Site icon Vistara News

Ravindra Jadeja: ಧೋನಿ ಮನೆಯ ಗೇಟ್ ಹೊರಗೆ ನಿಂತ ಜಡೇಜಾ; ಫೋಟೊ ವೈರಲ್​

Ravindra Jadeja Has 'Fanboy' Moment

ರಾಂಚಿ: ಭಾರತೀಯ ಕ್ರಿಕೆಟ್ ತಂಡದ ಆಲ್‌ರೌಂಡರ್ ರವೀಂದ್ರ ಜಡೇಜಾ(Ravindra Jadeja) ಅವರು ರಾಂಚಿಯಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್(Chennai Super Kings) ನಾಯಕ ಎಂಎಸ್ ಧೋನಿ(MS Dhoni) ಅವರ ಫಾರ್ಮ್‌ಹೌಸ್‌ನ ಗೇಟ್​ನ ಮುಂಭಾಗದಲ್ಲಿ(MS Dhoni’s House) ಕ್ಲಿಕ್ಕಿಸಿಕೊಂಡ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ರಾಂಚಿಯಲ್ಲಿ ನಡೆದ ಇಂಗ್ಲೆಂಡ್​ ವಿರುದ್ಧದ ನಾಲ್ಕನೇ ಟೆಸ್ಟ್​ ವೇಳೆ ರವೀಂದ್ರ ಜಡೇಜಾ ಅವರು ಧೋನಿಯ ಫಾರ್ಮ್​ ಹೌಸ್​ಗೆ ಭೇಟಿ ನೀಡಿದ್ದರು. ಈ ವೇಳೆ ಜಡ್ಡು ಗೇಟ್​ನ ಮುಂಭಾಗದಲ್ಲಿ ಕೆಲವು ಫೋಟೊಗಳನ್ನು ತೆಗೆದುಕೊಂಡು ಈ ಫೋಟೋಗಳನ್ನು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ದಿಗ್ಗಜನ ಮನೆ ಮುಂದೆ ಸಾಮಾನ್ಯ ಅಭಿಮಾನಿಯಂತೇ ಪೋಸ್ ಕೊಡಲು ಮಜಾ ಬರುತ್ತಿದೆ’ ಎಂದು ಬರೆದುಕೊಂಡಿದ್ದಾರೆ. ಈ ಫೋಟೊವನ್ನು ಜಡೇಜಾ ಮತ್ತು ಧೋನಿ ಅಭಿಮಾನಿಗಳು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶೇರ್​ ಮಾಡಿ ವೈರಲ್​ ಮಾಡಿದ್ದಾರೆ.

ಉಭಯ ಆಟಗಾರರು ಕೂಡ ಐಪಿಎಲ್​ನಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ಪರ ಆಡುತ್ತಾರೆ. ಜತೆಗೆ ಉತ್ತಮ ಸ್ನೇಹಿತರೂ ಆಗಿದ್ದಾರೆ. ಕಳೆದ ವರ್ಷ ನಡೆದ ಐಪಿಎಲ್​ ಫೈನಲ್​ ಪಂದ್ಯದಲ್ಲಿ ಜಡೇಜಾ ಅಸಾಮಾನ್ಯ ಬ್ಯಾಟಿಂಗ್​ ಪ್ರದರ್ಶನ ತೋರುವ ಮೂಲಕ ಕೊನೆಯ 2 ಎಸೆತಗಳಲ್ಲಿ 10 ರನ್​ ಬಾರಿಸಿ ತಂಡಕ್ಕೆ ಸ್ಮರಣೀಯ ಗೆಲುವು ತಂದು ಕೊಟ್ಟಿದ್ದರು. ಈ ವೇಳೆ ಧೋನಿ ಅವರು ಜಡೆಜಾ ಅವರನ್ನು ತಮ್ಮ ಹೆಗಲ ಮೇಲೆ ಬಿಗಿದಪ್ಪಿಕೊಂಡು ಕಣ್ಣೀರು ಸುರಿಸಿದ್ದರು.

ಇದನ್ನೂ ಓದಿ Ravindra Jadeja : ಈ ಸಾಧನೆ ಮಾಡಿದ ಮೊದಲ ಕ್ರಿಕೆಟಿಗ ರವೀಂದ್ರ ಜಡೇಜಾ

ಜೆರ್ಸಿ ಬಿಡುಗಡೆಗೊಳಿಸಿದ ಸಿಎಸ್​ಕೆ


17ನೇ ಆವೃತ್ತಿಯ ಐಪಿಎಲ್​ ಟೂರ್ನಿಗಾಗಿ ಚೆನ್ನೈ ಸೂಪರ್​ ಕಿಂಗ್ಸ್​ ಫ್ರಾಂಚೈಸಿಯು ಅಭಿಮಾನಿಗಳಿಗಾಗಿ ತಂಡದ ಜೆರ್ಸಿಯನ್ನು ಆನ್​ಲೈನ್​ನಲ್ಲಿ ಮಾತರಾಟಕ್ಕೆ ಬಿಟ್ಟಿದೆ. ಈಗಾಗಲೇ ಹಲವು ಅಭಿಮಾನಿಗಳು ಜೆರ್ಸಿಯನ್ನು ಖರೀದಇ ಮಾಡಿದ್ದಾರೆ. ಚೆನ್ನೈ ಸೂಪರ್​ ಕಿಂಗ್ಸ್​ ವೆಬ್​ಸೈಟ್​ನಲ್ಲಿ ಈ ಜೆರ್ಸಿಗಳು ಲಭ್ಯವಿದೆ. ಧೋನಿಯ ಜೆರ್ಸಿಗೆ 2,199 ರೂ. ಇದೆ. ಮಕ್ಕಳ ಸೈಜ್​ನ ಜೆರ್ಸಿಗೆ 1999 ರೂ. ನಿಗದಿ ಪಡಿಸಲಾಗಿದೆ.

ಕಳೆದ ವರ್ಷವೇ ಧೋನಿ ಅವರು ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿಯಾಗಲಿದೆ. ಈ ಮೂಲಕ ಧೋನಿ ಎಲ್ಲ ಮಾದರಿಯ ಕ್ರಿಕಟ್​ಗೂ ಗುಡ್​ಬೈ ಹೇಳಲಿದ್ದಾರೆ.

ಹಾಲಿ ಚಾಂಪಿಯನ್​ ಆಗಿರುವ ಚೆನ್ನೈ ತಂಡ ಈ ಬಾರಿಯ ಆವೃತ್ತಿಗಾಗಿ ಆಟಗಾರರ ಮಿನಿ ಹರಾಜಿನಲ್ಲಿ ಸ್ಟಾರ್​ ಆಟಗಾರರನ್ನು ಖರೀದಿಸಿ ತಂಡವನ್ನು ಬಲಿಷ್ಠಗೊಳಿಸಿದೆ. ಕಳೆದ ಬಾರಿಯ ಟೂರ್ನಿಯಲ್ಲಿ ಬೆರಳೆಣಿಕೆಯ ಅನುಭವಿ ಆಟಗಾರರನ್ನು ಹೊಂದಿದ್ದರೂ ಕಪ್​ ಗೆದ್ದು ಇತಿಹಾಸ ನಿರ್ಮಿಸಿತ್ತು. ಈ ಬಾರಿ ಬಲಿಷ್ಠವಾಗಿ ಗೋಚರಿಸಿದ ಚೆನ್ನೈ ತಂಡ ಮತ್ತೆ ಕಪ್​ ಗೆಲ್ಲುವುದು ಖಚಿತ ಎಂದು ಟೂರ್ನಿ ಆರಂಭಕ್ಕೂ ಮುನ್ನವೇ ಅಭಿಮಾನಿಗಳು ಭವಿಷ್ಯ ನುಡಿಯಲಾರಂಭಿಸಿದ್ದಾರೆ. ಮಾರ್ಚ್​ 22ರಿಂದ ಆರಂಭಗೊಳ್ಳಲಿರುವ ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಚೆನ್ನೈ ತಂಡ ತನ್ನ ಬದ್ಧ ಎದುರಾಳಿ ಆರ್​ಸಿಬಿ ವಿರುದ್ಧ ಪಂದ್ಯವನ್ನಾಡುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ.

Exit mobile version