Site icon Vistara News

Ram Mandir: ‘ಪ್ರಾಣ ಪ್ರತಿಷ್ಠಾ’ ಆಹ್ವಾನ ಪಡೆದ ಆರ್​.ಅಶ್ವಿನ್​, ಮಿಥಾಲಿ ರಾಜ್​

R Ashwin and Mithali Raj

ಚೆನ್ನೈ: ಟೀಮ್​ ಇಂಡಿಯಾದ ಮಾಜಿ ದಿಗ್ಗಜ ಕ್ರಿಕೆಟ್​ ಆಟಗಾರ್ತಿ ಮಿಥಾಲಿ ರಾಜ್(Mithali Raj)​ ಮತ್ತು ಪುರುಷರ ಕ್ರಿಕೆಟ್​ ತಂಡದ ಅನುಭವಿ ಸ್ಪಿನ್ನರ್​ ಆರ್​.ಅಶ್ವಿನ್(R Ashwin)​ ರಾಮಮಂದಿರ ಉದ್ಘಾಟನೆಯ ಆಹ್ವಾನ(Ram Mandir ‘Pran Pratishtha’ ceremony) ಪಡೆದಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಭಾರತ ಕ್ರಿಕೆಟ್​ ತಂಡದ ಮಾಜಿ ಆಟಗಾರರಾದ ಸಚಿನ್​ ತೆಂಡೂಲ್ಕರ್(Sachin Tendulkar), ಮಹೇಂದ್ರ ಸಿಂಗ್​ ಧೋನಿ ಮತ್ತು ವಿರಾಟ್​ ಕೊಹ್ಲಿಗೆ ಆಹ್ವಾನವನ್ನು ನೀಡಲಾಗಿತ್ತು. ಈ ಪಟ್ಟಿಗೆ ಈಗ ಮತ್ತಿಬ್ಬರು ಕ್ರಿಕೆಟಿಗರು ಸೇರ್ಪಡೆಯಾಗಿದ್ದಾರೆ.

ಆರ್​.ಅಶ್ವಿನ್​ ಅವರು ಶುಕ್ರವಾರ ತಮ್ಮ ನಿವಾಸದಲ್ಲಿ ಆಮಂತ್ರಣ ಪತ್ರವನ್ನು ಸ್ವೀಕರಿಸಿದರು. ಮಿಥಾಲಿ ಅನುಪಸ್ಥಿತಿಯಲ್ಲಿ ಅವರ ತಾಯಿ ಆಮಂತ್ರಣ ಪತ್ರ ಸ್ವೀಕರಿಸಿದರು. ಈ ಫೋಟೊವನ್ನು ಮಿಥಾಲಿ ತಮ್ಮ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

‘ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾ ಮಂಗಳ ವಿಧಿಗೆ ಆಹ್ವಾನ ಬಂದಿದ್ದಕ್ಕೆ ಧನ್ಯ. ನನ್ನ ಪರವಾಗಿ ನನ್ನ ತಾಯಿ ಅದನ್ನು ಸ್ವೀಕರಿಸಿದರು’ ಎಂದು ಮಿಥಾಲಿ ಟ್ವಿಟರ್​ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

ದೇವಾಲಯದ ಟ್ರಸ್ಟ್ ಪ್ರಕಾರ, ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ರಾಜಕಾರಣಿಗಳು, ಸೆಲೆಬ್ರಿಟಿಗಳು, ಕೈಗಾರಿಕೋದ್ಯಮಿಗಳು, ಸಂತರು ಮತ್ತು ವಿವಿಧ ದೇಶಗಳ ಸುಮಾರು 100 ಪ್ರತಿನಿಧಿಗಳು ಸೇರಿದಂತೆ 7,000 ಕ್ಕೂ ಹೆಚ್ಚು ಜನರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದೆ.

ಮೈಸೂರಿನ ಹೆಮ್ಮೆಯ ಶಿಲ್ಪಿ ಅರುಣ್‌ ಯೋಗಿರಾಜ್‌ (Arun Yogiraj) ಕೆತ್ತಿದ ರಾಮಲಲ್ಲಾನ ಮೂರ್ತಿಯು (Ram Lalla Idol) ಅಯೋಧ್ಯೆಯ ರಾಮಮಂದಿರದ (Ram Mandir) ಗರ್ಭಗುಡಿ ಪ್ರವೇಶಿಸಿದೆ. ಪ್ರಾಣಪ್ರತಿಷ್ಠಾಪನೆಗೂ ಮುಂಚಿನ ವಿಧಿವಿಧಾನಗಳ ಭಾಗವಾಗಿ ಗರ್ಭಗುಡಿಯಲ್ಲಿ ರಾಮಲಲ್ಲಾನ ಮೂರ್ತಿಯನ್ನು ಇರಿಸಲಾಗಿದೆ. ಈಗ ಇದೇ ಮೊದಲ ಬಾರಿಗೆ ರಾಮಲಲ್ಲಾ ಮೂರ್ತಿಯ ಚಿತ್ರವನ್ನು ಬಿಡುಗಡೆ ಮಾಡಲಾಗಿದೆ. ರಾಮಲಲ್ಲಾನ ಮೂರ್ತಿಯನ್ನು ನೋಡಿದ ಭಕ್ತರು ಪುಳಕಿತರಾಗಿದ್ದಾರೆ.

ಇದನ್ನೂ ಓದಿ ಅಯೋಧ್ಯೆಯ ರಾಮಮಂದಿರದ ‘ಪ್ರಾಣ ಪ್ರತಿಷ್ಠಾ’ ಸಮಾರಂಭಕ್ಕೆ ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಗೆ ಆಹ್ವಾನ

ರಾಮಮಂದಿರದ ಗರ್ಭಗುಡಿಯಲ್ಲಿ ಶುಕ್ರವಾರ ರಾಮಲಲ್ಲಾ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಇದಾದ ಬಳಿಕ ಅಗ್ನಿ ಸ್ಥಾಪನೆ, ನವಗ್ರಹ ಸ್ಥಾಪನೆ ನಡೆಯಲಿದೆ. ಹಾಗೆಯೇ, ವಿಶೇಷ ಹವನಕ್ಕೂ ಸಿದ್ಧತೆ ಮಾಡಿಕೊಳ್ಳಲಾಗಿದೆ. ವೈದಿಕ ಮಂತ್ರಗಳನ್ನು ಪಠಿಸುವ ಮೂಲಕ ವಿಶೇಷ ಹವನ ಮಾಡಲಾಗುತ್ತದೆ. ಆ ಮೂಲಕ ರಾಮಮಂದಿರದ ಗರ್ಭಗುಡಿಯಲ್ಲಿ ಧಾರ್ಮಿಕ ವಾತಾವರಣ ಹಾಗೂ ಸಕಾರಾತ್ಮಕ ಅಂಶಗಳು ಒಡಮೂಡಲಿ ಎಂಬುದು ಅರ್ಚಕರ ಉದ್ದೇಶವಾಗಿದೆ ಎಂದು ತಿಳಿದುಬಂದಿದೆ.

Exit mobile version