Site icon Vistara News

Rahul Dravid: ದ್ರಾವಿಡ್​ಗೆ ಗಾರ್ಡ್‌ ಆಫ್‌ ಹಾನರ್‌ ಸಲ್ಲಿಸಿದ ವಿದ್ಯಾರ್ಥಿಗಳು; ವಿಡಿಯೊ ವೈರಲ್​

Rahul Dravid

Rahul Dravid:Rahul Dravid receiving a hero's welcome and a guard of honour from young kids at a cricket academy in Bengaluru

ಬೆಂಗಳೂರು: ಟಿ20 ವಿಶ್ವಕಪ್​ ವಿಜೇತ ಭಾರತ ತಂಡದ ಮಾಜಿ ಮುಖ್ಯ ಕೋಚ್​ ರಾಹುಲ್​ ದ್ರಾವಿಡ್(Rahul Dravid)​ ಅವರಿಗೆ ಬೆಂಗಳೂರಿನ(Bengaluru) ಕ್ರಿಕೆಟ್​ ಅಕಾಡೆಮಿಯಲ್ಲಿ ಕ್ರಿಕೆಟ್​ ವಿದ್ಯಾರ್ಥಿಗಳು ಗಾರ್ಡ್‌ ಆಫ್‌ ಹಾನರ್‌ (ಗೌರವ ವಂದನೆ) ಮೂಲಕ(guard of honour) ಅಭಿನಂದಿಸಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

ರಾಹುಲ್​ ದ್ರಾವಿಡ್​ ಅವರು ಎನ್​ಸಿಎ ಕ್ರಿಕೆಟ್​ ಅಕಾಡೆಮಿಗೆ(cricket academy in Bengaluru) ಆಗಮಿಸುತ್ತಿದ್ದಂತೆ ಅಧಿಕಾರಿಗಳು ಮತ್ತು ಇಲ್ಲಿ ಕ್ರಿಕೆಟ್​ ಅಭ್ಯಾಸ ನಡೆಸುತ್ತಿರುವ ವಿದ್ಯಾರ್ಥಿಗಳು ಬ್ಯಾಟ್​ ಎತ್ತಿ ಗಾರ್ಡ್‌ ಆಫ್‌ ಹಾನರ್‌ ಮೂಲಕ ಗೌರವ ಸಲ್ಲಿಸಿದರು. ದ್ರಾವಿಡ್​ ಕೂಡ ಸಂತಸದಿಂದಲೇ ಎಲ್ಲರ ಕೈ ಕುಲುಕಿ ಧನ್ಯವಾದ ತಿಳಿಸಿದರು. ಭಾರತ ಟಿ20 ವಿಶ್ವಕಪ್​ ಗೆಲ್ಲುವಲ್ಲಿ ದ್ರಾವಿಡ್​ ಅವರ ಮಾರ್ಗದರ್ಶನ ಅಮೋಘವಾಗಿತ್ತು.

1996ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ರಾಹುಲ್‌ ದ್ರಾವಿಡ್‌ 2012ರ ವರೆಗೆ ಭಾರತ ತಂಡದ ಪರವಾಗಿ ಆಡಿದ್ದರು. ಆದರೆ ವಿಶ್ವಕಪ್ ಎನ್ನುವುದು ಅವರಿಗೆ ಕನಸಾಗಿತ್ತು. ಈ ಕೊರಗು ಕೂಡ ಅವರಲ್ಲಿತ್ತು. ನಾಯಕನಾಗಿ, ಆಟಗಾರನಾಗಿ ಗೆಲ್ಲಲಾಗದ ವಿಶ್ವಕಪ್‌ ಅನ್ನು ತರಬೇತುದಾರನಾಗಿ ಗಳಿಸಿಕೊಂಡಿದ್ದಾರೆ. ಅದು ಕೂಡ ತಮ್ಮ ಕೊನೆಯ ಮಾರ್ಗದರ್ಶನದಲ್ಲಿ ಎನ್ನುವುದು ವಿಶೇಷ.

2007ರಲ್ಲಿ ವೆಸ್ಟ್​ ಇಂಡೀಸ್​ನಲ್ಲಿ ನಡೆದಿದ್ದ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ರಾಹುಲ್​ ದ್ರಾವಿಡ್​ ಅವರ ನಾಯಕತ್ವದಲ್ಲಿ ಭಾರತ ಅತ್ಯಂತ ಕಳಪೆ ಪ್ರದರ್ಶನ ತೋರುವ ಮೂಲಕ ಲೀಗ್​ ಹಂತದಿಂದಲೇ ನಿರ್ಗಮಿಸಿತ್ತು. ದುರ್ಬಲ ಬಾಂಗ್ಲಾದೇಶ ವಿರುದ್ದವೂ ಕೂಡ ಗೆಲುವು ಸಾಧಿಸಲು ಸಾಧ್ಯವಾಗ ಅವಮಾನಕ್ಕೆ ಸಿಲುಕಿತ್ತು. ಅಂದು ಅವಮಾನ ಎದುರಿಸಿದ ವಿಂಡೀಸ್​ ನೆಲದಲ್ಲೇ ಇದೀಗ ದ್ರಾವಿಡ್​ ತರಬೇತುದಾರನಾಗಿ ವಿಶ್ವಕಪ್​ ಕಪ್​ ಗೆದ್ದು ಸಂಭ್ರಮಿಸಿ ತಮ್ಮ ಎಲ್ಲ ಹಿಂದಿನ ನೋವನ್ನು ಮರೆತಿದ್ದಾರೆ. ಸದ್ಯ ಕೋಚ್​ ಹುದ್ದೆಯಿಂದ ಕೆಳಗಿಳಿದಿರುವ ದ್ರಾವಿಡ್​ ತಮ್ಮ ಇಬ್ಬರು ಮಕ್ಕಳ ಕ್ರಿಕೆಟ್​ ಭವಿಷ್ಯ ರೂಪಿಸುವಲ್ಲಿ ಹೆಚ್ಚಿನ ಕಾಳಜಿ ವಹಿಸಿಕೊಳ್ಳಬಹುದು.

ಇದನ್ನೂ ಓದಿ Rahul Dravid : ರಾಹುಲ್ ದ್ರಾವಿಡ್​ಗೆ ಭಾರತ ರತ್ನ ಕೊಡಿ; ಕೇಂದ್ರ ಸರ್ಕಾರಕ್ಕೆ ಗವಾಸ್ಕರ್ ಮನವಿ

ದ್ರಾವಿಡ್​ಗೆ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ಒತ್ತಾಯಿಸಿದ ಗವಾಸ್ಕರ್


ಪ್ರಧಾನ ಕೋಚ್ ಆಗಿದ್ದ ರಾಹುಲ್ ದ್ರಾವಿಡ್ ಅವರಿಗೆ “ಭಾರತ ರತ್ನ” ಪ್ರಶಸ್ತಿಯಿಂದ ಗೌರವಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುನೀಲ್ ಗವಾಸ್ಕರ್ ಒತ್ತಾಯಿಸಿದ್ದಾರೆ. “ಭಾರತ ಸರಕಾರವು ದ್ರಾವಿಡ್​ಗೆ ಭಾರತ ರತ್ನ ಪ್ರಶಸ್ತಿಯಿಂದ ಗೌರವಿಸಿದರೆ ಅದು ಅವರಿಗೆ ಸಲ್ಲುವ ಸೂಕ್ತ ಗೌರವವಾಗುತ್ತದೆ. ಈ ಗೌರವಕ್ಕೆ ಅವರು ಸಂಪೂರ್ಣವಾಗಿ ಅರ್ಹರಾಗಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ದ್ರಾವಿಡ್​ ಆಟಗಾರರಾಗಿ ಮತ್ತು ತಂಡದ ನಾಯಕರಾಗಿ ವಿದೇಶಗಳಲ್ಲಿ ಭಾರತಕ್ಕೆ ಗೆಲುವು ತಂದು ಕೊಟ್ಟಿದ್ದಾರೆ. ವೆಸ್ಟ್ ಇಂಡೀಸ್​ನಲ್ಲಿ ಗೆಲ್ಲುವುದು ಅಸಾಧ್ಯ ಎಂಬ ಕಾಲದಲ್ಲಿ ಅವರು ಭಾರತಕ್ಕೆ ಸರಣಿ ಗೆಲುವನ್ನು ತಂದಿದ್ದಾರೆ. ಇಂಗ್ಲೆಂಡ್​ನಲ್ಲಿ ಟೆಸ್ಟ್ ಸರಣಿಗಳನ್ನು ಗೆದ್ದಿರುವ ಕೇವಲ ಮೂರು ಭಾರತೀಯ ನಾಯಕರ ಪೈಕಿ ಅವರು ಕೂಡ ಒಬ್ಬರಾಗಿದ್ದಾರೆ. ಈ ಹಿಂದೆ, ಅವರು ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯ ಅಧ್ಯಕ್ಷರಾಗಿ ಅತ್ಯುತ್ತಮ ಕ್ರಿಕೆಟ್ ಪ್ರತಿಭೆಗಳನ್ನು ಹೊರತಂದಿದ್ದಾರೆ. ಬಳಿಕ ಭಾರತೀಯ ಹಿರಿಯರ ಕ್ರಿಕೆಟ್ ತಂಡದ ಕೋಚ್ ಆಗಿ ಉತ್ತಮ ನಿರ್ವಹಣೆ ನೀಡಿದ್ದಾರೆ ಎಂದು ಗವಾಸ್ಕರ್​ ಬರೆದುಕೊಂಡಿದ್ದಾರೆ.

Exit mobile version