ಬೆಂಗಳೂರು: ಐಪಿಎಲ್ನ(IPL 20124) ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಚೆನ್ನೈ ಸೂಪರ್(Chennai Super Kings) ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು(Royal Challengers Bengaluru) ತಂಡಗಳು ಇಂದು ನಡೆಯುವ ಪ್ಲೇ ಆಫ್ ಪ್ರವೇಶದ ಮಹತ್ವದ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ಪಂದ್ಯಕ್ಕೂ ಮುನ್ನವೇ ಆರ್ಸಿಬಿ(RCB) ಅಭಿಮಾನಿಗಳು(Craze RCB FANS) ಚಿನ್ನಸ್ವಾಮಿ ಮೈದಾನದ ಬಳಿ ಬೃಹತ್ ಬೈಕ್ ರ‍್ಯಾಲಿ(RCB FANS BIKE RALLY) ನಡೆಸಿ ತಮ್ಮ ತಂಡಕ್ಕೆ ಬೆಂಬಲ ಸೂಚಿಸಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪಂದ್ಯಕ್ಕೆ ಮಳೆಯ ಭೀತಿಯೂ ಇದ್ದು ಸಸ್ಯ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಕಂಡುಬಂದಿದೆ. ಅಲ್ಲದೆ ರಾತ್ರಿ ಮಳೆಯಾಗುವುದು ಬಹುತೇಕ ಖಚಿತ ಎನ್ನುವಂತಿದೆ. ಒಂದೆಡೆ ಆರ್ಸಿಬಿ ಅಭಿಮಾನಿಗಳು ಮಳೆ ಬಾರದಂತೆ ಪ್ರಾರ್ಥಿಸುತ್ತಿದ್ದರೆ, ಮತ್ತೊಂದು ಕಡೆ ಚೆನ್ನೈ ಅಭಿಮಾನಿಗಳಿ ಮಳೆ ಬಂದು ಪಂದ್ಯ ರದ್ದಾಗಲಿ ಎಂದು ಪ್ರಾರ್ಥಿಸುತ್ತಿದ್ದರೆ. ಪಂದ್ಯ ರದ್ದಾದರೆ ಚೆನ್ನೈ 4ನೇ ತಂಡವಾಗಿ ಅಧಿಕೃತ ಪ್ಲೇ ಆಫ್ಗೆ ಎಂಟ್ರಿ ಕೊಡಲಿದೆ. ಒಟ್ಟಾರೆ ಮಳೆ ಯಾರಿಗೆ ಅನುವು ಮಾಡಿಕೊಡಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.
ಸಬ್ ಏರ್ ಸಿಸ್ಟಮ್
ಎಷ್ಟೇ ಮಳೆಯಾದರೂ ಕೂಡ ಮಳೆ ನಿಂತ ಕೆಲವೇ ಕ್ಷಣದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ(M Chinnaswamy Stadium) ಪಂದ್ಯವನ್ನು ಆರಂಭಗೊಳ್ಳುವಂತೆ ಮಾಡುವ ವಿಶೇಷ ಸಬ್ ಏರ್ ಸಿಸ್ಟಮ್(SubAir facility) ತಂತ್ರಜ್ಞಾನ(SubAir facility Chinnaswamy)ವಿದೆ. ಸಬ್ ಏರ್ ಸಿಸ್ಟಮ್ ಅಳವಡಿಸಿಕೊಂಡ ವಿಶ್ವದ ಮೊದಲ ಕ್ರಿಕೆಟ್ ಕ್ರೀಡಾಂಗಣ ಎಂಬ ಖ್ಯಾತಿ ಚಿನ್ನಸ್ವಾಮಿ ಕ್ರೀಡಾಂಗಣದ್ದಾಗಿದೆ. ಉದಾಹರಣೆಗೆ ಒಂದು ಗಂಟೆ ಭಾರಿ ಮಳೆ ಸುರಿದರೆ 7 ನಿಮಿಷಗಳಲ್ಲಿ ಕ್ರೀಡಾಂಗಣ ಪಂದ್ಯಕ್ಕೆ ಸಿದ್ಧವಾಗಿರುತ್ತದೆ. ನೀರನ್ನು ಹೀರಿಕೊಂಡ ನಂತರ ಸಬ್ ಏರ್ ಯಂತ್ರದ ಮೂಲಕ ಅದೇ ಕೊಳವೆಗಳಲ್ಲಿ ಔಟ್‌ಫೀಲ್ಡ್‌ಗೆ ಬಿಸಿ ಗಾಳಿಯನ್ನು ಹಾಯಿಸಿ ಮೈದಾನವನ್ನು ಒಣಗಿಸುವ ವ್ಯವಸ್ಥೆಯಿದೆ. ಒಂದೊಮ್ಮೆ ಮಳೆಯ ಆರ್ಭಟ ನಿಲ್ಲದೇ ಹೋದಲ್ಲಿ, ಆಗ ಎಷ್ಟೇ ದೊಡ್ಡ ತಂತ್ರಜ್ಞಾನವಿದ್ದರೂ ಇದು ಉಪಯೋಗಕ್ಕೆ ಬಾರದು. ಹೀಗಾಗಿ ಪಂದ್ಯದ ಅಳಿವು ಉಳಿವಿನ ಭವಿಷ್ಯ ಮಳೆಯ ಕೈಯಲ್ಲಿದೆ.
ಇದನ್ನೂ ಓದಿ RCB vs CSK: ವಾಹನ ಸವಾರರೇ ಗಮನಿಸಿ, ಇಂದು ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ
ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಚೆನ್ನೈ ದಾಖಲೆ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಆರ್ಸಿಬಿ ಇದುವರೆಗೆ 10 ಪಂದ್ಯಗಳನ್ನು ಆಡಿವೆ. ಈ ಪೈಕಿ ಚೆನ್ನೈ ಐದರಲ್ಲಿ ಗೆದ್ದರೆ, ಆರ್ಸಿಬಿ ನಾಲ್ಕರಲ್ಲಿ ಗೆದ್ದಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಈ ಲೆಕ್ಕಾಚಾರದಲ್ಲಿ ಚೆನ್ನೈ ಬಲಿಷ್ಠ ಎನ್ನಲಡ್ಡಿಯಿಲ್ಲ. ಇಲ್ಲಿ ನಡೆದ ಕಳೆದ 10 ಪಂದ್ಯಗಳ ಫಲಿತಾಂಶ ನೋಡುವುದಾದರೆ 6 ಬಾರಿ ಮೊದಲು ಬ್ಯಾಟಿಂಗ್ ನಡೆಸಿದ ತಂಡ ಗೆಲುವು ಸಾಧಿಸಿದೆ. ಈ ಆವೃತ್ತಿಯ 6 ಪಂದ್ಯಗಳ ಪೈಕಿ ಸಮಾನಾಗಿ 3 ಬಾರಿ ಚೇಸಿಂಗ್ ಮತ್ತು ಮೊದಲು ಬ್ಯಾಟಿಂಗ್ ನಡೆಸಿದ ತಂಡಗಳು ಜಯಿಸಿದೆ.
ಇತ್ತಂಡಗಳ ಒಟ್ಟು ಐಪಿಎಲ್ ಮುಖಾಮುಖಿ
ಆರ್ಸಿಬಿ ಮತ್ತು ಚೆನ್ನೈ ತಂಡ ಇದುವರೆಗೆ ಐಪಿಎಲ್ನಲ್ಲಿ ಒಟ್ಟು 32 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಆರ್ಸಿಬಿ 10 ಪಂದ್ಯ ಗೆದ್ದರೆ, ಚೆನ್ನೈ 21 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಕಳೆದ ಮೂರು ಪಂದ್ಯಗಳ ಮುಖಾಮುಖಿಯಲ್ಲೂ ಚೆನ್ನೈ ತಂಡವೇ ಗೆದ್ದಿದೆ. ಹೀಗಾಗಿ ನಾಳಿನ ಪಂದ್ಯದಲ್ಲಿಯೂ ಚೆನ್ನೈ ಗೆಲುವಿನ ಫೇವರಿಟ್ ಆಗಿದೆ. ಈ ಬಾರಿಯ ಉದ್ಘಾಟನ ಪಂದ್ಯದಲ್ಲಿಯೂ ಚೆನ್ನೈ ಆರ್ಸಿಬಿಗೆ ಸೋಲುಣಿಸಿತ್ತು.