Site icon Vistara News

Ravindra Jadeja | ಫಿಟ್​ನೆಸ್​ಗಾಗಿ ರಣಜಿ ಆಡಲು ಮುಂದಾದ ಆಲ್​ರೌಂಡರ್​ ರವೀಂದ್ರ ಜಡೇಜಾ!

Ravindra Jadeja

ಮುಂಬಯಿ: ಟೀಮ್​ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ(Ravindra Jadeja) ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್- ಗವಾಸ್ಕರ್ ಟೆಸ್ಟ್ ಸರಣಿಗೂ ಮುನ್ನ ರಣಜಿ ಟ್ರೋಫಿಯಲ್ಲಿ ಆಡಲು ಸಿದ್ಧರಾಗಿದ್ದಾರೆ ಎಂದು ತಿಳಿದುಬಂದಿದೆ.

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಮಂಗಳವಾರ, ಜನವರಿ 24ರಂದು ಪ್ರಾರಂಭವಾಗುವ ತಮಿಳುನಾಡು ವಿರುದ್ಧದ ಪ್ರಥಮ ದರ್ಜೆ ಪಂದ್ಯಾವಳಿಯಲ್ಲಿ ಸೌರಾಷ್ಟ್ರ ತಂಡದ ಕೊನೆಯ ಲೀಗ್ ಪಂದ್ಯದಲ್ಲಿ ರವೀಂದ್ರ ಜಡೇಜಾ ಆಡಲಿದ್ದಾರೆ ಎಂದು ವರದಿಯಾಗಿದೆ.

ರವೀಂದ್ರ ಜಡೇಜಾ ಅವರು ಕಳೆದ ಸೆಪ್ಟೆಂಬರ್‌ನಲ್ಲಿ ಏಷ್ಯಾಕಪ್ ವೇಳೆ ಮೊಣಕಾಲಿನ ಗಾಯದಿಂದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ಬಳಿಕ ಅವರು ಕ್ರಿಕೆಟ್​ನಿಂದ ದೂರ ಉಳಿದಿದ್ದರು. ಇದೀಗ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್​ ಸರಣಿಗೆ ಆಯ್ಕೆ ಆಗಿದ್ದಾರೆ. ಆದರೆ ಆಡುವ ಬಳಗದಲ್ಲಿ ಅವಕಾಶ ಪಡೆಯಲು ಫಿಟ್‌ನೆಸ್ ಸಾಭೀತು ಪಡಿಸಬೇಕು ಎಂದು ಬಿಸಿಸಿಐ ಸೂಚಿಸಿದೆ. ಇದೇ ಕಾರಣಕ್ಕೆ ಜಡೇಜಾ ರಣಜಿ ಆಡಲು ಮುಂದಾಗಿದ್ದಾರೆ.

ಇದನ್ನೂ ಓದಿ |IND VS AUS | ಭಾರತ ವಿರುದ್ಧದ ಟೆಸ್ಟ್​ ಸರಣಿ ಆಸ್ಟ್ರೇಲಿಯಾಕ್ಕೆ ಸವಾಲಿನಿಂದ ಕೂಡಿರಲಿದೆ; ಜಸ್ಟಿನ್ ಲ್ಯಾಂಗರ್!

Exit mobile version