ರಾಜ್ಕೋಟ್: ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್(India vs England 3rd Test) ಪಂದ್ಯದಲ್ಲಿ ಟೀಮ್ ಇಂಡಿಯಾದ ಅನುಭವಿ ಹಾಗೂ ಹಿರಿಯ ಸ್ಪಿನ್ನರ್ ಆರ್. ಅಶ್ವಿನ್(Ravichandran Ashwin) ಅವರು ಕೇವಲ ಒಂದು ವಿಕೆಟ್ ಕಿತ್ತರೆ 500 ಟೆಸ್ಟ್ ವಿಕೆಟ್ ಕಿತ್ತ ಸಾಧಕರಾಗಲಿದ್ದಾರೆ. ಜತೆಗೆ ಈ ಸಾಧನೆ ಮಾಡಿದ 2ನೇ ಭಾರತೀಯ ಹಾಗೂ ವಿಶ್ವದ 9ನೇ ಬೌಲರ್ ಎಂಬ ಖ್ಯಾತಿಗೆ ಪಾತ್ರರಾಗಲಿದ್ದಾರೆ.
37 ವರ್ಷದ ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್(R Ashwin) ಅವರಿಗೆ ದ್ವಿತೀಯ ಟೆಸ್ಟ್ ಪಂದ್ಯದಲ್ಲಿಯೇ 500 ವಿಕೆಟ್ ಸಾಧನೆ ಮಾಡಬಹುದಿತ್ತು. ಆದರೆ ಅವರು ಮೊದಲ ಇನಿಂಗ್ಸ್ನಲ್ಲಿ ವಿಕೆಟ್ ಕೀಳುವಲ್ಲಿ ವಿಫಲರಾಗಿದ್ದರು. ಅಶ್ವಿನ್ ಇದುವರೆಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ಪರ 97 ಟೆಸ್ಟ್ ಪಂದ್ಯಗಳನ್ನು ಆಡಿ 499* ವಿಕೆಟ್‌ಗಳನ್ನು ಉರುಳಿಸಿದ್ದಾರೆ. 34 ಬಾರಿ ಇನಿಂಗ್ಸ್ ಒಂದರಲ್ಲಿ 5 ವಿಕೆಟ್ ಕಿತ್ತ ಸಾಧನೆ ಮಾಡಿದ್ದಾರೆ. 8 ಬಾರಿ 10 ವಿಕೆಟ್ ಗೊಂಚಲು ಪಡೆದಿದ್ದಾರೆ.
ಪ್ರಸಕ್ತ ಕ್ರಿಕೆಟ್ ಆಡುತ್ತಿರುವ ಬೌಲರ್ಗಳ ಪೈಕಿ ಅತಿ ಹೆಚ್ಚು ಟೆಸ್ಟ್ ವಿಕೆಟ್ ಕಿತ್ತ ಸಾಧಕರ ಪಟ್ಟಿಯಲ್ಲಿ ಅಶ್ವಿನ್ ಮೂರನೇ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್ನ ಜೇಮ್ಸ್ ಆ್ಯಂಡರ್ಸನ್(695*) ಮತ್ತು ಆಸ್ಟ್ರೇಲಿಯಾದ ನಥಾನ್ ಲಿಯೋನ್(512*) ಕ್ರಮವಾಗಿ ಮೊದಲೆರಡು ಸ್ಥಾನ ಪಡೆದಿದ್ದಾರೆ.
ಬ್ಯಾಟಿಂಗ್ನಲ್ಲಿಯೂ ಸಾಧನೆ…
ಬ್ಯಾಟಿಂಗ್ನಲ್ಲಿ ಅಶ್ವಿನ್ ಹಲವು ಸಾಧನೆಗಳನ್ನು ಮಾಡಿದ್ದಾರೆ. 138 ಟೆಸ್ಟ್ ಇನಿಂಗ್ಸ್ನಿಂದ 3271 ರನ್ ಗಳಿಸಿದ್ದಾರೆ. 5 ಶತಕ ಕೂಡ ಬಾರಿಸಿದ್ದಾರೆ. ಇದರಲ್ಲಿ 124 ಗರಿಷ್ಠ ವೈಯಕ್ತಿಕ ಮೊತ್ತವಾಗಿದೆ. 14 ಅರ್ಧಶತಕ ಒಳಗೊಂಡಿದೆ. 116 ಏಕದಿನ ಪಂದ್ಯಗಳನ್ನಾಡಿ 707 ರನ್, 65 ಟಿ20ಯಿಂದ 85 ರನ್ ಗಳಿಸಿದ್ದಾರೆ. ಒಟ್ಟಾರೆಯಾಗಿ ಮೂರು ಮಾದರಿಯ ಅಂತಾರಾಷ್ಟ್ರಿಯ ಕ್ರಿಕೆಟ್‌ನಲ್ಲಿ 4,162* ರನ್ ಕಲೆಹಾಕಿದ್ದಾರೆ.
ಇದನ್ನೂ ಓದಿ James Anderson: 41ನೇ ವಯಸ್ಸಿನಲ್ಲೂ ವಿಶ್ವ ದಾಖಲೆ ಬರೆಯಲು ಸಜ್ಜಾದ ಜೇಮ್ಸ್ ಆಂಡರ್ಸನ್!
Local lad @imjadeja has a special wish for @ashwinravi99, who is one wicket away from 5⃣0⃣0⃣ Test wickets 😃👌#TeamIndia | #INDvENG | @IDFCFIRSTBank pic.twitter.com/zGn1B8IZrb
— BCCI (@BCCI) February 14, 2024
ರಾಜ್ಕೋಟ್ನಲ್ಲಿ ಉತ್ತಮ ದಾಖಲೆ
ಅಶ್ವಿನ್ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ ಹೊಂದಿದ್ದಾರೆ. ಅಶ್ವಿನ್ ಇಲ್ಲಿ 2 ಟೆಸ್ಟ್ ಪಂದ್ಯ ಆಡಿ 37.55 ಸರಾಸರಿಯಲ್ಲಿ ಒಂಬತ್ತು ವಿಕೆಟ್‌ಗಳನ್ನು ಉರುಳಿಸಿದ್ದಾರೆ. ಹೀಗಾಗಿ ಅವರಿಗೆ ಮೂರನೇ ಪಂದ್ಯದಲ್ಲಿ ಒಂದು ವಿಕೆಟ್ ಕೀತ್ತು 500 ವಿಕೆಟ್ ಪೂರ್ತಿಗೊಳಿಸುವುದು ಕಷ್ಟವಾಗದು.
ಟೆಸ್ಟ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ಗಳ ಪಟ್ಟಿ
ಆಟಗಾರ | ದೇಶ | ವಿಕೆಟ್ |
ಮುತ್ತಯ್ಯ ಮುರಳೀಧರನ್ | ಶ್ರೀಲಂಕಾ | 800 |
ಶೇನ್ ವಾರ್ನ್ | ಆಸ್ಟ್ರೇಲಿಯಾ | 708 |
ಜೇಮ್ಸ್ ಆಂಡರ್ಸನ್ | ಇಂಗ್ಲೆಂಡ್ | 695* |
ಅನಿಲ್ ಕುಂಬ್ಳೆ | ಭಾರತ | 619 |
ಸ್ಟುವರ್ಟ್ ಬ್ರಾಡ್ | ಇಂಗ್ಲೆಂಡ್ | 604 |
ಗ್ಲೆನ್ ಮೆಕ್ಗ್ರಾತ್ | ಆಸ್ಟ್ರೇಲಿಯಾ | 563 |
ಕರ್ಟ್ನಿ ವಾಲ್ಷ್ | ವೆಸ್ಟ್ ಇಂಡೀಸ್ | 519 |
ನಾಥನ್ ಲಿಯಾನ್ | ಆಸ್ಟ್ರೇಲಿಯಾ | 512* |
ರವಿಚಂದ್ರನ್ ಅಶ್ವಿನ್ | ಭಾರತ | 499* |
ಡೇಲ್ ಸ್ಟೈನ್ | ದಕ್ಷಿಣ ಆಫ್ರಿಕಾ | 439 |