Site icon Vistara News

Narendra Modi : ಶಿವನ ಥೀಮ್ ಹೊಂದಿರುವ ಕ್ರಿಕೆಟ್ ಸ್ಟೇಡಿಯಮ್​ಗೆ ಅಡಿಗಲ್ಲು ಹಾಕಿದ ಪ್ರಧಾನಿ ಮೋದಿ, ಎಲ್ಲಿ ನಿರ್ಮಾಣ?

Narendra Modi

ವಾರಣಾಸಿ: ವಾರಾಣಸಿಯಲ್ಲಿ ನಿರ್ಮಿಸಲಾಗುತ್ತಿರುವ ಶಿವನ ಮಾದರಿಯ ಕ್ರಿಕೆಟ್ ಸ್ಟೇಡಿಯಂಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಶನಿವಾರ ಶಂಕುಸ್ಥಾಪನೆ ನೆರವೇರಿಸಿದರು. 121 ಕೋಟಿ ರೂಪಾಯಿ ಮೌಲ್ಯದ ಭೂಪ್ರದೇಶದಲ್ಲಿ ನಿರ್ಮಾಣವಾಗಲಿರುವ ಈ ಕ್ರೀಡಾಂಗಣಕ್ಕೆ ಸುಮಾರು 330 ಕೋಟಿ ರೂಪಾಯಿ ಅಂದಾಜು ವೆಚ್ಚ ಹಾಕಲಾಗಿದೆ. ಹಿಂದೂಗಳಿಗೆ ಪರಮಪವಿತ್ರ ಕ್ಷೇತ್ರವಾಗಿರುವ ಕಾಶಿಯ ಸಮೀಪ ನಿರ್ಮಾಣವಾಗಲಿರುವ ಈ ಸ್ಟೇಡಿಯಮ್​ ಅನ್ನು ಶಿವನಿಗೆ ಸಮರ್ಪಿಸಲಾಗುವುದು ಎಂದು ಬಿಸಿಸಿಐ ತಿಳಿಸಿದೆ.

ಬೃಹತ್ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಡಿಜಿಟಲ್ ಬಟನ್ ಒತ್ತುವ ಮೂಲಕ ಅಡಿಗಲ್ಲು ಕಾರ್ಯಕ್ರಮ ನೆರವೇರಿಸಿದರು. ಸಮಾರಂಭದಲ್ಲಿ ಸಚಿನ್ ತೆಂಡೂಲ್ಕರ್ ಅವರಿಗೆ ಕಸ್ಟಮ್ ಟೀಮ್ ಇಂಡಿಯಾ ಜೆರ್ಸಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಿದರು. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮತ್ತು ಅಧ್ಯಕ್ಷ ರೋಜರ್ ಬಿನ್ನಿ ವಿಶೇಷ ಸಹಿ ಮಾಡಿದ ಬ್ಯಾಟ್ ಅನ್ನು ಉಡುಗೊರೆಯಾಗಿ ನೀಡಿದರು.

ಇದು ಸುಮಾರು 30,000 ಜನರು ಕುಳಿತುಕೊಳ್ಳುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಭವಿಷ್ಯದಲ್ಲಿ ಅದರನ್ನು 45 ಸಾವಿರಕ್ಕೆ ಏರಿಕೆ ಮಾಡುವ ಗುರಿಯಿದೆ. ಅರ್ಧಚಂದ್ರಾಕಾರದ ಚಾವಣಿಯ ಕವರ್​ಗಳು, ತ್ರಿಶೂಲದ ಆಕಾರದ ಫ್ಲಡ್​ಲೈಟ್​ಗಳು ಮತ್ತು ಬಿಲ್ವಪತ್ರೆ ಎಲೆ ಮತ್ತು ಢಮರುಗವನ್ನು ಹೋಲುವ ರಚನೆಗಳಂತಹ ವಿಶಿಷ್ಟ ವಿನ್ಯಾಸದ ಅಂಶಗಳನ್ನು ಈ ಸ್ಟೇಡಿಯಮ್ ಹೊಂದಿರಲಿದೆ.

ಕ್ರೀಡಾಂಗಣದ ವಿನ್ಯಾಸವು ಕಾಶಿಯ ಸಾರವನ್ನು ಸೆರೆಹಿಡಿಯುವ ಗುರಿಯನ್ನು ಹೊಂದಿದೆ, ಪ್ರೇಕ್ಷಕರ ಗ್ಯಾಲರಿ ವಾರಣಾಸಿಯ ಘಾಟ್​ಗಳ ಮೆಟ್ಟಿಲುಗಳನ್ನು ಹೋಲುತ್ತದೆ. ಕ್ರೀಡಾಂಗಣವನ್ನು ಡಿಸೆಂಬರ್ 2025 ರೊಳಗೆ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ : Varanasi Stadium: ವಾರಾಣಸಿ ಕ್ರಿಕೆಟ್‌ ಸ್ಟೇಡಿಯಂ ಶಿವಮಯ; ಹೀಗಿರಲಿದೆ ಇದರ ವೈಭವ, ವೈಶಿಷ್ಟ್ಯ

ಶಂಕುಸ್ಥಾಪನೆ ಮಾಡುವುದರ ಜೊತೆಗೆ, ಪ್ರಧಾನಿ ಮೋದಿ ವಾರಣಾಸಿಯಲ್ಲಿ ನಡೆದ ಮಹಿಳಾ ಬೆಂಬಲಿಗರ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದರು. ಸಂಸತ್ತು ಅಂಗೀಕರಿಸಿದ ಮಹಿಳಾ ಮೀಸಲಾತಿ ಮಸೂದೆಯ ಬಗ್ಗೆ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ, ಉಪಾಧ್ಯಕ್ಷ ರಾಜೀವ್ ಶುಕ್ಲಾ ಮತ್ತು ಕಾರ್ಯದರ್ಶಿ ಜಯ್ ಶಾ ಭಾಗವಹಿಸಿದ್ದರು. ಕಾನ್ಪುರ ಮತ್ತು ಲಕ್ನೋ ನಂತರ ಇದು ಉತ್ತರ ಪ್ರದೇಶದ ಮೂರನೇ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣವಾಗಲಿದೆ.

ವಿಮಾನದ ಮೂಲಕ ವಾರಣಾಸಿಗೆ ಆಗಮಿಸಿದ ಪ್ರಧಾನಿ ಮೋದಿ ಮಧ್ಯಾಹ್ನ 1:30 ರ ಸುಮಾರಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು ಎಂದು ವರದಿಗಳು ತಿಳಿಸಿವೆ. ಇದಕ್ಕೂ ಮುನ್ನ ಉಪಸ್ಥಿತರಿದ್ದ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರು ಈ ಘಟನೆಯನ್ನು “ಕಾಶಿ ಇತಿಹಾಸದಲ್ಲಿ ಸುವರ್ಣ ಅಧ್ಯಾಯ” ಎಂದು ಬಣ್ಣಿಸಿದ್ದಾರೆ.

ಸಿಎಂ ಟ್ವೀಟ್ ಪ್ರಕಾರ, ಕಾಶಿ ಸಂಸದರಾಗಿರುವ ಪ್ರಧಾನಿ ಮೋದಿ ಸಾಂಸ್ಕೃತಿಕ ಮಹೋತ್ಸವ 2023 ರ ಸಮಾರೋಪ ಮತ್ತು ಬಹುಮಾನ ವಿತರಣಾ ಸಮಾರಂಭ ದಲ್ಲಿ 1,115 ಕೋಟಿ ರೂ.ಗಳ ವೆಚ್ಚದಲ್ಲಿ ಹೊಸದಾಗಿ ನಿರ್ಮಿಸಲಾದ 16 ಅಟಲ್ ವಸತಿ ಶಾಲೆಗಳನ್ನು ಉದ್ಘಾಟಿಸಲಿದ್ದಾರೆ.

Exit mobile version