ಬೆಂಗಳೂರು: 10ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ (Pro Kabaddi)ನ ಆಟಗಾರರ ಹರಾಜು ಪ್ರಕ್ರಿಯೆಯ ದಿನಾಂಕ ಪ್ರಕಟಗೊಂಡಿದೆ. ಮಹತ್ವದ ಟೂರ್ನಿಯ ಆಟಗಾರರ ಹರಾಜು(pro kabaddi league 2023 auction date) ಸೆಪ್ಟೆಂಬರ್ 8 ರಿಂದ 9 ರವರೆಗೆ ಮುಂಬೈಯಲ್ಲಿ ನಡೆಯಲಿದೆ ಎಂದು ಪ್ರೊ ಕಬಡ್ಡಿ ಲೀಗ್‌ನ ಸಂಘಟಕರಾದ ಮಶಾಲ್ ಸ್ಪೋರ್ಟ್ಸ್ ತಿಳಿಸಿದೆ. ಈ ಬಾರಿ ಕೆಲ ಬದಲಾವಣೆ ಮಾಡಲಾಗಿದ್ದು, ಮೂರು ಆವೃತ್ತಿಗಳ ಬಳಿಕ ಪ್ರತಿ ಫ್ರಾಂಚೈಸಿಗೆ ಲಭ್ಯವಿರುವ ಒಟ್ಟು ವೇತನ 4.4 ಕೋಟಿ ರೂ.ಗಳನ್ನು 5 ಕೋಟಿ ರೂ.ಗೆ ಏರಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಹರಾಜು ಪ್ರಕ್ರಿಯೆಯಲ್ಲಿ ದೇಶೀಯ ಮತ್ತು ವಿದೇಶಿ ಆಟಗಾರರನ್ನು ಎ, ಬಿ, ಸಿ ಮತ್ತು ಡಿ. ಎಂದು ನಾಲ್ಕು ವಿಭಾಗಗಳಾಗಿ ವಿಂಗಡಿಸಲಾಗಿದೆ. ಪ್ರತಿ ವಿಭಾಗದಲ್ಲಿ ಆಟಗಾರರನ್ನು ‘ಆಲ್ ರೌಂಡರ್ಸ್’, ‘ಡಿಫೆಂಡರ್ಸ್’ ಮತ್ತು ‘ರೈಡರ್ಸ್’ ಎಂದು ವಿಂಗಡಿಸಲಾಗುವುದು. ಪ್ರವರ್ಗ ಎ- 30 ಲಕ್ಷ ರೂ., ಬಿ ವರ್ಗಕ್ಕೆ 20 ಲಕ್ಷ ರೂ., ವರ್ಗ ಸಿಗೆ 13 ಲಕ್ಷ ರೂ., ಡಿ ವರ್ಗಕ್ಕೆ 9 ಲಕ್ಷ ರೂ. ಹೊಂದಿರುತ್ತಾರೆ. ಒಟ್ಟು 500ಕ್ಕೂ ಹೆಚ್ಚು ಆಟಗಾರರು ಹರಾಜಿನಲ್ಲಿ ಇರುವ ಸಾಧ್ಯತೆ ಇದೆ.
ಇದನ್ನೂ ಓದಿ Pro Kabaddi League | ಜೈಪುರ ಪಿಂಕ್ ಪ್ಯಾಂಥರ್ಸ್ 9ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಚಾಂಪಿಯನ್
“ಹತ್ತನೇ ಆವೃತ್ತಿಯ ಪ್ರೊ ಕಬಡ್ಡಿ ಆಟಗಾರರ ಹರಾಜು ಈ ಟೂರ್ನಿಯ ಇತಿಹಾಸದಲ್ಲಿ ಒಂದು ಹೆಗ್ಗುರುತಾಗಲಿದೆ. 12 ಫ್ರಾಂಚೈಸಿಗಳು ತಮ್ಮ ತಂಡಗಳಿಗೆ ವಿಶ್ವದ ಬಲಿಷ್ಠ ಕಬಡ್ಡಿ ಆಟಗಾರರನ್ನು ಆಯ್ಕೆ ಮಾಡಿಕೊಳ್ಳುವಲ್ಲಿ ತೀವ್ರ ಪೈಪೋಟಿ ನಡೆಸಬಹುದು” ಎಂದು ಪ್ರೊ ಕಬಡ್ಡಿ ಲೀಗ್‌ನ ಮಶಾಲ್ ಸ್ಪೋರ್ಟ್ಸ್ ಮತ್ತು ಲೀಗ್ ಕಮಿಷನರ್ ಅನುಪಮ್ ಗೋಸ್ವಾಮಿ ಹೇಳಿದರು.
ಲೀಗ್ ನಿಯಮಗಳ ಪ್ರಕಾರ 9ನೇ ಆವೃತ್ತಿಯಲ್ಲಿ ಆಡಿದ ಕೆಲ ಆಟಗಾರರನ್ನು ತಮ್ಮದೇ ತಂಡದಲ್ಲಿ ಉಳಿಸಿಕೊಳ್ಳುವ ಆಯ್ಕೆಯನ್ನು ಫ್ರಾಂಚೈಸಿಗಳು ಹೊಂದಿವೆ. 6 ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶವಿದೆ. ಈ ಬಾರಿಯ ಏಷ್ಯಾನ್ ಕಬಡ್ಡಿ ಚಾಂಪಿಯನ್ಶಿಪ್ನಲ್ಲಿ ಗಮನ ಸೆಳೆದಿದ್ದ ಅನೇಕ ಆಟಗಾರರು ಉತ್ತಮ ಬೆಲೆಗೆ ಖರೀದಿಯಾಗುವ ಸಾಧ್ಯತೆ ಇದೆ.
Going once. Going twice. And 𝐃𝐔𝐒 🔟🔨
— ProKabaddi (@ProKabaddi) July 3, 2023
𝐒𝐄𝐀𝐒𝐎𝐍 𝟏𝟎 𝐏𝐋𝐀𝐘𝐄𝐑 𝐀𝐔𝐂𝐓𝐈𝐎𝐍 mein aap sabhi ka swagat hai 🤩#ProKabaddi #PKLPlayerAuction #Season10 pic.twitter.com/ur0KDlwp9M
ಕಳೆದ ಬಾರಿ ಜೈಪುರ ಚಾಂಪಿಯನ್
9ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ನಲ್ಲಿ (Pro Kabaddi League) ಜೈಪುರ ಪಿಂಕ್ ಪ್ಯಾಂಥರ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಪುಣೇರಿ ಪಲ್ಟನ್ ವಿರುದ್ಧ 33-29 ಅಂಕಗಳ ಅಂತರದ ವಿಜಯ ಸಾಧಿಸಿ ಎರಡನೇ ಬಾರಿಗೆ ಟ್ರೋಫಿ ಗೆದ್ದಿತ್ತು. 2014ರ ಉದ್ಘಾಟನಾ ಆವೃತ್ತಿಯಲ್ಲೂ ಪಿಂಕ್ ಪ್ಯಾಂಥರ್ಸ್ ಪ್ರಶಸ್ತಿ ಗೆದ್ದಿತ್ತು. ಈ ಜಿದ್ದಾಜಿದ್ದಿನ ಫೈನಲ್ ಪಂದ್ಯವನ್ನು ಜೈಪುರ ಪಿಂಕ್ ಪ್ಯಾಂಥರ್ಸ್ ತಂಡದ ಮಾಲೀಕರಾದ ಅಭಿಷೇಕ್ ಬಚ್ಚನ್. ಪತ್ನಿ ಐಶ್ವರ್ಯಾ ರೈ ಹಾಗೂ ಪುತ್ರಿ ಆರಾಧ್ಯ ಬಚ್ಚನ್ ವೀಕ್ಷಿಸಿದ್ದರು. ಜತೆಗೆ ಬಾಲಿವುಡ್ ನಟ ರಣವೀರ್ ಸಿಂಗ್, ನಟಿ ಪೂಜಾ ಹೆಗ್ಡೆ ಹಾಗೂ ನಿರ್ದೇಶಕ ರೋಹಿತ್ ಶೆಟ್ಟಿ ಕೂಡ ಹಾಜರಿದ್ದರು.