Site icon Vistara News

Ram Mandir: ರಾಮಲಲ್ಲಾ ಮೂರ್ತಿಯ ಫೋಟೊ ಹಂಚಿಕೊಂಡ ಪಾಕ್​ ಕ್ರಿಕೆಟಿಗ

Ram Lalla idols

ಲಾಹೋರ್​: ಕೆಲ ದಿನಗಳ ಹಿಂಷ್ಟೇ ರಾಮ ಮಂದಿರ(Ram Mandir) ಉದ್ಘಾಟನೆಯ ಬಗ್ಗೆ ತಮ್ಮ ಉತ್ಸಾಹ ವ್ಯಕ್ತಪಡಿಸಿ ಭಗವಾಧ್ಬಜ ಹಿಡಿದು ಸಂಭ್ರಮಿದ್ದ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ಸ್ಪಿನ್ನರ್ ದಾನಿಶ್ ಕನೇರಿಯಾ (Danish Kaneria) ರಾಮಲಲ್ಲಾನ ಹೊಸ ವಿಗ್ರಹದ(Ram Lalla idol) ಫೋಟೊವನ್ನು ಹಂಚಿಕೊಂಡು ನನ್ನ ರಾಮಲಲ್ಲಾ ವಿರಾಜಮಾನರಾಗಿದ್ದಾರೆ ಎಂದು ಹೇಳಿದ್ದಾರೆ.

ಪಾಕಿಸ್ತಾನದಲ್ಲಿರುವ ಹಿಂದೂ ಧರ್ಮೀಯ ಕ್ರಿಕೆಟರ್ ಆಗಿರುವ ದಾನಿಶ್ ಕನೇರಿಯಾ ತಮ್ಮ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ದೇವಾಲಯದ ಗರ್ಭಗುಡಿಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮಲಲ್ಲಾನ ವಿಗ್ರಹದ ಫೋಟೊವನ್ನು ಹಂಚಿಕೊಂಡಿದ್ದಾರೆ. ರಾಮಲಲ್ಲಾನ ವಿಗ್ರಹವನ್ನು ಗುರುವಾರ ಗರ್ಭಗುಡಿಯಲ್ಲಿ ಇರಿಸಲಾಗಿತ್ತು. ವಿಗ್ರಹದ ಫೋಟೊವನ್ನು ಹಂಚಿಕೊಂಡು ‘ನನ್ನ ರಾಮ ಈಗ ವಿರಾಜಮಾನ” ಎಂದು ಬರೆದುಕೊಂಡಿದ್ದಾರೆ

ಜನವರಿ 22ರಂದು ರಾಮಮಂದಿರದ (Ram Mandir) ಗರ್ಭಗುಡಿಯಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆ ಮೂಲಕ ದೇಶದ ಕೋಟ್ಯಂತರ ಹಿಂದುಗಳ ಕನಸು ನನಸಾಗಲಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಾಮಮಂದಿರವನ್ನು ಉದ್ಘಾಟಿಸಲಿದ್ದಾರೆ.

ಮೈಸೂರಿನ ಹೆಮ್ಮೆಯ ಶಿಲ್ಪಿ ಅರುಣ್‌ ಯೋಗಿರಾಜ್‌ (Arun Yogiraj) ಕೆತ್ತಿದ ರಾಮಲಲ್ಲಾನ ಮೂರ್ತಿಯು (Ram Lalla Idol) ಅಯೋಧ್ಯೆಯ ರಾಮಮಂದಿರದ (Ram Mandir) ಗರ್ಭಗುಡಿ ಪ್ರವೇಶಿಸಿದೆ. ಪ್ರಾಣಪ್ರತಿಷ್ಠಾಪನೆಗೂ ಮುಂಚಿನ ವಿಧಿವಿಧಾನಗಳ ಭಾಗವಾಗಿ ಗರ್ಭಗುಡಿಯಲ್ಲಿ ರಾಮಲಲ್ಲಾನ ಮೂರ್ತಿಯನ್ನು ಇರಿಸಲಾಗಿದೆ. ಈಗ ಇದೇ ಮೊದಲ ಬಾರಿಗೆ ರಾಮಲಲ್ಲಾ ಮೂರ್ತಿಯ ಚಿತ್ರವನ್ನು ಬಿಡುಗಡೆ ಮಾಡಲಾಗಿದೆ. ರಾಮಲಲ್ಲಾನ ಮೂರ್ತಿಯನ್ನು ನೋಡಿದ ಭಕ್ತರು ಪುಳಕಿತರಾಗಿದ್ದಾರೆ.

ಇದನ್ನೂ ಓದಿ Danish Kaneria : ಬೋಲೊ ಜೈ ಶ್ರೀರಾಮ್​ ಎಂದ ಪಾಕಿಸ್ತಾನದ ಕ್ರಿಕೆಟಿಗ

ಅಯೋಧ್ಯೆಯಲ್ಲಿ ಹೈ ಸೆಕ್ಯುರಿಟಿ

ರಾಮಮಂದಿರ ಲೋಕಾರ್ಪಣೆಯ ದಿನ ಉತ್ತರ ಪ್ರದೇಶ ಪೊಲೀಸರು ಹಾಗೂ ಪ್ಯಾರಾ ಮಿಲಿಟರಿ ಸಿಬ್ಬಂದಿ ಸೇರಿ ಒಟ್ಟು 11 ಸಾವಿರ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ. ಇದರ ಜತೆಗೆ ಹೆಚ್ಚಿನ ನಿಗಾ ಇರಿಸಲು, ಪ್ರತಿಯೊಂದು ಚಲನವಲನಗಳನ್ನು ಗಮನಿಸಲು ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸಿಕೊಳ್ಳಲಾಗುತ್ತದೆ. ರಾಮಮಂದಿರ ಆವರಣಕ್ಕೆ ಪದೇಪದೆ ಬರುವವರು, ಹಾಗೆ ಬರುವವರ ಚಲನವಲನ, ಯಾವುದೇ ಶಂಕಾಸ್ಪದ ವರ್ತನೆ ಕಂಡುಬಂದರೆ ಕೂಡಲೇ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವು ಸ್ವಯಂಚಾಲಿತವಾಗಿ ಅಲರ್ಟ್‌ ನೀಡುತ್ತದೆ. ಅದರಂತೆ ಭದ್ರತಾ ಸಿಬ್ಬಂದಿಯು ಕಾರ್ಯಪ್ರವೃತ್ತರಾಗುತ್ತಾರೆ.

ಕರಾಚಿ ಮೂಲದ ದಾನಿಶ್ ಕನೇರಿಯಾ 2000ರಿಂದ 2010ರವರೆಗೆ ಪಾಕಿಸ್ತಾನ ರಾಷ್ಟ್ರೀಯ ಕ್ರಿಕೆಟ್ ತಂಡದ ಮುಖ್ಯ ಸ್ಪಿನ್ ಬೌಲರ್ ಆಗಿ ಸೇವೆ ಸಲ್ಲಿಸಿದ್ದರು. ತಮ್ಮ ವೃತ್ತಿಜೀವನದುದ್ದಕ್ಕೂ, ಕನೇರಿಯಾ ಇಸ್ಲಾಂ ದೇಶದಲ್ಲಿ ತಾವೆದುರಿಸಿದ ತಾರತಮ್ಯವನ್ನು ಇತ್ತೀಚಿಗೆ ಹೇಳಿಕೊಂಡಿದ್ದರು. ಸಂದರ್ಶನವೊಂದರಲ್ಲಿ, ಇಸ್ಲಾಂಗೆ ಮತಾಂತರಗೊಳ್ಳಲು ಕೆಲವು ಸಹ ಆಟಗಾರರಿಂದ ಒತ್ತಾಯ ಬಂದಿತ್ತು ಎಂದು ದೂರಿದ್ದರು. ಕ್ರಿಕೆಟ್​ನಲ್ಲಿ ಪಾಕಿಸ್ತಾನವನ್ನು ಪ್ರತಿನಿಧಿಸಿದ ಎರಡನೇ ಹಿಂದೂ ಎಂಬ ಹೆಗ್ಗಳಿಕೆಗೆ ಕನೇರಿಯಾ ಅವರದ್ದು . ಟೆಸ್ಟ್ ಕ್ರಿಕೆಟ್​ನಲ್ಲಿ 250 ಕ್ಕೂ ಹೆಚ್ಚು ವಿಕೆಟ್​ಗಳ ಪ್ರಭಾವಶಾಲಿ ಪ್ರದರ್ಶನ ನೀಡಿದ್ದರು.

Exit mobile version