್ಟ ಮೊಕದ್ದಮೆಯೊಂದರಲ್ಲಿ (Defamation Case) ದಿಲ್ಲಿ ಮುಖ್ಯಮಂತ್ರಿ (Delhi CM) ಮತ್ತು ಎಎಪಿ ನಾಯಕ (AAP leader) ಅರವಿಂದ ಕೇಜ್ರಿವಾಲ್ (Arvind Kejriwal) ʼನನ್ನಿಂದ ಪ್ರಮಾದವಾಗಿದೆʼ ಎಂದು ಒಪ್ಪಿಕೊಂಡಿದ್ದಾರೆ. ಇದನ್ನು ಮನ್ನಿಸಿದ ಸುಪ್ರೀಂ ಕೋರ್ಟ್‌ (Supreme Court), ಕೇಜ್ರಿವಾಲ್‌ ವಿರುದ್ಧ ಯಾವುದೇ ದಂಡನೆಯ ಕ್ರಮಗಳನ್ನು ತೆಗೆದುಕೊಳ್ಳದಂತೆ ಕೆಳಗಿನ ನ್ಯಾಯಾಲಯಕ್ಕೆ ಸೂಚಿಸಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್ ಮಾಡಿ.

7. Pankaj Udhas: ‘ಚಂದಕ್ಕಿಂತ ಚಂದ….’ ಗಜಲ್ ಗಾಯಕ ಪಂಕಜ್ ಉದಾಸ್ ಇನ್ನಿಲ್ಲ
ಮುಂಬೈ: ಖ್ಯಾತ ಗಜಲ್ ಗಾಯಕ (Ghazal Singer) ಪಂಕಜ್ ಉದಾಸ್ (Pankaj Udhas) ಅವರು ತಮ್ಮ 72ನೇ ವಯಸ್ಸಿನಲ್ಲಿ ಸೋಮವಾರ ನಿಧನರಾದರು. ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಪಂಕಜ್ ಉದಾಸ್ ಅವರು, ನಟ ಸುದೀಪ್ ಅವರ ‘ಸ್ಪರ್ಶ’ ಚಿತ್ರದ ‘ಚಂದಕ್ಕಿಂತ ಚಂದ… ನೀನೇ ಸುಂದರ…..’ ಗಜಲ್ ಹಾಡಿಗೆ ದನಿಯಾಗಿದ್ದರು. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್ ಮಾಡಿ.

8. ಇಂಗ್ಲೆಂಡ್‌ ವಿರುದ್ಧ 4ನೇ ಟೆಸ್ಟ್‌ ಗೆಲುವು; ಭಾರತಕ್ಕೆ ಸರಣಿ
ರಾಂಚಿ: ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ನಾಲ್ಕನೇ ಟೆಸ್ಟ್‌ (IND Vs ENG) ಪಂದ್ಯದಲ್ಲಿ ರೋಹಿತ್‌ ಶರ್ಮಾ (Rohit Sharma) ಬಳಗವು 5 ವಿಕೆಟ್‌ ಗೆಲುವು ಸಾಧಿಸಿದೆ. ರಾಂಚಿಯ ಜೆಎಸ್​ಸಿಎ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಭಾರತ ಐದು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ 3-1 ಅಂತರದಿಂದ ಮುನ್ನಡೆ ಸಾಧಿಸಿ ಸರಣಿಯನ್ನು ವಶಪಡಿಸಿಕೊಂಡಿದೆ. ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ವಿಭಾಗದಲ್ಲಿ ಸಮರ್ಥ ಪ್ರದರ್ಶನ ತೋರಿದ ಭಾರತ ತಂಡವು ಒಂದು ದಿನ ಬಾಕಿ ಇರುವಂತೆಯೇ ಗೆಲುವನ್ನು ತನ್ನ ಹೆಸರಿಗೆ ಬರೆದುಕೊಂಡಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್ ಮಾಡಿ.

9. Namma Metro : ಬಟ್ಟೆ ಕ್ಲೀನ್‌ ಇಲ್ಲ ಎಂದು ರೈತನಿಗೆ ಅಪಮಾನ ಮಾಡಿದ ಮೆಟ್ರೋ ಸಿಬ್ಬಂದಿ ವಜಾ
ಬೆಂಗಳೂರು: ಹಾಕಿಕೊಂಡಿರುವ ಬಟ್ಟೆ ಕ್ಲೀನ್‌ ಇಲ್ಲ ಎಂಬ ಕಾರಣಕ್ಕಾಗಿ ರೈತರೊಬ್ಬರನ್ನು ಮೆಟ್ರೋ (Namma Metro) ಪ್ರವೇಶಿಸಲು (Metro denies entry to Farmer) ಅವಕಾಶ ನೀಡದೆ ಅಪಮಾನ ಮಾಡಿದ ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್ ಮಾಡಿ.

10. ಪತ್ನಿಯನ್ನೇ ಗುಂಡಿಕ್ಕಿ ಕೊಂದ ಪತಿ; ಇನ್‌ಸ್ಟಾಗ್ರಾಂನಲ್ಲಿ ಲಕ್ಷ ಫಾಲೋವರ್ಸ್‌ ಇದ್ದಿದ್ದೇ ಕಾರಣ?
ಜೈಪುರ: ಸಾಮಾಜಿಕ ಜಾಲತಾಣಗಳ ಯುಗದಲ್ಲಿ (Social Media Era) ಅವುಗಳಿಂದ ಜನರಿಗೆ ಭಾರಿ ಉಪಯೋಗವಾಗುತ್ತಿದೆ. ಅದರಲ್ಲೂ, ಇನ್‌ಸ್ಟಾಗ್ರಾಂ ರೀಲ್ಸ್‌ ಮೂಲಕ ಯುವಕ-ಯುವತಿಯರು ಸೇರಿ ಎಲ್ಲರೂ ಫೇಮಸ್‌ ಆಗುತ್ತಿದ್ದಾರೆ. ಹಣವನ್ನೂ ಗಳಿಸುತ್ತಿದ್ದಾರೆ. ಆದರೆ, ಇದೇ ಕೆಲವರ ಬಾಳಿನಲ್ಲಿ ಮುಳುವಾಗುತ್ತಿದೆ. ಸಾಮಾಜಿಕ ಜಾಲತಾಣವು ಗಂಡ-ಹೆಂಡತಿ ಮಧ್ಯೆ ವಿರಸಕ್ಕೆ ಕಾರಣವಾಗುತ್ತಿದೆ. ಇದಕ್ಕೆ ನಿದರ್ಶನ ಎಂಬಂತೆ, ರಾಜಸ್ಥಾನದಲ್ಲಿ (Rajasthan) ವ್ಯಕ್ತಿಯೊಬ್ಬ ಪತ್ನಿಯನ್ನೇ ಗುಂಡಿಕ್ಕಿ ಕೊಲೆ ಮಾಡಿದ್ದಾನೆ. ಇನ್‌ಸ್ಟಾಗ್ರಾಂನಲ್ಲಿ ಮಹಿಳೆಯು ಲಕ್ಷಾಂತರ ಫಾಲೋವರ್ಸ್‌ (Instagram Followers) ಹೊಂದಿದ್ದು, ಅವರು ರೀಲ್ಸ್‌ ಮಾಡುವುದೇ ಜಗಳ, ಕೊಲೆಗೆ ಕಾರಣ ಎಂದು ತಿಳಿದುಬಂದಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್​ ಕ್ಲಿಕ್ ಮಾಡಿ.
ಮತ್ತಷ್ಟು ವೈರಲ್‌ ಸುದ್ದಿಗಳಿಗಾಗಿ ಕ್ಲಿಕ್‌ ಮಾಡಿ

Exit mobile version