ಶ್ರೀನಗರ: ಶ್ರೀನಗರದ ಈದ್ಗಾ ಪ್ರದೇಶದಲ್ಲಿ ಭಯೋತ್ಪಾದಕರು (Terrorist Attack) ಪೊಲೀಸ್ ಅಧಿಕಾರಿಯ ಮೇಲೆ ಗುಂಡು ಹಾರಿಸಿದ್ದಾರೆ. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ದಾಳಿಕೋರರನ್ನು ಪತ್ತೆಹಚ್ಚಲು ಈ ಪ್ರದೇಶವನ್ನು ಸುತ್ತುವರಿದಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
2021 ರ ಫೆಬ್ರವರಿಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಕದನ ವಿರಾಮ ಒಪ್ಪಂದದ ನಂತರ ಈ ವಾರದ ಆರಂಭದಲ್ಲಿ ಗಡಿಯಲ್ಲಿ ಅತಿದೊಡ್ಡ ಕದನ ವಿರಾಮ ಉಲ್ಲಂಘನೆಯಾಗಿತ್ತು. ಇದಾದ ಕೆಲವೇ ದಿನಗಳ ನಂತರ ಘಟನೆ ನಡೆದಿದೆ. ಗಡಿಯ ಅರ್ನಿಯಾ ಸೆಕ್ಟರ್ನಲ್ಲಿ ಗುರುವಾರ ಅಪ್ರಚೋದಿತ ಗುಂಡಿನ ದಾಳಿ ಮತ್ತು ಮೋರ್ಟಾರ್ ಶೆಲ್ ದಾಳಿಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್ಎಫ್) ಸಿಬ್ಬಂದಿ ಗಾಯಗೊಂಡಿದ್ದಾರೆ. ಮೋರ್ಟಾರ್ ಶೆಲ್ ಗಳು ವಸತಿ ಪ್ರದೇಶಗಳಿಗೆ ಅಪ್ಪಳಿಸಿದ ನಂತರ ಡಜನ್ ಗಟ್ಟಲೆ ಗ್ರಾಮಸ್ಥರು ತಮ್ಮ ಮನೆಗಳನ್ನು ತೊರೆದಿದ್ದಾರೆ.
ಬುಧವಾರ, ಜಮ್ಮು ಮತ್ತು ಕಾಶ್ಮೀರದ ಉನ್ನತ ಅಧಿಕಾರಿಗಳು ಮತ್ತು ಭದ್ರತಾ ಸಂಸ್ಥೆಗಳ ಸಭೆ ಶ್ರೀನಗರದ 15 ಕಾರ್ಪ್ಸ್ ಪ್ರಧಾನ ಕಚೇರಿಯಲ್ಲಿ ನಡೆದಿದೆ. ಕಾಶ್ಮೀರದಲ್ಲಿ ವಿದೇಶಿ ಭಯೋತ್ಪಾದಕರ ಪಾತ್ರವು ಸಭೆಯಲ್ಲಿ ದೊಡ್ಡ ಚರ್ಚೆಯ ವಿಷಯಗಳಲ್ಲಿ ಒಂದಾಗಿತ್ತು.
ಇದನ್ನೂ ಓದಿ: Cong Prez Poll | ಚುನಾವಣೆಯಲ್ಲಿ ಖರ್ಗೆ ವಿರುದ್ಧ ನಾನು ಸ್ಪರ್ಧಿಸಲು ಸಾಧ್ಯವೇ ಇಲ್ಲ ಎಂದ ದಿಗ್ವಿಜಯ ಸಿಂಗ್
ಈ ವರ್ಷ ಜಮ್ಮು ಮತ್ತು ಕಾಶ್ಮೀರದಲ್ಲಿ ಕೊಲ್ಲಲ್ಪಟ್ಟ 46 ಭಯೋತ್ಪಾದಕರಲ್ಲಿ 37 ಪಾಕಿಸ್ತಾನಿಗಳು ಮತ್ತು ಕೇವಲ ಒಂಬತ್ತು ಮಂದಿ ಸ್ಥಳೀಯರು ಎಂದು ಅಧಿಕೃತ ಅಂಕಿ ಅಂಶಗಳು ಬಹಿರಂಗಪಡಿಸಿವೆ. ಕೇಂದ್ರಾಡಳಿತ ಪ್ರದೇಶದಲ್ಲಿ 33 ವರ್ಷಗಳ ಭಯೋತ್ಪಾದನೆಯಲ್ಲಿ ಇದೇ ಮೊದಲ ಬಾರಿಗೆ ಕೊಲ್ಲಲ್ಪಟ್ಟ ವಿದೇಶಿ ಭಯೋತ್ಪಾದಕರ ಸಂಖ್ಯೆ ಸ್ಥಳೀಯ ಭಯೋತ್ಪಾದಕರಿಗಿಂತ ನಾಲ್ಕು ಪಟ್ಟು ಹೆಚ್ಚಾಗಿದೆ.
ಪ್ರಸ್ತುತ ಕಣಿವೆಯಲ್ಲಿ ಸುಮಾರು 130 ಭಯೋತ್ಪಾದಕರು ಕಾರ್ಯನಿರ್ವಹಿಸುತ್ತಿದ್ದಾರೆ, ಅದರಲ್ಲಿ ಅರ್ಧದಷ್ಟು ವಿದೇಶಿ ಭಯೋತ್ಪಾದಕರು ಎಂದು ಗೃಹ ಸಚಿವಾಲಯ ತಿಳಿಸಿದೆ.
ಐವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದ ಸೇನೆ
ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣರೇಖೆ(LOC)ಯಲ್ಲಿ ಪೊಲೀಸರು ಮತ್ತು ಸೇನೆ ನಡೆಸಿದ ಒಳನುಸುಳುವಿಕೆ ತಡೆ ಕಾರ್ಯಾಚರಣೆಯ ವೇಳೆ ಐವರು ಲಷ್ಕರ್ ಭಯೋತ್ಪಾದಕರು(Terrorists Killed) ಗುರುವಾರ ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಪ್ವಾರ ಜಿಲ್ಲೆಯ ಮಚಿಲ್ ಸೆಕ್ಟರ್‌ನಲ್ಲಿ ಈ ಗುಂಡಿನ ಚಕಮಕಿ ನಡೆದಿದೆ(Encounter). ಆರಂಭಿಕ ಗುಂಡಿನ ಕಾಳಗದಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಮತ್ತು ನಂತರದ ಕಾರ್ಯಾಚರಣೆಯಲ್ಲಿ ಇನ್ನೂ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹತರಾದ ಎಲ್ಲ ಉಗ್ರರು ಲಷ್ಕರೆ ತಯ್ಬಾ (Lashkar-e-Toiba – LeT) ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆ(counter infiltration operation).
16 ಭಯೋತ್ಪಾದಕ ಲಾಂಚಿಂಗ್ ಪ್ಯಾಡ್‌ಗಳು ಎಲ್‌ಒಸಿಯಾದ್ಯಂತ ಇನ್ನೂ ಕಾರ್ಯನಿರ್ವಹಿಸುತ್ತಿವೆ ಮತ್ತು ಪಾಕಿಸ್ತಾನದಿಂದ ಭಯೋತ್ಪಾದಕರನ್ನು ದೇಶದೊಳಗೆ ತಳ್ಳುವ ಪ್ರಯತ್ನಗಳು ನಡೆಯುತ್ತಿವೆ ಎಂದು ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ದಿಲ್ಬಾಗ್ ಸಿಂಗ್ ಅವರು ಹೇಳಿದ್ದಾರೆ.
ಈ ಸುದ್ದಿಯನ್ನೂ ಓದಿ: Terrorists Killed: ಕಾಶ್ಮೀರದಲ್ಲಿ ಸೇನೆ ಭರ್ಜರಿ ಬೇಟೆ; ಇಬ್ಬರು ಉಗ್ರರ ಎನ್‌ಕೌಂಟರ್
ಜಮ್ಮು ಮತ್ತು ಕಾಶ್ಮೀರದ ಉನ್ನತ ಅಧಿಕಾರಿಗಳು ಮತ್ತು ಭದ್ರತಾ ಏಜೆನ್ಸಿಗಳ ಸಭೆಯು ಶ್ರೀನಗರದಲ್ಲಿರುವ 15 ಕಾರ್ಪ್ಸ್‌ನ ಪ್ರಧಾನ ಕಚೇರಿಯಲ್ಲಿ ಬುಧವಾರ ನಡೆಯಿತು. ಈ ವೇಳೆ, ಕಾಶ್ಮೀರದಲ್ಲಿ ಒಳ ನುಸುಳುತ್ತಿರುವ ಉಗ್ರರ ವಿಷಯವು ಚರ್ಚೆಯ ಪ್ರಧಾನ ವಿಷಯವಾಗಿತ್ತು. ಸ್ಥಳೀಯವಾಗಿ ಉಗ್ರರ ನೇಮಕ ಕುಸಿತವಾದ ಹಾಗೆ ವಿದೇಶಿ ಉಗ್ರರ ಒಳ ನುಸುಳುವಿಕೆ ಹೆಚ್ಚಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ವರ್ಷ ಇಲ್ಲಿಯವರೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಹತರಾದ 46 ಉಗ್ರರ ಪೈಕಿ 37 ಉಗ್ರರು ವಿದೇಶಿಗರಾಗಿದ್ದಾರೆ. ಸ್ಥಳೀಯ ಉಗ್ರರು ಕೇವಲ 9 ಮಂದಿ. ಕಳೆದ 33 ವರ್ಷದಲ್ಲಿ ಇದೇ ಮೊದಲ ಬಾರಿಗೆ ಸ್ಥಳೀಯ ಉಗ್ರರಕ್ಕಿಂತ ವಿದೇಶಿ ಉಗ್ರರ ಹತ್ಯೆ ನಾಲ್ಕು ಪಟ್ಟು ಹೆಚ್ಚಳವಾಗಿದೆ ಎಂದು ಹೇಳಲಾಗುತ್ತಿದೆ.