Pro Kabaddi: ಹಾಲಿ ಚಾಂಪಿಯನ್​ ಜೈಪುರಕ್ಕೆ ಸೋಲು; ಪುಣೇರಿ-ಹರ್ಯಾಣ ಫೈನಲ್​ ಫೈಟ್​ - Vistara News

ಕ್ರೀಡೆ

Pro Kabaddi: ಹಾಲಿ ಚಾಂಪಿಯನ್​ ಜೈಪುರಕ್ಕೆ ಸೋಲು; ಪುಣೇರಿ-ಹರ್ಯಾಣ ಫೈನಲ್​ ಫೈಟ್​

ಮಾರ್ಚ್​ 1ರಂದು ನಡೆಯುವ 10ನೇ ಆವೃತ್ತಿ ಪ್ರೊ ಕಬಡ್ಡಿ(Pro Kabaddi) ಲೀಗ್‌ನ ಫೈನಲ್ ಕಾಳಗದಲ್ಲಿ ಪುಣೇರಿ ಪಲ್ಟನ್‌(Puneri Paltan) ಮತ್ತು ಇದೇ ಮೊದಲ ಬಾರಿಗೆ ಫೈನಲ್​ ಪ್ರವೇಶಿಸಿದ ಹರ್ಯಾಣ ಸ್ಟೀಲರ್ಸ್(Haryana Steelers) ಪ್ರಶಸ್ತಿಗಾಗಿ ಸೆಣಸಾಡಲಿದೆ.

VISTARANEWS.COM


on

Puneri Paltan vs Haryana Steelers
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೈದರಾಬಾದ್‌: 10ನೇ ಆವೃತ್ತಿ ಪ್ರೊ ಕಬಡ್ಡಿ(Pro Kabaddi) ಲೀಗ್‌ನ ಫೈನಲ್(Pro Kabaddi Final)​ ಪಂದ್ಯಕ್ಕೆ ವೇದಿಕೆ ಸಿದ್ದಗೊಂಡಿದೆ. ಮಾರ್ಚ್​ 1ರಂದು ನಡೆಯುವ ಪ್ರಶಸ್ತಿ ಕಾಳಗದಲ್ಲಿ ಪುಣೇರಿ ಪಲ್ಟನ್‌(Puneri Paltan) ಮತ್ತು ಇದೇ ಮೊದಲ ಬಾರಿಗೆ ಫೈನಲ್​ ಪ್ರವೇಶಿಸಿದ ಹರ್ಯಾಣ ಸ್ಟೀಲರ್ಸ್(Haryana Steelers) ಸೆಣಸಾಡಲಿದೆ.

ಬುಧವಾರ ಇಲ್ಲಿನ ಗಚ್ಚಿಬೌಲಿಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಮೊದಲ ಸೆಮಿ ಫೈನಲ್​ ಪಂದ್ಯದಲ್ಲಿ ಆಡಲಿಳಿದ ಪುಣೇರಿ ಪಲ್ಟನ್‌ ತಂಡ ಪಾಟ್ನಾ ಪೈರೇಟ್ಸ್‌(Patna Pirates) ತಂಡವನ್ನು 37-21 ಅಂಕಗಳ ಅಂತರದಿಂದ ಮಣಿಸಿ ಸತತ 2ನೇ ಬಾರಿಗೆ ಫೈನಲ್​ ಪ್ರವೇಶಿಸಿದ ಸಾಧನೆ ಮಾಡಿತು. ದ್ವಿತೀಯ ಸೆಮಿಫೈನಲ್​ನಲ್ಲಿ ಹಾಲಿ ಚಾಂಪಿಯನ್​ ಜೈಪುರ ಪಿಂಕ್‌ ಪ್ಯಾಂಥರ್ಸ್‌ ತಂಡವನ್ನು 31-27 ಅಂತರದಿಂದ ಕೆಡವಿ ಹಾಕಿದ ಹರ್ಯಾಣ ಫೈನಲ್​ ಟಿಕೆಟ್​ ಗಿಟ್ಟಿಸಿಕೊಂಡಿತು.

3 ಬಾರಿ ಪ್ರಶಸ್ತಿ ಗೆದ್ದಿರುವ ಪಾಟ್ನಾ ಈ ಬಾರಿ 5ನೇ ಫೈನಲ್‌ ತವಕದಲ್ಲಿತ್ತು. ಆದರೆ ಸೆಮಿಯಲ್ಲಿ ಸೋತು ನಿರಾಸೆ ಅನುಭವಿಸಿತು. ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡು ಸೆಮಿಫೈನಲ್​ ತಲುಪಿದ್ದ ಪುಣೇರಿ ಪಲ್ಟನ್‌ ತನ್ನ ಖ್ಯಾತಿಗೆ ತಕ್ಕ ಪ್ರದರ್ಶನ ನೀಡಿ ಗಮನ ಸೆಳೆಯಿತು. ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನ ಪಡೆದು ಸೆಮಿ ತಲುಪಿದ್ದ ಜೈಪುರ ತಂಡ ಎಲಿಮಿನೇಟರ್​ ಪಂದ್ಯವಾಡಿ ಬಂದಿದ್ದ ಹರ್ಯಾಣದ ಮುಂದೆ ತನ್ನ ಪ್ರರಾಕ್ರಮ ತೋರ್ಪಡಿಸುವಲ್ಲಿ ಎಡವಿತು. ಚೊಚ್ಚಲ ಫೈನಲ್‌ ಪ್ರವೇಶಿಸಿದ ಹರ್ಯಾಣ ಮೊದಲ ಕಪ್​ಗಾಗಿ ತವಕಿಸುತ್ತಿದೆ.

ಜಿದ್ದಾಜಿದ್ದಿನಿಂದ ಪೈಪೋಟಿ ಕಂಡ ದ್ವಿತೀಯ ಸೆಮಿ ಪಂದ್ಯದಲ್ಲಿ ಮೊದಲ ಅವಧಿಯಲ್ಲಿ ಹರ್ಯಾಣ 18-13 ಅಂಕದ ಮುನ್ನಡೆ ಸಾಧಿಸಿತು. ದ್ವಿತಿಯಾರ್ಧದಲ್ಲಿ ತಿರುಗಿ ಬಿದ್ದ ಜೈಪುರ ಸತತವಾಗಿ ಅಂಕಗಳಿಸಿ ತಿರುಗೇಟು ನೀಡಿತು. ಆದರೆ ಅಂತಿಮ ಮೂರು ನಿಮಿಷದ ಆಟದಲ್ಲಿ ತನ್ನ ತಪ್ಪನ್ನು ತಿದ್ದಿಕೊಂಡು ಎಚ್ಚೆತ್ತುಕೊಂಡ ಹರ್ಯಾಣ ಆಟಗಾರರು ರಕ್ಷಣಾತ್ಮ ಆಟದ ಮೂಲಕ ತಮ್ಮ ಮುನ್ನಡೆಯನ್ನು ಪಂದ್ಯದ ಕೊನೆಯವರೆಗೂ ಕಾಪಾಡಿಕೊಂಡು ಪಂದ್ಯದಲ್ಲಿ ಮೇಲುಗೈ ಸಾಧಿಸಿದರು. ಹರ್ಯಾಣ ಪರ ರೇಡರ್​ ವಿನಯ್​ 11 ಅಂಕ ಕಲೆಹಾಕಿ ಗೆಲುವಿನ ಹೀರೊ ಎನಿಸಿಕೊಂಡರು. ಇವರಿಗೆ ಮತ್ತೊಂದು ತುದಿಯಲ್ಲಿ ಶಿವಂ ಪತಾರೆ(7 ಅಂಕ) ಉತ್ತಮ ಬೆಂಬಲ ನೀಡಿದರು. ಜೈಪುರ ಪರ ಏಕಾಂಗಿಯಾಗಿ ಹೋರಾಟ ನಡೆಸಿದ ಅರ್ಜುನ್​ ದೇಸ್ವಾಲ್​ 14 ಅಂಕ ಗಳಿಸಿದರು. ಆದರೆ ಇವರಿಗೆ ಸಹ ಆಟಗಾರರಿಂದ ಉತ್ತಮ ಸಾಥ್​ ಸಿಗದ ಕಾರಣ ಇವರ ಈ ಆಟ ವ್ಯರ್ಥವಾಯಿತು.

ಇದನ್ನೂ ಓದಿ WPL 2024: ಬಲಿಷ್ಠ ಮುಂಬೈಗೆ ಸೋಲುಣಿಸಿ ಗೆಲುವಿನ ಖಾತೆ ತೆರೆದ ಯುಪಿ ವಾರಿಯರ್ಸ್

ಆಕ್ರಮಣಕಾರಿ ಆಟವಾಡಿದ ಪುಣೇರಿ


ಮೊದಲ ಸೆಮಿ ಪಂದ್ಯವಾದ ಪುಣೇರಿ ಪಲ್ಟನ್‌ ಮತ್ತು ಪಾಟ್ನಾ ಪೈರೇಟ್ಸ್‌ ನಡುವಣ ಪಂದ್ಯ ಮೊದಲಾರ್ಧದ ಅಂತಿಮ 8 ನಿಮಿಷದ ಆಟ ಬಾಕಿ ಇರುವವರೆಗೆ ಜಿದ್ದಾಜಿದ್ದಿನಿಂದ ಕೂಡಿತ್ತು. ಉಭಯ ತಂಡಗಳು ತೀವ್ರ ಪೈಪೋಟಿ ನಡೆಸಿ ಕೇವಲ ಒಂದು ಅಂಕದ ಮುನ್ನಡೆಯೊಂದಿಗೆ ಆಟವಾಡಿತ್ತು. ಆದರೆ, ಇನ್ನೇನು ಮೊದಲ ಅವಧಿಯ ಆಟ ಮುಕ್ತಾಯಗೊಳ್ಳುತ್ತದೆ ಎನ್ನುವಷ್ಟರಲ್ಲಿ ಆಕ್ರಮಣಕಾರಿ ಆಟಕ್ಕೆ ಒತ್ತು ನೀಡಿದ ಪುಣೇರಿ ತಂಡದ ಆಟಗಾರರು 20-11 ಅಂತರದ ಅಂಕ ಕಲೆ ಹಾಕಿ 9 ಅಂಕದ ಮುನ್ನಡೆ ಸಾಧಿಸಿದರು.

ದ್ವಿತಿಯಾರ್ಧದಲ್ಲಿಯೂ ಇದೇ ಲಯವನ್ನು ಮುಂದುವರಿಸಿದ ಪುಣೇರಿ ಆಟಗಾರರು ಸತತವಾಗಿ ಅಂಕ ಗಳಿಸಿ ಎದುರಾಳಿ ಆಟಗಾರರಿಗೆ ಇನ್ನಿಲ್ಲದ ಒತ್ತಡ ಹೇರಿದರು. ಆಲ್‌ರೌಂಡರ್ ಅಸ್ಲಾಂ ಮುಸ್ತಫಾ ತಮ್ಮ ಆಲ್​ರೌಂಡರ್​ ಶೋ ನಿಂದ 7 ಪಾಯಿಂಟ್ ಕಲೆ ಹಾಕಿದರು. ಇವರಿಗೆ ರೇಡರ್​ ಪಂಕಜ್​ ಮೋಹಿತ್(7)​ ಮತ್ತು ಮತೋರ್ವ ಆಲ್​ರೌಂಡರ್​ ಮೊಹಮ್ಮದ್ರೇಜಾ ಚಿಯಾನೆಹ್(5) ಅಂಕ ಗಳಿಸಿ ಉತ್ತಮ ಸಾಥ್​ ನೀಡಿದರು.

ಉಳಿದಂತೆ ಮೋಹಿತ್​ ಗೋಯತ್​(4), ​ಅಭಿನೇಶ್ ನಾಡರಾಜನ್(3), ಸಂಕೇತ್ ಸಾವಂತ್(3) ಅಂಕ ಕಲೆ ಹಾಕಿ ತಂಡದ ಗೆಲುವಿನಲ್ಲಿ ತಮ್ಮ ಕೊಡುಗೆ ನೀಡಿದರು. ಪಾಟ್ನಾ ಪರ ತಾರಾ ರೇಡರ್​ಗಳಾದ​ ಸಚಿನ್(5) ಮತ್ತು ಮಂಜಿತ್(4)​​ ಅವರು ಈ ಪಂದ್ಯದಲ್ಲಿ ವೈಫಲ್ಯ ಕಂಡದ್ದು ತಂಡದ ಸೋಲಿಗೆ ಪ್ರಮುಖ ಕಾರಣವಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IPL Final 2024: ಫೈನಲ್​ನಲ್ಲಿ ಕೆಕೆಆರ್​ ಗೆಲ್ಲಬಹುದು ಎಂದು ಭವಿಷ್ಯ ನುಡಿದ ಕರುನಾಡ ಕ್ರಿಕೆಟಿಗ

IPL Final 2024: ವಿಸ್ತಾರ ನ್ಯೂಸ್​ ಜತೆಗಿನ ಸಂದರ್ಶನದಲ್ಲಿ ಮಾತನಾಡಿದ ಗೌತಮ್, ಬ್ಯಾಟಿಂಗ್​, ಬೌಲಿಂಗ್​ ಮತ್ತು ಫೀಲ್ಡಿಂಗ್​ ಎಲ್ಲ ವಿಭಾಗದಲ್ಲಿಯೂ ಬಲಿಷ್ಠವಾಗಿರುವ ಕೆಕೆಆರ್​ ತಂಡ ಕಪ್​ ಗೆಲ್ಲುವುದು ನಿಶ್ಚಿತ ಎಂದು ಭವಿಷ್ಯ ನುಡಿದಿದ್ದಾರೆ.

VISTARANEWS.COM


on

IPL Final 2024
Koo

ಬೆಂಗಳೂರು: 17ನೇ ಆವೃತ್ತಿಯ ಐಪಿಎಲ್​(IPL Final 2024) ಟೂರ್ನಿ ಮುಕ್ತಾಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಭಾನುವಾರ ಫೈನಲ್​ ಪಂದ್ಯ ನಡೆಯಲಿದ್ದು, ಟೇಬಲ್‌ ಟಾಪರ್‌ ಕೋಲ್ಕತಾ ನೈಟ್‌ರೈಡರ್ ಮತ್ತು ದ್ವಿತೀಯ ಸ್ಥಾನಿ ಸನ್‌ರೈಸರ್ ಪ್ರಶಸ್ತಿಗಾಗಿ ಸೆಣಸಲಿವೆ. ಈ ಬಾರಿ ಚಾಂಪಿಯನ್​ ಯಾರಾಗಲಿದ್ದಾರೆ ಎಂಬ ಅಭಿಮಾನಿಗಳ ಕುತೂಹಲದ ಮಧ್ಯೆ ಕರ್ನಾಟಕದ ಕ್ರಿಕೆಟಿಗ ಕೆ. ಗೌತಮ್(Krishnappa Gowtham)​ ಅವರು ಕೆಕೆಆರ್​ ತಂಡ ಕಪ್​ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ವಿಸ್ತಾರ ನ್ಯೂಸ್​ ಜತೆಗಿನ ಸಂದರ್ಶನದಲ್ಲಿ ಮಾತನಾಡಿದ ಗೌತಮ್, ಸಿನೆಮಾ, ಕ್ರಿಕೆಟ್​ ಬಗ್ಗೆ ಕೇಳಿದ ಹಲವು ಪ್ರಶ್ನೆಗಳಿಗೆ ಉತ್ತರಿಸಿದರು. ಹಲವು ಕ್ರಿಕೆಟಿಗರ ಜೀವನಾಧಾರಿತ ಸಿನಿಮಾ ಬಂದಿದೆ. ನಿಮ್ಮ ಜೀವನಾಧಾರಿತ ಸಿನಿಮಾ ಕೂಡ ತೆರೆ ಮೇಲೆ ಬರುವ ಆಸೆ ಇದೆಯಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೌತಮ್​, ಇಲ್ಲ ಈ ರೀತಿಯ ಯಾವುದೇ ಆಸೆ ಇಲ್ಲ. ಸದ್ಯಕ್ಕೆ ಉತ್ತಮ ಕ್ರಿಕೆಟ್​ ಆಡುವುದೊಂದೇ ನನ್ನ ಗುರಿ ಎಂದರು. ಇದೇ ವೇಳೆ ಸಿನಿಮಾವನ್ನು ತಾನು ಹೆಚ್ಚಾಗಿ ನೋಡುವುದಿಲ್ಲ. ಕೊನೆಯ ಬಾರಿಗೆ ನೋಡಿದ ಸಿನೆಮಾವೆಂದರೆ ಕಾತಾಂರ ಎಂದರು. ಸಮಯ ಸಿಕ್ಕಾಗ ಮಗಳ ಜತೆ ಆಡುತ್ತಾ ಕಾಲ ಕಳೆಯುತ್ತೇನೆ ಎಂದರು.


ಆರ್​ಸಿಬಿಯ ಹೊಸ ಅಧ್ಯಾಯದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಗೌತಮ್, ಈ ಬಾರಿಯ ಲೀಗ್​ನಲ್ಲಿ ಆರಂಭಿಕ ಹಂತದಲ್ಲಿ ಸತತವಾಗಿ ಸೋಲು ಕಂಡು ಆ ಬಳಿಕ ಗೆಲ್ಲಲೇ ಬೇಕಾದ ಎಲ್ಲ 6 ಪಂದ್ಯಗಳನ್ನು ಗೆದ್ದಿರುವುದು ನಿಜಕ್ಕೂ ಹೊಸ ಅಧ್ಯಾಯ ಎಂದರು. ಇದೇ ವೇಳೆ ಆರ್​ಸಿಬಿ ಪರ ಆಡುವ ಬಯಕೆಯನ್ನು ಕೂಡ ವ್ಯಕ್ತಪಡಿಸಿದರು. ಲಕ್ನೋ ತಂಡದ ಪರ ಆಡಿದ ಅನುಭವ ಕೂಡ ಹಂಚಿಕೊಂಡು, ಮೂರು ವರ್ಷದಿಂದ ಲಕ್ನೋ ತಂಡದ ಪರ ಆಡಿದರೂ ಕೂಡ ಬೇರೆ ಫ್ರಾಂಚೈಸಿ ಪರ ಆಡಿದಂತಾಗಿಲ್ಲ. ಏಕೆಂದರೆ ತಂಡದ ನಾಯಕ ಕೆ.ಎಲ್​ ರಾಹುಲ್​ ಸೇರಿ ಹಲವು ಕರ್ನಾಟಕದ ಆಟಗಾರರಿದ್ದರು. ಹೀಹಾಗಿ ಕರ್ನಾಟಕ ತಂಡದ ಪರವೇ ಆಡುತ್ತಿರುವಂತೆ ಭಾಸವಾಗುತ್ತಿತ್ತು ಎಂದರು.

ಇದನ್ನೂ ಓದಿ IPL Final 2024: ಫೈನಲ್​ ಪಂದ್ಯಕ್ಕೆ ಮಳೆ ಬಂದರೆ ಯಾರಾಗಲಿದ್ದಾರೆ ವಿಜೇತರು? ಮಳೆ ನಿಯಮ ಹೇಗಿದೆ?

ಈ ಬಾರಿ ಯಾವ ತಂಡ ಕಪ್​ ಗೆಲ್ಲಲಿದೆ ಎಂದು ಕೇಳಿದಾಗ ಕೆಕೆಆರ್​ ತಂಡ ಗೆಲ್ಲುವ ಸಾಧ್ಯತೆ ಹೆಚ್ಚು ಎಂದರು. ಬ್ಯಾಟಿಂಗ್​, ಬೌಲಿಂಗ್​ ಮತ್ತು ಫೀಲ್ಡಿಂಗ್​ ಎಲ್ಲ ವಿಭಾಗದಲ್ಲಿಯೂ ಬಲಿಷ್ಠವಾಗಿ ವೈವಿಧ್ಯಮಯವಾಗಿದೆ. ಹೀಗಾಗಿ ಕೆಕೆಆರ್​ ಟ್ರೋಫಿ ಗೆಲ್ಲಲಿದೆ ಎಂದರು.

ಫೈನಲ್​ನಲ್ಲಿ ವಿಜೇತ ತಂಡ 20 ಕೋಟಿ ರೂಪಾಯಿ ಬಹುಮಾನವನ್ನು ಪಡೆಯಲಿದೆ. ರನ್ನರ್ ಅಪ್‌ ತಂಡಕ್ಕೆ 15 ಕೋಟಿ ರೂ. ಸಿಗಲಿದೆ. ಮೂರನೇ ಸ್ಥಾನಿಯಾದ ತಂಡಕ್ಕೆ 7 ಕೋಟಿ ಮತ್ತು 4ನೇ ಸ್ಥಾನಿಗೆ 6.5 ಕೋಟಿ ರೂ ಸಿಗಲಿದೆ. ಈಗಾಗಲೇ ರಾಜಸ್ಥಾನ್​ ಮತ್ತು ಆರ್​ಸಿಬಿ ಪ್ಲೇ ಆಫ್​ನಲ್ಲಿ ಸೋಲಿ ಕಂಡು ಕ್ರಮವಾಗಿ 3 ಮತ್ತು ನಾಲ್ಕನೇ ಸ್ಥಾನ ಪಡೆದಿವೆ. ಹೀಗಾಗಿ ರಾಜಸ್ಥಾನ್​ಗೆ(7 ಕೋಟಿ) ಮತ್ತು ಆರ್​ಸಿಬಿಗೆ(6.5 ಕೋಟಿ) ಮೊತ್ತ ಸಿಗಲಿದೆ. ಒಟ್ಟು ಬಹುಮಾನ ಮೊತ್ತ 46.5 ಕೋಟಿ ರೂ. ಆಗಿದೆ.

ಟೂರ್ನಿಯಲ್ಲಿ ಅತ್ಯಧಿಕ ರನ್​ ಗಳಿಸಿದ ಆಟಗಾರನಿಗೆ ಆರೆಂಜ್ ಕ್ಯಾಪ್ ನೀಡಲಾಗುತ್ತದೆ. ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗೆ ಪರ್ಪಲ್ ಕ್ಯಾಪ್ ನೀಡಲಾಗುತ್ತದೆ. ಆರೆಂಜ್ ಮತ್ತು ಪರ್ಪಲ್ ಕ್ಯಾಪ್ ಗೆದ್ದ ಆಟಗಾರರಿಗೆ 15 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ. ಸದ್ಯ ಆರ್​ಸಿಬಿ ತಂಡದ ವಿರಾಟ್​ ಕೊಹ್ಲಿ ಈ ಬಾರಿಯ ಟೂರ್ನಿಯಲ್ಲಿ 741 ರನ್​ ಬಾರಿಸಿ ಆರೆಂಜ್ ಕ್ಯಾಪ್ ಹೋಲ್ಡರ್​ ಆಗಿದ್ದಾರೆ. ಇವರ ರನ್​ ಹಿಂದಿಕ್ಕಲು ಇನ್ನು ಯಾರಿಗೂ ಅವಕಾಶ ಇಲ್ಲದ ಕಾರಣ ಈ ಪ್ರಶಸ್ತಿ ಇವರಿಗೇ ಸಿಗಲಿದೆ.

Continue Reading

ಕ್ರೀಡೆ

SRH vs RR: ಕ್ವಾಲಿಫೈಯರ್​ ಪಂದ್ಯದ ಸೋಲಿಗೆ ಕಾರಣ ತಿಳಿಸಿದ ಸಂಜು ಸ್ಯಾಮ್ಸನ್​

SRH vs RR: ಪಂದ್ಯದ ಸೋಲಿನ ಬಳಿಕ ಮಾತನಾಡಿದ ಸಂಜು ಸ್ಯಾಮ್ಸನ್​, ನಮ್ಮ ತಂಡದ ಬಲಗೈ ಬ್ಯಾಟ್ಸ್‌ಮನ್‌ಗಳ ವಿರುದ್ಧ ಮಧ್ಯಮ ಓವರ್‌ಗಳಲ್ಲಿ ಹೈದರಾಬಾದ್​ ತಂಡದ ಎಡಗೈ ಸ್ಪಿನ್ನರ್​ಗಳು ಉತ್ತಮ ದಾಳಿ ಸಂಘಟಿಸಿದರು. ನಮ್ಮ ಬ್ಯಾಟಿಂಗ್​ ಲೈನಪ್​ನಲ್ಲಿ ಹೆಚ್ಚಿನ ಎಡಗೈ ಬ್ಯಾಟರ್​ಗಳು ಇಲ್ಲದಿರುವುದು ಕೂಡ ನಮ್ಮ ಸೋಲಿಗೆ ಕಾರಣವಾಯಿತು ಎಂದರು.

VISTARANEWS.COM


on

SRH vs RR
Koo

ಚೆನ್ನೈ: ಶುಕ್ರವಾರ ರಾತ್ರಿ ನಡೆದ ಐಪಿಎಲ್​(IPL 2024) ಕ್ವಾಲಿಫೈಯರ್​ ಪಂದ್ಯದಲ್ಲಿ ರಾಜಸ್ಥಾನ್​ ರಾಯಲ್ಸ್​(SRH vs RR) ತಂಡ ಸನ್​ರೈಸರ್ಸ್​ ಹೈದರಾಬಾದ್​ ವಿರುದ್ದ 36 ರನ್​ಗಳಿಂದ ಸೋಲು ಕಾನುಣು ಮೂಲಕ ತನ್ನ ಅಭಿಯಾನವನ್ನು ಮುಗಿಸಿತು. ಈ ಸೋಲಿಗೆ ಕಾರಣ ಏನೆಂಬುದನ್ನು ತಂಡದ ನಾಯಕ ಸಂಜು ಸ್ಯಾಮನ್ಸ್(Sanju Samson)​ ವಿವರಿಸಿದ್ದಾರೆ.

ಪಂದ್ಯದ ಸೋಲಿನ ಬಳಿಕ ಮಾತನಾಡಿದ ಸಂಜು ಸ್ಯಾಮ್ಸನ್​, ನಮ್ಮ ತಂಡದ ಬಲಗೈ ಬ್ಯಾಟ್ಸ್‌ಮನ್‌ಗಳ ವಿರುದ್ಧ ಮಧ್ಯಮ ಓವರ್‌ಗಳಲ್ಲಿ ಹೈದರಾಬಾದ್​ ತಂಡದ ಎಡಗೈ ಸ್ಪಿನ್ನರ್​ಗಳು ಉತ್ತಮ ದಾಳಿ ಸಂಘಟಿಸಿದರು. ನಮ್ಮ ಬ್ಯಾಟಿಂಗ್​ ಲೈನಪ್​ನಲ್ಲಿ ಹೆಚ್ಚಿನ ಎಡಗೈ ಬ್ಯಾಟರ್​ಗಳು ಇಲ್ಲದಿರುವುದು ಕೂಡ ನಮ್ಮ ಸೋಲಿಗೆ ಕಾರಣವಾಯಿತು ಎಂದರು.

ಮಧ್ಯಮ ಕ್ರಮಾಂಕದಲ್ಲಿ ಶಿಮ್ರೋನ್​ ಹೆಟ್ಮೆಯರ್​ ಹೊರತುಪಡಿಸಿ ಯಾರು ಎಡಗೈ ಬ್ಯಾಟ್ಸ್​ಮನ್​ಗಳಿರಲಿಲ್ಲ. ಇದುವೇ ನಮ್ಮ ಸೋಲಿಗೆ ಪ್ರಮುಖ ಕಾರಣವಾಯಿತು ಎಂದು ಸ್ಯಾಮ್ಸನ್​ ಪೋಸ್ಟ್​ ಮ್ಯಾಚ್​ ಪ್ರೆಸೆಂಟೇಷನ್​ನಲ್ಲಿ ಹೇಳಿದರು. ಕ್ರೀಡೆ ಎಂದ ಮೇಲೆ ಸೋಲು-ಗೆಲುವು ಸಾಮಾನ್ಯ. ಯಾವುದೇ ಒಂದು ತಂಡ ಸೋಲಲೇ ಬೇಕು. ಈ ಸೋಲಿನಿಂದ ಹಲವು ಪಾಠ ಕಲಿತಿದ್ದೇವೆ. ಮುಂದಿನ ಬಾರಿ ಮತ್ತಷ್ಟು ಬಲಿಷ್ಠವಾಗಿ ಕಮ್​ಬ್ಯಾಕ್​ ಮಾಡುವ ವಿಶ್ವಾಸವಿದೆ ಎಂದರು.

ಇಲ್ಲಿನ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಸನ್​ರೈಸರ್ಸ್​ ಹೈದರಾಬಾದ್​ ತಂಡ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್​ಗೆ 175 ರನ್​ ಬಾರಿಸಿತು. ಜವಾಬಿತ್ತ ರಾಜಸ್ಥಾನ್​ ಉತ್ತಮ ಆರಂಭ ಪಡೆದರೂ ಕೂಡ ಆ ಬಳಿಕ ನಾಟಕೀಯ ಕುಸಿತ ಕಂಡು 7 ವಿಕೆಟ್​ ನಷ್ಟಕ್ಕೆ 139 ರನ್​ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು. ಮೇ 26ರಂದು ನಡೆಯುವ ಫೈನಲ್​ ಪಂದ್ಯದಲ್ಲಿ ಹೈದರಾಬಾದ್​ ತಂಡ ಕೆಕೆಆರ್​ ವಿರುದ್ಧ ಪ್ರಶಸ್ತಿಗಾಗಿ ಕಾದಾಟ ನಡೆಸಲಿದೆ. ಈ ಪಂದ್ಯ ಕೂಡ ಚಿದಂಬರಂ ಸ್ಟೇಡಿಯಂನಲ್ಲೇ ನಡೆಯಲಿದೆ.​

ಇದನ್ನೂ ಓದಿ IPL Final 2024: ಫೈನಲ್​ ಪಂದ್ಯಕ್ಕೆ ಮಳೆ ಬಂದರೆ ಯಾರಾಗಲಿದ್ದಾರೆ ವಿಜೇತರು? ಮಳೆ ನಿಯಮ ಹೇಗಿದೆ?

ಚೇಸಿಂಗ್​ ವೇಳೆ ನಾಯಕ ಸಂಜು ಸ್ಯಾಮ್ಸನ್​(10), ಟಾಮ್ ಕೊಹ್ಲರ್-ಕ್ಯಾಡ್ಮೋರ್(10), ರಿಯಾನ್​ ಪರಾಗ್​(6), ಆರ್​ ಅಶ್ವಿನ್​(0), ಶಿಮ್ರಾನ್ ಹೆಟ್​ಮೇರ್​(4) ಒಬ್ಬರ ಹಿಂದೆ ಒಬ್ಬರಂತೆ ವಿಕೆಟ್​ ಒಪ್ಪಿಸಿ ಪೆವಿಲಿಯನ್​ ಪರೇಡ್​ ನಡೆಸಿದರು. ಯಾರೂ ಕೂಡ ತಂಡಕ್ಕೆ ಆಸರೆಯಾಗುವಲ್ಲಿ ಯಶಸ್ಸು ಕಾಣಲಿಲ್ಲ. ಜೈಸ್ವಾಲ್​ 3 ಸಿಕ್ಸರ್​ ಮತ್ತು 4 ಬೌಂಡರಿ ಬಾರಿಸಿ 42 ರನ್​ ಗಳಿಸಿದರು.

ಅಂತಿಮ ಹಂತದಲ್ಲಿ ಧೃವ್​ ಜುರೇಲ್​ ಅರ್ಧಶತಕ ಬಾರಿಸುವ ಮೂಲಕ ಶಕ್ತಿ ಮೀರಿದ ಬ್ಯಾಟಿಂಗ್​ ಹೋರಾಟ ನಡೆಸಿದರೂ ಕೂಡ ಇವರಿಗೆ ಮತ್ತೊಂದು ತುದಿಯಲ್ಲಿ ಉತ್ತಮ ಸಾಥ್​ ಸಿಗದ ಕಾರಣ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ. ಅಜೇಯರಾಗಿ ಉಳಿದ ಜುರೇಲ್ 35 ಎಸೆತಗಳಿಂದ 56 ರನ್​ ಬಾರಿಸಿದರು. ಇದರದ್ದೇ ತಂಡದ ಪರ ಅತ್ಯಧಿಕ ಗಳಿಕೆ. ಹೈದರಾಬಾದ್​ ಪರ ಶಾಬಾಜ್​ ಅಹ್ಮದ್​ 4 ಓವರ್​ಗೆ ಕೇವಲ 23 ರನ್​ ಬಿಟ್ಟುಕೊಟ್ಟು ಪ್ರಮುಖ 3 ವಿಕೆಟ್​ ಕಡೆವಿದರು. ಪಾರ್ಟ್​ ಟೈಮ್​ ಬೌಲರ್​ ಅಭಿಷೇಕ್​ ಶರ್ಮ 24 ರನ್​ಗೆ 2 ವಿಕೆಟ್​ ಕಿತ್ತರು

Continue Reading

ಕ್ರೀಡೆ

Hardik Pandya: ಪತ್ನಿಗೆ ಶೇ.70ರಷ್ಟು ಆಸ್ತಿ ವರ್ಗಾಯಿಸಲು ಮುಂದಾದ ಹಾರ್ದಿಕ್​ ಪಾಂಡ್ಯ; ಶೀಘ್ರದಲ್ಲೇ ವಿಚ್ಛೇದನ!

Hardik Pandya: ವಿಚ್ಛೇದನ(Hardik Pandya and Natasa Stankovic divorce) ಪ್ರಕ್ರಿಯೆಯ ಭಾಗವಾಗಿ, ಹಾರ್ದಿಕ್ ಪಾಂಡ್ಯ ಅವರು ತಮ್ಮ ಆಸ್ತಿಯಲ್ಲಿ ಶೇ. 70 ರಷ್ಟು ಭಾಗವನ್ನು ಈಗಾಗಲೇ ನತಾಶಾಗೆ ವರ್ಗಾಯಿಸಿದ್ದಾರೆ ಎನ್ನಲಾಗಿದೆ. ಸದ್ಯ ನತಾಶಾ ಲಂಡನ್​ನಲ್ಲಿ ನೆಲೆಸಿದ್ದಾರೆ ಎಂದು ಹೇಳಲಾಗಿದೆ.

VISTARANEWS.COM


on

Hardik Pandya
Koo

ಮುಂಬಯಿ: ಟೀಮ್​ ಇಂಡಿಯಾದ ಸ್ಟಾರ್ ಆಲ್​ರೌಂಡರ್​ ಹಾರ್ದಿಕ್ ಪಾಂಡ್ಯ(Hardik Pandya) ಅವರು ಪತ್ನಿ, ಸರ್ಬಿಯಾದ ನಟಿ ನತಾಶಾ ಸ್ಟಾನ್‌ಕೋವಿಕ್‌(Natasa Stankovic) ಅವರಿಗೆ ವಿಚ್ಛೇದನ ನೀಡಲಿದ್ದಾರೆ ಎಂಬ ಸುದ್ದಿಯ ಮಧ್ಯೆ ಇದೀಗ ಮತ್ತೊಂದು ಬೆಳವಣಿಗೆ ನಡೆದಿದೆ. ವಿಚ್ಛೇದನ(Hardik Pandya and Natasa Stankovic divorce) ಪ್ರಕ್ರಿಯೆಯ ಭಾಗವಾಗಿ, ಹಾರ್ದಿಕ್ ಪಾಂಡ್ಯ ಅವರು ತಮ್ಮ ಆಸ್ತಿಯಲ್ಲಿ ಶೇ. 70 ರಷ್ಟು ಭಾಗವನ್ನು ಈಗಾಗಲೇ ನತಾಶಾಗೆ ವರ್ಗಾಯಿಸಿದ್ದಾರೆ ಎನ್ನಲಾಗಿದೆ. ಸದ್ಯ ನತಾಶಾ ಲಂಡನ್​ನಲ್ಲಿ ನೆಲೆಸಿದ್ದಾರೆ ಎಂದು ಹೇಳಲಾಗಿದೆ.

ಹಾರ್ದಿಕ್​ ಪಾಂಡ್ಯ ಕಳೆದ 2 ಆವೃತ್ತಿಯಲ್ಲಿ ಗುಜರಾತ್​ ಟೈಟಾನ್ಸ್​ ತಂಡವನ್ನು ಮುನ್ನಡೆಸಿದ್ದರು. ಈ ವೇಳೆ ಪ್ರತಿ ಪಂದ್ಯದಲ್ಲಿಯೂ ನತಾಶಾ ಸ್ಟೇಡಿಯಂಗೆ ಬಂದು ಗಂಡನಿಗೆ ಬೆಂಬಲ ಸೂಚಿಸಿದ್ದರು. ಆದರೆ ಈ ಬಾರಿ ಮುಂಬೈ ತಂಡವನ್ನು ಮುನ್ನಡೆಸಿ ವೇಳೆ ಒಮ್ಮೆಯೂ ಕೂಡ ನತಾಶಾ ಪಂದ್ಯ ನೋಡಲು ಸ್ಟೇಡಿಯಂಗೆ ಬಂದಿರಲಿಲ್ಲ. ಅಲ್ಲದೆ ನತಾಶಾ ಅವರು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ತಮ್ಮ ಹೆಸರನ್ನು ಕೂಡ ಬದಲಿಸಿದ್ದಾರೆ ಹೀಗಾಗಿ ಈ ಜೋಡಿ ಬೇರ್ಪಡಲಿದ್ದಾರೆ ಎನ್ನಲಾಗಿದೆ. ಆದರೆ ಈ ಕುರಿತಾಗಿ ಯಾವುದೆ ಸ್ಪಷ್ಟನೆ ಇಲ್ಲ.


ಹಾರ್ದಿಕ್‌ ಮತ್ತು ನತಾಶಾ ಕಳೆದ 2020ರಲ್ಲೇ ರಿಜಿಸ್ಟರ್‌ ರೀತಿಯಲ್ಲಿ ವಿವಾಹವಾಗಿದ್ದರು. ಈ ಜೋಡಿಗೆ ಒಬ್ಬ ಪುತ್ರನಿದ್ದಾನೆ. ಈತನ ಹೆಸರು ಅಗಸ್ತ್ಯ. ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್‌ ಸಂಪ್ರದಾಯದಂತೆ ಹಾರ್ದಿಕ್‌ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್‌ ವಿವಾಹವಾಗಿದ್ದರು. ಕುಟುಂಬಸ್ಥರು ಮತ್ತು ಗೆಳೆಯರ ಸಮ್ಮುಖದಲ್ಲಿ ಮತ್ತೊಮ್ಮೆ ವಿವಾಹವಾಗಿದ್ದರು. ಇವರ ವಿವಾಹ ಸಮಾರಂಭದಲ್ಲಿ ಕೊಹ್ಲಿ-ಅನುಷ್ಕಾ, ರಾಹುಲ್‌-ಅಥಿಯಾ, ರಾಕಿಣಗ್​ ಸ್ಟಾರ್ ಯಶ್​ ಸೇರಿ ಹಲವು ಗಣ್ಯರೂ ಭಾಗಿಯಾಗಿದ್ದರು.

ಇದನ್ನೂ ಓದಿ IPL Final 2024: ಫೈನಲ್​ ಪಂದ್ಯಕ್ಕೆ ಮಳೆ ಬಂದರೆ ಯಾರಾಗಲಿದ್ದಾರೆ ವಿಜೇತರು? ಮಳೆ ನಿಯಮ ಹೇಗಿದೆ?

ಹುಟ್ಟುಹಬ್ಬಕ್ಕೂ ಶುಭ ಕೋರದ ಪಾಂಡ್ಯ


ಮಾರ್ಚ್ 4 ರಂದು ಪತ್ನಿ ನತಾಶಾ ಅವರ ಹುಟ್ಟುಹಬ್ಬವಿತ್ತು. ಆದರೆ, ಪತ್ನಿಯ ಹುಟ್ಟುಹಬ್ಬಕ್ಕೆ ಹಾರ್ದಿಕ್ ಯಾವುದೇ ಶುಭ ಹಾರೈಕೆಯ ಪೋಸ್ಟ್ ಮಾಡಿಲ್ಲ. ಕೆಲ ದಿನಗಳ ಹಿಂದೆ ನತಾಶಾ ಅವರು ಸಿಂಗಲ್​ ಫೋಟೋವನ್ನು ಮತ್ತು ಮಗನ ಜತೆಗಿನ ಫೋಟೊವನ್ನು ಮಾತ್ರ ಪೋಸ್ಟ್​ ಮಾಡಿದ್ದರು. ಇದೆನೆಲ್ಲ ನೋಡುವಾಗ ಈ ಜೋಡಿ ಸದ್ಯದಲ್ಲೇ ದೂರವಾಗು ಸೂಚನೆಯೊಂದು ಲಭಿಸಿದೆ. ಹಾರ್ದಿಕ್ ಜತೆಗಿರುವ ಇತ್ತೀಚಿನ ಎಲ್ಲ ಪೋಸ್ಟ್‌ಗಳನ್ನು ತೆಗೆದುಹಾಕಿದ್ದಾರೆ ಎಂದು ಹೇಳಲಾಗಿದೆ. 

ರೋಹಿತ್ ಶರ್ಮಾರನ್ನು ನಾಯಕ ಸ್ಥಾನದಿಂದ ಕೆಳಗಿಳಿಸಿ ತಾವೇ ತಂಡ ಮುನ್ನಡೆಸಿದ್ದ ಹಾರ್ದಿಕ್ ಪಾಂಡ್ಯ ಈ ಬಾರಿ ಅಭಿಮಾನಿಗಳಿಂದ ವ್ಯಾಪಕ ಟೀಕೆಗೆ ಗುರಿಯಾಗಿದ್ದರು. ಜತೆಗೆ ಪಾಂಡ್ಯ ಕೆಟ್ಟ ನಾಯಕತ್ವದಿಂದ ಮುಂಬೈ ಹಿಂದೆದು ಕಾಣದ ಘೋರ ವೈಫಲ್ಯ ಕಂಡಿತ್ತು ಎಂದು ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದರು. ಪಾಂಡ್ಯ ನಾಯಕತ್ವದಲ್ಲಿ ಮುಂಬೈ ಈ ಬಾರಿ ಆಡಿದ 14 ಪಂದ್ಯಗಳಲ್ಲಿ ಕೇವಲ 4 ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಿಯಾಯಿತು.

Continue Reading

ಕ್ರಿಕೆಟ್

IPL Final 2024: ಫೈನಲ್​ ಪಂದ್ಯಕ್ಕೆ ಮಳೆ ಬಂದರೆ ಯಾರಾಗಲಿದ್ದಾರೆ ವಿಜೇತರು? ಮಳೆ ನಿಯಮ ಹೇಗಿದೆ?

IPL Final 2024: ಉಭಯ ತಂಡಗಳ ಐಪಿಎಲ್​ ಇತಿಹಾಸ ನೋಡುವಾಗ ಕೆಕೆಆರ್​ ಬಲಿಷ್ಠವಾಗಿದೆ. ಇದುವರೆಗೆ 27 ಪಂದ್ಯಗಳನ್ನು ಆಡಿ 18 ಪಂದ್ಯಗಳಲ್ಲಿ ಕೆಕೆಆರ್​ ಗೆಲುವು ಸಾಧಿಸಿದೆ. ಹೈದರಾಬಾದ್​ ಕೇವಲ 9 ಪಂದ್ಯ ಮಾತ್ರ ಗೆದ್ದಿದೆ. ಈ ಆವೃತ್ತಿಯಲ್ಲಿಯೂ ಆಡಿದ ಲೀಗ್​ ಮತ್ತು ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ಹೈದರಾಬಾದ್​ ಸೋಲು ಕಂಡಿತ್ತು.

VISTARANEWS.COM


on

IPL Final 2024
Koo

ಚೆನ್ನೈ: ಕಳೆದ ವರ್ಷದ ಐಪಿಎಲ್​ ಪಂದ್ಯ ಮಳೆಯಿಂದಾಗಿ ಮೀಸಲುದಿನಕ್ಕೆ ಮುಂದೂಡಲ್ಪಟ್ಟಿತ್ತು. ಇದೀಗ ನಾಳೆ(ಭಾನುವಾರ, ಮೇ 26) ನಡೆಯುವ 17ನೇ ಆವೃತ್ತಿಯ ಐಪಿಎಲ್​ ಫೈನಲ್(IPL Final 2024)​ ಪಂದ್ಯಕ್ಕೂ ಮಳೆ ಭೀತಿ ಎದುರಾಗಿದೆ. ಫೈನಲ್​ನಲ್ಲಿ ಕೆಕೆಆರ್​ ಮತ್ತು ಹೈದರಾಬಾದ್​(SRH vs KKR IPL Final) ತಂಡಗಳು ಸೆಣಸಾಟ ನಡೆಸಲಿವೆ. ಈ ಪಂದ್ಯದ ಮಳೆ ನಿಯಮ ಹೇಗಿದೆ(ipl final 2024 rain rules) ಎಂಬುದರ ಮಾಹಿತಿ ಇಂತಿದೆ.

ಲೀಗ್​ ಹಂತದ ಯಾವುದೇ ಪಂದ್ಯಕ್ಕೂ ಮೀಸಲು ದಿನ ಇರಲಿಲ್ಲ. ಆದರೆ ನಾಕೌಟ್​ ಮತ್ತು ಫೈನಲ್​ ಪಂದ್ಯಗಳಿಗೆ ಮೀಸಲು(Reserve day) ದಿನ ಇದೆ. ಪೂರ್ಣ ಪಂದ್ಯ ನಡೆಸಲು ಹೆಚ್ಚುವರಿ 120 ನಿಮಿಷಗಳನ್ನು ನೀಡಲಾಗಿದೆ. ಈ ಸಮಯದಲ್ಲಿಯೂ ಪಂದ್ಯ ನಡೆಯದೇ ಹೋದರೆ ಆಗ ಡಕ್​ವರ್ತ್​ ನಿಯದ ಅನುಸಾರ ಓವರ್​ ಕಡಿತಗೊಳಿಸಿ ಪಂದ್ಯ ನಡೆಸುವ ನಿರ್ಣಾಯಕ್ಕೆ ಬರಲಾಗುತ್ತದೆ. ಈ ವೇಳೆಯೂ ಪಂದ್ಯ ನಡೆಯದೇ ಇದ್ದರೆ ಪಂದ್ಯವನ್ನು ಮೀಸಲ ದಿನಕ್ಕೆ ಮುಂದೂಡಲಾಗುತ್ತದೆ. ಒಂದೊಮ್ಮೆ ಮೀಸಲು ದಿನದ ಮೊದಲಿನ ದಿನ ಪಂದ್ಯ ಅರ್ಧಕ್ಕೆ ನಿಂತಿದ್ದರೆ, ಅಲ್ಲಿಂದಲೇ ಮರುದಿನ ಪಂದ್ಯ ಆರಂಭಿಸಲಾಗುತ್ತದೆ.

ಮೀಸಲು ದಿನಕ್ಕೂ ಮಳೆ ಬಂದರೆ?

ಮೀಸಲು ದಿನವೂ ಮಳೆ ಬಂದರೆ ಫಲಿತಾಂಶ ಹೇಗೆ ನಿರ್ಧರಿಸಲಾಗುತ್ತದೆ ಎನ್ನುವ ಪ್ರಶ್ನೆ ಕ್ರಿಕೆಟ್​ ಅಭಿಮಾನಿಗಳಿಗೆ ಕಾಡುವುದು ಸಹಜ. ಇದಕ್ಕೂ ಬಿಸಿಸಿಐ ಉತ್ತರ ನೀಡಿದೆ. ಒಂದು ವೇಳೆ ಮೀಸಲು ದಿನದಂದೂ ಕೂಡ ಮಳೆ ಅಡ್ಡಿ ಪಡಿಸಿದರೆ ಸೂಪರ್ ಓವರ್​ಗೆ ಅವಕಾಶವಿದೆ. ಇದಕ್ಕೂ ಕೂಡ ಮಳೆ ಅನುವು ಮಾಡಿಕೊಡದೇ ಇದ್ದಾಗ ಅಂತಿಮವಾಗಿ ಲೀಗ್​ ಹಂತದ ಅಂಕಪಟ್ಟಿಯಲ್ಲಿ ಯಾರು ಮುಂದಿರುತ್ತಾರೋ ಆ ತಂಡವನ್ನು ವಿಜಯೀ ಎಂದು ಘೋಷಿಸಲಾಗುತ್ತದೆ. ಹೀಗಾದರೆ ಅಗ್ರಸ್ಥಾನಿ ಕೆಕೆಆರ್​ ಈ ಬಾರಿಯ ಚಾಂಪಿಯನ್​ ಪಟ್ಟ ಅಲಂಕರಿಸಲಿದೆ. ಏಕೆಂದರೆ ಕೆಕೆಆರ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿದೆ.​ ಅಚ್ಚರಿ ಎಂದರೆ ಲೀಗ್​ ಹಂತದಲ್ಲಿ ಕೆಕೆಆರ್​ ಮತ್ತು ಹೈದರಾಬಾದ್​ ತಂಡಗಳ ಒಂದೊಂದು ಪಂದ್ಯ ಮಳೆಯಿಂದ ರದ್ದಾಗಿತ್ತು.

ಇದನ್ನೂ ಓದಿ IPL 2024: ಐಪಿಎಲ್​ ಟ್ರೋಫಿಯಲ್ಲಿರುವ ಸಂಸ್ಕೃತ ಶ್ಲೋಕದ ಮೂಲ ಸಾರವೇನು?

ಬಲಾಬಲ ​


ಉಭಯ ತಂಡಗಳ ಐಪಿಎಲ್​ ಇತಿಹಾಸ ನೋಡುವಾಗ ಕೆಕೆಆರ್​ ಬಲಿಷ್ಠವಾಗಿದೆ. ಇದುವರೆಗೆ 27 ಪಂದ್ಯಗಳನ್ನು ಆಡಿ 18 ಪಂದ್ಯಗಳಲ್ಲಿ ಕೆಕೆಆರ್​ ಗೆಲುವು ಸಾಧಿಸಿದೆ. ಹೈದರಾಬಾದ್​ ಕೇವಲ 9 ಪಂದ್ಯ ಮಾತ್ರ ಗೆದ್ದಿದೆ. ಈ ಆವೃತ್ತಿಯಲ್ಲಿಯೂ ಆಡಿದ ಲೀಗ್​ ಮತ್ತು ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ಹೈದರಾಬಾದ್​ ಸೋಲು ಕಂಡಿತ್ತು. ಈ ಲೆಕ್ಕಾಚಾರವನ್ನು ನೋಡುವಾಗ ನಾಳಿನ ಪಂದ್ಯದಲ್ಲಿಯೂ ಕೆಕೆಆರ್​ ಗೆಲುವಿನ ಫೇವರಿಟ್ ತಂಡವಾಗಿದೆ.

ಸಂಭಾವ್ಯ ತಂಡಗಳು


ಹೈದರಾಬಾದ್​:
ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ನಿತೀಶ್ ರೆಡ್ಡಿ, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್ (ವಿಕೆಟ್​ ಕೀಪರ್​), ಅಬ್ದುಲ್ ಸಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕತ್, ಟಿ ನಟರಾಜನ್.

ಕೆಕೆಆರ್​: ರಹಮಾನುಲ್ಲಾ ಗುರ್ಬಾಜ್ (ವಿಕೆಟ್​ ಕೀಪರ್​), ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವೈಭವ್ ಅರೋರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.

Continue Reading
Advertisement
Munawar Faruqui hospitalised Bigg Boss 17 winner
ಸಿನಿಮಾ19 mins ago

Munawar Faruqui: ʻಬಿಗ್ ಬಾಸ್ 17ʼರ ವಿಜೇತ ಮುನಾವರ್ ಫಾರೂಕಿ ಆಸ್ಪತ್ರೆಗೆ ದಾಖಲು

Prajwal Revanna Case HD Kumaraswamy hits back at CM Siddaramaiah with section
ರಾಜಕೀಯ26 mins ago

Prajwal Revanna Case: ವಿಡಿಯೊ ವೈರಲ್ ಅಪರಾಧದ ಸೆಕ್ಷನ್ ಹೇಳಿದ ಎಚ್‌ಡಿಕೆ; ಸಿಎಂ ಕುರ್ಚಿಯಲ್ಲಿ ಊಸರವಳ್ಳಿ ಎಂದು ಕಿಡಿ

Narendra Modi
ದೇಶ28 mins ago

Narendra Modi: 10 ವರ್ಷ ಬಲಿಷ್ಠ ಪ್ರತಿಪಕ್ಷ ಇರಲಿಲ್ಲ ಎಂಬುದೇ ನೋವು ತಂದಿದೆ; ಮೋದಿ ಬೇಸರ

PGCET 2024
ಪ್ರಮುಖ ಸುದ್ದಿ33 mins ago

PGCET 2024: ಪಿಜಿಸಿಇಟಿ 2024ಕ್ಕೆ ಮೇ 27ರಿಂದ ಅರ್ಜಿ ಸಲ್ಲಿಕೆ ಆರಂಭ; ಪರೀಕ್ಷೆ ಯಾವಾಗ, ಇಲ್ಲಿದೆ ವೇಳಾಪಟ್ಟಿ

IPL Final 2024
ಕ್ರೀಡೆ35 mins ago

IPL Final 2024: ಫೈನಲ್​ನಲ್ಲಿ ಕೆಕೆಆರ್​ ಗೆಲ್ಲಬಹುದು ಎಂದು ಭವಿಷ್ಯ ನುಡಿದ ಕರುನಾಡ ಕ್ರಿಕೆಟಿಗ

pm Narendra Modi
ಪ್ರಮುಖ ಸುದ್ದಿ57 mins ago

PM Narendra Modi: ಇಂಡಿಯಾ ಮೈತ್ರಿಕೂಟ ಮತ ಬ್ಯಾಂಕ್‌ಗಾಗಿ ಅಶ್ಲೀಲ ಡ್ಯಾನ್ಸ್‌ ಮಾಡುತ್ತಿದೆ: ಮೋದಿ

lok sabha election 2024 voting dhoni
ಪ್ರಮುಖ ಸುದ್ದಿ2 hours ago

Lok Sabha Election 2024: ಮಧ್ಯಾಹ್ನ 1 ಗಂಟೆವರೆಗೆ 39.13% ಮತದಾನ, ಪ.ಬಂಗಾಳ ದಾಖಲೆ, ರಾಂಚಿಯಲ್ಲಿ ಧೋನಿ ವೋಟ್‌

SRH vs RR
ಕ್ರೀಡೆ2 hours ago

SRH vs RR: ಕ್ವಾಲಿಫೈಯರ್​ ಪಂದ್ಯದ ಸೋಲಿಗೆ ಕಾರಣ ತಿಳಿಸಿದ ಸಂಜು ಸ್ಯಾಮ್ಸನ್​

Exam date announced for recruitment of 4000 posts including PSI exam
ಉದ್ಯೋಗ2 hours ago

PSI Exam: ಪಿಎಸ್‌ಐ ಸೇರಿ 4 ಸಾವಿರ ಹುದ್ದೆಗಳ ನೇಮಕಾತಿಗೆ ಪರೀಕ್ಷಾ ದಿನಾಂಕ ಅನೌನ್ಸ್‌; ಯಾವ ದಿನಕ್ಕೆ ಯಾವ ಪರೀಕ್ಷೆ?

Udupi Gang War
ಪ್ರಮುಖ ಸುದ್ದಿ2 hours ago

Udupi Gang War: ಉಡುಪಿಯನ್ನು ಬೆಚ್ಚಿ ಬೀಳಿಸಿದ ಗ್ಯಾಂಗ್ ವಾರ್; ಮಾರಾಮಾರಿಯ ವಿಡಿಯೊ ವೈರಲ್‌, ಇಬ್ಬರ ಬಂಧನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು4 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ5 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ6 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ1 week ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌