ರಿಟೈರ್ಡ್ ಹರ್ಟ್ ಅಥವಾ ರಿಟೈರ್ಡ್ ಔಟ್? ರೋಹಿತ್ ಸೂಪರ್ ಓವರ್ ನಿರ್ಧಾರ ನಿಗೂಢ! - Vistara News

ಕ್ರಿಕೆಟ್

ರಿಟೈರ್ಡ್ ಹರ್ಟ್ ಅಥವಾ ರಿಟೈರ್ಡ್ ಔಟ್? ರೋಹಿತ್ ಸೂಪರ್ ಓವರ್ ನಿರ್ಧಾರ ನಿಗೂಢ!

ಐಸಿಸಿ ನಿಯಮದ ಪ್ರಕಾರ ರಿಟೈರ್ಡ್​ ಹರ್ಟ್​ ಆದರೆ ಮತ್ತೆ ಬ್ಯಾಟ್ ಮಾಡಬಹುದು. ಈ ನಿಯಮ ರೋಹಿತ್ ಹಾಗೂ ಟೀಮ್​ ಇಂಡಿಯಾಗೆ ಸಂಪೂರ್ಣ ಅರಿವಿತ್ತು. ಹೀಗಾಗಿ ರೋಹಿತ್​ ದ್ವಿತೀಯ ಸೂಪರ್​ ಓಪರ್​ನಲ್ಲಿಯೂ ಬ್ಯಾಟಿಂಗ್​ ನಡೆಸಿದರು.

VISTARANEWS.COM


on

Rohit Sharma's Super Over Decision
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭಾರತ ಮತ್ತು ಅಫಘಾನಿಸ್ತಾನ ವಿರುದ್ಧ ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮೂರನೇ ಟಿ20(India vs Afghanistan, 3rd T20I) ಪಂದ್ಯ ಹಲವು ನಾಟಕೀಯ ಘಟನೆ ಮತ್ತು ಚರ್ಚೆಗೆ ಕಾರಣವಾಯಿತು. ಮೊದಲ ಸೂಪರ್ ಓವರ್​ನಲ್ಲಿ ಬ್ಯಾಟಿಂಗ್ ಮಾಡಿದ ರೋಹಿತ್ ಅಂತಿಮ ಎಸೆತದಲ್ಲಿ ಮೈದಾನ ತೊರೆದರೂ ಕೂಡ ಎರಡನೇ ಸೂಪರ್ ಓವರ್ ನಲ್ಲಿಯೂ ಬ್ಯಾಟಿಂಗ್​ ನಡೆಸಿದ್ದು ಈಗ ಚರ್ಚೆಗೆ ಗ್ರಾಸವಾಗಿದೆ.

ಪಂದ್ಯ ಟೈಗೊಂಡ ಕಾರಣ ಫಲಿತಾಂಶ ನಿರ್ಧಾರಕ್ಕೆ ಸೂಪರ್​ ಓವರ್​ ಮೊರೆ ಹೋಗಲಾಯಿತು. ಮೊದಲ ಸೂಪರ್‌ ಓವರ್‌ನಲ್ಲಿ ಆಡಲಿಳಿದ ಅಫಘಾನಿಸ್ತಾನ ಒಂದು ವಿಕೆಟಿಗೆ 16 ರನ್‌ ಗಳಿಸಿತು. ಗುರಿ ಬೆನ್ನಟ್ಟಿದ ಭಾರತಕ್ಕೆ ಅಂತಿಮ ಸೆತದಲ್ಲಿ ಗೆಲುವಿಗೆ ಒಂದು ರನ್​ ಅಶ್ಯವಿತ್ತು. ಈ ವೇಳೆ ನಾನ್​ಸ್ಟ್ರೇಕ್​ನಲ್ಲಿದ್ದ ರೋಹಿತ್​ ಅಚ್ಚರಿ ಎಂಬಂತೆ ಕ್ರೀಸ್​ ತೊರೆದು ರಿಂಕು ಸಿಂಗ್​ ಅವರನ್ನು ಬ್ಯಾಟಿಂಗ್​ಗೆ ಕರೆದರು. ಈ ವೇಳೆ ಆಫ್ಘಾನ್ ಪ್ಲೇಯರ್​ ಅಂಪೈರ್​ ಜತೆ ವಾಗ್ವಾದಕ್ಕೆ ಇಳಿದರು. ಕೆಲ ಕಾಲ ಗೊಂದಲ ಸೃಷ್ಟಿಯಾಯಿತು. ರೋಹಿತ್​ ಅವರ ಈ ನಡೆ ಭಾರತ ತಂಡದ ಕೋಚ್​ಗೂ ದ್ರಾವಿಡ್​ಗೂ ಅಚ್ಚರಿ ತಂದಿತ್ತು. ಆದರೆ ಕೊನೆಯ ಎಸೆತದಲ್ಲಿ ಗೆಲುವಿಗೆ 2 ರನ್​ ಬೇಕಿದ್ದಾಗ ಒಂದು ರನ್ ಬಂದ ಕಾರಣ ಪಂದ್ಯ ಮತ್ತೊಂದು ಸೂಪರ್ ಓವರ್​ಗೆ ಸಾಗಿತು.

ಇದನ್ನೂ ಓದಿ ಈಗಾಗಲೇ 2 ಶೂನ್ಯ ಸುತ್ತಿದ್ದೇನೆ ಎಂದು ಅಂಪೈರ್ ಕಾಲೆಳೆದ ರೋಹಿತ್​; ವಿಡಿಯೊ ವೈರಲ್

20 ಓವರ್​ ಬ್ಯಾಟಿಂಗ್​ ಮತ್ತು ಫೀಲ್ಡಿಂಗ್​ ನಡೆಸಿದ ಕಾರಣ ಸೂಪರ್​ ಓವರ್​ನ ಅಂತಿಮ ಎಸೆತದಲ್ಲಿ 2 ರನ್ ಓಡುವುದು ಕಷ್ಟವಾದಿತು ನ್ನುವ ನಿಟ್ಟಿನಲ್ಲಿ ರೋಹಿತ್​ ಶರ್ಮ ಅವರು ರಿಟೈರ್ಡ್​ ಹರ್ಟ್​ ಘೋಷಿಸಿ ಪೆವಿಲಿಯನ್​ಗೆ ವಾಪಸ್ ಆಗಿರಬಹುದು ಎಂದು ಆಫ್ಘಾನ್ ಆಟಗಾರರು ಸೇರಿ ಕ್ರಿಕೆಟ್​ ಅಭಿಮಾನಿಗಳು ಊಹಿಸಿದ್ದರು. ಆದರೆ ದ್ವಿತೀಯ ಸೂಪರ್​ ಓಪರ್​ನಲ್ಲಿಯೂ ರೋಹಿತ್​ ಶರ್ಮ ಬ್ಯಾಟಿಂಗ್​ಗೆ ಇಳಿದ್ದು ಈಗ ಚರ್ಚೆಗೆ ಕಾರಣವಾಗಿದೆ.

ಐಸಿಸಿ ನಿಯಮ ಏನು ಹೇಳುತ್ತೆ?


ನಿಯಮಗಳ ಪ್ರಕಾರ ಸೂಪರ್​ ಓವರ್​ನಲ್ಲಿ ಔಟ್​ ಆದ ಬ್ಯಾಟರ್​ ಮತ್ತೆ ಬ್ಯಾಟಿಂಗ್​ ನಡೆಸಲು ಅವಕಾಶವಿಲ್ಲ. ಆದರೆ ರೋಹಿತ್​ ದ್ವಿತೀಯ ಸೂಪರ್​ ಓವರ್​ನಲ್ಲಿಯೂ ಬ್ಯಾಟಿಂಗ್​ ನಡೆಸಲು ಬಂದಾಗ ಅರೆ ಇದು ಹೇಗೆ ಸಾಧ್ಯ ಎಂದು ಎಲ್ಲರು ಒಂದು ಕ್ಷಣ ಯೋಚಿಸಿದರು. ಐಸಿಸಿ ನಿಯಮದ ಪ್ರಕಾರ ರಿಟೈರ್ಡ್​ ಹರ್ಟ್​ ಆದರೆ ಮತ್ತೆ ಬ್ಯಾಟ್ ಮಾಡಬಹುದು. ಈ ನಿಯಮ ರೋಹಿತ್ ಹಾಗೂ ಟೀಮ್​ ಇಂಡಿಯಾಗೆ ಸಂಪೂರ್ಣ ಅರಿವಿತ್ತು. ಹೀಗಾಗಿ ರೋಹಿತ್​ ದ್ವಿತೀಯ ಸೂಪರ್​ ಓಪರ್​ನಲ್ಲಿಯೂ ಬ್ಯಾಟಿಂಗ್​ ನಡೆಸಿದರು. ಆದರೆ ಈಗ ಚರ್ಚೆಯಾಗುತ್ತಿರುವುದೆಂದರೆ ರೋಹಿತ್​ ರಿಟೈರ್ಡ್​ ಹರ್ಟ್​ ಅಥವಾ ರಿಟೈರ್ಡ್​ ಔಟ್​ ಆದದ್ದಾ? ಎನ್ನುವುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IPL 2024: ಐಪಿಎಲ್​ ಟ್ರೋಫಿಯಲ್ಲಿರುವ ಸಂಸ್ಕೃತ ಶ್ಲೋಕದ ಮೂಲ ಸಾರವೇನು?

IPL 2024: ಕಪಿಲ್​ ಸಾರಥ್ಯದಲ್ಲಿ ಗೆದ್ದ ವಿಶ್ವ ಕಪ್​ ಮೇಲೆ “ಯತ್ರಾ ಅವಸರ ಪ್ರಾಪ್ನೋತಿಹಿ” ಎಂದು ಬರೆಯಲಾಗಿತ್ತು. ಇದನ್ನೇ ಪ್ರಸಿದ್ಧ ಐಪಿಎಲ್​ ಟ್ರೋಫಿಯಲ್ಲಿಯೂ ಬರೆಯಲಾಗಿದೆ. ಐಪಿಎಲ್​ ಎಂಬುದು ಸ್ಥಳೀಯ ಆಟಗಾರರ ಪ್ರತಿಭೆಯನ್ನು ಅನಾವರಣ ಮಾಡಿಸಲು ಇರುವಂತ ಉತ್ತಮ ವೇದಿಕೆಯಾಗಿದೆ.

VISTARANEWS.COM


on

IPL 2024
Koo

ಚೆನ್ನೈ: ವಿಶ್ವದಲ್ಲೇ ಅತ್ಯಂತ ಶ್ರೀಮಂತ ಟಿ20 ಲೀಗ್ ಆಗಿರುವ ಇಂಡಿಯನ್ ಪ್ರೀಮಿಯರ್ ಲೀಗ್​ನ 17ನೇ ಆವೃತ್ತಿ(IPL 2024) ಕೊನೆಯ ಹಂತಕ್ಕೆ ಬಂದು ನಿಂತಿದೆ. ನಾಳೆ(ಭಾನುವಾರ) ನಡೆಯುವ ಫೈನಲ್​ ಪಂದ್ಯದಲ್ಲಿ ಕೆಕೆಆರ್​ ಮತ್ತು ಹೈದರಾಬಾದ್​ ತಂಡಗಳು ಕದಾಟ ನಡೆಸಲಿದೆ. ಟೂರ್ನಿಗೆ ವಿಧ್ಯುಕ್ತ ಚಾಲನೆ ಸಿಕ್ಕ ಚೆನ್ನೈನ ಚೆಪಾಕ್‌ ಕ್ರೀಡಾಂಗಣದಲ್ಲಿಯೇ ಕೂಟಕ್ಕೆ ತೆರೆ ಬೀಳಲಿದೆ. ಈ ಬಾರಿ ಚಾಂಪಿಯನ್​ ಯಾರಾಗಬಹುದು ಎನ್ನುವ ಕುತೂಹಲದ ಮಧ್ಯೆ ಟ್ರೋಫಿಯಲ್ಲಿ(IPL Trophy) ಬರೆದಿರುವ ಸಂಸ್ಕೃತ ಶ್ಲೋಕದ(IPL Trophy Shlok) ಅರ್ಥವೇನು? 1983ರ ವಿಶ್ವಕಪ್(1983 Cricket World Cup) ಟ್ರೋಫಿಗೂ ಇರುವ ನಂಟೇನು?​ ಎಂಬ ಮತ್ತೊಂದು ಕುತೂಹಲ ಅಭಿಮಾನಿಗಳದ್ದು.

ಭಾರತದ ಮೊದಲ ವಿಶ್ವಕಪ್​ ನಂಟು


ಐಪಿಎಲ್​ ಟ್ರೋಫಿಯಲ್ಲಿ ಬರೆದಿರುವ ಸಂಸ್ಕೃತ ಶ್ಲೋಕಕ್ಕೂ 1983ರ ವಿಶ್ವಕಪ್ ಟ್ರೋಫಿಗೂ ನಂಟಿದೆ. ಹೌದು, ಭಾರತ ತಂಡ 1983ರಲ್ಲಿ ಗೆದ್ದ ಏಕದಿನ ವಿಶ್ವಕಪ್ ಟ್ರೋಫಿ ಮೇಲೆ “ಯತ್ರಾ ಅವಸರ ಪ್ರಾಪ್ನೋತಿಹಿ”(Yatra Pratibha Avsara Prapnotihi) ಎಂಬ ಸಂಸ್ಕೃತ ಶ್ಲೋಕವೊಂದನ್ನು ಬರೆಯಲಾಗಿತ್ತು. ಇದೇ ಶ್ಲೋಕವನ್ನು ಐಪಿಎಲ್​ ಟ್ರೋಫಿಯಲ್ಲಿಯೂ ಬರೆಯಲಾಗಿದೆ. ಇದರ ಅರ್ಥ ಎಲ್ಲಿ ಪ್ರತಿಭೆಗಳು ಇರುತ್ತಾರೋ ಅಲ್ಲಿ ಅವಕಾಶವೂ ಇರುತ್ತದೆ ಎಂದು. ಇದನ್ನೇ ಸ್ಫೂರ್ತಿಯನ್ನಾಗಿಟ್ಟುಕೊಂಡು ಐಪಿಎಲ್​ ಟ್ರೋಫಿಯ ಮೇಲೂ ಈ ಶ್ಲೋಕವನ್ನು ಕೆತ್ತಲಾಗಿದೆ.


1983ರಲ್ಲಿ ಕಪಿಲ್​ ದೇವ್​ ಸಾರಥ್ಯದ ಭಾರತ ತಂಡ ಲಂಡನ್​ಗೆ ವಿಶ್ವಕಪ್​ ಆಡಲು ತೆರಳಿದ್ದಾಗ ಭಾರತ ತಂಡವನ್ನು ಅತ್ಯಂತ ಕೀಳು ಮಟ್ಟದಲ್ಲಿ ಅಪಮಾನ ಮಾಡಲಾಗಿತ್ತು. ಅದರಲ್ಲೂ ಇಂಗ್ಲೆಂಡ್​ ಮತ್ತು ಆಸ್ಟ್ರೇಲಿಯಾ ಮಾಧ್ಯಮಗಳು ಕೆಲ ಸವಾಲನ್ನು ಹಾಕಿದ್ದವು. ಸ್ವತಃ ಭಾರತೀಯರೀಗೂ ಕಪ್​ ಗೆಲ್ಲುವ ವಿಶ್ವಾಸವಿರಲಿಲ್ಲ. ಆದರೆ ಅಂದು ಕಪೀಲ್​ ದೇವ್​ ಪಡೆ ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿತ್ತು.

ಕಪಿಲ್​ ಸಾರಥ್ಯದಲ್ಲಿ ಗೆದ್ದ ವಿಶ್ವ ಕಪ್​ ಮೇಲೆ “ಯತ್ರಾ ಅವಸರ ಪ್ರಾಪ್ನೋತಿಹಿ” ಎಂದು ಬರೆಯಲಾಗಿತ್ತು. ಇದನ್ನೇ ಪ್ರಸಿದ್ಧ ಐಪಿಎಲ್​ ಟ್ರೋಫಿಯಲ್ಲಿಯೂ ಬರೆಯಲಾಗಿದೆ. ಐಪಿಎಲ್​ ಎಂಬುದು ಸ್ಥಳೀಯ ಆಟಗಾರರ ಪ್ರತಿಭೆಯನ್ನು ಅನಾವರಣ ಮಾಡಿಸಲು ಇರುವಂತ ಉತ್ತಮ ವೇದಿಕೆಯಾಗಿದೆ. ಈ ಟೂರ್ನಿಯಿಂದ ಅದೆಷ್ಟೋ ಆಟಗಾರರು ಬೆಳಕಿಗೆ ಬಂದು ಇಂದು ವಿಶ್ವದ ನಂ.1 ಆಟಗಾರರಾಗಿಯೂ ಮೆರೆದಾಡಿದ್ದಾರೆ. ಈ ಕಾರಣದಿಂದ ಟ್ರೋಫಿ ಮೇಲೆ ಬರೆದಿರುವ ಶ್ಲೋಕ ಅರ್ಥಪೂರ್ಣವಾಗಿದೆ.

ಇದನ್ನೂ ಓದಿ IPL 2024 Prize money: ಐಪಿಎಲ್​ ವಿನ್ನರ್​ಗೆ ಸಿಗುವ ಬಹುಮಾನ ಮೊತ್ತವೆಷ್ಟು? 4ನೇ ಸ್ಥಾನಿ ಆರ್​ಸಿಬಿಗೆ ಸಿಕ್ಕ ಹಣವೆಷ್ಟು?

ಒಟ್ಟು 46.5 ಕೋಟಿ ರೂ. ಬಹುಮಾನ ಮೊತ್ತ


ಫೈನಲ್​ನಲ್ಲಿ ವಿಜೇತ ತಂಡ 20 ಕೋಟಿ ರೂಪಾಯಿ ಬಹುಮಾನವನ್ನು ಪಡೆಯಲಿದೆ. ರನ್ನರ್ ಅಪ್‌ ತಂಡಕ್ಕೆ 15 ಕೋಟಿ ರೂ. ಸಿಗಲಿದೆ. ಮೂರನೇ ಸ್ಥಾನಿಯಾದ ತಂಡಕ್ಕೆ 7 ಕೋಟಿ ಮತ್ತು 4ನೇ ಸ್ಥಾನಿಗೆ 6.5 ಕೋಟಿ ರೂ ಸಿಗಲಿದೆ. ಈಗಾಗಲೇ ರಾಜಸ್ಥಾನ್​ ಮತ್ತು ಆರ್​ಸಿಬಿ ಪ್ಲೇ ಆಫ್​ನಲ್ಲಿ ಸೋಲಿ ಕಂಡು ಕ್ರಮವಾಗಿ 3 ಮತ್ತು ನಾಲ್ಕನೇ ಸ್ಥಾನ ಪಡೆದಿವೆ. ಹೀಗಾಗಿ ರಾಜಸ್ಥಾನ್​ಗೆ(7 ಕೋಟಿ) ಮತ್ತು ಆರ್​ಸಿಬಿಗೆ(6.5 ಕೋಟಿ) ಮೊತ್ತ ಸಿಗಲಿದೆ. ಒಟ್ಟು ಬಹುಮಾನ ಮೊತ್ತ 46.5 ಕೋಟಿ ರೂ. ಆಗಿದೆ.

Continue Reading

ಕ್ರೀಡೆ

IPL 2024 Prize money: ಐಪಿಎಲ್​ ವಿನ್ನರ್​ಗೆ ಸಿಗುವ ಬಹುಮಾನ ಮೊತ್ತವೆಷ್ಟು? 4ನೇ ಸ್ಥಾನಿ ಆರ್​ಸಿಬಿಗೆ ಸಿಕ್ಕ ಹಣವೆಷ್ಟು?

IPL 2024 Prize money: ಟೂರ್ನಿಯಲ್ಲಿ ಅತ್ಯಧಿಕ ರನ್​ ಗಳಿಸಿದ ಆಟಗಾರನಿಗೆ ಆರೆಂಜ್ ಕ್ಯಾಪ್ ನೀಡಲಾಗುತ್ತದೆ. ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗೆ ಪರ್ಪಲ್ ಕ್ಯಾಪ್ ನೀಡಲಾಗುತ್ತದೆ. ಆರೆಂಜ್ ಮತ್ತು ಪರ್ಪಲ್ ಕ್ಯಾಪ್ ಗೆದ್ದ ಆಟಗಾರರಿಗೆ 15 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ.

VISTARANEWS.COM


on

IPL 2024 Prize money
Koo

ಚೆನ್ನೈ: 17ನೇ ಆವೃತ್ತಿಯ ಐಪಿಎಲ್(IPL 2024)​ ಟೂರ್ನಿ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಭಾನುವಾರ ನಡೆಯಲಿರುವ ಫೈನಲ್​ ಪಂದ್ಯದಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್​ ಮತ್ತು ಸನ್​ರೈಸರ್ಸ್​ ಹೈದರಾಬಾದ್​ ತಂಡಗಳು ಪ್ರಶಸ್ತಿಗಾಗಿ ಕಾದಾಟ ನಡೆಸಲಿದೆ. ವಿಶ್ವದಲ್ಲೇ ಅತ್ಯಂತ ಶ್ರೀಮಂತ ಟಿ20 ಲೀಗ್ ಆಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ ವಿಜೇತರು(IPL 2024 Prize money) ಎಷ್ಟು ಹಣ ಪಡೆಯುತ್ತಾರೆ ಎನ್ನುವುದು ಕುತೂಲಕಾರಿ ವಿಚಾರ ಇಂತಿದೆ.

ಫೈನಲ್​ನಲ್ಲಿ ವಿಜೇತ ತಂಡ 20 ಕೋಟಿ ರೂಪಾಯಿ ಬಹುಮಾನವನ್ನು ಪಡೆಯಲಿದೆ. ರನ್ನರ್ ಅಪ್‌ ತಂಡಕ್ಕೆ 15 ಕೋಟಿ ರೂ. ಸಿಗಲಿದೆ. ಮೂರನೇ ಸ್ಥಾನಿಯಾದ ತಂಡಕ್ಕೆ 7 ಕೋಟಿ ಮತ್ತು 4ನೇ ಸ್ಥಾನಿಗೆ 6.5 ಕೋಟಿ ರೂ ಸಿಗಲಿದೆ. ಈಗಾಗಲೇ ರಾಜಸ್ಥಾನ್​ ಮತ್ತು ಆರ್​ಸಿಬಿ ಪ್ಲೇ ಆಫ್​ನಲ್ಲಿ ಸೋಲಿ ಕಂಡು ಕ್ರಮವಾಗಿ 3 ಮತ್ತು ನಾಲ್ಕನೇ ಸ್ಥಾನ ಪಡೆದಿವೆ. ಹೀಗಾಗಿ ರಾಜಸ್ಥಾನ್​ಗೆ(7 ಕೋಟಿ) ಮತ್ತು ಆರ್​ಸಿಬಿಗೆ(6.5 ಕೋಟಿ) ಮೊತ್ತ ಸಿಗಲಿದೆ. ಒಟ್ಟು ಬಹುಮಾನ ಮೊತ್ತ 46.5 ಕೋಟಿ ರೂ. ಆಗಿದೆ.

ಟೂರ್ನಿಯಲ್ಲಿ ಅತ್ಯಧಿಕ ರನ್​ ಗಳಿಸಿದ ಆಟಗಾರನಿಗೆ ಆರೆಂಜ್ ಕ್ಯಾಪ್ ನೀಡಲಾಗುತ್ತದೆ. ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗೆ ಪರ್ಪಲ್ ಕ್ಯಾಪ್ ನೀಡಲಾಗುತ್ತದೆ. ಆರೆಂಜ್ ಮತ್ತು ಪರ್ಪಲ್ ಕ್ಯಾಪ್ ಗೆದ್ದ ಆಟಗಾರರಿಗೆ 15 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ. ಸದ್ಯ ಆರ್​ಸಿಬಿ ತಂಡದ ವಿರಾಟ್​ ಕೊಹ್ಲಿ ಈ ಬಾರಿಯ ಟೂರ್ನಿಯಲ್ಲಿ 741 ರನ್​ ಬಾರಿಸಿ ಆರೆಂಜ್ ಕ್ಯಾಪ್ ಹೋಲ್ಡರ್​ ಆಗಿದ್ದಾರೆ. ಇವರ ರನ್​ ಹಿಂದಿಕ್ಕಲು ಇನ್ನು ಯಾರಿಗೂ ಅವಕಾಶ ಇಲ್ಲದ ಕಾರಣ ಈ ಪ್ರಶಸ್ತಿ ಇವರಿಗೇ ಸಿಗಲಿದೆ.

ಪರ್ಪಲ್​ ಕ್ಯಾಪ್​ ಸದ್ಯ 24 ವಿಕೆಟ್​ ಪಡೆದಿರುವ ಪಂಜಾಬ್ ಕಿಂಗ್ಸ್​​ ತಂಡದ ಹರ್ಷಲ್​ ಪಟೇಲ್​ ಬಳಿ ಇದೆ. ಆದರೆ ಈ ಕ್ಯಾಪ್​ ಪಡೆಯಲು ಕೆಕೆಆರ್​ ತಂಡದ ಸ್ಪಿನ್ನರ್​ ವರಣ್​ ಚರ್ಕವರ್ತಿಗೆ ಉತ್ತಮ ಅವಕಾಶವಿದೆ. ವರುಣ್​ ಸದ್ಯ 20 ವಿಕೆಟ್​ ಕಿತ್ತಿದ್ದಾರೆ. ಫೈನಲ್​ ಪಂದ್ಯದಲ್ಲಿ 5 ವಿಕೆಟ್​ ಕಿತ್ತರೆ ಈ ಕ್ಯಾಪ್​ ಇವರ ಪಾಲಾಗಲಿದೆ.

ಪಂದ್ಯಾವಳಿಯ ಉದಯೋನ್ಮುಖ ಆಟಗಾರನಿಗೆ 20 ಲಕ್ಷ ರೂಪಾಯಿ ನಗದು ಬಹುಮಾನವನ್ನು ಸಿಗಲಿದೆ. ಋತುವಿನ ಅತ್ಯಂತ ಮೌಲ್ಯಯುತ ಆಟಗಾರ 12 ಲಕ್ಷ ರೂಪಾಯಿ, ಇತರ ಪ್ರಶಸ್ತಿಗಳಾದ-ಪವರ್ ಪ್ಲೇಯರ್ ಆಫ್ ದಿ ಸೀಸನ್, ಸೂಪರ್ ಸ್ಟ್ರೈಕರ್ ಆಫ್ ದಿ ಸೀಸನ್ ಮತ್ತು ಗೇಮ್ ಚೇಂಜರ್ ಆಫ್ ದಿ ಸೀಸನ್ ಪಡೆದ ಆಟಗಾರ ಕ್ರಮವಾಗಿ ರೂ 15 ಲಕ್ಷ ಮತ್ತು ರೂ 12 ಲಕ್ಷ ನಗದು ಬಹುಮಾನ ಪಡೆಯಲಿದ್ದಾರೆ.

ಇದನ್ನೂ ಓದಿ IPL 2024 : ಅಭಿಮಾನಿಗಳ ದುರಂಹಕಾರವೇ ಆರ್​​ಸಿಬಿ ಸೋಲಿಗೆ ಕಾರಣ ಎಂದ ಮಾಜಿ ಕ್ರಿಕೆಟಿಗ

ಐಪಿಎಲ್​ ಟ್ರೋಫಿಯಲ್ಲಿರುವ ಸಂಸ್ಕೃತ ಶ್ಲೋಕದ ಅರ್ಥವೇನು?


ಈ ಬಾರಿ ಚಾಂಪಿಯನ್​ ಯಾರಾಗಬಹುದು ಎನ್ನುವ ಕುತೂಹಲದ ಮಧ್ಯೆ ಟ್ರೋಫಿಯಲ್ಲಿ(IPL Trophy) ಬರೆದಿರುವ ಸಂಸ್ಕೃತ ಶ್ಲೋಕದ(IPL Trophy Shlok) ಅರ್ಥವೇನು? 1983ರ ವಿಶ್ವಕಪ್(1983 Cricket World Cup) ಟ್ರೋಫಿಗೂ ಇರುವ ನಂಟೇನು?​ ಎಂಬ ಮತ್ತೊಂದು ಕುತೂಹಲ ಅಭಿಮಾನಿಗಳದ್ದು. ಇದಕ್ಕೆ ಉತ್ತರ ಇಲ್ಲಿದೆ.

ಹೌದು, ಭಾರತ ತಂಡ 1983ರಲ್ಲಿ ಗೆದ್ದ ಏಕದಿನ ವಿಶ್ವಕಪ್ ಟ್ರೋಫಿ ಮೇಲೆ “ಯತ್ರಾ ಅವಸರ ಪ್ರಾಪ್ನೋತಿಹಿ”(Yatra Pratibha Avsara Prapnotihi) ಎಂದು ಸಂಸ್ಕೃತ ಶ್ಲೋಕವೊಂದನ್ನು ಬರೆಯಲಾಗಿದೆ. ಇದೇ ಶ್ಲೋಕವನ್ನು ಐಪಿಎಲ್​ ಟ್ರೋಫಿಯಲ್ಲಿಯೂ ಬರೆಯಲಾಗಿದೆ. ಇದರ ಅರ್ಥ ಎಲ್ಲಿ ಪ್ರತಿಭೆಗಳು ಇರುತ್ತಾರೋ ಅಲ್ಲಿ ಅವಕಾಶವೂ ಇರುತ್ತದೆ ಎಂದು. ಇದನ್ನೇ ಸ್ಫೂರ್ತಿಯನ್ನಾಗಿಟ್ಟುಕೊಂಡು ಐಪಿಎಲ್​ ಟ್ರೋಫಿಯ ಮೇಲೂ ಈ ಶ್ಲೋಕವನ್ನು ಕೆತ್ತಲಾಗಿದೆ.

Continue Reading

ಕ್ರೀಡೆ

T20 World Cup 2024: ಇಂದು ಟೀಮ್​ ಇಂಡಿಯಾದ ಮೊದಲ ಬ್ಯಾಚ್​ ನ್ಯೂಯಾರ್ಕ್​ಗೆ ಪ್ರಯಾಣ

T20 World Cup 2024: ಟೀಮ್​ ಇಂಡಿಯಾದ(team india) ಮೊದಲ ಬ್ಯಾಚ್​ ಇಂದು (ಮೇ 25) ನ್ಯೂಯಾರ್ಕ್(New York)​ಗೆ ಪ್ರಯಾಣಿಸಲಿದೆ. ರಾತ್ರಿ 10 ಗಂಟೆಗೆ ಮುಂಬೈ ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಲಿದ್ದಾರೆ.

VISTARANEWS.COM


on

T20 World Cup 2024
Koo

ಮುಂಬಯಿ: ಐಸಿಸಿ ಪುರುಷರ ಟಿ20 ವಿಶ್ವಕಪ್​ ಟೂರ್ನಿ(T20 World Cup 2024) ಆರಂಭಕ್ಕೆ ಇನ್ನು ಕೇವಲ ಒಂದು ವಾರ ಮಾತ್ರ ಬಾಕಿ ಉಳಿದಿವೆ. ಮೇ 27ರಿಂದ ಅಭ್ಯಾಸ ಪಂದ್ಯಗಳು ಆರಂಭಗೊಳ್ಳಲಿದೆ. ಲೀಗ್​ ಹಂತದ ಪಂದ್ಯಗಳಿಗೆ ಜೂನ್​ 1ರಿಂದ ಚಾಲನೆ ಸಿಗಲಿದೆ. ಈ ಮಹತ್ವದ ಟೂರ್ನಿಯನ್ನಾಡಲು ಟೀಮ್​ ಇಂಡಿಯಾದ(team india) ಮೊದಲ ಬ್ಯಾಚ್​ ಇಂದು (ಮೇ 25) ನ್ಯೂಯಾರ್ಕ್(New York)​ಗೆ ಪ್ರಯಾಣಿಸಲಿದೆ.

ಬಿಸಿಸಿಐ ಮೂಲಗಳು ಪಿಟಿಐಗೆ ತಿಳಿಸಿದ ಮಾಹಿತಿ ಪ್ರಕಾರ ಮೊದಲ ಬ್ಯಾಚ್​ನಲ್ಲಿ ನಾಯಕ ರೋಹಿತ್​ ಶರ್ಮ(Rohit Sharma), ವಿರಾಟ್​ ಕೊಹ್ಲಿ(Virat Kohli), ರಿಷಭ್​ ಪಂತ್​, ಜಸ್​ಪ್ರೀತ್​ ಬುಮ್ರಾ, ಸೂರ್ಯಕುಮಾರ್​ ಯಾದವ್, ಮೊಹಮ್ಮದ್​ ಸಿರಾಜ್​​ ಸೇರಿ ಐಪಿಎಲ್​ ಪ್ಲೇ ಆಫ್​ನಿಂದ ಹೊರಬಿದ್ದ ತಂಡದ ಆಟಗಾರರು ಮತ್ತು ತಂಡದ ಕೋಚ್​ ಮತ್ತು ಸಿಬ್ಬಂದಿಗಳು ಇಂದು ನ್ಯೂಯಾರ್ಕ್​ಗೆ ಪ್ರಯಾಣಿಸಲಿದ್ದಾರೆ. ರಾತ್ರಿ 10 ಗಂಟೆಗೆ ಮುಂಬೈ ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಲಿದ್ದಾರೆ. ಉಪನಾಯಕ ಹಾರ್ದಿಕ್​ ಪಾಂಡ್ಯ ಲಂಡನ್​ನಲ್ಲಿರುವ ಕಾರಣ ಅಲ್ಲಿಂದಲೇ ಅವರು ನ್ಯೂಯಾರ್ಕ್​ಗೆ ಪ್ರಯಾಣಿಸಲಿದ್ದಾರೆ ಎಂದು ತಿಳಿದುಬಂದಿದೆ. ಯಶಸ್ವಿ ಜೈಸ್ವಾಲ್​, ರಿಂಕು ಸಿಂಗ್​ ಮತ್ತು ಸಂಜು ಸ್ಯಾಮ್ಸನ್​ 2ನೇ ಬ್ಯಾಚ್​ನಲ್ಲಿ ಪ್ರಯಾಣಿಸುವ ಆಟಗಾರರಾಗಿದ್ದಾರೆ.

ಭಾರತ ಕೇವಲ ಒಂದೇ ಅಭ್ಯಾಸ ಪಂದ್ಯವನ್ನು ಆಡಲಿದೆ. ಮೂಲ ವೇಳಾಪಟ್ಟಿಯ ಪ್ರಕಾರ ಭಾರತ ತಂಡದ ಆಟಗಾರರು ಮೇ 21ರಂದು ನ್ಯೂಯಾರ್ಕ್​ಗೆ ತೆರಳಬೇಕಿತ್ತು. ಆದರೆ ಐಪಿಎಲ್​ ಟೂರ್ನಿಯಿಂದಾಗಿ ಇದು ಸಾಧ್ಯವಾಗಲಿಲ್ಲ. ಭಾರತೀಯ ಆಟಗಾರರು ವ್ಯಾಪಕ ಪ್ರಯಾಣ ಮತ್ತು ಐಪಿಎಲ್​ನಿಂದ ದಣಿದಿರುವ ಕಾರಣ ಕೇವಲ ಒಂದು ಅಭ್ಯಾಸ ಪಂದ್ಯಕ್ಕೆ ಮೊರೆ ಹೋಗಿದ್ದಾರೆ. ಜೂನ್​ 1 ರಂದು ಬಾಂಗ್ಲಾದೇಶ ವಿರುದ್ಧ ಭಾರತ ಈ ಪಂದ್ಯವನ್ನು ಆಡಲಿದೆ.

ಭಾರತ ತನ್ನ ಮೊದಲ ಲೀಗ್​ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ.

ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

Continue Reading

ಕ್ರೀಡೆ

T20 World Cup 2024: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 20 ತಂಡಗಳ ಆಟಗಾರರ ಪಟ್ಟಿ ಹೀಗಿದೆ

T20 World Cup 2024: ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು, ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಫೈನಲ್​ ಪಂದ್ಯ ಜೂನ್​ 29ರಂದು ನಡೆಯಲಿದೆ.

VISTARANEWS.COM


on

T20 World Cup 2024
Koo

ನ್ಯೂಯಾರ್ಕ್​: ಪ್ರತಿಷ್ಠಿತ ಐಸಿಸಿ ಪುರುಷರ ಟಿ20 ವಿಶ್ವಕಪ್​ ಟೂರ್ನಿ(T20 World Cup 2024) ಆರಂಭಕ್ಕೆ ಇನ್ನು ಕೇವಲ ಒಂದು ವಾರ ಮಾತ್ರ ಬಾಕಿ ಉಳಿದಿವೆ. ಈ ಟೂರ್ನಿ ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯಲಿದೆ. ಅಮೆರಿಕ ಇದೇ ಮೊದಲ ಬಾರಿಗೆ ಕ್ರಿಕೆಟ್ ಟೂರ್ನಿಯೊಂದರ ಆತಿಥ್ಯ ಪಡೆದಿರುವುದು. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು, ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಫೈನಲ್​ ಪಂದ್ಯ ಜೂನ್​ 29ರಂದು ನಡೆಯಲಿದೆ. ಒಟ್ಟು 20 ತಂಡಗಳ ನಡುವಣ ಕಾದಾಟ ಇದಾಗಿದೆ. ಎಲ್ಲ 20 ತಂಡಗಳ ಪಟ್ಟಿ ಇಂತಿದೆ.

ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

ನ್ಯೂಜಿಲ್ಯಾಂಡ್​ ತಂಡ


ಕೇನ್ ವಿಲಿಯಮ್ಸನ್ (ನಾಯಕ), ಫಿನ್ ಅಲೆನ್, ಟ್ರೆಂಟ್ ಬೌಲ್ಟ್, ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೆವೊನ್ ಕಾನ್ವೆ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಡ್ಯಾರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ. ಮೀಸಲು ಆಟಗಾರ: ಬೆನ್ ಸಿಯರ್ಸ್.

ಆಸ್ಟ್ರೇಲಿಯಾ ತಂಡ

ಮಿಚೆಲ್ ಮಾರ್ಷ್ (ನಾಯಕ), ಆ್ಯಶ್ಟನ್​ ಅಗರ್, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆ್ಯಡಂ ಝಂಪಾ.

ಪಾಕಿಸ್ತಾನ ತಂಡ


ಬಾಬರ್ ಅಜಂ (ನಾಯಕ), ಅಬ್ರಾರ್ ಅಹ್ಮದ್, ಅಜಮ್ ಖಾನ್, ಫಖರ್ ಜಮಾನ್, ಹ್ಯಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಇಮಾದ್ ವಾಸಿಮ್, ಮೊಹಮ್ಮದ್ ಅಬ್ಬಾಸ್ ಅಫ್ರಿದಿ, ಮೊಹಮ್ಮದ್ ಅಮೀರ್, ಮೊಹಮ್ಮದ್ ರಿಜ್ವಾನ್, ನಸೀಮ್ ಶಾ, ಸೈಮ್ ಅಯೂಬ್, ಶಾದಾಬ್ ಖಾನ್, ಶಾಹೀನ್ ಶಾಹ್ಮಾನ್ ಅಫ್ರಿದಿ, ಉಸ್ಮಾನ್ ಖಾನ್.

ಇಂಗ್ಲೆಂಡ್​ ತಂಡ


ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಜೋಫ್ರಾ ಆರ್ಚರ್, ಜಾನಿ ಬೈರ್‌ಸ್ಟೋ, ಹ್ಯಾರಿ ಬ್ರೂಕ್, ಸ್ಯಾಮ್ ಕರ್ರಾನ್, ಬೆನ್ ಡಕೆಟ್, ಟಾಮ್ ಹಾರ್ಟ್ಲಿ, ವಿಲ್ ಜ್ಯಾಕ್ಸ್, ಕ್ರಿಸ್ ಜೋರ್ಡಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಆದಿಲ್ ರಶೀದ್, ಫಿಲ್ ಸಾಲ್ಟ್, ರೀಸ್ ಟೋಪ್ಲಿ, ಮಾರ್ಕ್ ವುಡ್.

ದಕ್ಷಿಣ ಆಫ್ರಿಕಾ ತಂಡ


ಐಡೆನ್ ಮಾರ್ಕ್ರಾಮ್ (ನಾಯಕ), ಒಟ್ನಿಯೆಲ್ ಬಾರ್ಟ್‌ಮ್ಯಾನ್, ಜೆರಾಲ್ಡ್ ಕೊಡ್ಜಿ, ಕ್ವಿಂಟನ್ ಡಿ ಕಾಕ್, ಜಾರ್ನ್ ಫಾರ್ಟುಯಿನ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಜಾನ್ಸೆನ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಡೇವಿಡ್ ಮಿಲ್ಲರ್, ಆನ್ರಿಚ್ ನಾರ್ಜೆ, ಕಗಿಸೊ ರಬಾಡಾ, ರಿಯಾನ್ ರಿಕೆಲ್ಟನ್, ಟ್ರೀಸ್ಟಾನ್ ಸ್ಟಬ್ಸ್​, ತಬ್ರೈಜ್ ಶಂಸಿ. ಮೀಸಲು ಆಟಗಾರು: ಲುಂಗಿ ಎನ್​ಗಿಡಿ, ಬರ್ಗರ್.

ಅಫಘಾನಿಸ್ಥಾನ ತಂಡ


ರಶೀದ್‌ ಖಾನ್‌ (ನಾಯಕ), ರೆಹಮಾನುಲ್ಲ ಗುರ್ಬಜ್‌, ಇಬ್ರಾಹಿಂ ಜದ್ರಾನ್‌, ಅಜ್ಮತುಲ್ಲ ಒಮರ್‌ಜಾಯ್‌, ನಜೀಬುಲ್ಲ ಜದ್ರಾನ್‌, ಮೊಹಮ್ಮದ್‌ ಇಶಾಖ್‌, ಮೊಹಮ್ಮದ್‌ ನಬಿ, ಗುಲ್ಬದಿನ್‌ ನೈಬ್‌, ಕರೀಂ ಜನ್ನತ್‌, ನಂಗ್ಯಾಲ್‌ ಖರೋಟಿ, ಮುಜೀಬ್‌ ಉರ್‌ ರೆಹಮಾನ್‌, ನೂರ್‌ ಅಹ್ಮದ್‌, ನವೀನ್‌ ಉಲ್‌ ಹಕ್‌, ಫ‌ಜಲ್‌ ಹಕ್‌ ಫಾರೂಖೀ, ಫ‌ರೀದ್‌ ಅಹ್ಮದ್‌ ಮಲಿಕ್‌. ಮೀಸಲು ಆಟಗಾರರು: ಸಾದಿಕ್‌ ಉಲ್ಲ ಅಟಲ್‌, ಹಜ್ರತುಲ್ಲ ಜಜಾಯ್‌, ಮೊಹಮ್ಮದ್‌ ಸಲೀಂ ಸಫಿ.

ಕೆನಡಾ ತಂಡ


ಸಾದ್ ಬಿನ್ ಜಾಫರ್ (ನಾಯಕ), ಆರನ್ ಜಾನ್ಸನ್, ದಿಲೋನ್ ಹೇಲಿಗರ್, ದಿಲ್‌ಪ್ರೀತ್ ಬಜ್ವಾ, ಹರ್ಷ್ ಠಾಕರ್, ಜೆರೆಮಿ ಗಾರ್ಡನ್, ಜುನೈದ್ ಸಿದ್ದಿಕಿ, ಕಲೀಮ್ ಸನಾ, ಕನ್ವರ್‌ಪಾಲ್ ತತ್‌ಗುರ್, ನವನೀತ್ ಧಲಿವಾಲ್, ನಿಕೋಲಸ್ ಕಿರ್ಟನ್, ಪರ್ಗತ್ ಸಿಂಗ್, ರವೀಂದರ್‌ಪಾಲ್ ಸಿಂಗ್, ರಾಯನ್‌ಖಾನ್‌ಸ್ಹಾನ್, ಶ್ವಾಖಾನ್‌ಸ್ಹಾನ್‌ಸ್ಯಾನ್. ಮೀಸಲು ಆಟಗಾರ: ತಜೀಂದರ್ ಸಿಂಗ್, ಆದಿತ್ಯ ವರದರಾಜನ್, ಅಮ್ಮರ್ ಖಾಲಿದ್, ಜತೀಂದರ್ ಮಥಾರು, ಪರ್ವೀನ್ ಕುಮಾರ್.

ನೇಪಾಳ ತಂಡ


ರೋಹಿತ್ ಪೌಡೆಲ್ (ನಾಯಕ), ಆಸಿಫ್ ಶೇಖ್, ಅನಿಲ್ ಕುಮಾರ್ ಸಾಹ್, ಕುಶಾಲ್ ಭುರ್ಟೆಲ್, ಕುಶಾಲ್ ಮಲ್ಲಾ, ದೀಪೇಂದ್ರ ಸಿಂಗ್ ಐರಿ, ಲಲಿತ್ ರಾಜಬಂಶಿ, ಕರಣ್ ಕೆಸಿ, ಗುಲ್ಶನ್ ಝಾ, ಸೋಂಪಾಲ್ ಕಾಮಿ, ಪ್ರತಿಸ್ ಜಿಸಿ, ಸಂದೀಪ್ ಜೋರಾ, ಅಬಿನಾಶ್ ಬೋಹರಾ, ಸಾಗರ್ ಧಕಲ್, ಕಮಲ್ ಸಿಂಗ್ ಐರಿ.

ಒಮಾನ್​ ತಂಡ


ಅಕಿಬ್ ಇಲ್ಯಾಸ್ (ನಾಯಕ), ಜೀಶನ್ ಮಕ್ಸೂದ್, ಕಶ್ಯಪ್ ಪ್ರಜಾಪತಿ, ಪ್ರತೀಕ್ ಅಠವಲೆ (ವಿಕಿ), ಅಯಾನ್ ಖಾನ್, ಶೋಯೆಬ್ ಖಾನ್, ಮೊಹಮ್ಮದ್ ನದೀಮ್, ನಸೀಮ್ ಖುಷಿ (ವಿಕಿ), ಮೆಹ್ರಾನ್ ಖಾನ್, ಬಿಲಾಲ್ ಖಾನ್, ರಫಿಯುಲ್ಲಾ, ಕಲೀಮುಲ್ಲಾ, ಫಯಾಜ್ ಬಟ್, ಶಕೀಲ್ ಅಹ್ಮದ್ , ಖಾಲಿದ್ ಕೈಲ್. ಮೀಸಲು ಆಟಗಾರ: ಜತೀಂದರ್ ಸಿಂಗ್, ಸಮಯ್ ಶ್ರೀವಾಸ್ತವ, ಸುಫ್ಯಾನ್ ಮೆಹಮೂದ್, ಜೇ ಒಡೆದ್ರಾ.

ಸ್ಕಾಟ್ಲೆಂಡ್​ ತಂಡ


ರಿಚಿ ಬೆರಿಂಗ್ಟನ್ (ನಾಯಕ), ಮ್ಯಾಥ್ಯೂ ಕ್ರಾಸ್, ಬ್ರಾಡ್ ಕ್ಯೂರಿ, ಕ್ರಿಸ್ ಗ್ರೀವ್ಸ್, ಒಲಿ ಹೇರ್ಸ್, ಜ್ಯಾಕ್ ಜಾರ್ವಿಸ್, ಮೈಕೆಲ್ ಜೋನ್ಸ್, ಮೈಕೆಲ್ ಲೀಸ್ಕ್, ಬ್ರಾಂಡನ್ ಮೆಕ್‌ಮುಲ್ಲೆನ್, ಜಾರ್ಜ್ ಮನ್ಸೆ, ಸಫ್ಯಾನ್ ಷರೀಫ್, ಕ್ರಿಸ್ ಸೋಲ್, ಚಾರ್ಲಿ ಟಿಯರ್, ಮಾರ್ಕ್ ವ್ಯಾಟಲ್.

ಉಗಾಂಡ ತಂಡ

ಬ್ರಿಯಾನ್ ಮಸಾಬಾ (ನಾಯಕ), ಸೈಮನ್ ಸ್ಸೆಸಾಜಿ, ರೋಜರ್ ಮುಕಾಸಾ, ಕಾಸ್ಮಾಸ್ ಕ್ಯೆವುಟಾ, ದಿನೇಶ್ ನಕ್ರಾನಿ, ಫ್ರೆಡ್ ಅಚೆಲಮ್, ಕೆನ್ನೆತ್ ವೈಸ್ವಾ, ಅಲ್ಪೇಶ್ ರಾಮ್‌ಜಾನಿ, ಫ್ರಾಂಕ್ ನ್ಸುಬುಗಾ, ಹೆನ್ರಿ ಸೆನ್ಯೊಂಡೋ, ಬಿಲಾಲ್ ಹಸುನ್, ರಾಬಿನ್ಸನ್ ಒಬುಯಾ, ರಿಯಾಝತ್ ಅಲಿ ಮಿಯಾಜಿ, ರನಾಕ್​ ಪಟೇಲ್. ಪ್ರಯಾಣ ಮೀಸಲು: ಇನೋಸೆಂಟ್ ಮ್ವೆಬಾಜ್, ರೊನಾಲ್ಡ್ ಲುತಾಯಾ​.

ಅಮೆರಿಕ ತಂಡ

ಮೊನಾಂಕ್ ಪಟೇಲ್ (ನಾಯಕ), ಆರನ್ ಜೋನ್ಸ್ (ಉಪನಾಯಕ), ಆಂಡ್ರೀಸ್ ಗೌಸ್, ಕೋರಿ ಆಂಡರ್ಸನ್, ಅಲಿ ಖಾನ್, ಹರ್ಮೀತ್ ಸಿಂಗ್, ಜೆಸ್ಸಿ ಸಿಂಗ್, ಮಿಲಿಂದ್ ಕುಮಾರ್, ನಿಸರ್ಗ್ ಪಟೇಲ್, ನಿತೀಶ್ ಕುಮಾರ್, ನೋಷ್ಟುಶ್ ಕೆಂಜಿಗೆ, ಸೌರಭ್ ನೇತ್ರಲ್ವಾಕರ್, ಶಾಡ್ಲಿ ವ್ಯಾನ್ ಶಾಲ್ಕ್‌ವಿಕ್, ಸ್ಟೀವನ್ ಟೇಯ್ , ಶಯಾನ್ ಜಹಾಂಗೀರ್. ಮೀಸಲು ಆಟಗಾರರು: ಗಜಾನಂದ್ ಸಿಂಗ್, ಜುವಾನೊಯ್ ಡ್ರೈಸ್‌ಡೇಲ್, ಯಾಸಿರ್ ಮೊಹಮ್ಮದ್.

ವೆಸ್ಟ್​ ಇಂಡೀಸ್​ ತಂಡ


ರೋವ್‌ಮನ್ ಪೊವೆಲ್ (ನಾಯಕ), ಅಲ್ಜಾರಿ ಜೋಸೆಫ್, ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕೇಲ್ ಹೊಸೈನ್, ಶಮರ್ ಜೋಸೆಫ್, ಬ್ರಾಂಡನ್ ಕಿಂಗ್, ಗುಡಾಕೇಶ್ ಮೋಟಿ, ನಿಕೋಲಸ್ ಪೂರನ್, ಆಂಡ್ರೆ ರಸೆಲ್, ಶೆರ್ಫಾನ್ ರೊಥರ್‌ಫೋರ್ಡ್.

ನೆದರ್ಲೆಂಡ್ಸ್‌ ತಂಡ

ಸ್ಕಾಟ್‌ ಎಡ್ವರ್ಡ್ಸ್‌ (ನಾಯಕ), ಆರ್ಯನ್‌ ದತ್ತ, ಬಾಸ್‌ ಡಿ ಲೀಡ್‌, ಡೇನಿಯಲ್‌ ಡೋರಮ್‌, ಫ್ರೆಡ್‌ ಕ್ಲಾಸೆನ್‌, ಕೈಲ್‌ ಕ್ಲೀನ್‌, ಲೋಗನ್‌ ವಾನ್‌ ಬೀಕ್‌, ಮ್ಯಾಕ್ಸ್‌ ಓ’ಡೌಡ್‌, ಮೈಕಲ್‌ ಲೆವಿಟ್‌, ಪಾಲ್‌ ವಾನ್‌ ಮೀಕೆರೆನ್‌, ಸಿಬ್ರಾಂಡ್‌ ಏಂಜೆಲ್‌ಬ್ರೆಟ್‌, ತೇಜ ನಿಡಮನೂರು, ಟಿಮ್‌ ಪ್ರಿಂಗ್ಲ್, ವಿಕ್ರಮ್‌ ಸಿಂಗ್‌, ವೆಸ್ಲಿ ಬರೇಸಿ.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ ಟೂರ್ನಿಗೆ ಕಾಮೆಂಟರಿ ಬಳಗ ಘೋಷಿಸಿದ ಐಸಿಸಿ; ದಿನೇಶ್​ ಕಾರ್ತಿಕ್​ಗೂ ಸ್ಥಾನ

ಐರ್ಲೆಂಡ್ ತಂಡ

ಪಾಲ್ ಸ್ಟರ್ಲಿಂಗ್ (ನಾಯಕ), ಮಾರ್ಕ್ ಅಡೈರ್, ರಾಸ್ ಅಡೈರ್, ಆಂಡ್ರ್ಯೂ ಬಲ್ಬಿರ್ನಿ, ಕರ್ಟಿಸ್ ಕ್ಯಾಂಫರ್, ಗರೆಥ್ ಡೆಲಾನಿ, ಜಾರ್ಜ್ ಡಾಕ್ರೆಲ್, ಗ್ರಹಾಂ ಹ್ಯೂಮ್, ಜೋಶ್ ಲಿಟಲ್, ಬ್ಯಾರಿ ಮೆಕಾರ್ಥಿ, ನೀಲ್ ರಾಕ್ (ವಿಕೆಟ್ ಕೀಪರ್), ಹ್ಯಾರಿ ಟೆಕ್ಟರ್, ಲಾರ್ಕನ್ ಟಕರ್ (ವಿಕೆಟ್ ಕೀಪರ್), ಬೆನ್ ವೈಟ್ ಮತ್ತು ಕ್ರೇಗ್ ಯಂಗ್.

ಪಪುವಾ ನ್ಯೂಗಿನಿಯಾ ತಂಡ


ಅಸ್ಸಾದ್ ವಾಲಾ(ನಾಯಕ),ಸಿಜೆ ಅಮಿನಿ(ಉಪನಾಯಕ),ಅಲೆಯ್ ನಾವೊ, ಚಾಡ್ ಸೋಪರ್, ಹಿಲಾ ವರೇ, ಹಿರಿ ಹಿರಿ, ಜ್ಯಾಕ್ ಗಾರ್ಡ್ನರ್, ಜಾನ್ ಕರಿಕೊ, ಕಬುವಾ ವಾಗಿ ಮೋರಿಯಾ, ಕಿಪ್ಲಿಂಗ್ ಡೊರಿಗಾ, ಲೆಗಾ ಸಿಯಾಕಾ, ನಾರ್ಮನ್ ವನುವಾ, ಸೆಮಾ ಕಾಮಿಯಾ, ಸೆಸೆ ಬೌ, ಟೋನಿ ಉರಾ.

ಇದನ್ನೂ ಓದಿ T20 World Cup 2024: ಕೊನೆಗೂ ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಭಾರತದ ಬದ್ಧ ಎದುರಾಳಿ ಪಾಕಿಸ್ತಾನ

ಶ್ರೀಲಂಕಾ ತಂಡ


ವನಿಂದು ಹಸರಂಗ (ನಾಯಕ), ಚರಿತ್ ಅಸಲಂಕಾ, ಕುಸಲ್ ಮೆಂಡಿಸ್, ಪಾತುಂ ನಿಸ್ಸಂಕ, ಕಮಿಂದು ಮೆಂಡಿಸ್, ಸದೀರ ಸಮರವಿಕ್ರಮ, ಏಂಜೆಲೊ ಮ್ಯಾಥ್ಯೂಸ್, ದಸುನ್ ಶನಕ, ಧನಂಜಯ ಡಿ ಸಿಲ್ವ, ಮಹೇಶ್ ತೀಕ್ಷಣ, ದುನಿತ್ ವೆಲ್ಲಲಾಗೆ, ಮಥೀಷ್ ತೀಕ್ಷಣ, ದುಷ್ಮಂತ ತುಷಾರ ಚಮೀರ, ನುವಾಂತಾ ಚಮೀರ ಮಧುಶಂಕ. ಪ್ರಯಾಣ ಮೀಸಲು: ಅಸಿತ ಫೆರ್ನಾಂಡೋ, ವಿಜಯಕಾಂತ್ ವ್ಯಾಸಕಾಂತ್, ಭಾನುಕಾ ರಾಜಪಕ್ಸೆ, ಜನಿತ್ ಲಿಯಾನಗೆ.

ಬಾಂಗ್ಲಾದೇಶ ತಂಡ


ನಜ್ಮುಲ್ ಹೊಸೈನ್ ಶಾಂಟೊ (ನಾಯಕ), ತಸ್ಕಿನ್ ಅಹ್ಮದ್, ಲಿಟ್ಟನ್ ದಾಸ್, ಸೌಮ್ಯ ಸರ್ಕಾರ್, ತಂಝಿದ್ ಹಸನ್ ತಮೀಮ್, ಶಕೀಬ್ ಅಲ್ ಹಸನ್, ತೌಹಿದ್ ಹೃದಯೋಯ್, ಮಹ್ಮುದುಲ್ಲಾ ರಿಯಾದ್, ಜೇಕರ್ ಅಲಿ ಅನಿಕ್, ತನ್ವಿರ್ ಇಸ್ಲಾಂ, ಶಾಕ್ ಮಹೇದಿ ಹಸನ್, ರಿಶಾದ್ ಹೊಸ್ರಿ ಫುಲ್ ರಹ್ಮಾನ್, ಶೋಝಿನ್, ಇಸ್ಲಾಂ, ತಂಝೀಮ್ ಹಸನ್ ಸಾಕಿಬ್. ಪ್ರಯಾಣ ಮೀಸಲು: ಅಫೀಫ್ ಹೊಸೈನ್, ಹಸನ್ ಮಹಮೂದ್.

ನಮೀಬಿಯಾ ತಂಡ


ಗೆರ್ಹಾರ್ಡ್ ಎರಾಸ್ಮಸ್ (ನಾಯಕ), ಝೇನ್ ಗ್ರೀನ್, ಮೈಕೆಲ್ ವ್ಯಾನ್ ಲಿಂಗೆನ್, ಡೈಲನ್ ಲೀಚರ್, ರೂಬೆನ್ ಟ್ರಂಪೆಲ್ಮನ್, ಜ್ಯಾಕ್ ಬ್ರಾಸೆಲ್, ಬೆನ್ ಶಿಕೊಂಗೊ, ತಂಗೇನಿ ಲುಂಗಮೆನಿ, ನಿಕೊ ಡೇವಿನ್, ಜೆಜೆ ಸ್ಮಿತ್, ಜಾನ್ ಫ್ರಿಲಿಂಕ್, ಜೆಪಿ ಕೋಟ್ಜೆ, ಡೇವಿಡ್ ವೈಸ್, ಮಲನ್ ಸ್ಕೋಲ್ಟ್ಜ್ , ಪಿಡಿ ಬ್ಲಿಗ್ನಾಟ್.

Continue Reading
Advertisement
Cylinder Blast at Belgavi
ಬೆಳಗಾವಿ18 mins ago

Cylinder Blast : ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ವೃದ್ಧ ದಂಪತಿ ವಾರದ ನಂತರ ಸಾವು

lok sabha election 2024 jaishankar rahul sonia murmu
ಪ್ರಮುಖ ಸುದ್ದಿ40 mins ago

Lok Sabha Election: ಮತ ಚಲಾಯಿಸಿದ ರಾಷ್ಟ್ರಪತಿ ಮುರ್ಮು, ಸೋನಿಯಾ, ರಾಹುಲ್;‌ ಮತಕ್ಕಾಗಿ ಸರ್ಟಿಫಿಕೇಟ್ ಪಡೆದ ಜೈಶಂಕರ್‌!

Konark Tourist Destination
ಪ್ರವಾಸ42 mins ago

Konark Tourist Destination: ರಜೆಯಲ್ಲಿ ಕೋನಾರ್ಕ್‌ಗೆ ಹೋದಾಗ ಈ ಅದ್ಭುತ ಸ್ಥಳಗಳಿಗೆ ಭೇಟಿ ನೀಡಲು ಮರೆಯಬೇಡಿ

Karthi next film Suriya to produce Meiyazhagan
ಕಾಲಿವುಡ್51 mins ago

Karthi next film: ಇಂದು ನಟ ಕಾರ್ತಿ ಬರ್ತ್‌ಡೇ: ತಮ್ಮನ ಚಿತ್ರಕ್ಕೆ ಅಣ್ಣ ಸೂರ್ಯ ಬಂಡವಾಳ!

IPL 2024
ಕ್ರೀಡೆ51 mins ago

IPL 2024: ಐಪಿಎಲ್​ ಟ್ರೋಫಿಯಲ್ಲಿರುವ ಸಂಸ್ಕೃತ ಶ್ಲೋಕದ ಮೂಲ ಸಾರವೇನು?

Best Tourist Places In Tamilnadu
ಪ್ರವಾಸ1 hour ago

Best Tourist Places In Tamilnadu: ಈ ಸುಂದರ ದೇವಾಲಯಗಳ ದರ್ಶನಕ್ಕಾದರೂ ತಮಿಳುನಾಡಿಗೆ ಹೋಗಲೇಬೇಕು!

rave party culprit with jagan mohan reddy
ಪ್ರಮುಖ ಸುದ್ದಿ1 hour ago

Rave Party: ರೇವ್‌ ಪಾರ್ಟಿ ಆರೋಪಿಗೆ ಆಂಧ್ರ ಸಿಎಂ ಜಗನ್‌ ಜೊತೆ ಸ್ನೇಹ!

IPL 2024 Prize money
ಕ್ರೀಡೆ1 hour ago

IPL 2024 Prize money: ಐಪಿಎಲ್​ ವಿನ್ನರ್​ಗೆ ಸಿಗುವ ಬಹುಮಾನ ಮೊತ್ತವೆಷ್ಟು? 4ನೇ ಸ್ಥಾನಿ ಆರ್​ಸಿಬಿಗೆ ಸಿಕ್ಕ ಹಣವೆಷ್ಟು?

South Indian Monsoon Destinations
ಪ್ರವಾಸ2 hours ago

South Indian Monsoon Destinations: ದಕ್ಷಿಣ ಭಾರತದ ಈ 6 ಸ್ಥಳಗಳಲ್ಲಿ ಮಳೆಗಾಲದಲ್ಲಿ ಚಾರಣ ಮಾಡಲೇಬೇಕು!

Kiccha Sudeep Max cinema Pre climax Photo leak
ಸ್ಯಾಂಡಲ್ ವುಡ್2 hours ago

Kiccha Sudeep: ʻಮ್ಯಾಕ್ಸ್ʼ ಪ್ರಿ- ಕ್ಲೈಮ್ಯಾಕ್ಸ್ ಫೋಟೊ ಲೀಕ್‌? ಬೆಂಕಿ ಬಿರುಗಾಳಿ ಅಂದ್ರು ಫ್ಯಾನ್ಸ್‌!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು4 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ5 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ6 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ1 week ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌