Site icon Vistara News

RCB vs CSK: 11 ವರ್ಷಗಳ ಹಿಂದಿನ ಇತಿಹಾಸ ಮರುಕಳಿಸಿದರೆ ಆರ್​ಸಿಬಿಗೆ ಇಂದು ಗೆಲುವು ಖಚಿತ

RCB vs CSK

RCB vs CSK: If history repeats itself 11 years ago, RCB is sure to win today

ಬೆಂಗಳೂರು: ಸಾಂಪ್ರದಾಯಿಕ ಬದ್ಧವೈರಿಗಳಾದ ಆರ್‌ಸಿಬಿ(RCB vs CSK) ಹಾಗೂ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್‌ ಕಿಂಗ್ಸ್‌ ನಡುವಿನ ನಿರ್ಣಾಯಕ ಹಣಾಹಣಿ ಇನ್ನೇಮು ಕೆಲವೇ ಗಂಟೆಗಳಲ್ಲಿ ಆರಂಭಗೊಳ್ಳಲಿದೆ. ಇತ್ತಂಡಗಳ ನಡುವಣ ಈ ಕಾದಾಟಕ್ಕೆ ನಗರದ ಚಿನ್ನಸ್ವಾಮಿ(Chinnaswamy) ಕ್ರೀಡಾಂಗಣ ಸಜ್ಜಾಗಿ ನಿಂತಿದೆ. ಆದರೆ ಮತ್ತೊಂದೆಡೆ ಭಾರೀ ಮೋಡ ಕವಿದ ವಾತಾವರಣ ಕಂಡು ಬಂದಿದ್ದು ಮಳೆ ಭೀತಿಯೂ(RCB vs CSK rain prediction) ಎದುರಾಗಿದೆ. 11 ವರ್ಷಗಳ ಹಿಂದೆಯೂ ಉಭಯ ತಂಡಗಳ ನಡುವಣ ಪಂದ್ಯಕ್ಕೂ ಮಳೆ ಎದುರಾಗಿತ್ತು. ಕಾಕತಾಳೀಯವೆಂದರೆ ಆ ಪಂದ್ಯ ಕೂಡ ಮೇ 18, ಶನಿವಾರ ನಡೆದಿತ್ತು.

ಹೌದು, ಆರ್​ಸಿಬಿ ಮತ್ತು ಚೆನ್ನೈ 2013ರಲ್ಲಿ(2013 IPL) ತನ್ನ ಕೊನೆಯ ಲೀಗ್​ ಪಂದ್ಯವನ್ನು ಮೇ 18ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ ಆಡಿತ್ತು. ಈ ಪಂದ್ಯ ಕೂಡ ಶನಿವಾರವೇ ಆಗಿತ್ತು. ಅಲ್ಲದೆ ಪಂದ್ಯಕ್ಕೆ ಮಳೆಯ ಭೀತಿಯೂ ಎದುರಾಗಿತ್ತು. ಹವಾಮಾನ ಇಲಾಖೆ ನೀಡಿದ ಎಚ್ಚರಿಕೆಯಂತೆ ಪಂದ್ಯಕ್ಕೆ ಮಳೆ ಕೂಡ ಅಡ್ಡಿಪಡಿಸಿತ್ತು. ಬಳಿಕ ಡಕ್​ವರ್ತ್ ಲೂಯಿಸ್​ ನಿಯಮದ ಅನುಸಾರ ಈ ಪಂದ್ಯವನ್ನು 8 ಓವರ್​ಗೆ ಸೀಮಿತಗೊಳಿಸಿ ಆಡಿಸಲಾಗಿತ್ತು.

ಆ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಆರ್​ಸಿಬಿ 8 ಓವರ್​ಗೆ ಕೇವಲ 2 ವಿಕೆಟ್​ ಕಳೆದುಕೊಂಡು 106 ರನ್​ ಪೇರಿಸಿತ್ತು. ಕಿಂಗ್​ ವಿರಾಟ್​ ಕೊಹ್ಲಿ ಅಜೇಯ 56 ರನ್​ ಬಾರಿಸಿದರೆ, ಕ್ರಿಸ್​ ಗೇಲ್​ 28 ರನ್​ ಬಾರಿಸಿದ್ದರು. ಗುರಿ ಬೆನ್ನಟ್ಟಿದ ಚೆನ್ನೈ ಸೂಪರ್​ ಕಿಂಗ್ಸ್​ 6 ವಿಕೆಟ್​ ಕಳೆದುಕೊಂಡು 82 ರನ್​ಗಳಿಸಲಷ್ಟೇ ಶಕ್ತವಾಗಿ 24 ರನ್​ಗಳ ಸೋಲು ಕಂಡಿತ್ತು.

ಇದೀಗ ಇಂದು ನಡೆಯುವ ಪಂದ್ಯವೂ ಕೂಡ ಮೇ 18 ಶನಿವಾರವಾಗಿದೆ. ಜತೆಗೆ ಪಂದ್ಯಕ್ಕೆ ಮಳೆಯ ಭೀತಿ ಕೂಡ ಇದೆ. ಅಂಕಿ ಸಂಖ್ಯೆಗಳ ಚಮತ್ಕಾರ ತಾಳೆಯಾಗುತ್ತಿದ್ದು ಈ ಆಧಾರದಲ್ಲಿ ಆರ್​ಸಿಬಿ ಇಂದು ಗೆಲುವು ಸಾಧಿಸಲಿದೆ ಎಂದು ಅಭಿಮಾನಿಗಳು ಪಂದ್ಯಕ್ಕೂ ಮುನ್ನವೇ ಭವಿಷ್ಯ ನುಡಿಯಲಾರಂಭಿಸಿದ್ದಾರೆ.

ಇದನ್ನೂ ಓದಿ IPL 2024 : ಬೆಂಗಳೂರಿನ ಬೀದಿ ಬೀದಿಗಳಲ್ಲಿ ‘ಧೋನಿ, ಧೋನಿ’ ಘೋಷಣೆ, ಇಲ್ಲಿದೆ ವಿಡಿಯೊ

ಎಷ್ಟೇ ಮಳೆಯಾದರೂ ಕೂಡ ಮಳೆ ನಿಂತ ಕೆಲವೇ ಕ್ಷಣದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ(M Chinnaswamy Stadium) ಪಂದ್ಯವನ್ನು ಆರಂಭಗೊಳ್ಳುವಂತೆ ಮಾಡುವ ವಿಶೇಷ ಸಬ್‌ ಏರ್‌ ಸಿಸ್ಟಮ್‌(SubAir facility) ತಂತ್ರಜ್ಞಾನ(SubAir facility Chinnaswamy)ವಿದೆ. ಸಬ್‌ ಏರ್‌ ಸಿಸ್ಟಮ್‌ ಅಳವಡಿಸಿಕೊಂಡ ವಿಶ್ವದ ಮೊದಲ ಕ್ರಿಕೆಟ್‌ ಕ್ರೀಡಾಂಗಣ ಎಂಬ ಖ್ಯಾತಿ ಚಿನ್ನಸ್ವಾಮಿ ಕ್ರೀಡಾಂಗಣದ್ದಾಗಿದೆ. ಉದಾಹರಣೆಗೆ ಒಂದು ಗಂಟೆ ಭಾರಿ ಮಳೆ ಸುರಿದರೆ 7 ನಿಮಿಷಗಳಲ್ಲಿ ಕ್ರೀಡಾಂಗಣ ಪಂದ್ಯಕ್ಕೆ ಸಿದ್ಧವಾಗಿರುತ್ತದೆ. ನೀರನ್ನು ಹೀರಿಕೊಂಡ ನಂತರ ಸಬ್‌ ಏರ್‌ ಯಂತ್ರದ ಮೂಲಕ ಅದೇ ಕೊಳವೆಗಳಲ್ಲಿ ಔಟ್‌ಫೀಲ್ಡ್‌ಗೆ ಬಿಸಿ ಗಾಳಿಯನ್ನು ಹಾಯಿಸಿ ಮೈದಾನವನ್ನು ಒಣಗಿಸುವ ವ್ಯವಸ್ಥೆಯಿದೆ. ಒಂದೊಮ್ಮೆ ಮಳೆಯ ಆರ್ಭಟ ನಿಲ್ಲದೇ ಹೋದಲ್ಲಿ, ಆಗ ಎಷ್ಟೇ ದೊಡ್ಡ ತಂತ್ರಜ್ಞಾನವಿದ್ದರೂ ಇದು ಉಪಯೋಗಕ್ಕೆ ಬಾರದು. ಹೀಗಾಗಿ ಪಂದ್ಯದ ಅಳಿವು ಉಳಿವಿನ ಭವಿಷ್ಯ ಮಳೆಯ ಕೈಯಲ್ಲಿದೆ.

ಒಂದೊಮ್ಮೆ ಆರ್​ಸಿಬಿ ತಂಡ ಚೆನ್ನೈ ವಿರುದ್ಧ ಗೆದ್ದರೂ ಕೂಡ ಪ್ಲೇ ಆಫ್​ ಟಿಕೆಟ್​ ಖಚಿತವಾಗುವುದಿಲ್ಲ. ರನ್‌ರೇಟ್‌ ಲೆಕ್ಕಾಚಾರದಲ್ಲಿ ಚೆನ್ನೈಯನ್ನು ಆರ್‌ಸಿಬಿ ಕನಿಷ್ಠ 18 ರನ್ನುಗಳಿಂದ ಮಣಿಸಬೇಕಿದೆ. ಚೇಸಿಂಗ್‌ ಲೆಕ್ಕಾಚಾರ ಬೇರೆಯೇ ಇದೆ. ಕನಿಷ್ಠ 11 ಎಸೆತ ಬಾಕಿ ಇರುವಾಗಲೇ ಗುರಿ ಮುಟ್ಟಬೇಕು. ಸಣ್ಣ ಅಂತರದ ಗೆಲುವು ಕಂಡರೆ ಕಷ್ಟ.

Exit mobile version