ಬೆಂಗಳೂರು: ಕನ್ನಡಿಗರ ನೆಚ್ಚಿನ ತಂಡವಾದ ಆರ್ಸಿಬಿ(Royal Challengers Bengaluru) ಇಂದು (ಮೇ 18) ತವರು ಮೈದಾನ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (chinnaswamy stadium) ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್(Chennai Super Kings) ವಿರುದ್ಧ ಕಣಕ್ಕಿಳಿಯಲಿದೆ. ಕ್ರಿಕೆಟ್ ಪಂದ್ಯಾವಳಿಯ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಬೆಂಗಳೂರು ಟ್ರಾಫಿಕ್ ಪೊಲೀಸರು ಸೂಕ್ತ ಸಂಚಾರ ವ್ಯವಸ್ಥೆಯನ್ನು ಮಾಡಿಲಾಗಿದ್ದು ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಪೂರ್ಣವಾಗಿ ಪಾರ್ಕಿಂಗ್ ನಿಷೇಧ ಮಾಡಲಾಗಿದೆ. ಶನಿವಾರ ಮಧ್ಯಾಹ್ನ 3.00 ಗಂಟೆಯಿಂದ ರಾತ್ರಿ 11.00ರವರೆಗೆ ಈ ವ್ಯತ್ಯಾಸಗಳು ಜಾರಿಯಲ್ಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.
ಇಲ್ಲಿ ಪಾರ್ಕಿಂಗ್ ನಿಷೇಧ
ನಗರದ ಕ್ರೀನ್ಸ್ ರಸ್ತೆ, ಎಂ.ಜಿ ರಸ್ತೆ, ಎಂ.ಜಿ ರಸ್ತೆ ಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್‌ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ, ವಿಠಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ & ನೃಪತುಂಗ ರಸ್ತೆಯಲ್ಲಿ ಪಾರ್ಕಿಂಗ್ ನಿಷೇಧ ಮಾಡಲಾಗಿದೆ.
ಎಲ್ಲಿ ಪಾರ್ಕಿಂಗ್ ಮಾಡಬಹುದು?
ಸೆಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಮೈದಾನ, ಬಿ.ಎಂ.ಟಿ.ಸಿ ಬಸ್ ನಿಲ್ದಾಣದ ಮೊದಲನೆ ಮಹಡಿ & ಓಲ್ಸ್ ಕೆ.ಜಿ.ಐ.ಡಿ ಬಿಲ್ಡಿಂಗ್, ಕಿಂಗ್ಸ್ ರಸ್ತೆ, (ಕಬ್ಬನ್‌ಪಾರ್ಕ್ ಒಳಭಾಗ) ಈ ಪ್ರದೇಶದಲ್ಲಿ ಸಾರ್ವಜನಿಕ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
ವಿಶೇಷ ಮೆಟ್ರೋ ಸೇವೆ
ಕ್ರಿಕೆಟ್ ಪಂದ್ಯ ನೋಡಲು ಬರುವ ಕ್ರಿಕೆಟ್ ಪ್ರೇಮಿಗಳಿಗಾಗಿ ಮೆಟ್ರೋ ರೈಲು ವಿಶೇಷ ಓಡಾಟಕ್ಕೆ ಅನುಮತಿ ನೀಡಿವೆ. ಹೀಗಾಗಿ ಕ್ರಿಕೆಟ್ ನೋಡಲು ಬರುವವರು, ಕ್ರೀಡಾಂಗಣ ತಲುಪುವ ವಿಚಾರದಲ್ಲಿ ಯಾವುದೇ ಚಿಂತೆ ಮಾಡಬೇಕಾಗಿಲ್ಲ. ಪಂದ್ಯ ವೀಕ್ಷಣೆಗಾಗಿ ಬರುವ ಪ್ರಯಾಣಿಕರ ಅನುಕೂಲಕ್ಕಾಗಿ ಎಲ್ಲಾ ನಾಲ್ಕು ಟರ್ಮಿನಲ್ ಮೆಟ್ರೋ ನಿಲ್ದಾಣಗಳಿಂದ ಕೊನೆಯ ರೈಲು ಸೇವೆಗಳನ್ನು ರಾತ್ರಿ 11.30ಕ್ಕೆ ವಿಸ್ತರಿಸಲಾಗಿದೆ.
ಇದನ್ನೂ ಓದಿ IPL Ticket Scam: ಆನ್ಲೈನ್ ಟಿಕೆಟ್ ಖರೀದಿಸಲು ಹೋಗಿ 3 ಲಕ್ಷ ರೂ ಕಳೆದುಕೊಂಡ ಆರ್ಸಿಬಿ ಅಭಿಮಾನಿ
ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳನ್ನು 50 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಇದು ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳಿಂದ ಯಾವುದೇ ಇತರ ಮೆಟ್ರೋ ನಿಲ್ದಾಣಕ್ಕೆ ಒಂದೇ ಪ್ರಯಾಣಕ್ಕೆ ವಿತರಣೆಯ ದಿನದಂದು ರಾತ್ರಿ 8.00 ರಿಂದ ದಿನದ ಸೇವೆಗಳು ಕೊನೆಗೊಳ್ಳುವವರೆಗೆ ಮಾನ್ಯವಾಗಿರುತ್ತದೆ. ಈ ನಿಲ್ದಾಣಗಳಲ್ಲಿ ಟೋಕನ್ ಲಭ್ಯವಿರುವುದಿಲ್ಲ.
ಎಂದಿನಂತೆ, ಕ್ಯೂಆರ್ ( QR) ಕೋಡ್ ಟಿಕೆಟ್‌ಗಳು, ಸ್ಮಾರ್ಟ್ ಕಾರ್ಡ್‌ಗಳು ಮತ್ತು ಎನ್‌ಸಿಎಂಸಿ (NCMC) ಕಾರ್ಡ್‌ಗಳನ್ನು ಸಹ ಬಳಸಬಹುದು. ವಾಟ್ಸ್ ಆಪ್/ನಮ್ಮ ಮೆಟ್ರೋ ಆ್ಯಪ್/ಪೇ ಟಿಎಂ ಮೂಲಕ ಕ್ರಿಕೆಟ್ ಪಂದ್ಯದ ಆರಂಭಕ್ಕೆ ಮುಂಚಿತವಾಗಿ QR ಟಿಕೆಟ್‌ಗಳನ್ನು ಖರೀದಿಸಲು ಸಾರ್ವಜನಿಕರಿಗೆ ಸೂಚಿಸಲಾಗಿದೆ. ಕಬ್ಬನ್ ಪಾರ್ಕ್ ಮತ್ತು ಎಂಜಿ ರೋಡ್ ಮೆಟ್ರೋ ನಿಲ್ದಾಣಗಳಲ್ಲಿ ಟಿಕೆಟ್ ಖರೀದಿಸಲು ಟಿಕೆಟ್ ಕೌಂಟರ್‌ಗಳಲ್ಲಿ ಜನಸಂದಣಿಯನ್ನು ತಪ್ಪಿಸಲು ಈ ವ್ಯವಸ್ಥೆ ಮಾಡಲಾಗಿದೆ.