Site icon Vistara News

RCB vs CSK: ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡ ಚೆನ್ನೈ ಸೂಪರ್​ ಕಿಂಗ್ಸ್​

RCB vs CSK

RCB vs CSK

ಬೆಂಗಳೂರು: ಪ್ಲೇ ಆಫ್​ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್​​ ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡಿದೆ. ಆರ್​ಸಿಬಿ ಬ್ಯಾಟಿಂಗ್​ ಆಹ್ವಾನ ಪಡೆದಿದೆ. ಮಳೆ ಭೀತಿಯ ನಡುವೆಯೂ ಈ ಪಂದ್ಯವನ್ನು ರಣರೋಚಕ ಪೈಪೋಟಿ ಎಂದೇ ನಿರೀಕ್ಷೆ ಮಾಡಲಾಗಿದೆ. ಉಭಯ ತಂಡಗಳ ಅಭಿಮಾನಿಗಳು ಸ್ಟೇಡಿಯಂನಲ್ಲಿ ಕಿಕ್ಕಿರಿದು ಸೇರಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂ ಹೌಸ್​ ಫುಲ್​ ಆಗಿದೆ.

ಪಿಚ್​ ರಿಪೋರ್ಟ್​


ಬೆಂಗಳೂರಿನ(Bengaluru) ಎಂ ಚಿನ್ನಸ್ವಾಮಿ(M.Chinnaswamy Stadium) ಕ್ರೀಡಾಂಗಣ ಯಾವಾಗಲೂ ಬ್ಯಾಟಿಂಗ್ ಸ್ನೇಹಿ ಸ್ಥಳವಾಗಿದೆ. ಇದುವರೆಗೆ ಇಲ್ಲಿ ನಡೆದ ಬಹುತೇಕ ಪಂದ್ಯಗಳು ಕೂಡ ಚೇಸಿಂಗ್​ ನಡೆಸಿದ ತಂಡವೇ ಹೆಚ್ಚು ಬಾರಿ ಗೆದ್ದಿದೆ. 50ಕ್ಕೂ ಅಧಿಕ ಬಾರಿ ಚೇಸಿಂಗ್​ ನಡೆಸಿದ ತಂಡವೇ ಜಯಶಾಲಿಯಾಗಿದೆ. 40 ಬಾರಿ ಮೊದಲು ಬ್ಯಾಟಿಂಗ್​ ನಡೆಸಿದ ತಂಡ ಗೆದ್ದಿದೆ.

ವಿರಾಟ್​ ಕೊಹ್ಲಿ ಈ ಮೈದಾನದಲ್ಲಿ ಇದುವರೆಗೆ 2993 ರನ್​ ಬಾರಿಸಿದ್ದಾರೆ. ಜತೆಗೆ ಈ ಬಾರಿಯ ಐಪಿಎಲ್​ನಲ್ಲಿಯೂ ಕೊಹ್ಲಿ ಉತ್ತಮವಾಗಿ ರನ್​ ಗಳಿಸಿ ಅಗ್ರಸ್ಥಾನದಲ್ಲಿದ್ದಾರೆ. ಈ ಬಾರಿ ಕೊಹ್ಲಿ 13 ಪಂದ್ಯ ಆಡಿ 661 ರನ್​ ಗಳಿಸಿದ್ದಾರೆ. ಹೀಗಾಗಿ ಈ ಪಂದ್ಯದಲ್ಲಿಯೂ ಇವರ ಬ್ಯಾಟಿಂಗ್​ ಮೇಲೆ ಅಭಿಮಾನಿಗಳು ಹೆಚ್ಚಿನ ನಿರೀಕ್ಷೆ ಇರಿಸಿದ್ದಾರೆ.

ಆರ್​ಸಿಬಿಗೆ ಬೇಕು ಲೆಕ್ಕಾಚಾರದ ಗೆಲುವು


ನೆಟ್‌ ರನ್‌ರೇಟ್‌ನಲ್ಲಿ ಚೆನ್ನೈ ಮುಂದಿದೆ (0.528). ಆರ್‌ಸಿಬಿ 0.387 ರನ್‌ರೇಟ್‌ ಹೊಂದಿದೆ. ಹೀಗಾಗಿ ಆರ್​ಸಿಬಿ ಪ್ಲೇ ಆಫ್​ ಪ್ರವೇಶಿಸಬೇಕಾದರೆ, ಆರ್‌ಸಿಬಿ ಕನಿಷ್ಠ 18 ರನ್‌ ಅಂತರದಿಂದ ಗೆಲ್ಲಬೇಕು ಅಥವಾ 11 ಎಸೆತ ಬಾಕಿ ಇರುವಾಗಲೇ ಗುರಿ ಮುಟ್ಟಬೇಕು ಆಗ ಮಾತ್ರ ಆರ್​ಸಿಬಿ ಪ್ಲೇ ಆಫ್​ ಪ್ರವೇಶಿಸಲಿದೆ. ಈ ಎರಡು ಲೆಕ್ಕಾಚಾರದ ಗೆಲುವು ಒಲಿಯದೇ ಹೋದರೆ ಆರ್​ಸಿಬಿ ನಿರಾಸೆಗೆ ಒಳಗಾಗಲಿದೆ. 5ನೇ ಸ್ಥಾನಿಯಾಗಿ ಟೂರ್ನಿಯಿಂದ ನಿರ್ಗಮಿಸಲಿದೆ. ಚೆನ್ನೈ ಮುನ್ನಡೆಗೆ ಸಾಮಾನ್ಯ ಗೆಲುವು ಸಾಕು. 16 ಅಂಕ ಗಳಿಸಿ 4ನೇ ತಂಡವಾಗಿ ಪ್ಲೇ ಆಫ್​ಗೆ ಲಗ್ಗೆ ಇಡಲಿದೆ.

ಇದನ್ನೂ ಓದಿ RCB vs CSK: ಗೆದ್ದರೂ ಆರ್​ಸಿಬಿಗೆ ಪ್ಲೇ ಆಫ್​ ಖಚಿತವಲ್ಲ; ಹೀಗಿದೆ ರನ್​ರೇಟ್​ ಲೆಕ್ಕಾಚಾರ!

ಚಿನ್ನಸ್ವಾಮಿಯಲ್ಲಿ ಆರ್​ಸಿಬಿ-ಚೆನ್ನೈ ದಾಖಲೆ


ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ಮತ್ತು ಆರ್​ಸಿಬಿ ಇದುವರೆಗೆ 10 ಪಂದ್ಯಗಳನ್ನು ಆಡಿವೆ. ಈ ಪೈಕಿ ಚೆನ್ನೈ ಐದರಲ್ಲಿ ಗೆದ್ದರೆ, ಆರ್​ಸಿಬಿ ನಾಲ್ಕರಲ್ಲಿ ಗೆದ್ದಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಈ ಲೆಕ್ಕಾಚಾರದಲ್ಲಿ ಚೆನ್ನೈ ಬಲಿಷ್ಠ ಎನ್ನಲಡ್ಡಿಯಿಲ್ಲ. ಇಲ್ಲಿ ನಡೆದ ಕಳೆದ 10 ಪಂದ್ಯಗಳ ಫಲಿತಾಂಶ ನೋಡುವುದಾದರೆ 6 ಬಾರಿ ಮೊದಲು ಬ್ಯಾಟಿಂಗ್​ ನಡೆಸಿದ ತಂಡ ಗೆಲುವು ಸಾಧಿಸಿದೆ. ಈ ಆವೃತ್ತಿಯ 6 ಪಂದ್ಯಗಳ ಪೈಕಿ ಸಮಾನಾಗಿ 3 ಬಾರಿ ಚೇಸಿಂಗ್​ ಮತ್ತು ಮೊದಲು ಬ್ಯಾಟಿಂಗ್​ ನಡೆಸಿದ ತಂಡಗಳು ಜಯಿಸಿದೆ.

ಐಪಿಎಲ್​ ಮುಖಾಮುಖಿ


ಆರ್​ಸಿಬಿ ಮತ್ತು ಚೆನ್ನೈ ತಂಡ ಇದುವರೆಗೆ ಐಪಿಎಲ್​ನಲ್ಲಿ ಒಟ್ಟು 32 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಆರ್​ಸಿಬಿ 10 ಪಂದ್ಯ ಗೆದ್ದರೆ, ಚೆನ್ನೈ 21 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಕಳೆದ ಮೂರು ಪಂದ್ಯಗಳ ಮುಖಾಮುಖಿಯಲ್ಲೂ ಚೆನ್ನೈ ತಂಡವೇ ಗೆದ್ದಿದೆ. ಹೀಗಾಗಿ ನಾಳಿನ ಪಂದ್ಯದಲ್ಲಿಯೂ ಚೆನ್ನೈ ಗೆಲುವಿನ ಫೇವರಿಟ್​ ಆಗಿದೆ. ಈ ಬಾರಿಯ ಉದ್ಘಾಟನ ಪಂದ್ಯದಲ್ಲಿಯೂ ಚೆನ್ನೈ ಆರ್​ಸಿಬಿಗೆ ಸೋಲುಣಿಸಿತ್ತು.

ವಿಶೇಷವೆಂದರೆ ಆರ್​ಸಿಬಿಗೆ ಮೇ 18 ಎನ್ನುವುದು ಬಹಳ ಅದೃಷ್ಟದ ದಿನವಾಗಿದೆ. ಹೌದು, ಇದುವರೆಗಿನ ಐಪಿಎಲ್​ ಇತಿಹಾಸದಲ್ಲಿ ಆರ್​ಸಿಬಿ ಈ ದಿನದಂದು ಆಡಿದ ಎಲ್ಲ ಪಂದ್ಯಗಳನ್ನು ಗೆದ್ದಿದೆ. ಸ್ವಾರಸ್ಯವೆಂದರೆ ಚೆನ್ನೈ ವಿರುದ್ಧವೇ 2 ಗೆಲುವು ಸಾಧಿಸಿದೆ. ಹೀಗಾಗಿ ಇಂದು ಆರ್​ಸಿಬಿ ಗೆಲುವು ಸಾಧಿಸಬಹುದು ಎನ್ನುವುದು ಅಭಿಮಾನಿಗಳ ಬಲವಾದ ನಂಬಿಕೆ.

Exit mobile version