ಬೆಂಗಳೂರು: ಕನ್ನಡಿಗರ ನೆಚ್ಚಿನ ತಂಡವಾದ ಆರ್‌ಸಿಬಿ(Royal Challengers Bengaluru) ಇಂದು (ಏಪ್ರಿಲ್ 2) ತವರು ಮೈದಾನ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (chinnaswamy stadium) ಲಕ್ನೋ ಸೂಪರ್ ಜೈಂಟ್ಸ್(Lucknow Super Giants) ವಿರುದ್ಧ ಕಣಕ್ಕಿಳಿಯಲು ಸಜ್ಜಾಗಿದೆ. ಇದು ಈ ವರ್ಷದ ಐಪಿಎಲ್ ಪಂದ್ಯಾವಳಿಯಲ್ಲಿ (IPL 2024) ಆರ್‌ಸಿಬಿಗೆ (RCB vs LSG) ತವರು ಮೈದಾನದ ಸತತ ಮೂರನೇ ಪಂದ್ಯ. ಕಳೆದ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಸೋಲು ಕಂಡಿತ್ತು. ಹೀಗಾಗಿ ಈ ಪಂದ್ಯದಲ್ಲಿ ಗೆಲುವಿನ ನಿರೀಕ್ಷೆಯಲ್ಲಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಟಾ ಐಪಿಎಲ್ 2024 ಕ್ರಿಕೆಟ್ ಪಂದ್ಯಾವಳಿಯ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಈ ಕೆಳಕಂಡಂತೆ ಸೂಕ್ತ ಸಂಚಾರ ವ್ಯವಸ್ಥೆಯನ್ನು ಮಾಡಲಾಗಿದೆ. ಎಪ್ರಿಲ್ 2 ಮಂಗಳವಾರ ಮಧ್ಯಾಹ್ನ 3.00 ಗಂಟೆಯಿಂದ ರಾತ್ರಿ 11.00ರವರೆಗೆ ಈ ವ್ಯತ್ಯಾಸಗಳು ಜಾರಿಯಲ್ಲಿದ್ದು, ಸಾರ್ವಜನಿಕರು ಸಹಕರಿಸಲು ಕೋರಿದೆ. ಜತೆಗೆ ಬೆಂಗಳೂರು ನಗರ ಸಂಚಾರ ಪೊಲೀಸರಿಂದಲೂ ಹಲವು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಪೂರ್ಣವಾಗಿ ಪಾರ್ಕಿಂಗ್ ನಿಷೇಧ ಮಾಡಲಾಗಿದೆ.
ವಾಹನಗಳ ನಿಲುಗಡೆ ನಿಷೇಧವಿರುವ ರಸ್ತೆಗಳ ವಿವರ
ಕ್ರೀನ್ಸ್ ರಸ್ತೆ, ಎಂ.ಜಿ ರಸ್ತೆ, ಎಂ.ಜಿ ರಸ್ತೆ ಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್‌ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ, ವಿಠಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ & ನೃಪತುಂಗ ರಸ್ತೆ.
ಸಾರ್ವಜನಿಕ ವಾಹನಗಳ ನಿಲುಗಡೆ ಸ್ಥಳಗಳು
ಸೆಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಮೈದಾನ, ಬಿ.ಎಂ.ಟಿ.ಸಿ ಬಸ್ ನಿಲ್ದಾಣದ ಮೊದಲನೆ ಮಹಡಿ & ಓಲ್ಸ್ ಕೆ.ಜಿ.ಐ.ಡಿ ಬಿಲ್ಡಿಂಗ್, ಕಿಂಗ್ಸ್ ರಸ್ತೆ, (ಕಬ್ಬನ್‌ಪಾರ್ಕ್ ಒಳಭಾಗ) ಈ ಪ್ರದೇಶದಲ್ಲಿ ಸಾರ್ವಜನಿಕ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
Familiar faces for Head Coach Andy, and the priority is to get back to winning ways. ⚡️
— Royal Challengers Bengaluru (@RCBTweets) April 2, 2024
Find out how the team made use of the 3 day break to train in batches, on @bigbasket_com presents Game Day. 📹
Download the Big Basket App and get groceries, electronics and more, delivered… pic.twitter.com/KLG5wHE9as
ಮೆಟ್ರೋ ಸೇವೆ
ಪಂದ್ಯ ವೀಕ್ಷಣೆಗಾಗಿ ಬರುವ ಪ್ರಯಾಣಿಕರ ಅನುಕೂಲಕ್ಕಾಗಿ ಎಲ್ಲಾ ನಾಲ್ಕು ಟರ್ಮಿನಲ್ ಮೆಟ್ರೋ ನಿಲ್ದಾಣಗಳಿಂದ ಕೊನೆಯ ರೈಲು ಸೇವೆಗಳನ್ನು ರಾತ್ರಿ 11.30ಕ್ಕೆ ವಿಸ್ತರಿಸಲಾಗಿದೆ.
ಇದನ್ನೂ ಓದಿ RCB vs LSG: ಮೋಡ ಕವಿದ ವಾತಾವರಣ; ಆರ್‌ಸಿಬಿ-ಲಕ್ನೋ ಪಂದ್ಯಕ್ಕೆ ಮಳೆ ಭೀತಿ!
ಪೇಪರ್ ಟಿಕೆಟ್ ಮಾರಾಟ
ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳನ್ನು 50 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಇದು ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳಿಂದ ಯಾವುದೇ ಇತರ ಮೆಟ್ರೋ ನಿಲ್ದಾಣಕ್ಕೆ ಒಂದೇ ಪ್ರಯಾಣಕ್ಕೆ ವಿತರಣೆಯ ದಿನದಂದು ರಾತ್ರಿ 8.00 ರಿಂದ ದಿನದ ಸೇವೆಗಳು ಕೊನೆಗೊಳ್ಳುವವರೆಗೆ ಮಾನ್ಯವಾಗಿರುತ್ತದೆ. ಈ ನಿಲ್ದಾಣಗಳಲ್ಲಿ ಟೋಕನ್ ಲಭ್ಯವಿರುವುದಿಲ್ಲ.
ಎಂದಿನಂತೆ, ಕ್ಯೂಆರ್ ( QR) ಕೋಡ್ ಟಿಕೆಟ್‌ಗಳು, ಸ್ಮಾರ್ಟ್ ಕಾರ್ಡ್‌ಗಳು ಮತ್ತು ಎನ್‌ಸಿಎಂಸಿ (NCMC) ಕಾರ್ಡ್‌ಗಳನ್ನು ಸಹ ಬಳಸಬಹುದು. ವಾಟ್ಸ್ ಆಪ್/ನಮ್ಮ ಮೆಟ್ರೋ ಆ್ಯಪ್/ಪೇ ಟಿಎಂ ಮೂಲಕ ಕ್ರಿಕೆಟ್ ಪಂದ್ಯದ ಆರಂಭಕ್ಕೆ ಮುಂಚಿತವಾಗಿ QR ಟಿಕೆಟ್‌ಗಳನ್ನು ಖರೀದಿಸಲು ಸಾರ್ವಜನಿಕರಿಗೆ ಸೂಚಿಸಲಾಗಿದೆ. ಕಬ್ಬನ್ ಪಾರ್ಕ್ ಮತ್ತು ಎಂಜಿ ರೋಡ್ ಮೆಟ್ರೋ ನಿಲ್ದಾಣಗಳಲ್ಲಿ ಟಿಕೆಟ್ ಖರೀದಿಸಲು ಟಿಕೆಟ್ ಕೌಂಟರ್‌ಗಳಲ್ಲಿ ಜನಸಂದಣಿಯನ್ನು ತಪ್ಪಿಸಲು ಈ ವ್ಯವಸ್ಥೆ ಮಾಡಲಾಗಿದೆ.