ಲಂಡನ್: ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ಪಂದ್ಯ ರೋಚಕ ಘಟ್ಟ ತಲುಪಿದೆ. ಪಂದ್ಯ ಮುಗಿಯಲು ಇನ್ನೊಂದು ದಿನ ಬಾಕಿ ಇದೆ. ಇತ್ತಂಡಗಳೂ ಪ್ರಶಸ್ತಿ ಬಾಚಿಕೊಳ್ಳುವುದಕ್ಕೆ ಜಿದ್ದಾಜಿದ್ದಿನ ಹೋರಾಟ ನಡೆಯುತ್ತಿವೆ. ಆಸ್ಟ್ರೇಲಿಯಾ ತಂಡಕ್ಕೆ ಗೆಲುವಿನ ಅವಕಾಶ ಹೆಚ್ಚು ಹೇಳುತ್ತಿರುವ ಹೊರತಾಗಿಯೂ ಟೀಮ್ ಇಂಡಿಯಾ ಪೈಪೋಟಿ ಕೊಟ್ಟಿದೆ. ಹೀಗಾಗಿ ಓವಲ್ ಸ್ಟೇಡಿಯಮ್ನಲ್ಲಿ ಪಂದ್ಯ ವೀಕ್ಷಣೆಗೆ ಬಂದಿರುವ ಅಭಿಮಾನಿಗಳಿಗೆ ಭರ್ಜರಿ ಮನರಂಜನೆ ದೊರಕುತ್ತಿದೆ. ಏತನ್ಮಧ್ಯೆ, ಗ್ಯಾಲರಿಯಲ್ಲಿ ಕುಳಿತಿದ್ದ ಇಬ್ಬರು ಪ್ರೇಮಿಗಳು ಪರಸ್ಪರ ಪ್ರಪೋಸ್ ಮಾಡುವ ಮೂಲಕ ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದ್ದಾರೆ.
Proposal during WTC final
— rajendra tikyani (@Rspt1503) June 10, 2023
credits: Star Sports pic.twitter.com/VMNoW6opWj
ಮೈದಾನದಲ್ಲಿನ ಕ್ರಿಕೆಟ್ ಅಭಿಮಾನಿಗಳನ್ನು ಬೆರಗೊಳಿಸುವಂಥ ಚಟುವಟಿಕೆಗಳ ನಡೆಯುತ್ತಿರುವ ನಡುವೆಯೇ ಭಾರತೀಯ ಅಭಿಮಾನಿಯೊಬ್ಬರು ತಮ್ಮಿಷ್ಟದ ಹುಡುಗಿಗೆ ಲವ್ ಪ್ರಪೋಸ್ ಮಾಡುವ ಮೂಲಕ ಸ್ಟ್ಯಾಂಡ್ನಲ್ಲಿ ಕುಳಿತಿದ್ದ ಪ್ರೇಕ್ಷಕರಿಗೆ ಮನರಂಜನೆ ನೀಡಿದರು. ಯುವಕನ ಪ್ರಸ್ತಾಪವನ್ನು ಯುವತಿ ಒಪ್ಪಿಕೊಂಡ ಆ ಕ್ಷಣವನ್ನು ಕ್ಯಾಮೆರಾ ಮೆನ್ಗಳು ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದರು. ಈ ವೇಳೆ ಆತ ಉಂಗುರವನ್ನು ಹಾಕಿದ ಕ್ಷಣ, ಮುತ್ತಿಟ್ಟ ಸಂದರ್ಭವು ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿವೆ. ಅಭಿಮಾನಿಗಳು ಮುದ್ದಾದ ಜೋಡಿಗೆ ಶುಭ ಹಾರೈಸಿದ್ದಾರೆ.
ವಿಶೇಷ ದಾಖಲೆ ಬರೆದ ರೋಹಿತ್ ಶರ್ಮಾ
ಲಂಡನ್: ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ನ ಫೈನಲ್ ಪಂದ್ಯದಲ್ಲಿ (WTC Final 2023) ಆಸ್ಟ್ರೇಲಿಯಾ ತಂಡ ಮುನ್ನಡೆ ಪಡೆದುಕೊಂಡಿದೆ. ಎರಡನೇ ಇನಿಂಗ್ಸ್ನಲ್ಲಿ 270 ರನ್ ಬಾರಿಸಿ ಡಿಕ್ಲೇರ್ ಮಾಡಿಕೊಂಡಿರುವ ಪ್ಯಾಟ್ ಕಮಿನ್ಸ್ ಬಳಗ 443 ರನ್ಗಳ ಮುನ್ನಡೆ ಪಡೆದುಕೊಂಡಿದೆ. 444 ರನ್ಗಳ ಗೆಲುವಿನ ಗುರಿಯೊಂದಿಗೆ ಬ್ಯಾಟ್ ಮಾಡಲು ಆರಂಭಿಸಿರುವ ಭಾರತ ತಂಡ 41 ರನ್ ಗಳಿಸುವಷ್ಟರಲ್ಲಿ ಮೊದಲ ವಿಕೆಟ್ ಕಳೆದುಕೊಂಡು ನಿರಾಸೆಗೆ ಒಳಗಾಗಿದೆ. ಏತನ್ಮಧ್ಯೆ, ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್ನಲ್ಲಿ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಅವರು ಭಾರತದ ಲೆಜೆಂಡ್ ಕ್ರಿಕೆಟರ್ ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿ ಸಾಧನೆ ಮಾಡಿದ್ದಾರೆ.
ಇದನ್ನೂ ಓದಿ : WTC Final : ಆಸ್ಟ್ರೇಲಿಯಾ ತಂಡವನ್ನು ಬಗ್ಗು ಬಡಿಯುವ ಸಾಮರ್ಥ್ಯ ನಮಗಿದೆ; ಟೀಮ್ ಇಂಡಿಯಾ ನಾಯಕನ ವಿಶ್ವಾಸ
ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಭಾರತದ ಮೂರನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ 69 ಬಾರಿಸಿದ್ದ ಸಚಿನ್ ತೆಂಡೂಲ್ಕರ್ ಅವರನ್ನು ರೋಹಿತ್ ಹಿಂದಿಕ್ಕಿದ್ದಾರೆ. ಎಂಎಸ್ ಧೋನಿ (78) ಮತ್ತು ವೀರೇಂದ್ರ ಸೆಹ್ವಾಗ್ (90) ರೋಹಿತ್ ಅವರಿಗಿಂತ ಮುಂದಿನೆರಡು ಸ್ಥಾನಗಳನ್ನು ಪಡೆದುಕೊಂಡಿದ್ದರೆ.
ಡಬ್ಲ್ಯುಟಿಸಿ 2023 ರ ಫೈನಲ್ನಲ ನಾಲ್ಕನೇ ಇನಿಂಗ್ಸ್ನಲ್ಲಿ ಮಿಚೆಲ್ ಸ್ಟಾರ್ಕ್ ವಿರುದ್ಧ ರೋಹಿತ್ ತಮ್ಮ 70ನೇ ಟೆಸ್ಟ್ ಸಿಕ್ಸರ್ ಬಾರಿಸಿದರು. ಟೆಸ್ಟ್ ಕ್ರಿಕೆಟ್ನಲ್ಲಿ ರೋಹಿತ್ ಶರ್ಮಾ ಅವರ ದಾಖಲೆಯ ಬಗ್ಗೆ ಹೇಳುವುದಾದರೆ ಬಲಗೈ ಬ್ಯಾಟರ್ 50 ಪಂದ್ಯಗಳಲ್ಲಿ 3416 ರನ್ ಗಳಿಸಿದ್ದಾರೆ. 45.55ರ ಉತ್ತಮ ಸರಾಸರಿಯನ್ನು ಹೊಂದಿದ್ದಾರೆ. 70 ಸಿಕ್ಸರ್ಗಳನ್ನು ಬಾರಿಸಿರುವುದ