Site icon Vistara News

ICC Test Team : ಐಸಿಸಿ ವರ್ಷದ ಟೆಸ್ಟ್​ ತಂಡದಲ್ಲಿ ತಂಡದಲ್ಲಿ ಸ್ಥಾನ ಪಡೆದ ಭಾರತೀಯ ಆಟಗಾರರು ಇವರು

Ravindra Jadeja

ಬೆಂಗಳೂರು: ಅಂತಾರಾಷ್ಟ್ರೀಯ ಕ್ರಿಕೆಟ್​ ಸಮಿತಿ (ICC Test Team) ವರ್ಷದ ಟೆಸ್ಟ್​​ ತಂಡವನ್ನು ಬಿಡುಗಡೆ ಮಾಡಿದೆ. 2003ರಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರರನ್ನು ಆಯ್ಕೆ ಮಾಡಿಕೊಂಡು ವರ್ಷದ ತಂಡವನ್ನು ಪ್ರಕಟಿಸಿದೆ. ಆಸೀಸ್​ ತಂಡದ ನಾಯಕ ಪ್ಯಾಟ್ ಕಮಿನ್ಸ್ 2023ರ ಐಸಿಸಿ ಟೆಸ್ಟ್ ತಂಡಕ್ಕೂ ನಾಯಕರಾಗಿದ್ದಾರೆ. ಆದರೆ ಭಾರತದಿಂದ ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ಮಾತ್ರ ಸ್ಥಾನ ಪಡೆದಿದ್ದಾರೆ. ಆದರೆ, ವಿರಾಟ್ ಕೊಹ್ಲಿ ಈ ತಂಡದಲ್ಲಿ ಸ್ಥಾನ ಪಡೆದಿಲ್ಲ. ವಿಶೇಷ ಎಂದರೆ ಈ ಇಬ್ಬರು ಆಟಗಾರರು ಆಲ್​ರೌಂಡರ್​ಗಳು. ಇದರ ಹೊರತಾಗಿ ಟೀಮ್ ಇಂಡಿಯಾದ ಯಾವುದೇ ಬ್ಯಾಟರ್ ಈ ತಂಡದಲ್ಲಿ ಸ್ಥಾನ ಪಡೆದಿಲ್ಲ.

ಉಸ್ಮಾನ್ ಖವಾಜಾ, ಮಿಚೆಲ್ ಸ್ಟಾರ್ಕ್ ಮತ್ತು ಟ್ರಾವಿಸ್ ಹೆಡ್ ಸೇರಿದಂತೆ ಆಸ್ಟ್ರೇಲಿಯಾದ ಐವರು ಆಟಗಾರರು ತಂಡದಲ್ಲಿದ್ದಾರೆ. 2023 ರಲ್ಲಿ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ 11 ಆಟಗಾರರನ್ನು ಒಳಗೊಂಡಿರುವ ಈ ತಂಡದಲ್ಲಿ ಆರಂಭಿಕರಾಗಿ ಆಸ್ಟ್ರೇಲಿಯಾದ ಉಸ್ಮಾನ್ ಖ್ವಾಜಾ ಹಾಗೂ ಶ್ರೀಲಂಕಾದ ದಿಮುತ್ ಕರುಣರತ್ನೆ ಆಯ್ಕೆಯಾಗಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ನ್ಯೂಜಿಲ್ಯಾಂಡ್​ ತಂಡದ ನಾಯಕ ಕೇನ್ ವಿಲಿಯಮ್ಸನ್ ಸ್ಥಾನ ಪಡೆದಿದ್ದಾರೆ.

ಇಂಗ್ಲೆಂಡ್ ತಂಡದ ಟೆಸ್ಟ್​ ಸ್ಪೆಷಲಿಸ್ಟ್ ಜೋ ರೂಟ್ ಈ ತಂಡದಲ್ಲಿ 4ನೇ ಕ್ರಮಾಂಕಕ್ಕೆ ಆಯ್ಕೆಯಾಗಿದ್ದರೆ, 5ನೇ ಕ್ರಮಾಂಕದಲ್ಲಿ ಆಸ್ಟ್ರೇಲಿಯಾದ ಸ್ಪೋಟಕ ದಾಂಡಿಗ ಟ್ರಾವಿಸ್ ಹೆಡ್ ಕಾಣಿಸಿಕೊಂಡಿದ್ದಾರೆ. ಹಾಗೆಯೇ ವಿಕೆಟ್ ಕೀಪರ್ ವಿಭಾಗದಲ್ಲಿ ಆಸ್ಟ್ರೇಲಿಯಾದ ಅಲೆಕ್ಸ್ ಕ್ಯೇರಿ ಸ್ಥಾನ ಪಡೆದಿದ್ದಾರೆ. ಇನ್ನು ವೇಗದ ಬೌಲಿಂಗ್ ಆಲ್​ರೌಂಡರ್ ಆಗಿ​ ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್​ ಕಾಣಿಸಿಕೊಂಡರೆ, ಸ್ಪಿನ್ನರ್​ ಆಲ್​ರೌಂಡರ್​ಗಳಾಗಿ ಟೀಮ್ ಇಂಡಿಯಾದ ರವೀಂದ್ರ ಜಡೇಜಾ ಹಾಗೂ ರವಿಚಂದ್ರನ್ ಅಶ್ವಿನ್ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ : ICC U19 World Cup 2024: ನಾಳೆಯಿಂದ ಅಂಡರ್​-19 ವಿಶ್ವಕಪ್​ ಟೂರ್ನಿ ಆರಂಭ; ಭಾರತ ಪಂದ್ಯ ಯಾವಾಗ?

ವೇಗಿಗಳ ವಿಭಾಗದಲ್ಲಿ ಆಸ್ಟ್ರೇಲಿಯಾದ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್​ ಮೊದಲ ಸ್ಥಾನ ಪಡೆದಿದ್ದಾರೆ. ಇವರ ಜೊತೆಗೆ ಕಳೆದ ವರ್ಷ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿದ್ದ ಇಂಗ್ಲೆಂಡ್ ವೇಗಿ ಸ್ಟುವರ್ಟ್​ ಬ್ರಾಡ್ ಕೂಡ ಐಸಿಸಿ ಟೆಸ್ಟ್ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.

ಐಸಿಸಿ ವರ್ಷದ ಟೆಸ್ಟ್ ತಂಡ

Exit mobile version