Site icon Vistara News

Rajal Arora: ಟೀಮ್​ ಇಂಡಿಯಾ ಜತೆಗಿರುವ ಏಕೈಕ ಮಹಿಳಾ ಸಿಬ್ಬಂದಿ ಯಾರು? ಇವರ ಕೆಲಸವೇನು?

Rajal Arora

Rajal Arora: Who is Rajal Arora?, Only female support staff in Indian men’s cricket team

ನ್ಯೂಯಾರ್ಕ್​: ಟೀಮ್​ ಇಂಡಿಯಾ ಪ್ರಸಕ್ತ ಸಾಗುತ್ತಿರುವ ಟಿ20 ವಿಶ್ವಕಪ್(T20 World Cup)​ ಟೂರ್ನಿಯಲ್ಲಿ ಹ್ಯಾಟ್ರಿಕ್​ ಗೆಲುವು ಸಾಧಿಸಿ ಈಗಾಗಲೇ ಸೂಪರ್​-8 ಹಂತಕ್ಕೇರಿದೆ. ಆದರೆ, ಟೀಮ್​ ಇಂಡಿಯಾ(Team India) ಕೋಚಿಂಗ್​ ಸಿಬ್ಬಂದಿಗಳ ಜತೆ ಮಹಿಳಾ ಅಧಿಕಾರಿಯೊಬ್ಬರು ಕೂಡ ಕಾಣಿಸಿಕೊಂಡಿರುವುದು ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿ. ಈಕೆ ಯಾರು? ಇವರಿಗೆ ಟೀಮ್​ ಇಂಡಿಯಾದಲ್ಲಿ ಏನು ಕೆಲಸ? ಎನ್ನುವ ವಿಚಾರ ತಿಳಿದುಕೊಳ್ಳಲು ತಿಳಿದುಕೊಳ್ಳವ ತವಕದಲ್ಲಿದ್ದಾರೆ.


ಹೌದು, ಇವರ ಹೆಸರು ರಾಜಲ್​ ಅರೋರಾ. ಈಕೆ ಭಾರತೀಯ ಕ್ರಿಕೆಟ್ ತಂಡದ ಸಾಮಾಜಿಕ ಮಾಧ್ಯಮ ತಂಡದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪುಣೆಯ ಸಿಂಬಯೋಸಿಸ್ ಇನ್‌ಸ್ಟಿಟ್ಯೂಟ್ ಆಫ್ ಮೀಡಿಯಾ ಅಂಡ್ ಕಮ್ಯುನಿಕೇಷನ್ಸ್‌ನಿಂದ ಪದವಿಯನ್ನು ಪೂರ್ಣಗೊಳಿಸಿ. ಕಂಟೆಂಟ್ ರೈಟರ್ ಆಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ಅರೋರಾ, 2015ರಲ್ಲಿ ಬಿಸಿಸಿಐಗೆ ಸಾಮಾಜಿಕ ಮಾಧ್ಯಮ ವ್ಯವಸ್ಥಾಪಕರಾಗಿ ಸೇರಿಕೊಂಡರು. ಅಂದಿನಿಂದ ಇಂದಿನವರೆಗೆ ಭಾರತ ತಂಡ ಎಲ್ಲೇ ಸರಣಿ ಆಡಲು ಪ್ರವಾಸ ಕೈಗೊಂಡಾಗ ತಂಡದ ಜತೆ ಪ್ರಮಾಣಿಸುತ್ತಾರೆ. ಆಟಗಾರರು ಅಭ್ಯಾಸ ನಡೆಸುವ ಸುದ್ದಿಗೋಷ್ಠಿ ಸೇರಿದಂತೆ ಹಲವು ಕಾರ್ಯಕ್ರಮದ ಫೋಟೊಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.


ಭಾರತ ತಂಡದ ಸೋಷಿಯಲ್ ಮೀಡಿಯಾ ಮಾತ್ರವಲ್ಲದೆ ಬಿಸಿಸಿಐನ ಆಂತರಿಕ ದೂರು ಸಮಿತಿಯ ಮುಖ್ಯಸ್ಥರಾಗಿಯೂ ಇವರು ಕಾರ್ಯನಿರ್ವಹಿಸುತ್ತಿದ್ದಾರೆ. ಆಟಗಾರರ ದುರ್ವರ್ತನೆಯ ವಿರುದ್ಧದ ದೂರುಗಳನ್ನು ಅವರು ಮೇಲ್ವಿಚಾರಣೆ ಮಾಡುತ್ತಾರೆ.


ಅರೋರಾ ಅವರು 2022ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್‌ನಿಂದ ಭಾರತೀಯ ತಂಡದ ಸಹಾಯಕ ಸಿಬ್ಬಂದಿಯ ಭಾಗವಾಗಿದ್ದಾರೆ. ಪ್ರತಿ ಸರಣಿಗೂ ಮುನ್ನ ಆಟಗಾರರು ಮತ್ತು ಮಾಧ್ಯಮಗಳೊಂದಿಗೆ ಸಂವಾದ ನಡೆಸಲು ಸೂಕ್ತ ವ್ಯವಸ್ಥೆ ಮಾಡುವಲ್ಲಿ ಅರೋರಾ ಪ್ರಮುಖ ಪಾತ್ರ ವಹಿಸುತ್ತಾರೆ. ತಂಡದ ಸದಸ್ಯರಿಗೆ ಅಗತ್ಯವಿರುವಂತೆ ಸಹಾಯ ಮಾಡುವಲ್ಲಿ ಸಹಾಯಕ ಸಿಬ್ಬಂದಿ ಪ್ರಮುಖ ಪಾತ್ರ ವಹಿಸುತ್ತಾರೆ. ಐಪಿಎಲ್​ನಲ್ಲಿಯೂ ಇವರು ಬಿಸಿಸಿಐ ಪರ ಕಾರ್ಯನಿರ್ವಹಿಸುತ್ತಾರೆ.

ಇದನ್ನೂ ಓದಿ IND vs USA: ಕೊಹ್ಲಿಯ ವಿಕೆಟ್​ ಪತನ ಕಂಡು ದಂಗಾದ ರೋಹಿತ್​ ಶರ್ಮ; ವಿಡಿಯೊ ವೈರಲ್​


ಕೆಎಲ್ ರಾಹುಲ್ ಅವರ ಪತ್ನಿ ಬಾಲಿವುಡ್ ನಟಿ ಅಥಿಯಾ ಶೆಟ್ಟಿ ಅವರೊಂದಿಗೆ ರಾಜಲ್​ ಅರೋರಾ ಉತ್ತಮ ಸಂಬಂಧವನ್ನು ಹೊಂದಿದ್ದಾರೆ. ಇವರಿಬ್ಬರೂ ಹೆಚ್ಚಾಗಿ ಸಾಮಾಜಿಕ ಜಾಲತಾಣಗಳಲ್ಲಿ ಜತೆಯಾಗಿ ಕಾಣಿಸಿಕೊಳ್ಳುತ್ತಾರೆ. ಇಶಾಂತ್ ಶರ್ಮಾ ಪತ್ನಿ ಜತೆಗೂ ಉತ್ತಮ ಸ್ನೇಹ ಸಂಬಂಧವನ್ನು ಹೊಂದಿದ್ದಾರೆ.


ಸೂಪರ್​-8ಗೆ ಲಗ್ಗೆಯಿಟ್ಟ ಭಾರತ


ಅಮೆರಿಕ(IND vs USA) ವಿರುದ್ಧ ಭಾರತ 7 ವಿಕೆಟ್​ಗಳ ಗೆಲುವು ಸಾಧಿಸುವ ‘ಎ’ ವಿಭಾಗದಿಂದ ಮೊದಲ ತಂಡವಾಗಿ ಸೂಪರ್​-8 ಪ್ರವೇಶ ಪಡೆದಿದೆ. ಇಲ್ಲಿನ ನಾಸೌ ಕೌಂಟಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಅಮೆರಿಕ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್​ಗೆ 110 ರನ್​ ಬಾರಿಸಿತು. ಜವಾಬಿತ್ತ ಭಾರತ ಈ ಸಣ್ಣ ಮೊತ್ತವನ್ನು 18.2 ಓವರ್​ ಎದುರಿಸಿ 3 ವಿಕೆಟ್​ ಕಳೆದುಕೊಂಡು 111 ರನ್​ ಬಾರಿಸಿ ಗೆಲುವಿನ ದಡ ಸೇರಿತು.

Exit mobile version