ದುಬೈ: ಟೀಮ್ ಇಂಡಿಯಾದ ಸ್ಪಿನ್ ಬೌಲರ್ಗಳಾದ ಆರ್. ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಅವರು ಐಸಿಸಿ ಪ್ರಕಟಿಸಿರುವ ನೂತನ ಟೆಸ್ಟ್ ರ‍್ಯಾಂಕಿಂಗ್ ಪಟ್ಟಿಯಲ್ಲಿ ಉತ್ತಮ ಸ್ಥಾನ ಪಡೆದುಕೊಂಡಿದ್ದಾರೆ. ನಾಗ್ಪುರದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಈ ಇಬ್ಬರೂ ಬೌಲರ್ಗಳು ಬೌಲಿಂಗ್ನಲ್ಲಿ ಕರಾಮತ್ತು ತೋರಿಸಿದ್ದರು. ಹೀಗಾಗಿ ರ‍್ಯಾಂಕಿಂಗ್ ಪಟ್ಟಿಯಲ್ಲಿ ಬಡ್ತಿ ದೊರಕಿದೆ.
ಆರ್. ಅಶ್ವಿನ್ ಅವರು ರ‍್ಯಾಂಕ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಅಸ್ಟ್ರೇಲಿಯಾ ತಂಡದ ವೇಗದ ಬೌಲರ್ ಹಾಗೂ ನಾಯಕ ಪ್ಯಾಟ್ ಕಮಿನ್ಸ್ ಅವರಿಗಿಂತ ಹಿಂದಿದ್ದಾರೆ. ಕಮಿನ್ಸ್ ಒಟ್ಟು 867 ರೇಟಿಂಗ್ ಅಂಕಗಳನ್ನು ಹೊಂದಿದ್ದರೆ, ರವಿಚಂದ್ರನ್ ಅಶ್ವಿನ್ 846 ರೇಟಿಂಗ್ ಅಂಕಗಳನ್ನು ಸಂಪಾದಿಸಿಕೊಂಡಿದ್ದಾರೆ.
ರವೀಂದ್ರ ಜಡೇಜಾ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಐದು ವಿಕೆಟ್ ಕಬಳಿಸಿ ಎದುರಾಳಿ ತಂಡ 177 ರನ್ಗಳಿಗೆ ಆಲ್ಔಟ್ ಆಗುವಂತೆ ನೋಡಿಕೊಂಡಿದ್ದರು. ಎರಡನೇ ಇನಿಂಗ್ಸ್ನಲ್ಲಿ ಎರಡು ವಿಕೆಟ್ ತಮ್ಮದಾಗಿಸಿಕೊಂಡಿದ್ದರು. ಈ ಸಾಧನೆ ಮೂಲಕ ಅವರು 16ನೇ ಸ್ಥಾನ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ : Ravindra Jadeja : ಸ್ಪಿನ್ ಪಿಚ್ ವಿವಾದ ಮಾಡಿದವರಿಗೆ ತಿರುಗೇಟು ಕೊಟ್ಟ ಸ್ಪಿನ್ನರ್ ರವೀಂದ್ರ ಜಡೇಜಾ
ರವೀಂದ್ರ ಜಡೇಜಾ ಆಲ್ರೌಂಡರ್ಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದ್ದರೆ, ರವಿಚಂದ್ರನ್ ಅಶ್ವಿನ್ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ.