Site icon Vistara News

IPL 2023 : ಗೆಲುವಿನ ಹಳಿಗೆ ಮರಳುವುದೇ ರಾಜಸ್ಥಾನ್​ ರಾಯಲ್ಸ್​

Rajasthan Royals to get back on winning track

#image_title

ಕೋಲ್ಕೊತಾ: ಇಂಡಿಯನ್ ಪ್ರೀಮಿಯರ್ ಲೀಗ್ 2023ರ ಆವೃತ್ತಿಯ (IPL 2023) 56ನೇ ಪಂದ್ಯದಲ್ಲಿ ಕೋಲ್ಕೊತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ರಾಜಸ್ಥಾನ್ ರಾಯಲ್ಸ್ (ಆಆರ್​) ತಂಡಗಳು ಮುಖಾಮುಖಿಯಾಗಲಿವೆ. ಉಭಯ ತಂಡಗಳು 27 ಬಾರಿ ಮುಖಾಮುಖಿಯಾಗಿದ್ದು, ಕೆಕೆಆರ್ 14 ಬಾರಿ ಗೆದ್ದಿದ್ದರೆ, ಆರ್ಆರ್ 12 ಬಾರಿ ಗೆಲುವು ಸಾಧಿಸಿದೆ. ಆದರೆ, ಹಾಲಿ ಆವೃತ್ತಿಯ ರಾಜಸ್ಥಾನ್​ ರಾಯಲ್ಸ್ ತಂಡದ ಬಲಿಷ್ಠ ಇದೆ ಎಂದು ಎನಿಸುತ್ತಿದೆ. ಆದರೆ, ಹಿಂದಿನ ಎರಡು ಪಂದ್ಯಗಳಲ್ಲಿ ಸೋತಿರುವ ಕಾರಣ ಈ ಪಂದ್ಯದಲ್ಲಾದರೂ ಗೆಲುವು ಸಾಧಿಸುವ ಪ್ರಯತ್ನ ಮಾಡಲಿದೆ. ಇದೇ ವೇಳೆ ಕಳೆದೆರಡು ಪಂದ್ಯಗಳಲ್ಲಿ ಜಯ ಸಾಧಿಸಿರುವ ಕೋಲ್ಕೊತಾ ತಂಡ ಈ ಪಂದ್ಯದಲ್ಲೂ ವಿಜಯ ಸಾಧಿಸುವ ಮೂಲಕ ಹ್ಯಾಟ್ರಿಕ್​ ವಿಜಯದ ಗುರಿಯನ್ನಿಟ್ಟುಕೊಂಡಿದೆ.

ಕೆಕೆಆರ್ ಮತ್ತು ರಾಜಸ್ಥಾನ ತಂಡಗಳು ಪ್ರಸ್ತುತ ಐಪಿಎಲ್ 2023 ಪಾಯಿಂಟ್ಸ್ ಟೇಬಲ್​ನಲ್ಲಿ ಕ್ರಮವಾಗಿ ಐದನೇ ಮತ್ತು ಆರನೇ ಸ್ಥಾನದಲ್ಲಿವೆ ಮತ್ತು ಅಗ್ರ ನಾಲ್ಕು ಸ್ಥಾನಗಳಲ್ಲಿ ಸ್ಥಾನ ಪಡೆಯುವ ಗುರಿ ಹೊಂದಿವೆ. ಎರಡೂ ತಂಡಗಳು ಆಡಿರುವ 11 ಪಂದ್ಯಗಳಲ್ಲಿ 5ರಲ್ಲಿ ಗೆಲುವು ಸಾಧಿಸಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್​ಸಿಬಿ) ಮತ್ತು ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ಜತೆ 10 ಅಂಕಗಳೊಂದಿಗೆ ಸಮಬಲ ಸಾಧಿಸಿವೆ.

ಕೆಕೆಆರ್ ಈ ಋತುವಿನಲ್ಲಿ ನಿಧಾನಗತಿಯ ಆರಂಭ ಹೊಂದಿತ್ತು. ಬಳಿಕ ಗೆಲುವಿನ ಲಯ ಪಡೆದುಕೊಂಡಿತು. ಹೀಗಾಗಿ ಆ ತಂಡ ಇನ್ನೂ ಪ್ಲೇಆಫ್ ಸ್ಪರ್ಧೆಯಲ್ಲಿದೆ. ವಿಶೇಷವೆಂದರೆ, ಲೀಗ್ ಹಂತದ ಕೊನೆಯಲ್ಲಿ ಅಗ್ರ ನಾಲ್ಕರಲ್ಲಿ ಸ್ಥಾನ ಪಡೆಯಲು ಎರಡೂ ತಂಡಗಳು ತಮ್ಮ ಉಳಿದ ಪಂದ್ಯಗಳನ್ನು ಗೆಲ್ಲಲೇಬೇಕಾಗಿದೆ. ಕೋಲ್ಕತಾದಲ್ಲಿ ನಡೆಯಲಿರುವ ಹೈ ವೋಲ್ಟೇಜ್​ ಮುಖಾಮುಖಿಯಲ್ಲಿ ಎರಡೂ ತಂಡಗಳು ಗೆಲುವಿಗೆ ಸ್ಪರ್ಧಿಸಲಿದೆ.

ಕೆಕೆಆರ್ ಬ್ಯಾಟ್ಸ್​ಮನ್​ಗಳು ಹಾಗೂ ಬೌಲರ್​ಗಳು ಪ್ರಸ್ತುತ ಉತ್ತಮ ಫಾರ್ಮ್​ನಲ್ಲಿದ್ದಾರೆ. ಹೀಗಾಗಿ ಹಿಂದಿನೆರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಈ ತಂಡದ ಅಗ್ರ ಕ್ರಮಾಂಕದ ಬ್ಯಾಟರ್​ಗಳು ಹೆಚ್ಚು ಹೊತ್ತು ಕ್ರೀಸ್​ನಲ್ಲಿ ಉಳಿಯುತ್ತಿಲ್ಲ. ಆದರೆ, ಮಧ್ಯಮ ಕ್ರಮಾಂಕದ ಆಟಗಾರರು ತಂಡಕ್ಕೆ ನೆರವು ನೀಡುತ್ತಿದ್ದಾರೆ.

ಬಹುತೇಕ ಎಲ್ಲಾ ಆರ್​ಆರ್​ ಬ್ಯಾಟ್ಸಮನ್​ಗಳು ಪ್ರಸ್ತುತ ಉತ್ತಮ ಫಾರ್ಮ್​​ನಲ್ಲಿದ್ದಾರೆ. ಅಗ್ರ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್​ಗಳು ಸಂಜು ಸ್ಯಾಮ್ಸನ್ ನೇತೃತ್ವದ ತಂಡದ ಶಕ್ತಿಯಾಗಿದ್ದಾರೆ. ಐಪಿಎಲ್ ಆರೆಂಜ್ ಕ್ಯಾಪ್ ರೇಸ್​​ನಲ್ಲಿ ಯಶಸ್ವಿ ಜೈಸ್ವಾಲ್ 477 ರ್​ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಈ ತಂಡದ ಬೌಲರ್​ಗಳು ಉತ್ತಮ ಪ್ರದರ್ಶನ ನೀಡುತ್ತಿದ್ದು, ಕೆಕೆಆರ್​ ವಿರುದ್ಧ ಪುಟಿದೇಳುವ ಸಾಧ್ಯತೆಗಳಿವೆ.

ಇದನ್ನೂ ಓದಿ : Rishabh Pant: ಅಂಡರ್​-16 ಆಟಗಾರರಿಗೆ ಕ್ರಿಕೆಟ್​ ಸಲಹೆ ನೀಡಿದ ರಿಷಭ್​ ಪಂತ್​; ಫೋಟೊ ಹಂಚಿಕೊಂಡ ಬಿಸಿಸಿಐ

ಸಂಭಾವ್ಯ ಪ್ಲೇಯಿಂಗ್ ಇಲೆವೆನ್​

ಕೆಕೆಆರ್​: ರಹ್ಮನುಲ್ಲಾ ಗುರ್ಬಾಜ್, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ, ರಿಂಕು ಸಿಂಗ್, ಆ್ಯಂಡ್ರೆ ರಸೆಲ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ವೈಭವ್ ಅರೋರಾ, ಹರ್ಷಿತ್ ರಾಣಾ, ಸುಯಾಶ್ ಶರ್ಮಾ, ವರುಣ್ ಚಕ್ರವರ್ತಿ.

ರಾಜಸ್ಥಾನ್​ ರಾಯಲ್ಸ್​ : ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ), ಜೋ ರೂಟ್, ಧ್ರುವ್ ಜುರೆಲ್, ಶಿಮ್ರಾನ್ ಹೆಟ್ಮಾಯರ್, ರವಿಚಂದ್ರನ್ ಅಶ್ವಿನ್, ಕುಲದೀಪ್ ಸೇನ್, ಸಂದೀಪ್ ಶರ್ಮಾ, ಟ್ರೆಂಟ್ ಬೌಲ್ಟ್, ಯಜುವೇಂದ್ರ ಚಹಲ್​.

ಇತ್ತಂಡಗಳ ಮುಖಾಮುಖಿ

ಒಟ್ಟು ಪಂದ್ಯಗಳು- 27

ಕೋಲ್ಕತಾ ನೈಟ್ ರೈಡರ್ಸ್ ಗೆಲುವು- 14

ರಾಜಸ್ಥಾನ್ ರಾಯಲ್ಸ್ – 12

ಪಂದ್ಯದ ವಿವರ

ಪಂದ್ಯ ಸಮಯ: ಸಂಜೆ 07:30

ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್

ಲೈವ್ ಸ್ಟ್ರೀಮಿಂಗ್: ಜಿಯೋ ಸಿನೆಮಾ ಆ್ಯಪ್ ಮತ್ತು ವೆಬ್​

Exit mobile version