Site icon Vistara News

Ram Mandir: ಪ್ರಾಣಪ್ರತಿಷ್ಠಾಪನೆ ಅಭೂತಪೂರ್ವ ಕ್ಷಣ ಎಂದ ಸಚಿನ್​ ತೆಂಡೂಲ್ಕರ್​

Sachin Tendulkar

ಅಯೋಧ್ಯೆ: ಭಾರತದ ಕೋಟ್ಯಂತರ ನಾಗರಿಕರು ಕಾಣುತ್ತಿದ್ದ ರಾಮಮಂದಿರದ (Ram Mandir) ಕನಸು ನನಸಾಗಿದೆ. ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾನಿಗೆ (Ram Lalla) ಪ್ರಾಣಪ್ರತಿಷ್ಠಾಪನೆ ) ನೆರವೇರಿಸಲಾಗಿದೆ. ಇದರೊಂದಿಗೆ ರಾಮಮಂದಿರವು ಉದ್ಘಾಟನೆಯಾದಂತಾಗಿದ್ದು, ದೇಶಾದ್ಯಂತ ಸಂತಸ ಮನೆ ಮಾಡಿದೆ. ಈ ಪವಿತ್ರ ಸಮಾರಂಭದಲ್ಲಿ ಪಾಲ್ಗೊಂಡ ಕ್ರಿಕೆಟ್​ ದಿಗ್ಗಜ ಸಚಿನ್​ ತೆಂಡೂಲ್ಕರ್​ ಇದೊಂದು ಅಭೂತಪೂರ್ವ ಕ್ಷಣ ಮತ್ತು ಭಾವನೆ ಎಂದು ಹೇಳಿದ್ದಾರೆ.

ಪ್ರಾಣಪ್ರತಿಷ್ಠಾಪನೆ ಸಮಾರಂಭದಲ್ಲಿ ಪಾಲ್ಗೊಂಡ ಸಚಿನ್​ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಈ ಮಾತನ್ನು ಹೇಳಿದರು. ಕೋಟ್ಯಂತರ ರಾಮ ಭಕ್ತರ ಕನಸು ನನಸಾಗಿದೆ. ಅಭೂತಪೂರ್ವ ಕ್ಷಣದಲ್ಲಿ ನಾನು ಕೂಡ ಭಾಗಿಯಾದದ್ದು ನಿಜಕ್ಕೂ ಸಂತಸ ತಂದಿದೆ. ಜೈ ಶ್ರೀ ರಾಮ್​ ಎಂದು ಹೇಳಿದರು.

ಸಚಿನ್​ ಸೇರಿದಂತೆ ಮಿಥಾಲಿ ರಾಜ್​, ಸೈನಾ ನೆಹ್ವಾಲ್​, ಸುನೀಲ್​ ಗವಾಸ್ಕರ್​, ಅನಿಲ್​ ಕುಂಬ್ಳೆ, ವೆಂಕಟೇಶ್​ ಪ್ರಸಾದ್​ ಸೇರಿ ಹಲವು ಕ್ರೀಡಾಪಟುಗಳು ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಬಾಲಿವುಡ್‌ ನಟರಾಜ್‌ ಅಮಿತಾಭ್‌ ಬಚ್ಚನ್‌, ರಣಬೀರ್‌ ಕಪೂರ್‌, ಆಲಿಯಾ ಭಟ್‌, ಆಯುಷ್ಮಾನ್‌ ಖುರಾನ, ಸ್ಯಾಂಡಲ್‌ವುಡ್‌ ನಟ ರಿಷಬ್‌ ಶೆಟ್ಟಿ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಮುಕೇಶ್‌ ಅಂಬಾನಿ ಕುಟುಂಬಸ್ಥರು, ಗಾಯಕರಾದ ಸೋನು ನಿಗಮ್‌ ಸೇರಿ ಸುಮಾರು 7 ಸಾವಿರಕ್ಕೂ ಅಧಿಕ ಗಣ್ಯರು ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಗೆ ಸಾಕ್ಷಿಯಾದರು.

ವಿಶೇಷ ಹೆಲಿಕಾಪ್ಟರ್‌ನಲ್ಲಿ ರಾಮಮಂದಿರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬೆಳ್ಳಿಯ ಛತ್ರವನ್ನು ಹಿಡಿದುಕೊಂಡು ರಾಮಮಂದಿರ ಪ್ರವೇಶಿಸಿದರು. ಇದಾದ ಬಳಿಕ ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಂಡ ಅವರು, ಗರ್ಭಗುಡಿಯಲ್ಲಿ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಿದರು. ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ರಾಜ್ಯಪಾಲೆ ಆನಂದಿಬೆನ್‌ ಪಟೇಲ್‌, ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಹಾಗೂ ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲ್‌ದಾಸ್‌ ಅವರು ರಾಮಲಲ್ಲಾನಿಗೆ ಪ್ರಾಣಪ್ರತಿಷ್ಠೆ ನೆರವೇರಿಸಿದರು.

ಇದನ್ನೂ ಓದಿ Ayodhya Ram Mandir: “ಮಂದಿರವಲ್ಲೇ ಕಟ್ಟಿದೆವುʼ ಎಂದು ಹೆಮ್ಮೆಯಿಂದ ಹೇಳಿದ ಯೋಗಿ ಆದಿತ್ಯನಾಥ್

2019ರಲ್ಲಿ ಸುಪ್ರೀಂ ಕೋರ್ಟ್‌ ನೀಡಿದ ಐತಿಹಾಸಿಕ ತೀರ್ಪಿನಂತೆ ರಾಮಮಂದಿರವನ್ನು ನಿರ್ಮಿಸಿ, ಲೋಕಾರ್ಪಣೆ ಮಾಡಿದಂತಾಗಿದೆ. ಸಾವಿರಾರು ಜನರ ಹೋರಾಟ, ಪ್ರಾಣ ತ್ಯಾಗ ಹಾಗೂ ಸುದೀರ್ಘ ಕಾನೂನು ಹೋರಾಟದ ಬಳಿಕ ರಾಮಮಂದಿರದ ಕನಸು ಸಾಕಾರಗೊಂಡಿದೆ. ಈಗ ರಾಮಮಂದಿರ ನಿರ್ಮಾಣದ ಕನಸು ನನಸಾಗಿದ್ದು, ಮುಂದಿನ ದಿನಗಳಲ್ಲಿ ರಾಮರಾಜ್ಯದ ಕನಸು ಕೂಡ ನನಸಾಗಲಿದ ಎಂಬುದು ದೇಶದ ಜನರ ಆಶಯವಾಗಿದೆ.

Exit mobile version