Site icon Vistara News

Rahul Dravid: ನಾನು ನಿರುದ್ಯೋಗಿ, ಎಲ್ಲಾದರೂ ಕೆಲಸ ಇದ್ದರೆ ಹೇಳಿ ಎಂದ ರಾಹುಲ್​ ದ್ರಾವಿಡ್​; ವಿಡಿಯೊ ವೈರಲ್​

Rahul Dravid

Rahul Dravid: Rahul Dravid jokes about being 'unemployed from next week': 'Any offers?'

ಬಾರ್ಬಡೋಸ್​: ಟಿ20 ವಿಶ್ವಕಪ್​ ಟೂರ್ನಿಯ ಮುಕ್ತಾಯದೊಂದಿಗೆ ರಾಹುಲ್​ ದ್ರಾವಿಡ್​(Rahul Dravid) ಅವರ ಕೋಚಿಂಗ್​ ಕೂಡ ಮುಕ್ತಾಯಗೊಂಡಿದೆ. ಮುಂದಿನ ನಡೆ ಏನೆಂದು ಕೇಳಿದ ಪ್ರಶ್ನೆಗೆ ಹಾಸ್ಯಾಸ್ಪದವಾಗಿ(Rahul Dravid jokes) ಉತ್ತರಿಸಿದ ದ್ರಾವಿಡ್​, ಮುಂದಿನ ವಾರದಿಂದ ನಾನು ನಿರುದ್ಯೋಗಿರುತ್ತೇನೆ(Rahul Dravid jokes unemployed from next week) ಎಲ್ಲಾದರೂ ಕೆಲಸ ಇದ್ದರೆ ಹೇಳಿ ಎಂದರು. ಈ ವಿಡಿಯೊ ವೈರಲ್​ ಆಗಿದೆ.

2021ರಲ್ಲಿ ಟಿ20 ವಿಶ್ವಕಪ್‌ ಬಳಿಕ, ಕೋಚ್‌ ಆಗಿದ್ದ ರವಿಶಾಸ್ತ್ರಿ ನಿರ್ಗಮನದಿಂದ ತೆರವಾದ ಸ್ಥಾನವನ್ನು ದ್ರಾವಿಡ್‌ ವಹಿಸಿದ್ದರು. ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರ ಒಪ್ಪಂದವು ಕಳೆದ ವರ್ಷದ ಏಕದಿನ ಕ್ರಿಕೆಟ್ ವಿಶ್ವಕಪ್‌ಗೆ ಅಂತ್ಯಗೊಂಡಿತ್ತು. ಆ ಬಳಿಕ, ದ್ರಾವಿಡ್​ಗೆ ಕೋಚ್​ ಹುದ್ದೆಯಲ್ಲಿ ಮುಂದುವರಿಯಲು ಆಸಕ್ತಿ ಕೂಡ ಇರಲಿಲ್ಲ. ಆದರೂ ಕೂಡ ದ್ರಾವಿಡ್​ ಮತ್ತು ಇತರ ತರಬೇತಿ ಸಿಬ್ಬಂದಿಯನ್ನು ಟಿ20 ವಿಶ್ವಕಪ್​ ತನಕ ಮುಂದುವರಿಸಲಾಗಿತ್ತು. ತಮ್ಮ ಕೊನೆಯ ಮಾರ್ಗದರ್ಶದಲ್ಲಿ ಭಾರತ ಟಿ20 ವಿಶ್ವಕಪ್​ ಗೆದ್ದಿರುವುದು ಅವರಿಗೂ ಸಂತಸ ತಂದಿದೆ.

ಟಿ20 ವಿಶ್ವಕಪ್ ಗೆಲುವಿನ ಬಳಿಕ ಕೋಚ್ ಹುದ್ದೆಯಿಂದ ಕೆಳಗಿಳಿದ ರಾಹುಲ್ ದ್ರಾವಿಡ್ ಅವರಿಗೆ ಸಂದರ್ಶಕರೊಬ್ಬರು ಮುಂದಿನ ನಡೆಯ ಬಗ್ಗೆ ಪ್ರಶ್ನೆ ಮಾಡಿದರು. ಈ ಪ್ರಶ್ನೆಗೆ ಉತ್ತರಿಸಿದ ದ್ರಾವಿಡ್​, ಈ ಗೆಲುವಿನಿಂದ ನಾನು ಶೀಘ್ರದಲ್ಲೇ ಹೊರಬರುತ್ತೇನೆ. ಏಕೆಂದರೆ ಮುಂದಿನ ವಾರದಿಂದ ನಾನು ನಿರುದ್ಯೋಗಿರುತ್ತೇನೆ. ಹೊಸ ಕೆಲಸ ಇದ್ದರೆ ಹೇಳಿ ಎಂದು ದ್ರಾವಿಡ್ ಹಾಸ್ಯ ಚಟಾಕಿ ಹಾರಿಸಿದ್ದಾರೆ” ಈ ವಿಡಿಯೊ ವೈರಲ್​ ಆಗಿದೆ. ಕಳೆದ ವರ್ಷವೇ ದ್ರಾವಿಡ್​ ಅವರು ತಮ್ಮ ಕುಟುಂಬಕ್ಕೆ ಹೆಚ್ಚಿನ ಸಮಯ ಕೊಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿ ಮತ್ತೊಮ್ಮೆ ಕೋಚ್​ ಹುದ್ದೆಯಲ್ಲಿ ಮುಂದುವರಿಯಲು ಇಷ್ಟವಿಲ್ಲ ಎಂದು ಹೇಳಿದ್ದರು. ದ್ರಾವಿಡ್​ ಅವರ ಇಬ್ಬರು ಮಕ್ಕಳು ಕೂಡ ಕ್ರಿಕೆಟರ್​ ಆಗಿರುವ ಕಾರಣ ಇವರ ಕ್ರಿಕೆಟ್​ ಭವಿಷ್ಯ ರೂಪಿಸುವಲ್ಲಿ ದ್ರಾವಿಡ್​ ಹೆಚ್ಚಿನ ಕಾಳಜಿ ವಹಿಸಿಕೊಳ್ಳಬಹುದು.

ಇದನ್ನೂ ಓದಿ Team India stuck in Barbados: ಟೀಮ್​ ಇಂಡಿಯಾ ತವರಿಗೆ ವಾಪಸಾಗುವುದು ಮತ್ತಷ್ಟು ವಿಳಂಬ

ನಾಯಕನಾಗಿ ಗೆಲ್ಲಲಾಗದ ವಿಶ್ವಕಪ್(T20 World Cup 2024)​ ಟ್ರೋಫಿಯನ್ನು ರಾಹುಲ್​ ದ್ರಾವಿಡ್‌(Rahul Dravid) ಕೊನೆಗೂ ಭಾರತ ತಂಡದ ತರಬೇತುದಾರಾಗಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಅದು ಕೂಡ ತಮ್ಮ ಕೊನೆಯ ಮಾರ್ಗದರ್ಶನದಲ್ಲಿ ಎನ್ನುವುದು ವಿಶೇಷ.

1996ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ರಾಹುಲ್‌ ದ್ರಾವಿಡ್‌ 2012ರ ವರೆಗೆ ಭಾರತ ತಂಡದ ಪರವಾಗಿ ಆಡಿದ್ದರು. ಆದರೆ ವಿಶ್ವಕಪ್ ಎನ್ನುವುದು ಅವರಿಗೆ ಕನಸಾಗಿತ್ತು. ಈ ಕೊರಗು ಕೂಡ ಅವರಲ್ಲಿತ್ತು. ಇದೀಗ ನಾಯಕನಾಗಿ, ಆಟಗಾರನಾಗಿ ಗೆಲ್ಲಲಾಗದ ವಿಶ್ವಕಪ್‌ ಅನ್ನು ತರಬೇತುದಾರನಾಗಿ ಗಳಿಸಿಕೊಂಡಿದ್ದಾರೆ.

2007ರಲ್ಲಿ ವೆಸ್ಟ್​ ಇಂಡೀಸ್​ನಲ್ಲಿ ನಡೆದಿದ್ದ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ರಾಹುಲ್​ ದ್ರಾವಿಡ್​ ಅವರ ನಾಯಕತ್ವದಲ್ಲಿ ಭಾರತ ಅತ್ಯಂತ ಕಳಪೆ ಪ್ರದರ್ಶನ ತೋರುವ ಮೂಲಕ ಲೀಗ್​ ಹಂತದಿಂದಲೇ ನಿರ್ಗಮಿಸಿತ್ತು. ದುರ್ಬಲ ಬಾಂಗ್ಲಾದೇಶ ವಿರುದ್ದವೂ ಕೂಡ ಗೆಲುವು ಸಾಧಿಸಲು ಸಾಧ್ಯವಾಗ ಅವಮಾನಕ್ಕೆ ಸಿಲುಕಿತ್ತು. ಅಂದು ಅವಮಾನ ಎದುರಿಸಿದ ವಿಂಡೀಸ್​ ನೆಲದಲ್ಲೇ ಇದೀಗ ದ್ರಾವಿಡ್​ ತರಬೇತುದಾರನಾಗಿ ಕಪ್​ ಗೆದ್ದು ಸಂಭ್ರಮಿಸಿ ತಮ್ಮ ಎಲ್ಲ ಹಿಂದಿನ ನೋವನ್ನು ಮರೆತರು.

Exit mobile version