Site icon Vistara News

Ram Mandir: ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ವಿರಾಟ್​ ಕೊಹ್ಲಿ, ಸಚಿನ್​​ಗೆ ಆಹ್ವಾನ

virat kohli sachin tendulkar

ಅಯೋಧ್ಯೆ: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರ (Ram Mandir) ನಿರ್ಮಾಣ ಕಾಮಗಾರಿಯು ಕೊನೆಯ ಹಂತಕ್ಕೆ ಬಂದು ನಿಂತಿದೆ. 2024ರ ಜನವರಿ 22ರಂದು ರಾಮಮಂದಿರ ಲೋಕಾರ್ಪಣೆ ಮಾಡಲಾಗುತ್ತದೆ. ರಾಮಲಲ್ಲಾ ಮೂರ್ತಿಗೆ ಪ್ರಾಣಪ್ರತಿಷ್ಠಾನೆ (Pran Pratishta) ನೆರವೇರಿಸಿ, ಗರ್ಭಗುಡಿಯಲ್ಲಿ ಇರಿಸಿ ಪೂಜೆ ಮಾಡಲಾಗುತ್ತದೆ. ಇದಕ್ಕಾಗಿ ಸಕಲ ಸಿದ್ಧತೆ ಕೈಗೊಳ್ಳಲಾಗುತ್ತಿದೆ. ಇದರ ಬೆನ್ನಲ್ಲೇ, ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ, ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದ ಆಹ್ವಾನ ಪತ್ರಿಕೆಗಳು ಸಿದ್ಧವಾಗಿದ್ದು, 6 ಸಾವಿರ ಗಣ್ಯರಿಗೆ ರವಾನಿಸಲಾಗಿದೆ. ಮೂಲಗಳ ಪ್ರಕಾರ ಟೀಮ್​ ಇಂಡಿಯಾದ ಮಾಜಿ ಆಟಗಾರ ಸಚಿನ್​ ತೆಂಡೂಲ್ಕರ್​(Sachin Tendulkar) ಮತ್ತು ವಿರಾಟ್​ ಕೊಹ್ಲಿಗೆ(Virat Kohli) ಆಹ್ವಾನ ನೀಡಲಾಗಿದೆ ಎಂದು ತಿಳಿದುಬಂದಿದೆ.

ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಇವರ ಜತೆ ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೊಹ್ಲಿ, ನಟರಾದ ಅಮಿತಾಬ್ ಬಚ್ಚನ್ ಮತ್ತು ಅಕ್ಷಯ್ ಕುಮಾರ್, ಕೈಗಾರಿಕೋದ್ಯಮಿಗಳಾದ ಮುಖೇಶ್ ಅಂಬಾನಿ ಮತ್ತು ರತನ್ ಟಾಟಾ ಕೂಡ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನಿಂದ ರಾಮಮಂದಿರ ಉದ್ಘಾಟನೆಯ ಆಮಂತ್ರಣ ಪತ್ರಿಕೆಗಳನ್ನು ಮುದ್ರಿಸಲಾಗಿದೆ.

ಇದನ್ನೂ ಓದಿ Virat Kohli : ವೃತ್ತಿ ಬದುಕಿನಲ್ಲಿ ಕಠಿಣ ನಿರ್ಧಾರ ತೆಗೆದುಕೊಂಡ ವಿರಾಟ್​ ಕೊಹ್ಲಿ, ಅಭಿಮಾನಿಗಳಿಗೆ ನಿರಾಸೆ

ವಿರಾಟ್​ ಕೊಹ್ಲಿ ಅವರು ಕ್ರಿಕೆಟ್​ ಲೋಕದಲ್ಲಿ ಅತ್ಯಂತ ಯಶಸ್ವಿ ಆಟಗಾರ. ಈಗಾಗಲೇ ಅವರು ಅನೇಕ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ. ಕೊಹ್ಲಿ ಅದೆಷ್ಟೋ ಜನರಿಗೆ ಸ್ಫೂರ್ತಿಯಾಗಿದ್ದಾರೆ. ತಮ್ಮ ಪತ್ನಿ ಅನುಷ್ಕಾ ಜತೆ ಸೇರಿಕೊಂಡು ಸೇವಾ (seVVA) ಎಂಬ ಹೆಸರಿನ ಎನ್​ಜಿವೊ ನಡೆಸುತ್ತಿದ್ದು ಈ ಮೂಲಕ ಹಲವರಿಗೆ ಸಹಾಯವನ್ನು ಮಾಡುತ್ತಿದ್ದಾರೆ. ತಮ್ಮ ಕ್ರಿಕೆಟ್​ ಆಟದ ಮೂಲಕ ದೇಶದ ಕೀರ್ತಿ ಪತಾಕೆಯನ್ನು ವಿಶ್ವಾದ್ಯಂತ ಎತ್ತಿ ಹಿಡಿಯುವಂತೆ ಮಾಡಿದ್ದಾರೆ.  

ಸೆಪ್ಟೆಂಬರ್​ನಲ್ಲಿ ವಾರಣಾಸಿಯಲ್ಲಿ ಶಂಕುಸ್ಥಾಪನೆಗೊಂಡ ಅಂತಾರಾಷ್ಟ್ರೀಯ(international cricket stadium in Varanasi) ಕ್ರಿಕೆಟ್ ಸ್ಟೇಡಿಯಂನ ಸಮಾರಂಭದಲ್ಲಿ ಸಚಿನ್​ ತೆಂಡೂಲ್ಕರ್​ ಅವರು ಗಣ್ಯ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದರು. ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಭಾರತೀಯ ಕ್ರಿಕೆಟ್​ ಮಂಡಳಿಯ ವತಿಯಿಂದ ಸಚಿನ್​ ತೆಂಡೂಲ್ಕರ್​ ಅವರು “ನವೋ” ಎಂದು ಬರೆದ ಟೀಮ್​ ಇಂಡಿಯಾ ಜೆರ್ಸಿಯನ್ನು ನೀಡಿ ಗೌರವಿಸಿದ್ದರು. ಶಿವನ ಮಾದರಿಯಲ್ಲಿ ಈ ಸ್ಟೇಡಿಯಂ ನಿರ್ಮಾಣವಾಗುತ್ತಿದೆ.

ಇದನ್ನೂ ಓದಿ Digvijaya Singh : ರಾಮ ಮಂದಿರಕ್ಕೆ ನಾನೂ 1.11 ಲಕ್ಷ ಕೊಟ್ಟಿದ್ದೇನೆ; ದಿಗ್ವಿಜಯ್​ ಸಿಂಗ್​ ಈಗ ಈ ರೀತಿ ಹೇಳಿದ್ಯಾಕೆ?

121 ಕೋಟಿ ರೂಪಾಯಿ ಮೌಲ್ಯದ ಭೂಪ್ರದೇಶದಲ್ಲಿ ನಿರ್ಮಾಣವಾಗಲಿರುವ ಈ ಕ್ರೀಡಾಂಗಣಕ್ಕೆ ಸುಮಾರು 330 ಕೋಟಿ ರೂಪಾಯಿ ಅಂದಾಜು ವೆಚ್ಚ ಹಾಕಲಾಗಿದೆ. ಹಿಂದೂಗಳಿಗೆ ಪರಮಪವಿತ್ರ ಕ್ಷೇತ್ರವಾಗಿರುವ ಕಾಶಿಯ ಸಮೀಪ ನಿರ್ಮಾಣವಾಗಲಿರುವ ಈ ಸ್ಟೇಡಿಯಮ್​ ಅನ್ನು ಶಿವನಿಗೆ ಸಮರ್ಪಿಸಲಾಗುವುದು ಎಂದು ಬಿಸಿಸಿಐ ತಿಳಿಸಿದೆ.

Exit mobile version