Pro Kabaddi: ಗುಜರಾತ್ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಹಾಕಿದ ಪಾಟ್ನಾ - Vistara News

ಕ್ರೀಡೆ

Pro Kabaddi: ಗುಜರಾತ್ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಹಾಕಿದ ಪಾಟ್ನಾ

ಪಾಟ್ನಾ ಪೈರೇಟ್ಸ್‌ ತಂಡ ಆತಿಥೇಯ ಗುಜರಾತ್​ ಜೈಂಟ್ಸ್​ ತಂಡವನ್ನು 33-30 ಅಂಕದ ಅಂತರದಿಂದ ಮಣಿಸಿ ರೋಚಕ ಗೆಲುವು ಕಂಡಿದೆ.

VISTARANEWS.COM


on

Pro Kabaddi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಹಮದಾಬಾದ್​: ಗುರುವಾರದ ಅತ್ಯಂತ ಜಿದ್ದಾಜಿದ್ದಿನ ಪ್ರೊ ಕಬಡ್ಡಿ ಲೀಗ್‌(Pro Kabaddi) ಪಂದ್ಯದಲ್ಲಿ ಪಾಟ್ನಾ ಪೈರೇಟ್ಸ್‌ ತಂಡ ಆತಿಥೇಯ ಗುಜರಾತ್​ ಜೈಂಟ್ಸ್​ ತಂಡವನ್ನು 33-30 ಅಂಕದ ಅಂತರದಿಂದ ಮಣಿಸಿ ರೋಚಕ ಗೆಲುವು ಕಂಡಿದೆ. ಬೆಂಗಾಲ್​ ವಾರಿಯರ್ಸ್​ ಮತ್ತು ಜೈಪುರ ಪಿಂಕ್​ ಪ್ಯಾಂಥರ್ಸ್​ ನಡುವಣ ಪಂದ್ಯ 28-28 ಅಂಕದೊಂದಿಗೆ ಟೈಗೊಂಡಿತು.

ಗುಜರಾತ್​ಗೆ ಮೊದಲ ಸೋಲು

ಹ್ಯಾಟ್ರಿಕ್​ ಗೆಲುವಿನೊಂದಿಗೆ ಅಜೇಯ ಓಟ ಕಾಯ್ದುಕೊಂಡಿದ್ದ ಗುಜರಾತ್​ ಜೈಂಟ್ಸ್ ತಂಡ ಈ ಅಬ್ಬರಕ್ಕೆ ಬ್ರೇಕ್​ ಹಾಕುವಲ್ಲಿ ಪಾಟ್ನಾ ಪೈರೇಟ್ಸ್‌ ಯಶಸ್ಸು ಕಂಡಿತು. ಪಾಟ್ನಾ ಪೈರೇಟ್ಸ್‌ ಆಡಿದ 2 ಪಂದ್ಯಗಳಲ್ಲಿಯೂ ಗೆದ್ದು ಈಗ ಅಜೇಯ ಓಟ ಮುಂದುವರಿಸಿದೆ. ಸದ್ಯ ಅಂಕಪಟ್ಟಿಯಲ್ಲಿ 10 ಅಂಕದೊಂದಿಗೆ ದ್ವಿತೀಯ ಸ್ಥಾನ ಕಾಯ್ದುಕೊಂಡಿದೆ. ಸೋಲು ಕಂಡ ಗುಜರಾತ್​ 16 ಅಂಕದೊಂದಿಗೆ ಅಗ್ರಸ್ಥಾನದಲ್ಲೇ ಮುಂದುವರಿದಿದೆ. ಪಾಟ್ನಾ ವಿರುದ್ಧ 5ಕ್ಕಿಂತ ಕಡಿಮೆ ಅಂಕದ ಅಂತರದಿಂದ ಸೋಲು ಕಂಡ ಕಾರಣ ಒಂದು ಅಂಕ ಲಭಿಸಿದೆ.

ಇದನ್ನೂ ಓದಿ Pro Kabaddi: ಗೆಲುವಿನ ನಗೆ ಬೀರಿದ ಪಾಟ್ನಾ ಪೈರೇಟ್ಸ್‌, ಯುಪಿ ಯೋಧಾಸ್

ಎಡವಿದ ಫಜಲ್ ಅತ್ರಾಚಲಿ

ಗುಜರಾತ್​ ನಾಯಕ ಫಜಲ್ ಅತ್ರಾಚಲಿ ಅವರು ಡಿಫೆಂಡಿಂಗ್​ನಲ್ಲಿ ಅನುಭವಿಸಿದ ವೈಫಲ್ಯ ತಂಡದ ಸೋಲಿಗೆ ಪ್ರಮುಖ ಕಾರಣವಾಯಿತು. ಈ ಹಿಂದಿನ ಮೂರು ಪಂದ್ಯಗಳಲ್ಲಿ ಅವರು ಅದ್ಭುತ ಕ್ಯಾಚಿಂಗ್​ ಮೂಲಕ ಎದುರಾಳಿ ರೇಡರ್​ಗಳನ್ನು ಕಟ್ಟಿ ಹಾಕಿದ್ದರು. ಆದರೆ ಈ ಪಂದ್ಯದಲ್ಲಿ ಅವರ ಎಲ್ಲ ಪ್ರಯತ್ನಗಳು ವಿಫಲಗೊಂಡವು. ಸೌರವ್​ ಗುಲಿಯಾ ಡಿಫೆಂಡಿಂಗ್​ನಲ್ಲಿ 4 ಅಂಕ ಪಡೆದರೂ ಕೂಡ ಗ್ರೀನ್​ ಮತ್ತು ಹಳದಿ ಕಾರ್ಡ್​ ಪಡೆದು ಕೆಲ ಕಾಲ ಮ್ಯಾಟ್​ನಿಂದ ಹೊರಗುಳಿಯಬೇಕಾಯಿತು. ಇದು ಕೂಡ ತಂಡದ ಹಿನ್ನಡೆಗೆ ಕಾರಣವಾಯಿತು. ರೇಡರ್​ ರಾಕೇಶ್​ 11 ಅಂಕ ಗಳಿಸಿ ತಂಡದ ಸೋಲಿನ ಅಂತರವನ್ನು ಕಡಿಮೆಗೊಳಿಸಿದರು.

ಪಾಟ್ನಾ ಪರ ಕಳೆದ ಪಂದ್ಯದಲ್ಲಿ ಮಿಂಚಿನ ರೇಡಿಂಗ್​ ನಡೆಸಿದ ಸಚಿನ್​ ಅವರ ಆಟ ಈ ಪಂದ್ಯದಲ್ಲಿ ಕೊಂಚ ಮಂಕಾಗಿತ್ತು. ಕೇವಲ 4 ಅಂಕಕ್ಕೆ ಮಾತ್ರ ಸೀಮಿತರಾದರು. ಬುಧವಾರದ ಪಂದ್ಯದಲ್ಲಿ 14 ಅಂಕ ಗಳಿಸಿದ್ದರು. ಸುಧಾಕರ್​ ಅವರು ರೇಡಿಂಗ್​ನಲ್ಲಿ (5) ಮತ್ತು ನಾಯಕ ನೀರಜ್​ ಕುಮಾರ್​ ಡಿಫೆಂಡಿಂಗ್​ನಲ್ಲಿ (4), ಅಂಕಿತ್​ (4) ಸಂಘಟಿತ ಪ್ರದರ್ಶನ ನೀಡಿ ತಂಡಕ್ಕೆ ಗೆಲುವು ತಂದುಕೊಟ್ಟರು.

ಗೆಲ್ಲುವ ಅವಕಾಶ ಕಳೆದುಕೊಂಡ ಬೆಂಗಾಲ್​

ದಿನದ ಮೊದಲ ಪಂದ್ಯದಲ್ಲಿ ಬೆಂಗಾಲ್​ ವಾರಿಯರ್ಸ್​ ತಂಡ ಜೈಪುರ ಪಿಂಕ್​ ಪ್ಯಾಂಥರ್ಸ್​​ ವಿರುದ್ಧ ಗೆಲ್ಲುವ ಅವಕಾಶವನ್ನು ಕಳೆದುಕೊಂಡು ಟೈ ಆಗುವಂತೆ ಮಾಡಿತು. ಪಂದ್ಯದ ಆರಂಭದಿಂದ ಮುನ್ನಡೆ ಕಾಯ್ದುಕೊಂಡಿದ್ದ ಬೆಂಗಾಲ್​ ಇನ್ನೇನು ಪಂದ್ಯ ಮುಗಿಯಲು ಒಂದು ನಿಮಿಷ ಬಾಕಿ ಇರುವಾಗ ಇಬ್ಬರು ಆಟಗಾರರು ಟ್ಯಾಕಲ್​​ ಮಾಡುವ ಭರದಲ್ಲಿ ನಿಯಂತ್ರಣ ಕಳೆದುಕೊಂಡು ಬ್ಯಾಕ್​ ಲೈನ್​ ಮೆಟ್ಟಿ ಸೆಲ್ಫ್​ ಔಟ್​ ಆಗುವ ಮೂಲಕ ಎದುರಾಳಿ ತಂಡಕ್ಕೆ ಅನಗತ್ಯವಾಗಿ 2 ಅಂಕ ಬಿಟ್ಟುಕೊಟ್ಟರು. ಇದು ಜೈಪುರ ತಂಡಕ್ಕೆ ವರದಾನವಾಯಿತು. ಇದೇ ಅಂಕವನ್ನು ಬಳಸಿಕೊಂಡು ಸೋಲಿನ ದಡವೆಯಿಂದ ಪಾರಾಗಿ ಪಂದ್ಯವನ್ನು ಟೈಗೊಳಿಸುವಲ್ಲಿ ಯಶಸ್ಸು ಸಾಧಿಸಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

WPL 2024 : ಮಹಿಳಾ ಐಪಿಎಲ್‌ನಲ್ಲಿ ಬೆಟ್ಟಿಂಗ್ ಕಟ್ಟಿದ ಬುಕ್ಕಿಯೇ ಕಿಡ್ನ್ಯಾಪ್‌!

WPL 2024: ಮಹಿಳಾ ಐಪಿಎಲ್‌ನಲ್ಲಿ ಬೆಟ್ಟಿಂಗ್ ಕಟ್ಟಿದ ಬುಕ್ಕಿಯನ್ನೇ ರೌಡಿಶೀಟರ್ ಗ್ಯಾಂಗ್‌ವೊಂದು ಕಿಡ್ನ್ಯಾಪ್‌ಗೆ (kidnapping Case) ಯತ್ನಿಸಿ ಅರೆಸ್ಟ್ ಆಗಿದ್ದಾರೆ.

VISTARANEWS.COM


on

By

Rowdy sheeter kidnaps cricket bookie
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಈಗಾಗಲೇ ಮಹಿಳಾ WPL ಕ್ರಿಕೆಟ್ ಟೂರ್ನಿ (WPL 2024) ಆರಂಭವಾಗಿ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಒಂದು ಕಡೆ ಹೆಚ್ಚೆಚ್ಚು ಜನರು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಮ್ಯಾಚ್ ವೀಕ್ಷಿಸಲು ಬರುತ್ತಿದ್ದರೆ, ಮತ್ತೊಂದೆಡೆ ಕೆಲ ಕ್ರಿಕೆಟ್‌ ಬುಕ್ಕಿಗಳು ಆನ್‌ಲೈನ್‌ನಲ್ಲಿ ಬೆಟ್ಟಿಂಗ್ ಕಟ್ಟಿ ಹಣ ಮಾಡುತ್ತಿದ್ದಾರೆ. ಈ ಮಧ್ಯೆ ಖತರ್ನಾಕ್‌ ಗ್ಯಾಂಗ್‌ವೊಂದು ಬುಕ್ಕಿಯೊಬ್ಬನಿಗೆ ಬೆಟ್ಟಿಂಗ್‌ನಿಂದ ಹಣ ಬಂದಿದೆ ಎಂದು ತಿಳಿದು ಕಿಡ್ನಾಪ್‌ಗೆ ಯತ್ನಿಸಿ, ಪೊಲೀಸರಿಗೆ (kidnapping Case) ಸಿಕ್ಕಿ ಬಿದ್ದ ಘಟನೆ ನಡೆದಿದೆ.

ಸಂತೋಷ್ ಎಂಬ ಕ್ರಿಕೆಟ್ ಬುಕ್ಕಿ ಇತ್ತೀಚೆಗೆ ಮಹಿಳಾ ಕ್ರಿಕೆಟ್ ಐಪಿಎಲ್‌ನಲ್ಲಿ ಬೆಟ್ಟಿಂಗ್ ಆಡಿದ್ದ. ಬೆಟ್ಟಿಂಗ್‌ನಿಂದ ಸ್ವಲ್ಪ ಹಣವನ್ನು ಸಂತೋಷ್ ಗಳಿಸಿದ್ದ. ಈ ಬಗ್ಗೆ ರೌಡಿಶೀಟರ್ ಸಾಗರ್‌ ಎಂಬಾತನಿಗೆ ಮಾಹಿತಿ ಸಿಕ್ಕಿತ್ತು. ಈ ನಡುವೆ ಇಟ್ಟುಮಡು ಸಾಗರ್ ತನ್ನ ಗ್ಯಾಂಗ್ ಜತೆ ಸೇರಿ ಸಂತೋಷ್ ಕಿಡ್ನ್ಯಾಪ್ ಮಾಡಲು ಪ್ಲ್ಯಾನ್ ಮಾಡಿದ್ದ.

ಇದನ್ನೂ ಓದಿ: 300 ಯೂನಿಟ್​ ವಿದ್ಯುತ್ ಉಚಿತ ನೀಡುವ ಮೋದಿಯ ಯೋಜನೆ ಏನು? ಯಾರಿಗೆಲ್ಲ ಇದರಿಂದ ಲಾಭ?

ಅದರಂತೆ ಸಾಗರ್‌ ಬೇರೆ ಸ್ನೇಹಿತರ ಮುಖಾಂತರ ಸಂತೋಷನನ್ನು ಹನುಮಂತನಗರಕ್ಕೆ ಕರೆಸಿಕೊಂಡಿದ್ದ. ಹನುಮಂತ ನಗರಕ್ಕೆ ಸಂತೋಷ್ ಬರುತ್ತಿದ್ದಂತೆ ಟೀ ಕುಡಿಯೋಣ ಬಾ ಎಂದು ಕಾರಿನಲ್ಲಿ ಕೂರಿಸಿಕೊಂಡು ಕನಕಪುರ ಕಡೆ ಹೊರಟ್ಟಿದ್ದರು. ಆಗ ಎಂಟ್ರಿ ಕೊಟ್ಟ ಇಟ್ಟುಮಡು ರೌಡಿಶೀಟರ್ ಸಾಗರ್, ಪ್ರತಿ ತಿಂಗಳು ಇನ್ನು ಮೇಲೆ ಬೆಟ್ಟಿಂಗ್‌ನಿಂದ ಬರುವ ಹಣದಲ್ಲಿ ಹಫ್ತ ನೀಡಬೇಕು ಎಂದು ಸಂತೋಷ್‌ಗೆ ಅವಾಜ್ ಹಾಕಿದ್ದ.

ಇತ್ತ ಸಂತೋಷ್‌ನನ್ನು ಕಾರಿನಲ್ಲಿ ಕಿಡ್ನ್ಯಾಪ್ ಮಾಡಿರುವ ಬಗ್ಗೆ ಸಿಸಿಬಿ ಅಧಿಕಾರಿಗಳಿಗೆ ಖಚಿತ ಮಾಹಿತಿ ರವಾನೆಯಾಗಿತ್ತು. ಹೀಗಾಗಿ ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಕೂಡಲೇ ಸಿಸಿಬಿ ಪೊಲೀಸರು ಆರೋಪಿಗಳು ಇರುವ ಸ್ಥಳದ ಬಗ್ಗೆ ಮಾಹಿತಿ ಪಡೆದು ದಾಳಿ ನಡೆಸಿದರು. ಈ ವೇಳೆ ರೌಡಿ ಶೀಟರ್ ಸಾಗರ್, ಪ್ರೇಮ್ ಕುಮಾರ್, ರವಿತೇಜ, ಭೂಷಣ್ ಎಂಬುವವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಬೇರೆಯಾರಿಗಾದರೂ ಇದೇ ರೀತಿ ಹಫ್ತ ನೀಡುವಂತೆ ಬೆದರಿಕೆ ಹಾಕಿದ್ದಾರಾ ಎಂಬುದರ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ‌

Continue Reading

ಕ್ರೀಡೆ

IND vs ENG: ಅಂತಿಮ ಟೆಸ್ಟ್​ಗೆ ಭಾರತ ತಂಡ ಪ್ರಕಟ; ರಾಹುಲ್​​ ಔಟ್​, ಬುಮ್ರಾ ಇನ್​

ಇಂಗ್ಲೆಂಡ್(IND vs ENG)​ ವಿರುದ್ಧದ ಅಂತಿಮ ಟೆಸ್ಟ್​ ಪಂದ್ಯಕ್ಕೆ ಬಿಸಿಸಿಐ ಗುರುವಾರ ಭಾರತ ತಂಡವನ್ನು ಪ್ರಕಟಿಸಿದೆ. 4ನೇ ಟೆಸ್ಟ್​ಗೆ ವಿಶ್ರಾಂತಿ ಪಡೆದಿದ್ದ ವೇಗಿ ಜಸ್​ಪ್ರೀತ್​ ಬುಮ್ರಾ(Jasprit Bumrah) ಮತ್ತೆ ತಂಡ ಸೇರ್ಪಡೆಗೊಂಡಿದ್ದಾರೆ.

VISTARANEWS.COM


on

IND vs ENG
Koo

ಧರ್ಮಶಾಲಾ: ಇಂಗ್ಲೆಂಡ್(IND vs ENG)​ ವಿರುದ್ಧದ ಅಂತಿಮ ಟೆಸ್ಟ್​ ಪಂದ್ಯಕ್ಕೆ ಬಿಸಿಸಿಐ ಗುರುವಾರ ಭಾರತ ತಂಡವನ್ನು ಪ್ರಕಟಿಸಿದೆ. ನಿರೀಕ್ಷೆಯಂತೆ ತೊಡೆಗಳ ಸ್ನಾಯು ಸೆಳೆತದಿಂದ ಬಳಲುತ್ತಿರುವ ಕನ್ನಡಿಗ ಕೆ.ಎಲ್​ ರಾಹುಲ್(KL Rahul)​ ಈ ಪಂದ್ಯದಿಂದಲೂ ಹೊರಬಿದ್ದಿದ್ದಾರೆ. 4ನೇ ಟೆಸ್ಟ್​ಗೆ ವಿಶ್ರಾಂತಿ ಪಡೆದಿದ್ದ ವೇಗಿ ಜಸ್​ಪ್ರೀತ್​ ಬುಮ್ರಾ(Jasprit Bumrah) ಮತ್ತೆ ತಂಡ ಸೇರ್ಪಡೆಗೊಂಡಿದ್ದಾರೆ. ಸ್ಪಿನ್ನರ್​ ವಾಷಿಂಗ್ಟನ್​ ಸುಂದರ್(Washington Sundar)​ ಅವರನ್ನು ಈ ಪಂದ್ಯದಿಂದ ಕೈಬಿಡಲಾಗಿದೆ.

ವಾಷಿಂಗ್ಟನ್ ಸುಂದರ್ ಅವರನ್ನು ತಂಡದಿಂದ ಬಿಡುಗಡೆ ಮಾಡಲಾಗಿದೆ. ಮಾರ್ಚ್ 2, 2024 ರಿಂದ ಮುಂಬೈ ವಿರುದ್ಧದ ರಣಜಿ ಟ್ರೋಫಿ ಸೆಮಿ-ಫೈನಲ್ ಪಂದ್ಯಕ್ಕಾಗಿ ಅವರು ತಮಿಳುನಾಡು ತಂಡದ ಭಾಗವಾಗಲಿದ್ದಾರೆ. ಒಂದೊಮ್ಮೆ ತಂಡಕ್ಕೆ ಅವರ ಅಗತ್ಯವಿದ್ದರೆ ದೇಶೀಯ ಪಂದ್ಯವನ್ನು ಪೂರ್ಣಗೊಳಿಸಿದ ಬಳಿಕ ಅವರನ್ನು ಭಾರತ ತಂಡಕ್ಕೆ ಸೇರಿಕೊಳ್ಳಲಾಗುತ್ತದೆ ಎಂದು ಬಿಸಿಸಿಐ ತನ್ನ ಪ್ರಕಟನೆಯಲ್ಲಿ ತಿಳಿಸಿದೆ. ಧರ್ಮಶಾಲಾದಲ್ಲಿ ನಡೆಯುವ ಇಂಗ್ಲೆಂಡ್​ ಮತ್ತು ಭಾರತ ನಡುವಣ ಅಂತಿಮ ಟೆಸ್ಟ್ ಮಾರ್ಚ್​ 7ರಿಂದ ಆರಂಭಗೊಳ್ಳಲಿದೆ.

​ಮೊಹಮ್ಮದ್ ಶಮಿ ಅವರು ತಮ್ಮ ಬಲ ಹಿಮ್ಮಡಿ ಸಮಸ್ಯೆಗಾಗಿ ಈಗಾಗಲೇ ಲಂಡನ್​ನಲ್ಲಿ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಶೀಘ್ರದಲ್ಲೇ ತಮ್ಮ ಪುನರ್ವಸತಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಗೆ ತೆರಳಲಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

ಭಾರತ ತಂಡದ ಅನುಭವಿ ಮತ್ತು ಹಿರಿಯ ಆಟಗಾರ ಆರ್​.ಅಶ್ವಿನ್​ಗೆ(R Ashwin) ಈ ಪಂದ್ಯ ವಿಶೇಷವಾಗಲಿದೆ. ಇದು ಅವರ 100ನೇ ಟೆಸ್ಟ್‌ ಪಂದ್ಯವಾಗಿದೆ. ಈ ಸಾಧನೆ ಮಾಡಿ 13ನೇ ಭಾರತೀಯ ಆಟಗಾರ ಎನಿಸಿಕೊಳ್ಳಲಿದ್ದಾರೆ. ಹೀಗಾಗಿ ಅವರಿಗೆ ಪಂದ್ಯ ಆರಂಭಕ್ಕೂ ಮುನ್ನ ವಿಶೇಷ ಗೌರವ ಸೂಚಿಸುವ ಕಾರ್ಯಕ್ರಮವೊಂದನ್ನು ಬಿಸಿಸಿಐ ಏರ್ಪಡಿಸಿದೆ ಎಂದು ಮೂಲಗಳು ತಿಳಿಸಿವೆ. ರೋಹಿತ್‌ ಶರ್ಮ ಅವರು ಶತಕದ ಟೆಸ್ಟ್​ ಸಾಧಕ ಅಶ್ವಿ‌ನ್‌ ಅವರಿಗೆ ತಂಡವನ್ನು ಅಂಗಳಕ್ಕೆ ಮುನ್ನಡೆಸುವ ಗೌರವ ನೀಡಲಿದ್ದಾರೆ ಎಂದು ಬಿಸಿಸಿಐ ಮೂಲವೊಂದು ತಿಳಿಸಿದೆ.

ಇದನ್ನೂ ಓದಿ Ind vs eng : ಪಾಕ್ ದಾಖಲೆಯನ್ನು ಅಳಿಸಿ ಹಾಕಿದ ಭಾರತ ಟೆಸ್ಟ್​ ತಂಡ

ಕಳೆದ 13 ವರ್ಷಗಳಿಂದ ಭಾರತೀಯ ಟೆಸ್ಟ್‌ ತಂಡದ ಭಾಗವಾಗಿರುವ ಅಶ್ವಿ‌ನ್‌ ಸದ್ಯ 99* ಟೆಸ್ಟ್‌ಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ. ಮೂರನೇ ಟೆಸ್ಟ್​ ಪಂದ್ಯದಲ್ಲಿ ಅವರು 500 ಟೆಸ್ಟ್​ ವಿಕೆಟ್​ಗಳನ್ನು ಪೂರ್ತಿಗೊಳಿಸಿದ ಸಾಧನೆ ಕೂಡ ಮಾಡಿದ್ದರು. ಸದ್ಯ ಅವರ ಬತ್ತಳಿಕೆಯಲ್ಲಿ 507 ವಿಕೆಟ್​ಗಳಿವೆ. ಅತ್ಯಧಿಕ 35 ಸಲ ಇನ್ನಿಂಗ್ಸ್‌ ಒಂದರಲ್ಲಿ 5 ಪ್ಲಸ್‌ ವಿಕೆಟ್‌ ಉರುಳಿಸಿದ ಭಾರತೀಯ ದಾಖಲೆ ಕೂಡ ಇವರ ಹೆಸರಿನಲ್ಲಿದೆ. 8 ಬಾರಿ 10ಕ್ಕಿಂತ ಅಧಿಕ ವಿಕೆಟ್​ ಕಿತ್ತ ದಾಖಲೆ ಕೂಡ ಇವರದ್ದಾಗಿದೆ.

ಅಂತಿಮ ಟೆಸ್ಟ್​ಗೆ ಭಾರತ ತಂಡ


ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್​ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್ (ವಿಕೆಟ್​ ಕೀಪರ್​), ಕೆ.ಎಸ್ ಭರತ್ (ವಿಕೆಟ್​ ಕೀಪರ್​), ದೇವದತ್ ಪಡಿಕ್ಕಲ್, ಆರ್. ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್​ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.

Continue Reading

ಪ್ರಮುಖ ಸುದ್ದಿ

Most powerful Indians: ದೇಶದ ಪ್ರಭಾವಿಗಳ ಪಟ್ಟಿಯಲ್ಲಿ ಕೊಹ್ಲಿಯನ್ನು ಹಿಂದಿಕ್ಕಿದ ಜಯ್​ ಶಾ

ದೇಶದ ಪ್ರಭಾವಿ ನಾಯಕರ (Most powerful Indians) ಪಟ್ಟಿಯಲ್ಲಿ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ(Jay Shah) ವಿರಾಟ್​ ಕೊಹ್ಲಿಗಿಂತ(Virat Kohli) ಉನ್ನತ ಸ್ಥಾನ ಪಡೆದಿದ್ದಾರೆ.

VISTARANEWS.COM


on

virat kohli and jay shah
Koo

ನವದೆಹಲಿ: ದೇಶದ ಪ್ರಭಾವಿ ನಾಯಕರ (Most powerful Indians) ಪಟ್ಟಿಯೊಂದನ್ನು ಅಗ್ರಗಣ್ಯ ದೈನಿಕ ಇಂಡಿಯನ್‌ ಎಕ್ಸ್‌ಪ್ರೆಸ್‌ (Indian Express) ಬಿಡುಗಡೆ ಮಾಡಿದೆ. ವಿವಿಧ ಕೇತ್ರಗಳಲ್ಲಿ ಪ್ರಸಿದ್ಧಿ ಪಡೆದ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಕ್ರೀಡಾ ಕ್ಷೇತ್ರದಿಂದ ಒಟ್ಟು 4 ಮಂದಿ ಕಾಣಿಸಿಕೊಂಡಿದ್ದಾರೆ. ಈ ಪಟ್ಟಿಯ ಮೊದಲ ಸ್ಥಾನವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅಲಂಕರಿಸಿದ್ದಾರೆ.

ಅಚ್ಚರಿ ಎಂದರೆ ವಿರಾಟ್​ ಕೊಹ್ಲಿಗಿಂತ(Virat Kohli) ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ(Jay Shah) ಈ ಪಟ್ಟಿಯಲ್ಲಿ ಮುಂದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷರಾಗಿದ್ದ ಬಿಜೆಪಿ ಸಂಸದ ಬ್ರಿಜ್​ ಭೂಷಣ್​ ಶರಣ್​ ಸಿಂಗ್​ ಅವರ ಮೇಲೆ ಲೈಗಿಂಕ ಕಿರುಕುಳದ ಆರೋಪ ಮಾಡಿ ಜಂತರ್​ ಮಂತರ್​ನಲ್ಲಿ ಪ್ರತಿಭಟನೆ ಮಾಡಿದ ಕುಸ್ತಿಪಟು ವಿನೇಶ್​ ಫೋಗಟ್​ ಕೂಡ ಈ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ಅವರಿಗೆ ಕೊನೆಯ 100ನೇ ಸ್ಥಾನ ಸಿಕ್ಕಿದೆ.

ಜಯ್​ ಶಾ(35ನೇ ಸ್ಥಾನ)


ಬಿಸಿಸಿಐ ಕಾರ್ಯದರ್ಶಿ, ಜಾಗತಿಕ ಮಟ್ಟದಲ್ಲಿ ಭಾರತೀಯ ಕ್ರಿಕೆಟ್‌ಗೆ ಹಲವು ಮಾನ್ಯತೆ ತಂದುಕೊಟ್ಟ ಮತ್ತು ಒಲಿಂಪಿಕ್ಸ್‌ಗೆ ಕ್ರಿಕೆಟ್​ ಸೇರ್ಪಡೆಯಾಗುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಜಯ್​ ಶಾ ಅವರು ಪ್ರಭಾವಿ ನಾಯಕರ ಪಟ್ಟಿಯಲ್ಲಿ 35ನೇ ಸ್ಥಾನ ಪಡೆದಿದ್ದಾರೆ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಮುಖ್ಯಸ್ಥರಾದ ಅತ್ಯಂತ ಕಿರಿಯ ಎನ್ನುವ ಹೆಗ್ಗಳಿಕೆಯೂ ಜಯ್​ ಶಾ ಅವರದ್ದಾಗಿದೆ. ಲಿಂಗ ಸಮಾನತೆಯನ್ನು ತರುವ ನಿಟ್ಟಿನಲ್ಲಿ ಭಾರತೀಯ ಕ್ರಿಕೆಟ್​ನಲ್ಲಿ ಪುರುಷ ಮತ್ತು ಮಹಿಳಾ ಆಟಗಾರ್ತಿಯರಿಗೆ ಸಮಾನ ವೇತನ ಪದ್ಧತಿಯನ್ನು ಕೂಡ ಇವರ ಕಾರ್ಯವಧಿಯಲ್ಲಿ ಜಾರಿಗೆ ತರಲಾಗಿತ್ತು.


ವಿರಾಟ್​ ಕೊಹ್ಲಿ( 38ನೇ ಸ್ಥಾನ)


ವಿಶ್ವ ಕ್ರಿಕೆಟ್​ನ ಖ್ಯಾತ ಬ್ಯಾಟರ್​ ಭಾರತ ತಂಡದ ವಿರಾಟ್​ ಕೊಹ್ಲಿ ಅವರು ಈ ಪಟ್ಟಿಯಲ್ಲಿ 38ನೇ ಸ್ಥಾನ ಪಡೆದಿದ್ದಾರೆ. ಈಗಾಗಲೇ ಕ್ರಿಕೆಟ್​ನಲ್ಲಿ ಹಲವು ವಿಶ್ವ ದಾಖಲೆ ಬರೆದ ಖ್ಯಾತಿ ಕೊಹ್ಲಿಯದ್ದಾಗಿದೆ. ಕಳೆದ ವರ್ಷ ಭಾರತದಲ್ಲೇ ನಡೆದ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಕೊಹ್ಲಿ ಅವರು ಸಚಿನ್​ ತೆಂಡೂಲ್ಕರ್(49 ಶತಕ)​ ಅವರ ಸಾರ್ವಕಾಲಿಕ ಏಕದಿನ ಕ್ರಿಕೆಟ್​ನ ಶತಕದ ದಾಖಲೆಯನ್ನು ಮುರಿದಿದ್ದರು. ಕೊಹ್ಲಿ 50 ಶತಕ ಬಾರಿಸಿದ್ದಾರೆ. ಕೊಹ್ಲಿ ಇನ್​ಸ್ಟಾಗ್ರಾಮ್​ನಲ್ಲಿ 266 ಮಿಲಿಯನ್ ಅನುಯಾಯಿಗಳನ್ನು ಹೊಂದಿದ್ದಾರೆ.


ನೀರಜ್​ ಚೋಪ್ರಾ(46ನೇ ಸ್ಥಾನ)


ಭಾರತದ ಸ್ಟಾರ್​ ಜಾವೆಲಿನ್‌ ಎಸೆತಗಾರ, ಒಲಿಂಪಿಕ್‌ ಮತ್ತು ವಿಶ್ವ ಚಾಂಪಿಯನ್‌ ನೀರಜ್‌ ಚೋಪ್ರಾ(Neeraj Chopra) ಅವರಿಗೆ ಈ ಪಟ್ಟಿಯಲ್ಲಿ 4ನೇ ಸ್ಥಾನ. ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ನೀರಜ್​ ಚೋಪ್ರಾ ಕಳೆದ ವರ್ಷ ನಡೆದಿದ್ದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದರು. ಅಲ್ಲದೆ ಡೈಮಂಡ್ ಲೀಗ್​ನಲ್ಲಿ ಬೆಳ್ಳಿ ಗೆದ್ದಿದ್ದರು. 26 ವರ್ಷದ ನೀರಜ್ ಒಲಿಂಪಿಕ್ಸ್‌ನ ಟ್ರ್ಯಾಕ್‌ ಇವೆಂಟ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಯನ್ನು ಹೊಂದಿದ್ದಾರೆ. ಇದೇ ವರ್ಷ ಪ್ಯಾರಿಸ್​ನಲ್ಲಿ ನಡೆಯುವ ಒಲಿಂಪಿಕ್ಸ್​ಗೆ ಸಿದ್ಧತೆ ಆರಂಭಿಸಿರುವ ನೀರಜ್​ ಇಲ್ಲಿಯೂ ಚಿನ್ನ ಗೆಲ್ಲುವ ಗುರಿ ಇಟ್ಟುಕೊಂಡಿದ್ದಾರೆ. ಗೆದ್ದರೆ ಸತತ 2ನೇ ಒಲಿಂಪಿಕ್ಸ್​ ಚಿನ್ನ ಗೆದ್ದ ಸಾಧಕರಾಗಲಿದ್ದಾರೆ.

ಇದನ್ನೂ ಓದಿ PM Narendra Modi: ಪ್ರಭಾವಿಗಳ ಪಟ್ಟಿಯಲ್ಲಿ ಪ್ರಧಾನಿಯೇ ನಂಬರ್‌ 1; ಸಿದ್ದರಾಮಯ್ಯ, ರಾಹುಲ್‌ ಗಾಂಧಿ ಎಲ್ಲಿದ್ದಾರೆ ನೋಡಿ!


ಮಹೇಂದ್ರ ಸಿಂಗ್​ ಧೋನಿ(58ನೇ ಸ್ಥಾನ)


ಭಾರತ ಕ್ರಿಕೆಟ್​ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರಾದ, ಏಕದಿನ ಮತ್ತು ಟಿ20 ವಿಶ್ವಕಪ್​ ಗೆದ್ದ ನಾಯಕ, ಮಾಜಿ ಆಟಗಾರ ಮಹೇಂದ್ರ ಸಿಂಗ್​ ಧೋನಿ(MS Dhoni) ಅವರು ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿಯಾಗಿದ್ದರೂ ಕೂಡ ಅವರಿಗಿರುವ ಅಭಿಮಾನಿಗಳ ಕ್ರೇಜ್​ ಮಾತ್ರ ಇನ್ನೂ ಕಿಂಚಿತ್ತು ಕಡಿಮೆಯಾಗಿಲ್ಲ. ಈ ಬಾರಿಯ ಐಪಿಎಲ್​ ಟೂರ್ನಿಯ ಬಳಿಕ ಧೋನಿ ಎಲ್ಲ ಮಾದರಿಯ ಕ್ರಿಕೆಟ್​ಗೆ ಗುಡ್​ಬೈ ಹೇಳಲಿದ್ದಾರೆ.


ವಿನೇಶ್​ ಫೋಗಟ್​(100ನೇ ಸ್ಥಾನ)


ಬ್ರಿಜ್​ ಭೂಷಣ್​ ಶರಣ್​ ಸಿಂಗ್(Brij Bhushan Sharan Singh)​ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ಅವರ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಒಲಿಂಪಿಯನ್​ ಕುಸ್ತಿಪಟು ವಿನೇಶ್​ ಫೋಗಟ್(Vinesh Phogat)​ ಅವರಿಗೆ ಈ ಪಟ್ಟಿಯಲ್ಲಿ 100ನೇ ಸ್ಥಾನ ನೀಡಲಾಗಿದೆ. ಬ್ರಿಜ್​ ಭೂಷಣ್ ಅವರ ಆಪ್ತ ಸಂಜಯ್​ ಸಿಂಗ್​ ಅವರನ್ನು ಕುಸ್ತಿ ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆಯಾದದ್ದನ್ನು ಖಂಡಿಸಿ ದೇಶದ ಪರಮೋಚ್ಚ ಕ್ರೀಡಾ ಪ್ರಶಸ್ತಿಯಾದ ಮೇಜರ್‌ ಧ್ಯಾನ್‌ಚಂದ್‌ ಖೇಲ್‌ ರತ್ನ ಮತ್ತು ಅರ್ಜುನ ಪ್ರಶಸ್ತಿಗಳನ್ನು  ರಾಷ್ಟ್ರ ರಾಜಧಾನಿಯ ಕರ್ತವ್ಯ ಪಥದ(Kartavya Path) ಪಾದಚಾರಿ ಮಾರ್ಗದಲ್ಲಿಟ್ಟು ತೊರೆದಿದ್ದರು.

Continue Reading

ಕ್ರೀಡೆ

Marais Erasmus : ನಿವೃತ್ತಿ ಘೋಷಿಸಿದ ಜನಪ್ರಿಯ ಅಂತಾರಾಷ್ಟ್ರೀಯ ಕ್ರಿಕೆಟ್ ಅಂಪೈರ್​

Marais Erasmus : ದಕ್ಷಿಣ ಆಫ್ರಿಕಾ ಮೂಲಕ ಈ ಅಂಪೈರ್​ ಮೂರು ಬಾರಿ ಅತ್ಯುತ್ತಮ ಅಂಪೈರ್ ಪ್ರಶಸ್ತಿ ಪಡೆದುಕೊಂಡಿದ್ದಾರೆ.

VISTARANEWS.COM


on

Marais Erasmus
Koo

ನವದೆಹಲಿ: ದಕ್ಷಿಣ ಆಫ್ರಿಕಾ ಮೂಲದ ಅಂಪೈರ್ ಮರೈಸ್ ಎರಾಸ್ಮಸ್ (Marais Erasmus) 18 ವರ್ಷಗಳ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ. ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ನಡುವೆ ವೆಲ್ಲಿಂಗ್ಟನ್​ನಲ್ಲಿ ನಡೆಯಲಿರುವ ಮೊದಲ ಟೆಸ್ಟ್ 60 ವರ್ಷದ ಆಟಗಾರನ ವಿದಾಯ ಪಂದ್ಯವಾಗಿದೆ.

ವಿಶ್ವದ ಅತ್ಯುತ್ತಮ ಅಂಪೈರ್​ಗಳಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟ ಎರಾಸ್ಮಸ್, ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ನಡುವಿನ 2006 ರ ಟಿ 20ಐ ನಲ್ಲಿ ತಮ್ಮ ಅಂತರರಾಷ್ಟ್ರೀಯ ವೃತ್ತಿಜೀವನವನ್ನು ಪ್ರಾರಂಭಿಸಿದ್ದರು. ಅಂದಿನಿಂದ, ಅವರು ಪುರುಷರ ಕ್ರಿಕೆಟ್​ಗಾಗಿ 80 ಟೆಸ್ಟ್, 124 ಏಕದಿನ ಮತ್ತು 43 ಟಿ 20 ಪಂದ್ಯಗಳಲ್ಲಿ ಅಂಪೈರ್ ಟೋಪಿ ಧರಿಸಿದ್ದಾರೆ. ಅವರು ಎಲ್ಲಾ ಸ್ವರೂಪಗಳಲ್ಲಿ 131 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಟಿವಿ ಅಂಪೈರ್ ಆಗಿ ಸೇವೆ ಸಲ್ಲಿಸಿದ್ದಾರೆ.

ಎರಾಸ್ಮಸ್ ತನ್ನ ನಿರ್ಧಾರದ ಹಿಂದಿನ ಪ್ರಮುಖ ಅಂಶವಾಗಿ ಮನೆಯಿಂದ ದೂರ ಕಳೆದ ಸಮಯವನ್ನು ಎತ್ತಿ ತೋರಿಸಿದರು. ಅವರು ಕಳೆದ ಅಕ್ಟೋಬರ್​ನಲ್ಲಿ ಕರೆ ಮಾಡಿ, ಏಪ್ರಿಲ್​​ನಲ್ಲಿ ತಮ್ಮ ಒಪ್ಪಂದವನ್ನು ಪೂರ್ಣಗೊಳಿಸುವ ಉದ್ದೇಶವನ್ನು ಐಸಿಸಿಗೆ ತಿಳಿಸಿದ್ದರು.

ಇದನ್ನೂ ಓದಿ : Devdutt Padikkal: ಆರೋಗ್ಯ ಸಮಸ್ಯೆಗೆ ಸಡ್ಡು ಹೊಡೆದು ಎದ್ದುಬಂದ ಪಡಿಕ್ಕಲ್​ ಭಾರತ ಟೆಸ್ಟ್​ ಕ್ಯಾಪ್​ ಧರಿಸುವುದು ಖಚಿತ

ಮೂರು ಬಾರಿ (2016, 2017, 2021) ಗೆದ್ದ ಪ್ರತಿಷ್ಠಿತ ಐಸಿಸಿ ವರ್ಷದ ಅಂಪೈರ್ ಪ್ರಶಸ್ತಿ ಸೇರಿದಂತೆ ಹಲವಾರು ಪುಸ್ಕಾರಗಳನ್ನು 60 ವರ್ಷದ ಆಟಗಾರ ಪಡೆದಿದ್ದಾರೆ. ಈ ಸಾಧನೆಯು ಅವರನ್ನು ದಂತಕಥೆ ಸೈಮನ್ ಟೌಫೆಲ್ ನಂತರ ಎರಡನೇ ಸ್ಥಾನ ಸಿಗುವಂತೆ ಮಾಡಿದೆ. ಅವರ ಹೆಸರಿನಲ್ಲಿ ಅಂತಹ ಐದು ಪ್ರಶಸ್ತಿಗಳಿವೆ.

ಅಂಪೈರಿಂಗ್ ವೃತ್ತಿಜೀವನಕ್ಕೆ ಮೊದಲು, ಎರಾಸ್ಮಸ್ ಸ್ವತಃ ಒಬ್ಬ ನಿಪುಣ ಕ್ರಿಕೆಟಿಗನಾಗಿದ್ದರು. ಬೋಲ್ಯಾಂಡ್ ಪರ ಆಡಿದ ಅವರು 53 ಪ್ರಥಮ ದರ್ಜೆ ಮತ್ತು 54 ಲಿಸ್ಟ್-ಎ ಪಂದ್ಯಗಳಲ್ಲಿ ಸ್ಪರ್ಧಿಸಿದ್ದಾರೆ ಹಾಗೂ 2,000 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಆಲ್ರೌಂಡರ್ ಆಗಿ 179 ವಿಕೆಟ್​ಗಳನ್ನು ಪಡೆದಿದ್ದಾರೆ.

Continue Reading
Advertisement
Modi GDP
ಪ್ರಮುಖ ಸುದ್ದಿ26 mins ago

GDP Growth : ಜಿಡಿಪಿಯ ಭರ್ಜರಿ ಏರಿಕೆಗೆ ಮೋದಿ ಸಂತಸ; ಏನಂದ್ರು ಅವರು?

2nd PU Exam from tomorrow what are the conditions
ಶಿಕ್ಷಣ26 mins ago

2nd PU Exam: ನಾಳೆಯಿಂದ ರಾಜ್ಯಾದ್ಯಂತ ದ್ವಿತೀಯ ಪಿಯು ಪರೀಕ್ಷೆ; ವಿದ್ಯಾರ್ಥಿಗಳಿಗೆ ಇಲ್ಲಿದೆ ಕಂಡಿಷನ್!

insurance
ಮನಿ-ಗೈಡ್28 mins ago

Money Guide: ಸಾಮಾನ್ಯ ವಿಮೆ v/s ಜೀವ ವಿಮೆ; ಯಾವುದು ಉತ್ತಮ? ನಿಮಗೆ ತಿಳಿದಿರಲೇಬೇಕಾದ ಮಾಹಿತಿ ಇಲ್ಲಿದೆ

Budget session Siddaramaiah
ವಿಧಾನಮಂಡಲ ಅಧಿವೇಶನ39 mins ago

Budget Session : ಬಿಜೆಪಿಯ ಜೈ ಶ್ರೀರಾಮ್‌ VS ಸಿದ್ದರಾಮಯ್ಯರ ಜೈ ಸೀತಾರಾಮ್‌!

Nitasha Kaul
ದೇಶ56 mins ago

Nitasha Kaul : ಬ್ರಿಟನ್​ ಲೇಖಕಿಯನ್ನು ಏರ್​ಪೋರ್ಟ್​​ನಿಂದಲೇ ವಾಪಸ್​ ಕಳಿಸಿದ್ದಕ್ಕೆ ಕಾರಣ ಕೊಟ್ಟ ಕೇಂದ್ರ ಸರ್ಕಾರ

Siddaramaiah plan behind accepting Caste Census Report Sunil Kumar reveals reason
ರಾಜಕೀಯ1 hour ago

‌Caste Census Report: ಜಾತಿ ಗಣತಿ ಸ್ವೀಕಾರದ ಹಿಂದೆ ಸಿದ್ದರಾಮಯ್ಯ ಪ್ಲ್ಯಾನ್‌ ಏನು? ಕಾರಣ ಬಿಚ್ಚಿಟ್ಟಿದ್ದಾರೆ ಸುನಿಲ್‌ ಕುಮಾರ್!

Rowdy sheeter kidnaps cricket bookie
ಕ್ರಿಕೆಟ್2 hours ago

WPL 2024 : ಮಹಿಳಾ ಐಪಿಎಲ್‌ನಲ್ಲಿ ಬೆಟ್ಟಿಂಗ್ ಕಟ್ಟಿದ ಬುಕ್ಕಿಯೇ ಕಿಡ್ನ್ಯಾಪ್‌!

GDP Growth
ಪ್ರಮುಖ ಸುದ್ದಿ2 hours ago

GDP Growth : ನಿರೀಕ್ಷೆಗೂ ಮೀರಿ ಭಾರತದ ಜಿಡಿಪಿ ಬೆಳವಣಿಗೆ; ಕಳೆದ ತ್ರೈಮಾಸಿಕದಲ್ಲಿ ಭರ್ಜರಿ ಪ್ರಗತಿ

film festival
ಸಿನಿಮಾ2 hours ago

Bengaluru Film Festival: 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ

BJP protest demanding action against those who shouted pro Pak slogan
ಉತ್ತರ ಕನ್ನಡ2 hours ago

Uttara Kannada News: ಪಾಕ್‌ ಪರ ಘೋಷಣೆ ಕೂಗಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಯಲ್ಲಾಪುರದಲ್ಲಿ ಬಿಜೆಪಿ ಪ್ರತಿಭಟನೆ

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ4 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ3 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for February 28 2024
ಭವಿಷ್ಯ15 hours ago

Dina Bhavishya: ಇಂದು 12 ರಾಶಿಯವರ ಲಕ್ಕಿ ನಂಬರ್‌ ಏನು? ಯಾರಿಗೆ ಧನ ಲಾಭ?

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ಇಂದು ದೊಡ್ಡದೊಂದು ಸಮಸ್ಯೆಯಿಂದ ಮುಕ್ತಿ ಪಡೆಯುವಿರಿ

Rajya Sabha election Pakistan Zindabad slogans raised inside Vidhana Soudha by Nasir Hussain supporters
ರಾಜಕೀಯ2 days ago

ವಿಧಾನಸೌಧದೊಳಗೇ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ; ನಾಸಿರ್‌ ಹುಸೇನ್‌ ಬೆಂಬಲಿಗ ದೇಶದ್ರೋಹಿಗಳ ಉದ್ಧಟತನ

Ghar Wapsi ST Somashekhar and Shivaram Hebbar to quit BJP
ರಾಜಕೀಯ2 days ago

Ghar Wapsi: ಎಸ್‌.ಟಿ. ಸೋಮಶೇಖರ್‌, ಶಿವರಾಂ ಹೆಬ್ಬಾರ್‌ ಬಿಜೆಪಿಗೆ ಗುಡ್‌ ಬೈ? ಇಂದೇ ರಾಜೀನಾಮೆ?

Rajyasabha Elections 42 Congress MLAs contacted by JDS candidate says DK Shivakumar
ರಾಜಕೀಯ2 days ago

Rajya sabha Election: ಕಾಂಗ್ರೆಸ್‌ನ 42 ಶಾಸಕರನ್ನು ಸಂಪರ್ಕ ಮಾಡಿದ್ದಾರೆ: ಡಿ.ಕೆ. ಶಿವಕುಮಾರ್

read your daily horoscope predictions for february 27 2024
ಭವಿಷ್ಯ3 days ago

Dina Bhavishya : ಇಂದು ಆಪ್ತರಿಂದಲೇ ಈ ರಾಶಿಯವರಿಗೆ ಕಂಟಕ!

Crowd mistakes Arabic words as Quran Verses on the kurta and Pak Women mobbed
ವಿದೇಶ3 days ago

Pak Woman: ಕುರ್ತಾ ಮೇಲಿನ ಅರೇಬಿಕ್ ಪದಗಳನ್ನು ತಪ್ಪಾಗಿ ತಿಳಿದು ಮಹಿಳೆ ಮೇಲೆ ಹಲ್ಲೆಗೆ ಯತ್ನ

read your daily horoscope predictions for february 26 2024
ಭವಿಷ್ಯ4 days ago

Dina Bhavishya : ಈ ಮೂರು ರಾಶಿಯವರು ಇಂದು ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯವರು ಆಪ್ತರೊಂದಿಗೆ ಗೌಪ್ಯ ವಿಷಯವನ್ನು ಹೇಳುವಾಗ ಎಚ್ಚರ!

Video Viral Student falls under school bus He escaped with minor injuries
ವೈರಲ್ ನ್ಯೂಸ್5 days ago

Video Viral: ಸ್ಕೂಲ್ ಬಸ್‌ನಡಿ ಬಿದ್ದ ವಿದ್ಯಾರ್ಥಿ; ಪಾರಾಗಿದ್ದೇ ಪವಾಡ!

ಟ್ರೆಂಡಿಂಗ್‌