ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ಮೇ 18 ರ ಶನಿವಾರ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (IPL 2024) 17ನೇ ಆವೃತ್ತಿಯ ಐಪಿಎಲ್ನ ತಮ್ಮ ಅತಿದೊಡ್ಡ ಪಂದ್ಯವನ್ನಾಡಲು ಸಜ್ಜಾಗಿವೆ. ಎರಡೂ ತಂಡಗಳಿಗೂ ಪ್ಲೇಆಫ್ ಅರ್ಹತೆ ಪಡೆಯಲು ಈ ಪಂದ್ಯದಲ್ಲಿ ಗೆಲುವು ಅತ್ಯಗತ್ಯ. ಆದರೆ, ಪಂದ್ಯಕ್ಕೆ ಮಳೆ ಭೀತಿ(rcb vs csk match weather) ಎದುರಾಗಿರುವುದು ಇತ್ತಂಡಗಳಿಗೆ ಆತಂಕ ಪಡುವಂತೆ ಮಾಡಿದೆ. ಈ ಪಂದ್ಯದ ಮಳೆ ನಿಯಮ ಹೇಗಿದೆ ಎನ್ನುವ ಮಾಹಿತಿ ಇಂತಿದೆ.
1. ಪಂದ್ಯದ ಸಮಯದಲ್ಲಿ ಬೆಂಗಳೂರಿನಲ್ಲಿ ಭಾರೀ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಎಚ್ಚರಿಕೆ ನೀಡಿದೆ. ಒಂದೊಮ್ಮೆ ಪಂದ್ಯ ಮಳೆಯಿಂದ ರದ್ದಾದರೆ ಉಭಯ ತಂಡಗಳಿಗೂ ತಲಾ ಒಂದೊಂದು ಅಂಕ ನೀಡಲಾಗುತ್ತದೆ.
2. ಆರ್‌ಸಿಬಿ-ಸಿಎಸ್ಕೆ ನಡುವಣ ಪಂದ್ಯದ ಅಂತಿಮ 5 ಓವರ್ಗಳ ಪಂದ್ಯದ ಆಯೋಜನೆಗೆ ಕಟ್ ಆಫ್ ಟೈಮ್ 10:56 PM. ಈ ವೇಳೆಗೆ ಪಂದ್ಯ ಆಯೋಜಿಸುವಂತಹ ಪರಿಸ್ಥಿತಿ ಇರದಿದ್ದರೆ ಪಂದ್ಯವನ್ನು ರದ್ದು ಎಂದು ನಿರ್ಧರಿಸಲಾಗುತ್ತದೆ.
3. ಒಂದು ವೇಳೆ ಮಳೆ ಬಂದು ಉದಾಹರಣೆಗೆ ನಿಗದಿತ 10 ಓವರ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ತಂಡ 10 ಓವರ್ ಆಡಿ, 2ನೇ ಇನಿಂಗ್ಸ್ನಲ್ಲಿ ಬ್ಯಾಟಿಂಗ್ ಮಾಡಿದ ತಂಡ 5 ಓವರ್ಗಳನ್ನು ಪೂರ್ತಿಗೊಳಿಸಿದರೆ ಮಾತ್ರ ಆಗ ಡಕ್ವರ್ತ್ ಲೂಯಿಸ್ ನಿಯಮ ಅನ್ವಯವಾಗುತ್ತದೆ.
4. ಪಂದ್ಯ ಆರಂಭಗೊಂಡ ಬಳಿಕ ಮಳೆ ಬಂದರೆ ಡಕ್ವರ್ತ್ ಲೂಯಿಸ್ ನಿಯಮದ ಪ್ರಕಾರ ಓವರ್ ಕಡಿತದೊಂದಿಗೆ ಟಾರ್ಗೆಟ್ ನೀಡಲಾಗುತ್ತದೆ. ಈ ಮೂಲಕ ಪಂದ್ಯವನ್ನು ಪೂರ್ಣಗೊಳಿಸಲಾಗುತ್ತದೆ.
ಇದನ್ನೂ ಓದಿ IPL Ticket Scam: ಆನ್ಲೈನ್ ಟಿಕೆಟ್ ಖರೀದಿಸಲು ಹೋಗಿ 3 ಲಕ್ಷ ರೂ ಕಳೆದುಕೊಂಡ ಆರ್‌ಸಿಬಿ ಅಭಿಮಾನಿ
5. ಒಂದೊಮ್ಮೆ ಮಳೆಯಿಂದಾಗಿ ಪಂದ್ಯ ರದ್ದಾದರೆ ಚೆನ್ನೈ ತಂಡ ಅಧಿಕೃತವಾಗಿ ಪ್ಲೇಆಫ್ಗೆ ಎಂಟ್ರಿ ಕೊಡಲಿದೆ. ಏಕೆಂದರೆ ಈಗಾಗಲೇ ಚೆನ್ನೈ 14 ಅಂಕಗಳನ್ನು ಹೊಂದಿದ್ದು ಪಂದ್ಯ ರದ್ದಾದ ಕಾರಣ ಸಿಗುವ ಒಂದು ಅಂಕದಿಂದ ಒಟ್ಟು ಅಂಕ 15ಕ್ಕೇ ಏರಿಕೆಯಾಗುತ್ತದೆ. ಇನ್ನುಳಿದ ಯಾವುದೇ ತಂಡಕ್ಕೂ ಈ ಮೊತ್ತವನ್ನು ಮೀರಲು ಸಾಧ್ಯವಾಗುವುದಿಲ್ಲ. ಹೀಗಾಗಿ ಚೆನ್ನೈಗೆ ಮಳೆ ವರದಾನವಾಗಲಿದೆ. ಆರ್‌ಸಿಬಿ ತಂಡವು 13 ಅಂಕಗಳೊಂದಿಗೆ ಐಪಿಎಲ್ನಿಂದ ಹೊರಬೀಳಲಿದೆ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅತ್ಯಾಧುನಿಕ ಸಬ್ ಏರ್ ಸಿಸ್ಟಂ ಹೊಂದಿರುವ ಕಾರಣ. ಮಳೆ ಬಂದರೂ ಶೀಘ್ರವಾಗಿ ಮೈದಾನದಲ್ಲಿನ ನೀರನ್ನು ಹೀರಿಕೊಳ್ಳುತ್ತದೆ. ಹೀಗಾಗಿ ಎಷ್ಟೇ ಮಳೆಯಾದರೂ ಕೆಲವೇ ನಿಮಿಷಗಳಲ್ಲಿ ಮೈದಾನವನ್ನು ಸಜ್ಜುಗೊಳಿಸಬಹುದು. ಈ ಕಾರಣದಿಂದಾಗಿ ಬೆಂಗಳೂರಿನಲ್ಲಿ ಮಳೆ ಬಂದರೂ ಸೀಮಿತ ಓವರ್ಗಳ ಪಂದ್ಯವನ್ನು ನಿರೀಕ್ಷಿಸಬಹುದು.
ಒಂದೊಮ್ಮೆ ಆರ್‌ಸಿಬಿ ತಂಡ ಚೆನ್ನೈ ವಿರುದ್ಧ ಗೆದ್ದರೂ ಕೂಡ ಪ್ಲೇ ಆಫ್ ಟಿಕೆಟ್ ಖಚಿತವಾಗುವುದಿಲ್ಲ. ರನ್‌ರೇಟ್ ಲೆಕ್ಕಾಚಾರದಲ್ಲಿ ಚೆನ್ನೈಯನ್ನು ಆರ್‌ಸಿಬಿ ಕನಿಷ್ಠ 18 ರನ್ನುಗಳಿಂದ ಮಣಿಸಬೇಕಿದೆ. ಚೇಸಿಂಗ್ ಲೆಕ್ಕಾಚಾರ ಬೇರೆಯೇ ಇದೆ. ಕನಿಷ್ಠ 11 ಎಸೆತ ಬಾಕಿ ಇರುವಾಗಲೇ ಗುರಿ ಮುಟ್ಟಬೇಕು. ಸಣ್ಣ ಅಂತರದ ಗೆಲುವು ಕಂಡರೆ ಕಷ್ಟ.