Site icon Vistara News

RCB vs KKR: ಇಂದಿನ ಪಂದ್ಯಕ್ಕೆ ಆರ್​ಸಿಬಿ ತಂಡದಲ್ಲಿ ಮೂರು ಬದಲಾವಣೆ ಖಚಿತ

IPL 2024

ಕೋಲ್ಕತ್ತಾ: ಪ್ಲೇ ಆಪ್​ ರೇಸ್​ನಲ್ಲಿ ಉಳಿಯಬೇಕಿದ್ದರೆ ಗೆಲ್ಲಲೇ ಬೇಕಾದ ಒತ್ತಡದಲ್ಲಿರುವ ರಾಯಲ್​ ಚಾಲೆಂಜರ್ಸ್​ ಬೆಂಗಳೂರು(RCB vs KKR) ತಂಡ ಇಂದು ನಡೆಯುವ ಐಪಿಎಲ್​ನ(IPL 2024) ಹಗಲು ಪಂದ್ಯದಲ್ಲಿ ಬಲಿಷ್ಠ ಕೆಕೆಆರ್​ ವಿರುದ್ಧ ಕಣಕ್ಕಿಳಿಯಲಿದೆ. ಈ ಮಹತ್ವದ ಪಂದ್ಯಕ್ಕೆ ಆರ್​ಸಿಬಿ ತನ್ನ ಆಡುವ ಬಳಗದಲ್ಲಿ ಕನಿಷ್ಠ ಮೂರು ಬದಲಾವಣೆ ಮಾಡುವುದು ಖಚಿತ.

ಕಳೆದ ಪಂದ್ಯದಲ್ಲಿ ಆಡದ ಗ್ಲೆನ್​ ಮ್ಯಾಕ್ಸ್​ವೆಲ್​, ಮೊಹಮ್ಮದ್​ ಸಿರಾಜ್​ ಈ ಪಂದ್ಯದಲ್ಲಿ ಆಡುವುದು ಬಹುತೇಖ ಖಚಿತ. ಇವರಿಗಾಗಿ ಟೋಪ್ಲಿ ಮತ್ತು ವಿಜಯಕುಮಾರ್ ವೈಶಾಕ್ ಜಾಗ ಬಿಡಬೇಕಾದೀತು. ರಜತ್​ ಪಾಟಿದಾರ್​ ಬದಲು ಕನ್ನಡಿಗ ಮನೋಜ್ ಭಾಂಡಗೆ ಅಥವಾ ಅನೂಜ್​ ರಾವುತ್​ ಅವಕಾಶ ಪಡೆಯಬಹುದು. ಇನ್ನೊಂದು ಸಾಧ್ಯತೆ ಎಂದರೆ ಮ್ಯಾಕ್ಸ್​ವೆಲ್​ ಈ ಪಂದ್ಯದಿಂದಲೂ ಹಿಂದೆ ಸರಿದರೆ ಆಗ ಕ್ಯಾಮರೂನ್​ ಗ್ರೀನ್​ ಆಡಬಹುದು. ಒಟ್ಟಿನಲ್ಲಿ ಮೂರು ಬದಲಾವಣೆ ನಿಶ್ಚಿತ.

2017ರಲ್ಲಿ ಕೆಕೆಆರ್​ ವಿರುದ್ಧ ಇಲ್ಲಿ ನಡೆದ ಪಂದ್ಯದಲ್ಲಿ ಆರ್​ಸಿಬಿ ಕೇವಲ 49 ರನ್​ಗಳಿಗೆ ಆಲೌಟ್​ ಆಗಿತ್ತು. ಈ ವರೆಗೆ ಆರ್​ಸಿಬಿ ಮತ್ತು ಕೆಕೆಆರ್​ ಐಪಿಎಲ್​ನಲ್ಲಿ 33 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಆರ್​ಸಿಬಿ 14 ಗೆಲುವು ಕೆಕೆಆರ್​ 19 ಪಂದ್ಯಗಳಲ್ಲಿ ಮೇಲುಗೈ ಸಾಧಿಸಿದೆ. ಬಲಾಬಲದ ಲೆಕ್ಕಾಚಾರದಲ್ಲಿ ಕೆಕೆಆರ್​ ಮುಂದಿದೆ. 

ಪಿಚ್​ ರಿಪೋರ್ಟ್​

ಈಡನ್‌ ಗಾರ್ಡನ್ಸ್‌ನ(Eden Gardens) ಪಿಚ್​ ಸೀಮರ್‌ಗಳಿಗೆ ನೆರವು ನೀಡುವ ಸಾಧ್ಯತೆ ಇದೆ. ಇಲ್ಲಿ ಚೇಸಿಂಗ್​ ನಡೆಸುವ ತಂಡಕ್ಕೆ ಹೆಚ್ಚಿನ ಅವಕಾಶ ಏಕೆಂದರೆ ರಾತ್ರಿಯ ವೇಳೆ ಇಲ್ಲಿ ಇಬ್ಬಿನಿ ಸಮಸ್ಯೆ ಕಾಡಲಿದೆ. ಇದು ಬೌಲರ್​ಗಳಿಗೆ ಕಷ್ಟಕರವಾಗಲಿದೆ. ಕೈಯಲ್ಲಿ ಸರಿಯಾಗಿ ಚೆಂಡು ನಿಲ್ಲದೆ ನಿರ್ದಿಷ್ಟ ಗುರಿಗೆ ಬೌಲಿಂಗ್​ ಮಾಡಲು ಸಾಧ್ಯವಾಗುವುದಿಲ್ಲ. ಟಾಸ್​ ಗೆದ್ದ ತಂಡ ಮೊದಲು ಬೌಲಿಂಗ್​ ಆಯ್ಕೆ ಮಾಡಿಕೊಂಡರೆ ಉತ್ತಮ. ವಿರಾಟ್​ ಕೊಹ್ಲಿ 2019ರಲ್ಲಿ ಕೆಕೆಆರ್​ ವಿರುದ್ಧ ಇದೇ ಮೈದಾನದಲ್ಲಿ ಶತಕ ಕೂಡ ಬಾರಿಸಿದ್ದರು. ಈ ಬಾರಿ ಏನು ಮಾಡಲಿದ್ದಾರೆ ಎಂದು ಕಾದು ನೋಡಬೇಕಿದೆ.

ಇದನ್ನೂ ಓದಿ IPL 2024 POINTS TABLE: ಹೈದರಾಬಾದ್​ಗೆ ಭರ್ಜರಿ ಗೆಲುವು; ಅಂಕಪಟ್ಟಿಯಲ್ಲಿ ಮಹತ್ವದ ಬದಲಾವಣೆ

ತವರಿನಲ್ಲೇ ಸತತ ಸೋಲಿನ ಅವಮಾನ ಕಂಡಿರುವ ಆರ್​ಸಿಬಿ ಹೊರಗಡೆ ಆಡಿದ ಪಂದ್ಯದಲ್ಲಿ ಗೆಲ್ಲಬಹುದೇ ಎನ್ನುವ ಪ್ರಶ್ನೆ ಮೂಡುವುದು ಕೂಡ ಸಹಜ. ತಂಡದದಲ್ಲಿ ಸ್ಟಾರ್​ ಆಟಗಾರರಿದ್ದರೂ ಕೂಡ ಯಾರು ನಿರೀಕ್ಷಿತ ಪ್ರದರ್ಶನ ತೋರುತ್ತಿಲ್ಲ. ವಿರಾಟ್​ ಕೊಹ್ಲಿ, ದಿನೇಶ್​ ಕಾರ್ತಿಕ್​ ಮಾತ್ರ ತಂಡದ ನಂಬಿಕಸ್ಥ ಆಟಗಾರರಾಗಿದ್ದಾರೆ. ಆರ್​ಸಿಬಿ ಬ್ಯಾಟಿಂಗ್‌ನಲ್ಲಿ ಯಶಸ್ವಿಯಾದರೆ ಬೌಲಿಂಗ್‌ನಲ್ಲಿ ಎಡವುತ್ತಿದೆ. ಬೌಲಿಂಗ್‌ನಲ್ಲಿ ಯಶಸ್ವಿಯಾದರೆ, ಬ್ಯಾಟಿಂಗ್‌ನಲ್ಲಿ ಪಲ್ಟಿ ಹೊಡೆಯುತ್ತಿದೆ. ಬೌಲಿಂಗ್‌ ಪಡೆಯಂತೂ ಸಂಪೂರ್ಣ ಮೊನಚು ಕಳೆದುಕೊಂಡಿದೆ. ಇದು, ಸಹಜವಾಗಿ ಆರ್‌ಸಿಬಿಯನ್ನು ಸೋಲಿನ ಸುಳಿಗೆ ತಳ್ಳಿದೆ. ಒಟ್ಟಿನಲ್ಲಿ ಸಂಘಟನಾತ್ಮಕ ಹೋರಾಟವೇ ಬರುತ್ತಿಲ್ಲ. 

ಸಂಭಾಬ್ಯ ಆಡುವ ಬಳಗ


ಆರ್​ಸಿಬಿ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ಮನೋಜ್ ಭಾಂಡಗೆ/ಅನೂಜ್ ರಾವುತ್​, ಸೌರವ್ ಚೌಹಾಣ್, ದಿನೇಶ್ ಕಾರ್ತಿಕ್ (ವಿಕಿ), ಮಹಿಪಾಲ್ ಲೊಮ್ರೋರ್, ಮೊಹಮ್ಮದ್​ ಸಿರಾಜ್​, ಗ್ಲೆನ್​ ಮ್ಯಾಕ್ಸ್​ವೆಲ್​/ಕ್ಯಾಮರೂನ್​ ಗ್ರೀನ್​, ಲಾಕಿ ಫರ್ಗುಸನ್, ಯಶ್ ದಯಾಲ್.

ಕೆಕೆಆರ್​: ಫಿಲಿಪ್ ಸಾಲ್ಟ್ (ವಿಕಿ), ಸುನಿಲ್ ನರೈನ್, ಆಂಗ್ಕ್ರಿಶ್ ರಘುವಂಶಿ, ಶ್ರೇಯಸ್ ಅಯ್ಯರ್ (ನಾಯಕ), ವೆಂಕಟೇಶ್ ಅಯ್ಯರ್, ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್/ ನಿತೇಶ್​ ರಾಣಾ, ಮಿಚೆಲ್ ಸ್ಟಾರ್ಕ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ

Exit mobile version