Site icon Vistara News

RCB vs GT: ಮಳೆ ಭೀತಿಯ ಮಧ್ಯೆ ಹ್ಯಾಟ್ರಿಕ್​ ಗೆಲುವಿನ ನಿರೀಕ್ಷೆಯಲ್ಲಿ ಆರ್​ಸಿಬಿ

RCB vs CSK:

ಬೆಂಗಳೂರು: ಹಲವು ಸೋಲಿನ ಬಳಿಕ ಸತತ 2 ಗೆಲುವು ಸಾಧಿಸಿ ಸಂತಸದ ಅಲೆಯಲ್ಲಿ ತೇಲುತ್ತಿರುವ ಆರ್​ಸಿಬಿ(RCB vS GT) ಹ್ಯಾಟ್ರಿಕ್​ ಗೆಲುವಿನಿ ನಿರೀಕ್ಷೆಯೊಂದಿಗೆ ನಾಳೆ(ಶನಿವಾರ) ನಡೆಯುವ ಐಪಿಎಲ್(IPL 2024)​ ಪಂದ್ಯದಲ್ಲಿ ಗುಜರಾತ್​ ಟೈಟಾನ್ಸ್​ ವಿರುದ್ಧ ಕಣಕ್ಕಿಳಿಯಲಿದೆ. ಆದರೆ, ಈ ಪಂದ್ಯಕ್ಕೆ ಮಳೆಯ ಭೀತಿಯೂ ಎದುರಾಗಿದೆ.

ಬೆಂಗಳೂರಿನಲ್ಲಿ ಸತತ 2 ದಿನಗಳಿಂದ ಮಳೆಯಾಗುತ್ತಿದ್ದು ಮುಂದಿನ ನಾಲ್ಕು ದಿನ ಕೂಡ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ ನಾಳೆ ನಡೆಯುವ ಪಂದ್ಯಕ್ಕೆ ಮಳೆಯ ಭೀತಿ ಇದ್ದೇ ಇದೆ. ಪ್ಲೇ ಆಫ್​ಗೆ ಕ್ಷೀಣ ಅವಕಾಶ ಹೊಂದಿರುವ ಆರ್​ಸಿಬಿ ಮತ್ತು ಗುಜರಾತ್​ಗೆ ನಾಳೆ ನಡೆಯುವ ಪಂದ್ಯ ಮಹತ್ವದ್ದಾಗಿದೆ. ಮಳೆಯಿಂದ ಪಂದ್ಯ ರದ್ದಾದರೆ ಉಭಯ ತಂಡಗಳ ಪ್ಲೇ ಆಫ್​ ಮಳೆಯಲ್ಲಿ ಕೊಚ್ಚಿಹೋಗಲಿದೆ.

ಪಿಚ್​ ರಿಪೋರ್ಟ್​


ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ಯಾವಾಗಲೂ ಬ್ಯಾಟಿಂಗ್ ಸ್ನೇಹಿ ಸ್ಥಳವಾಗಿದೆ. ಇದುವರೆಗೆ ಇಲ್ಲಿ ನಡೆದ ಬಹುತೇಕ ಪಂದ್ಯಗಳು ಕೂಡ ಚೇಸಿಂಗ್​ ನಡೆಸಿದ ತಂಡವೇ ಹೆಚ್ಚು ಬಾರಿ ಗೆದ್ದಿದೆ. ಇದುವರೆಗೆ ಇಲ್ಲಿ 92 ಐಪಿಎಲ್​ ಪಂದ್ಯಗಳು ನಡೆದಿದ್ದು, 49 ಬಾರಿ ಚೇಸಿಂಗ್​ ನಡೆಸಿದ ತಂಡ ಜಯಶಾಲಿಯಾಗಿದೆ. 39 ಬಾರಿ ಮೊದಲು ಬ್ಯಾಟಿಂಗ್​ ನಡೆಸಿದ ತಂಡ ಗೆದ್ದಿದೆ. ಆದರೆ ಕಳೆದ 10 ಪಂದ್ಯಗಳ ಫಲಿತಾಂಶ ನೋಡುವುದಾದರೆ 6 ಬಾರಿ ಮೊದಲು ಬ್ಯಾಟಿಂಗ್​ ನಡೆಸಿದ ತಂಡ ಗೆದ್ದಿದೆ.

ವಿರಾಟ್​ ಕೊಹ್ಲಿ ಈ ಮೈದಾನದಲ್ಲಿ ಇದುವರೆಗೆ 2924 ರನ್​ ಬಾರಿಸಿದ್ದಾರೆ. ಜತೆಗೆ ಈ ಬಾರಿಯ ಐಪಿಎಲ್​ನಲ್ಲಿಯೂ ಕೊಹ್ಲಿ ಉತ್ತಮವಾಗಿ ರನ್​ ಗಳಿಸಿದ್ದಾರೆ. ಹೀಗಾಗಿ ಈ ಪಂದ್ಯದಲ್ಲಿಯೂ ಇವರ ಬ್ಯಾಟಿಂಗ್​ ಮೇಲೆ ಅಭಿಮಾನಿಗಳು ಹೆಚ್ಚಿನ ನಿರೀಕ್ಷೆ ಇರಿಸಿದ್ದಾರೆ. ಕಳೆದ ಆವೃತ್ತಿಯಲ್ಲಿ ಆರ್​ಸಿಬಿಗೆ ಪ್ಲೇ ಆಫ್​ಗೆ ಹೋಗಬೇಕಿದ್ದರೆ ಗೆಲ್ಲಲೇ ಬೇಕಿದ್ದ ಪಂದ್ಯದಲ್ಲಿ ಗುಜರಾತ್​ ಅಡಗಾಲಿಕ್ಕಿತ್ತು. ಶುಭಮನ್​ ಗಿಲ್​ ಶತಕ ಬಾರಿಸಿ ಆರ್​ಸಿಬಿಗೆ ಸೋಲಿನ ರುಚಿ ತೋರಿಸಿದ್ದರು.

ಗುಜರಾತ್​ ಆಡಿದ 10 ಪಂದ್ಯಗಳಲ್ಲಿ 4 ಪಂದ್ಯ ಗೆದ್ದು 8 ಅಂಕ ಗಳಿಸಿ 8ನೇ ಸ್ಥಾನದಲ್ಲಿದೆ. ಪ್ಲೇ ಆಫ್​ ಪ್ರವೇಶಿಸಬೇಕಿದ್ದರೆ ಉಳಿದ 4 ಪಂದ್ಯಗಳನ್ನು ಕೂಡ ಗೆಲ್ಲಬೇಕಿದೆ. ಹೀಗಾಗಿ ಆರ್​ಸಿಬಿ ವಿರುದ್ಧದ ಪಂದ್ಯ ಗೆಲ್ಲಲೇ ಬೇಕಾದ ಒತ್ತಡ ಶುಭಮನ್​ ಗಿಲ್​ ಪಡೆಯ ಮೇಲಿದೆ.

ಇದನ್ನೂ ಓದಿ IPL 2024 : ರಾಜಸ್ಥಾನ್ ವಿರುದ್ಧ ಎಸ್​​ಆರ್​ಎಚ್​​ ತಂಡಕ್ಕೆ ರೋಚಕ 1 ರನ್ ಗೆಲುವು

ಉಭಯ ತಂಡಗಳು


ಆರ್​ಸಿಬಿ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್​ ಕೀಪರ್​), ಸ್ವಪ್ನಿಲ್ ಸಿಂಗ್, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್, ಯಶ್ ದಯಾಳ್.

ಗುಜರಾತ್​: ವೃದ್ಧಿಮಾನ್ ಸಹಾ (ವಿಕೆಟ್​ ಕೀಪರ್​), ಶುಭಮನ್​ ಗಿಲ್ (ನಾಯಕ), ಸಾಯಿ ಸುದರ್ಶನ್, ಡೇವಿಡ್ ಮಿಲ್ಲರ್, ಅಜ್ಮತುಲ್ಲಾ ಒಮರ್ಜಾಯ್, ರಾಹುಲ್ ತೆವಾಟಿಯಾ, ಶಾರುಖ್ ಖಾನ್, ರಶೀದ್ ಖಾನ್, ಸಾಯಿ ಕಿಶೋರ್, ನೂರ್ ಅಹ್ಮದ್, ಮೋಹಿತ್ ಶರ್ಮಾ.

Exit mobile version