ನವದೆಹಲಿ: ಭಾರತದ ಕುಸ್ತಿ ಫೆಡರೇಶನ್ನ ನಿರ್ಗಮಿತ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್(Brij Bhushan Sharan Singh) ಅವರ ಬಂಧನಕ್ಕೆ ಆಗ್ರಹಿಸಿ ಜಂತರ್ ಮಂತರ್ನಲ್ಲಿ(jantar mantar) ಪ್ರತಿಭಟನೆ(wrestlers protest) ನಡೆಸಿ ಬಂಧನಕ್ಕೆ ಒಳಗಾಗಿದ್ದ ಒಲಿಂಪಿಯನ್ ಕುಸ್ತಿಪಟುಗಳು ಮತ್ತೆ ಕುಸ್ತಿ ಅಖಾಡಕ್ಕೆ ಇಳಿಯಲು ಸಜ್ಜಾಗಿದ್ದಾರೆ. ಏಷ್ಯನ್ ಗೇಮ್ಸ್(asian games) ಆಯ್ಕೆ ಟ್ರಯಲ್ಸ್ನ ಸಿದ್ಧತೆಗಾಗಿ ಸೋನೆಪತ್ನ ಭಾರತೀಯ ಕ್ರೀಡಾ ಪ್ರಾಧಿಕಾರ(ಸಾಯ್) ಕೇಂದ್ರದಲ್ಲಿ ಅಭ್ಯಾಸ ಆರಂಭಿಸಿದ್ದಾರೆ.
ಲೈಂಗಿಕ ಕಿರುಕುಳದ ಆರೋಪ ಮಾಡಿ ಬ್ರಿಜ್ ಭೂಷಣ್ ಅವರನ್ನು ಬಂಧಿಸುವಂತೆ ತಿಂಗಳುಗಟ್ಟಲೆ ದಿಲ್ಲಿಯ ಜಂತರ್ ಮಂತರ್ನಲ್ಲಿ ಹೋರಾಟ ನಡೆಸಿದ್ದ ಭಜರಂಗ್ ಪೂನಿಯಾ(Bajrang Punia) ಈಗಾಗಲೇ ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಸಾಯ್ ಕೇಂದ್ರಸ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಇವೆರ ಜತೆಗೆ ಕಾಮನ್ವೆಲ್ತ್ ಗೇಮ್ಸ್ ಚಾಂಪಿಯನ್ ವಿನೇಶ್ ಫೋಗಟ್(vinesh phogat), ಗೀತಾ ಫೋಗಟ್ ಹಾಗೂ ಭಜರಂಗ್ರ ಪತ್ನಿ ಸಂಗೀತಾ ಫೋಗಟ್ ಕೂಡ ಅಭ್ಯಾಸಕ್ಕೆ ಹಾಜರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕುಸ್ತಿಪಟುಗಳ ಅಭ್ಯಾಸದ ಬಗ್ಗೆ ಮಾಹಿತಿ ನೀಡಿದ ಸಾಯ್ ಕೇಂದ್ರದ ಅಧಿಕಾರಿ, “ನಮ್ಮ ಕುಸ್ತಿಪಟುಗಳು ದೀರ್ಘ ಸಮಯದ ಬಳಿಕ ಎಂದಿನಂತೆ ಅಭ್ಯಾಸ ನಡೆಸುತ್ತಿದ್ದಾರೆ. ಇದು ಸಂತಸದ ಸಂಗತಿ” ಎಂದಿದ್ದಾರೆ.
ಸದ್ಯ ಬ್ರಿಜ್‌ಭೂಷಣ್ ಶರಣ್ ಸಿಂಗ್(Brij Bhushan Sharan Singh) ವಿರುದ್ಧ ದೆಹಲಿ ಪೊಲೀಸರು(Delhi Police) ಪಟಿಯಾಲ ನ್ಯಾಯಾಲಯಕ್ಕೆ 500 ಪುಟಗಳ ಚಾರ್ಜ್‌ಶೀಟ್(Chargesheet) ಸಲ್ಲಿಸಿದ್ದು ಅವರ ವಿರುದ್ಧ ದಾಖಲಾದ ಪೋಕ್ಸೊ(POCSO) ಕೇಸನ್ನು ರದ್ದುಗೊಳಿಸುವಂತೆ ಪೊಲೀಸರು ಕೋಟ್ಗೆ ಶಿಫಾರಸು ಮಾಡಿದ್ದಾರೆ.
ಇದನ್ನೂ ಓದಿ Brij Bhushan Singh: ಬ್ರಿಜ್‌ಭೂಷಣ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ ಪೊಲೀಸರು; ಪೋಕ್ಸೊ ಕೈಬಿಡಲು ಶಿಫಾರಸು
ಪಟಿಯಾಲ ಕೋಟ್ಗೆ ಕಳೆದ ಗುರುವಾರ ವರದಿ ಸಲ್ಲಿಸಿರುವ ದೆಹಲಿ ಪೊಲೀಸರು ಬ್ರಿಜ್‌ಭೂಷಣ್ ವಿರುದ್ಧ ಅಪ್ರಾಪ್ತ ವಯಸ್ಸಿನ ಬಾಲಕಿ ಸಲ್ಲಿಸಿರುವ ಲೈಂಗಿಕ ಕಿರುಕುಳ ಪ್ರಕರಣವನ್ನು ರದ್ದುಗೊಳಿಸುವಂತೆ ಶಿಫಾರಸು ಮಾಡಿದ್ದಾರೆ. ಮತ್ತು ತನಿಖೆಯಲ್ಲಿ ಯಾವುದೇ ಪುರಾವೆಗಳು ಕಂಡುಬಂದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.