ರಾಜ್ಕೋಟ್: ಟೆಸ್ಟ್ ಕ್ರಿಕೆಟ್ನಲ್ಲಿ 500 ವಿಕೆಟ್ ಕಿತ್ತ ಸಾಧನೆ ಮಾಡಿದ ಟೀಮ್ ಇಂಡಿಯಾದ ಅನುಭವಿ ಹಾಗೂ ಹಿರಿಯ ಸ್ಪಿನ್ನರ್ ಆರ್. ಅಶ್ವಿನ್(R Ashwin) ಅವರಿಗೆ ಪ್ರಧಾನಿ ನರೇಂದ್ರ ಮೋದಿ(Prime Minister Narendra Modi) ಅವರು ಮೆಚ್ಚುಗೆ ಮತ್ತು ಅಭಿನಂಧನೆ ಸಲ್ಲಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ನಲ್ಲಿ ಅಶ್ವಿನ್ ಅವರು ಜಾಕ್ ಕ್ರಾಲಿ ವಿಕೆಟ್ ಪಡೆಯುವ ಮೂಲಕ ಟೆಸ್ಟ್ ಕ್ರಿಕೆಟ್ನಲ್ಲಿ 500(R Ashwin historic 500th Test wicket) ವಿಕೆಟ್ಗಳ ಮೈಲುಗಲ್ಲು ತಲುಪಿದ್ದರು.
ಪ್ರಧಾನಿ ಮೋದಿ ಅವರು ತಮ್ಮ ಅಧಿಕೃತ ಟ್ವಿಟರ್ ಎಕ್ಸ್ ಖಾತೆಯಲ್ಲಿ ‘500 ಟೆಸ್ಟ್ ವಿಕೆಟ್‌ಗಳನ್ನು ಕಬಳಿಸಿದ ಅಸಾಮಾನ್ಯ ಸಾಧನೆಗಾಗಿ ರವಿಚಂದ್ರನ್ ಅಶ್ವಿನ್ ಅವರಿಗೆ ಅಭಿನಂದನೆಗಳು. ಅವರ ಪ್ರಯಾಣ ಮತ್ತು ಸಾಧನೆಗಳು ಅವರ ಕೌಶಲ್ಯ ಮತ್ತು ಪರಿಶ್ರಮಕ್ಕೆ ಸಾಕ್ಷಿಯಾಗಿದೆ. ಭವಿಷ್ಯದಲ್ಲಿ ಅವರು ಇನ್ನಷ್ಟು ಸಾಧನೆಗಳ ಶಿಖರಗಳನ್ನು ಏರುವಂತೆ ಆಗಲಿ. ಅವರಿಗೆ ನನ್ನ ಶುಭಾಶಯಗಳು’ ಎಂದು ಮೋದಿ ಹಾರೈಸಿದ್ದಾರೆ.
Congratulations to Ravichandran Ashwin on the extraordinary milestone of taking 500 Test wickets! His journey and accomplishments are testament to his skill and perseverance. My best wishes to him as he scales further peaks. @ashwinravi99
— Narendra Modi (@narendramodi) February 16, 2024
500 ವಿಕೆಟ್ ಕಿತ್ತ 2ನೇ ಭಾರತೀಯ ಹಾಗೂ ವಿಶ್ವದ 9ನೇ ಬೌಲರ್ ಎಂಬ ಖ್ಯಾತಿಗೆ ಅಶ್ವಿನ್ ಪಾತ್ರರಾದರು. ಅನಿಲ್ ಕುಂಬ್ಳೆ ಈ ಸಾಧನೆ ಮಾಡಿದ ಮೊದಲ ಭಾರತೀಯ ಬೌಲರ್. ಅನಿಲ್ ಕುಂಬ್ಳೆ ಟೆಸ್ಟ್ನಲ್ಲಿ 619 ವಿಕೆಟ್ ಪಡೆದಿದ್ದಾರೆ. ಪ್ರಸಕ್ತ ಕ್ರಿಕೆಟ್ ಆಡುತ್ತಿರುವ ಬೌಲರ್ಗಳ ಪೈಕಿ ಅತಿ ಹೆಚ್ಚು ಟೆಸ್ಟ್ ವಿಕೆಟ್ ಕಿತ್ತ ಸಾಧಕರ ಪಟ್ಟಿಯಲ್ಲಿ ಅಶ್ವಿನ್ ಮೂರನೇ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್ನ ಜೇಮ್ಸ್ ಆ್ಯಂಡರ್ಸನ್(696*) ಮತ್ತು ಆಸ್ಟ್ರೇಲಿಯಾದ ನಥಾನ್ ಲಿಯೋನ್(512*) ಕ್ರಮವಾಗಿ ಮೊದಲೆರಡು ಸ್ಥಾನ ಪಡೆದಿದ್ದಾರೆ.
ಇದನ್ನೂ ಓದಿ IND vs ENG 3rd Test: ಬೆನ್ ಡಕೆಟ್ ಬಿರುಸಿನ ಶತಕ; ಉತ್ತಮ ಸ್ಥಿತಿಯಲ್ಲಿ ಇಂಗ್ಲೆಂಡ್
ತಂಡದಿಂದ ಹೊರ ಬಿದ್ದ ಅಶ್ವಿನ್
500 ವಿಕೆಟ್ ಸಾಧನೆ ಮಾಡಿದ ಬೆನ್ನಲ್ಲೇ ಆರ್. ಅಶ್ವಿನ್ ಅವರು ಅಶ್ವಿನ್ ತಂಡದಿಂದಲೇಹಿಂದೆ ಸರಿದಿದ್ದಾರೆ. ಇದಕ್ಕೆ ಕಾರಣ ಕುಟುಂಬದಲ್ಲಿನ ವೈದ್ಯಕೀಯ ತುರ್ತುಸ್ಥಿತಿ. ತಕ್ಷಣದಿಂದ ಜಾರಿಗೆ ಬರುವಂತೆ ಅಶ್ವಿನ್ ತಂಡದಿಂದ ಹೊರಗುಳಿದಿದ್ದಾರೆ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ. ಬಿಸಿಸಿಐ ಆಟಗಾರನಿಗೆ ತನ್ನ ಸಂಪೂರ್ಣ ಬೆಂಬಲವನ್ನು ನೀಡಿದರೆ, ಅಶ್ವಿನ್ ಮತ್ತು ಅವರ ಕುಟುಂಬದ ಖಾಸಗಿತನವನ್ನು ಗೌರವಿಸುವಂತೆ ಮಾಧ್ಯಮಗಳು ಮತ್ತು ಅಭಿಮಾನಿಗಳನ್ನು ವಿನಂತಿಸಿದೆ.
R Ashwin withdraws from the 3rd India-England Test due to family emergency.
— BCCI (@BCCI) February 16, 2024
In these challenging times, the Board of Control for Cricket in India (BCCI) and the team fully supports Ashwin.https://t.co/U2E19OfkGR
ರವಿಚಂದ್ರನ್ ಅಶ್ವಿನ್ ಟೆಸ್ಟ್ ತಂಡದಿಂದ ಹಿಂದೆ ಸರಿದಿದ್ದಾರೆ, ಕೌಟುಂಬಿಕ ವೈದ್ಯಕೀಯ ತುರ್ತುಸ್ಥಿತಿಯಿಂದಾಗಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮತ್ತು ತಂಡವು ಅಶ್ವಿನ್ ಅವರನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ ಎಂದು ಭಾರತೀಯ ಕ್ರಿಕೆಟ್ ಮಂಡಳಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.