ಕ್ರಿಕೆಟ್
Rishabh Pant Accident | ರಿಷಭ್ ಪಂತ್ ಆರೋಗ್ಯ ಸ್ಥಿರವಾಗಿದೆ, ಇಂಜುರಿ ಬಗ್ಗೆ ಅಪ್ಡೇಟ್ ನೀಡಿದ ಡಿಡಿಸಿಎ ಕಾರ್ಯದರ್ಶಿ
ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡ ರಿಷಭ್ ಪಂತ್ ಚಿಕಿತ್ಸೆಗೆ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ನವದೆಹಲಿ: ಭೀಕರ ಕಾರು ಅಪಘಾತದಲ್ಲಿ (Rishabh Pant Accident) ಗಂಭೀರವಾಗಿ ಗಾಯಗೊಂಡು ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಭಾರತ ಕ್ರಿಕೆಟ್ ತಂಡದ ಆಟಗಾರ ರಿಷಭ್ ಪಂತ್ (Rishabh Pant) ಸದ್ಯದ ಸ್ಥಿತಿಯ ಬಗ್ಗೆ ಅಪ್ಡೇಟ್ ಹೊರಬಿದ್ದಿದೆ.
ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ (DDCA secretary) ಕಾರ್ಯದರ್ಶಿ ಸಿದ್ಧಾರ್ಥ್ ಸಾಹಿಬ್ ಸಿಂಗ್ ಅವರು ಪಂತ್ ಆರೋಗ್ಯದ ಮಾಹಿತಿಯನ್ನು ಬಿಡುಗಡೆ ಮಾಡಿದ್ದಾರೆ. ‘ಅಪಘಾತಕ್ಕೀಡಾಗಿ ಚಿಕಿತ್ಸೆ ಪಡೆಯುತ್ತಿರುವ ಪಂತ್ ಆರೋಗ್ಯ ಸ್ಥಿರವಾಗಿದೆ ಮತ್ತು ಅವರು ಚಿಕಿತ್ಸೆಗೆ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಆದ್ದರಿಂದ ಯಾರೂ ಚಿಂತಿ ಪಡಬೇಕಿಲ್ಲ. ನಾವು ಡಿಡಿಸಿಎಯಲ್ಲಿ ಟ್ಯಾಬ್ ಇರಿಸುತ್ತಿದ್ದು, ಅವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಹಾರೈಸುತ್ತೇವೆ” ಎಂದು ಡಿಡಿಸಿಎ ಕಾರ್ಯದರ್ಶಿ ಸಿದ್ಧಾರ್ಥ್ ಸಾಹಿಬ್ ಸಿಂಗ್ (Siddharth Sahib Singh) ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಶುಕ್ರವಾರ ಪಂತ್ ತಮ್ಮ ಹುಟ್ಟೂರಾದ ಉತ್ತರಾಖಂಡದ ರೂರ್ಕಿಗೆ ಪ್ರಯಾಣಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ. ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಅವರ ಬಿಎಂಡಬ್ಲ್ಯು ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಪಂತ್ ಅವರ ಕಾರು ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಅವರ ತಲೆ, ಬೆನ್ನು ಮತ್ತು ಕಾಲಿಗೆ ತೀವ್ರ ಗಾಯಗಳಾಗಿವೆ. ತಕ್ಷಣವೇ ಅವರನ್ನು ಸಕ್ಷಮ್ ಆಸ್ಪತ್ರೆಗೆ ಕರೆದೊಯ್ಯಲಾಯಿತು ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಕ್ರಿಕೆಟ್‌ನಿಂದ ದೂರ
ಗಂಭೀರ ಗಾಯಗೊಂಡ ರಿಷಭ್ ಪಂತ್ ಕಾಲು ಮುರಿತವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಅವರು ಕ್ರಿಕೆಟ್‌ನಿಂದ ಸ್ವಲ್ಪ ದಿನ ದೂರ ಉಳಿಯಲಿದ್ದಾರೆ ಎಂದು ತಿಳಿದು ಬಂದಿದೆ. ಮೊಣಕಾಲು ಗಾಯದಿಂದ ಬಳಲುತ್ತಿದ್ದ ಪಂತ್ ಅವರನ್ನು ಶ್ರೀಲಂಕಾ ವಿರುದ್ಧದ ಟಿ20 ಮತ್ತು ಏಕ ದಿನ ಸರಣಿಯಿಂದ ಕೈ ಬಿಡಲಾಗಿತ್ತು. ಇದೀಗ ಈ ಘಟನೆಯ ಬಳಿಕ ಪಂತ್ ಸಂಕಷ್ಟ ಮತ್ತಷ್ಟು ಹೆಚ್ಚಿದೆ.
ಇದನ್ನೂ ಓದಿ | Rishabh Pant | ಡಿವೈಡರ್‌ಗೆ ಡಿಕ್ಕಿ ಹೊಡೆದು ಸುಟ್ಟು ಭಸ್ಮವಾದ ಕಾರು; ಖ್ಯಾತ ಕ್ರಿಕೆಟರ್ ರಿಷಭ್ ಪಂತ್ಗೆ ಗಂಭೀರ ಗಾಯ
ಕ್ರಿಕೆಟ್
ವಿಸ್ತಾರ ಸಂಪಾದಕೀಯ: ಮಾನವ ಹಕ್ಕುಗಳ ಪ್ರಶ್ನೆ; ಪಾಕ್ ಮೊದಲು ತನ್ನ ಹುಳುಕು ಸರಿಪಡಿಸಿಕೊಳ್ಳಲಿ
ಕಾಶ್ಮೀರದ ಬಗ್ಗೆ ಪಾಕ್ ಪ್ರಧಾನಿ ಆಡಿರುವ ಮಾತುಗಳಲ್ಲಿ ಹುರುಳಿಲ್ಲ. ಜಮ್ಮು- ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾಗಿ ಎರಡು ವರ್ಷಗಳಾದವು. ಈ ಎರಡು ವರ್ಷಗಳಲ್ಲಿ ಅಲ್ಲಿನ ಜನಜೀವನ ಸುಧಾರಿಸಿದೆ. ಪ್ರವಾಸೋದ್ಯಮ ಚಿಗುರಿದೆ. ದೇಶೀಯ ಹಾಗೂ ವಿದೇಶೀಯ ಹೊಸ ಹೂಡಿಕೆಗಳು ಬರುತ್ತಿವೆ. ಇವನ್ನೆಲ್ಲ ನೋಡಿ ಪಾಕಿಸ್ತಾನ ಮೈ ಪರಚಿಕೊಳ್ಳುತ್ತಿದೆ.
ವಿಶ್ವಸಂಸ್ಥೆ ಸಾಮಾನ್ಯ ಸಭೆಯ (UNGA) 78ನೇ ಅಧಿವೇಶನದಲ್ಲಿ ಜಮ್ಮು-ಕಾಶ್ಮೀರದ ವಿಚಾರ ಪ್ರಸ್ತಾಪಿಸಿದ ಪಾಕಿಸ್ತಾನ ಹಂಗಾಮಿ ಪ್ರಧಾನಿ ಅನ್ವರ್ ಉಲ್ ಹಕ್ ಕಾಕರ್ ಅವರಿಗೆ ಭಾರತ ತಿರುಗೇಟು ನೀಡಿದೆ. ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ವಿಶ್ವಸಂಸ್ಥೆಯ ಭಾರತದ (India At UNGA) ಕಾರ್ಯದರ್ಶಿ ಪೆತಲ್ ಗೆಹ್ಲೋಟ್, “ಪಾಕಿಸ್ತಾನವು ಭಾರತದ ಅವಿಭಾಜ್ಯ ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು-ಕಾಶ್ಮೀರ ಹಾಗೂ ಲಡಾಕ್ ವಿಷಯದಲ್ಲಿ ಮಧ್ಯಪ್ರವೇಶಿಸುವ ಅಗತ್ಯವಿಲ್ಲ” ಎಂದು ಚಾಟಿ ಬೀಸಿದ್ದಾರೆ. “ಭಾರತದ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಚಾಳಿಯನ್ನು ಪಾಕಿಸ್ತಾನ ಬಿಡಬೇಕು. ಪಾಕಿಸ್ತಾನವು ತನ್ನ ದೇಶದಲ್ಲಿ ಆಗುತ್ತಿರುವ ಮಾನವ ಹಕ್ಕುಗಳ ದಮನದ ವಿಷಯವನ್ನು ಜಗತ್ತಿನ ಕಣ್ಣಿನಿಂದ ತಪ್ಪಿಸಿಕೊಳ್ಳಲು ಯಾವಾಗಲೂ ವಿಶ್ವಸಂಸ್ಥೆಯಲ್ಲಿ ಜಮ್ಮು-ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸುತ್ತದೆ. ಆದರೆ, ಪಾಕಿಸ್ತಾನದಲ್ಲಿಯೇ ಸಾಕಷ್ಟು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ. ಹಾಗಾಗಿ, ಅದು ಮೊದಲು ತನ್ನ ದೇಶದ ಹುಳುಕನ್ನು ಸರಿಪಡಿಸಿಕೊಳ್ಳಬೇಕು” ಎಂದು ಪೆತಲ್ ಗೆಹ್ಲೋಟ್ ಹೇಳಿದ್ದಾರೆ.
ಗೆಹ್ಲೋಟ್ ಸರಿಯಾಗಿಯೇ ಹೇಳಿದ್ದಾರೆ. ಪಾಕಿಸ್ತಾನದ ಹುಳುಕುಗಳು ಲೋಕದ ಕಣ್ಣಿನ ಮುಂದೆ ಸಾಕಷ್ಟು ಸ್ಪಷ್ಟವಾಗಿಯೇ ಇವೆ. ಅದು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಜಿಹಾದಿ ಉಗ್ರರಿಗಾಗಿ ಶಿಬಿರಗಳನ್ನು ನಡೆಸುತ್ತಿದೆ. ಇದನ್ನು ಅಲ್ಲಿನ ಗುಪ್ತಚರ ಸಂಸ್ಥೆ ಐಎಸ್‌ಐ ನಿರ್ವಹಿಸುತ್ತದೆ. ಅಲ್ಲಿಂದ ಕಾಶ್ಮೀರಕ್ಕೆ ಅಕ್ರಮವಾಗಿ ನುಸುಳುವ ಈ ಉಗ್ರರು ಅಲ್ಲಿ ನರಮೇಧ ನಡೆಸುತ್ತಾರೆ. ಇತ್ತೀಚೆಗೆ ತಾನೆ ನಡೆದ ಒಂದು ವಾರ ದೀರ್ಘಾವಧಿಯ ಎನ್‌ಕೌಂಟರ್ ಹಾಗೂ ಅಲ್ಲಿ ಹುತಾತ್ಮರಾದ ಭಾರತೀಯ ಯೋಧರನ್ನು ನೆನಪಿಸಿಕೊಳ್ಳಬಹುದು. ಪಿಒಕೆಯಲ್ಲಿಯೇ ತಯಾರಾದ ಉಗ್ರರೇ ತಾಲಿಬಾನ್‌ನಲ್ಲಿಯೂ ಇದ್ದು, ಅಲ್ಲಿ ಮಾನವ ಹಕ್ಕುಗಳ ದಮನಕ್ಕೆ ಕಾರಣರಾಗಿದ್ದಾರೆ. ಇನ್ನು ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯ ಅಷ್ಟಿಷ್ಟಲ್ಲ. ಮುಸ್ಲಿಮರು ಹೊರತುಪಡಿಸಿದ ಇನ್ಯಾವ ಧರ್ಮದವರೂ ಅಲ್ಲಿ ಬದುಕಲಾಗದಂಥ ಸ್ಥಿತಿಯನ್ನು ತಂದಿಡಲಾಗಿದೆ. ಹಿಂದೂ, ಕ್ರೈಸ್ತ, ಸಿಖ್ ಧರ್ಮದ ಮಹಿಳೆಯರ ಮೇಲೆ ದೌರ್ಜನ್ಯ ಎಸಗಲಾಗುತ್ತಿದೆ. ಮಾನವ ಹಕ್ಕುಗಳು ಜಗತ್ತಿನಲ್ಲೇ ಕೆಟ್ಟದಾಗಿದ್ದರೆ, ಅದು ಪಾಕಿಸ್ತಾನದಲ್ಲಿ ಮಾತ್ರ. ಪ್ರತಿ ವರ್ಷ ಪಾಕಿಸ್ತಾನದಲ್ಲಿ ಒಂದು ಸಾವಿರ ಅಲ್ಪಸಂಖ್ಯಾತ ಮಹಿಳೆಯರನ್ನು ಅಪಹರಿಸಿ, ಅವರನ್ನು ಬಲವಂತವಾಗಿ ಮತಾಂತರ ಮಾಡಲಾಗುತ್ತಿದೆ. ಇಂತಹ ಅನಿಷ್ಟಗಳನ್ನು ಪಾಕಿಸ್ತಾನ ನಿರ್ಮೂಲನೆ ಮಾಡಬೇಕು ಎಂದು ಗೆಹ್ಲೋಟ್ ಆಗ್ರಹಿಸಿರುವುದು ಸರಿಯಾಗಿದೆ.
2022ರಲ್ಲಿ ವಿಶ್ವಾದ್ಯಂತ ಭಯೋತ್ಪಾದನೆ ಸಂಬಂಧಿತ ಸಾವುಗಳಲ್ಲಿ ಪಾಕಿಸ್ತಾನವು ಎರಡನೇ ಅತಿದೊಡ್ಡ ಹೆಚ್ಚಳವನ್ನು ದಾಖಲಿಸಿದೆ. 2021ರಲ್ಲಿ 292 ಇದ್ದ ಸಾವಿನ ಸಂಖ್ಯೆ ಕಳೆದ ವರ್ಷದ ಶೇ.120 ಏರಿಕೆ ದಾಖಲಿಸಿದ್ದು, ಒಟ್ಟು 643 ಸಾವು ವರದಿಯಾಗಿದೆ. ಇದು ವರ್ಷದಿಂದ ವರ್ಷಕ್ಕೆ ಅತಿದೊಡ್ಡ ಹೆಚ್ಚಳವನ್ನು ಕಾಣುತ್ತಿದೆ. ಅದರಲ್ಲೂ ಭಯೋತ್ಪಾದನೆಯಿಂದಾಗಿ ಸಾವನ್ನಪ್ಪುತ್ತಿರುವವರಲ್ಲಿ ಶೇ.55 ಮಂದಿ ಸೇನೆಯ ಸಿಬ್ಬಂದಿ. ಭಯೋತ್ಪಾದನೆ ಸಂಬಂಧಿಸಿ ಜನರು ಸಾವನ್ನಪ್ಪುತ್ತಿರುವ ಪಟ್ಟಿಯಲ್ಲಿ ಪಾಕಿಸ್ತಾನ ನಾಲ್ಕು ಸ್ಥಾನ ಮೇಲಕ್ಕೆ ಹೋಗಿದ್ದು ಸದ್ಯ ಆರನೇ ಸ್ಥಾನದಲ್ಲಿದೆ. ಇದೆಲ್ಲವೂ ಆಸ್ಟ್ರೇಲಿಯಾ ಮೂಲದ ಇನ್‌ಸ್ಟಿಟ್ಯೂಟ್ ಫಾರ್ ಎಕನಾಮಿಕ್ಸ್ ಅಂಡ್ ಪೀಸ್ ಬಿಡುಗಡೆ ಮಾಡಿರುವ ವಾರ್ಷಿಕ ಜಾಗತಿಕ ಭಯೋತ್ಪಾದನಾ ಸೂಚ್ಯಂಕ(ಜಿಟಿಐ) ವರದಿಯಲ್ಲಿದೆ. ಪಾಕಿಸ್ತಾನವು ಭಯೋತ್ಪಾದನೆಯ ರಾಜಧಾನಿ ಎನ್ನುವುದು ಸಾಬೀತಾದ ಸಂಗತಿ. ಮತಾಂಧರನ್ನು, ಪ್ರತ್ಯೇಕತಾವಾದಿಗಳನ್ನು ಸೃಷ್ಟಿಸಿ ಅವರಿಗೆ ಆಯುಧಗಳನ್ನೂ ಪೂರೈಸಿ, ಪಂಜಾಬ್‌ನಲ್ಲೂ ಖಲಿಸ್ತಾನ್‌ವಾದಿಗಳಿಗೆ ತೆರೆಮರೆಯ ಬೆಂಬಲ ನೀಡಿ ಅದು ಸೃಷ್ಟಿಸಿದ ಅನಾಹುತ, ಮಾನವ ಹಕ್ಕು ಉಲ್ಲಂಘನೆ ಅಷ್ಟಿಷ್ಟಲ್ಲ. ಇಂಥ ದೇಶಕ್ಕೆ ಭಾರತಕ್ಕೆ ಉಪದೇಶ ಮಾಡುವ ನೈತಿಕ ನೆಲೆಯಿಲ್ಲ.
ಇದನ್ನೂ ಓದಿ : ವಿಸ್ತಾರ ಸಂಪಾದಕೀಯ: ಏಷ್ಯನ್ ಗೇಮ್ಸ್‌ನಲ್ಲಿ ಅರುಣಾಚಲ ತಗಾದೆ, ಚೀನಾದ ಅಧಿಕ ಪ್ರಸಂಗ
ಕಾಶ್ಮೀರದ ಬಗ್ಗೆ ಪಾಕ್ ಪ್ರಧಾನಿ ಆಡಿರುವ ಮಾತುಗಳಲ್ಲಿ ಹುರುಳಿಲ್ಲ. ಜಮ್ಮು- ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾಗಿ ಎರಡು ವರ್ಷಗಳಾದವು. ಈ ಎರಡು ವರ್ಷಗಳಲ್ಲಿ ಅಲ್ಲಿನ ಜನಜೀವನ ಸುಧಾರಿಸಿದೆ. ಪ್ರವಾಸೋದ್ಯಮ ಚಿಗುರಿದೆ. ದೇಶೀಯ ಹಾಗೂ ವಿದೇಶೀಯ ಹೊಸ ಹೂಡಿಕೆಗಳು ಬರುತ್ತಿವೆ. ಭಾರತೀಯರು ಇಲ್ಲಿ ಆಸ್ತಿ ಹೊಂದುವಂತಾಗಿದೆ. ಇದು ಸಹಜವಾಗಿಯೇ ಇಲ್ಲಿ ಪ್ರತ್ಯೇಕತಾವಾದವನ್ನು ಬಿತ್ತಲು ದಶಕಗಳಿಂದ ಪ್ರಯತ್ನಿಸುತ್ತಿದ್ದ ಪಾಕಿಸ್ತಾನಕ್ಕೆ ಆದ ಹಿನ್ನಡೆಯಾಗಿದೆ. ಅದಕ್ಕಾಗಿಯೇ ಆ ದೇಶ ಮೈಪರಚಿಕೊಳ್ಳುತ್ತಿದೆ. ಭಾರತವನ್ನು ದ್ವೇಷಿಸುತ್ತ ಪಾಕ್ ಹುಟ್ಟುಹಾಕಿದ ಮತಾಂಧತೆ ಇಂದು ಅದನ್ನೇ ತಿನ್ನುತ್ತಿದೆ. ಇದಕ್ಕೆ ಬರ್ಬರ ಆರ್ಥಿಕ ದುಃಸ್ಥಿತಿಯೂ ಸೇರಿಕೊಂಡು ಹಸಿವು, ಬಡತನ, ನಿರುದ್ಯೋಗ, ಭಯೋತ್ಪಾದನೆಗಳ ಗೂಡಾಗಿಬಿಟ್ಟಿದೆ ಆ ದೇಶ. ಇನ್ನಾದರೂ ಪಾಕ್ ಆಡಳಿತಗಾರರಿಗೆ, ಸೇನಾಧಿಕಾರಿಗಳಿಗೆ ಬುದ್ಧಿ ಬರಲಿ. ಮಾನವ ಹಕ್ಕುಗಳ ವಿಚಾರದಲ್ಲಿ ಭಾರತವನ್ನು ನೋಡಿ ಪಾಕ್ ಪಾಠ ಕಲಿಯಲಿ.
ಕ್ರಿಕೆಟ್
NZ vs BAN: ಮಂಕಡ್ ನಿರಾಕರಿಸಿ ಕ್ರೀಡಾ ಸ್ಫೂರ್ತಿ ಮೆರೆದ ಲಿಟನ್ ದಾಸ್‌ಗೆ ನೆಟ್ಟಿಗರ ಮೆಚ್ಚುಗೆ
ಮಂಕಡಿಂಗ್ ರೂಪದಲ್ಲಿ ರನೌಟ್(mankading out) ಆದ ಇಶ್ ಸೋಧಿ ಅಂಪೈರ್ ಜತೆ ಮಾತನಾಡಿ ಮತ್ತೆ ಬ್ಯಾಟಿಂಗ್ ಮಾಡಲು ಅವಕಾಶ ನೀಡಿದ ಬಾಂಗ್ಲಾ ನಾಯಕ ಲಿಟನ್ ದಾಸ್ ಅವರ ನಡೆಗೆ ಕ್ರೀಡಾಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ
ಢಾಕಾ: ನ್ಯೂಜಿಲ್ಯಾಂಡ್(NZ vs BAN) ವಿರುದ್ಧದ ತವರಿನ ದ್ವಿತೀಯ ಏಕದಿನ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ಹೀನಾಯ ಸೋಲು ಕಂಡಿದೆ. ಆದರೆ ಪಂದ್ಯದಲ್ಲಿ ಹಂಗಾಮಿ ನಾಯಕ ಲಿಟನ್ ದಾಸ್(Litton Das) ಅವರು ತೋರಿದ ಕ್ರೀಡಾಸ್ಫೂರ್ತಿಗೆ ಎದುರಾಳಿ ತಂಡದ ಆಟಗಾರರು ಮಾತ್ರವಲ್ಲದೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಿವೀಸ್ ಬ್ಯಾಟಿಂಗ್ ಸರದಿಯಲ್ಲಿ ಬಾಂಗ್ಲಾ ಬೌಲರ್ ಹಸನ್(Hasan Mahmud) 46ನೇ ಓವರ್ ಬೌಲ್ ಮಾಡುತ್ತಿದ್ದ ವೇಳೆ ನಾನ್ ಸ್ಟ್ರೈಕ್ನಲ್ಲಿದ್ದ ಇಶ್ ಸೋಧಿ(Ish Sodhi) ಬೌಲಿಂಗ್ ನಡೆಸುವ ಮುನ್ನವೇ ಕ್ರೀಸ್ ತೊರೆದು ಮಂಕಡಿಂಗ್ ರೂಪದಲ್ಲಿ ರನೌಟ್(mankading out) ಆದರು. ಆದರೆ ಅಂಪೈರ್ ಜತೆ ಮಾತನಾಡಿ ಲಿಟ್ಟನ್ ದಾಸ್ ಅವರು ಇಶ್ ಸೋಧಿಗೆ ಮತ್ತೆ ಬ್ಯಾಟಿಂಗ್ ಮಾಡಲು ಅವಕಾಶ ನೀಡಿದರು. ಅವರ ಈ ನಡೆಗೆ ಕ್ರೀಡಾಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಂಕಡಿಂಗ್ ವೇಳೆ ಸೋಧಿ 17 ರನ್ ಗಳಿಸಿದರು. ಬಳಿಕ 35 ರನ್ ಬಾರಿಸಿದರು. ಇದರಲ್ಲಿ ಮೂರು ಸೊಗಸಾದ ಸಿಕ್ಸರ್ ಕೂಡ ಸಿಡಿಯಿತು.
ಸೋಲು ಕಂಡ ಬಾಂಗ್ಲಾ
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ನ್ಯೂಜಿಲ್ಯಾಂಡ್ ತಂಡ 49.2 ಓವರ್ಗಳಲ್ಲಿ 254ರನ್ಗೆ ಆಲೌಟ್ ಆಯಿತು. ಗುರಿ ಬೆನ್ನಟ್ಟಿದ ಬಾಂಗ್ಲಾ ಸತತ ವಿಕೆಟ್ ಕಳೆದುಕೊಂಡು 41.1 ಓವರ್ಗಳಲ್ಲಿ ಕೇವಲ 168 ರನ್ಗೆ ಸರ್ವಪತನ ಕಂಡಿತು. ಕಿವೀಸ್ 86 ರನ್ಗಳ ಗೆಲುವು ಸಾಧಿಸಿತು. ಮೊದಲ ಪಂದ್ಯ ಮಳೆಯಿಂದ ರದ್ದುಗೊಂಡ ಕಾರಣ ಮೂರು ಪಂದ್ಯಗಳ ಸರಣಿಯಲ್ಲಿ ಪ್ರವಾಸಿ ಕಿವೀಸ್ ತಂಡ 1-0 ಮುನ್ನಡೆ ಸಾಧಿಸಿದೆ. ಅಂತಿಮ ಪಂದ್ಯ ಸೆಪ್ಟೆಂಬರ್ 26ರಂದು ನಡೆಯಲಿದೆ.
Ish Sodhi was run out at the non strikers end by Hasan Mahmud. The third umpire checked and gave OUT! But when Sodhi started walking out, skipper Litton Das and Hasan Mahmud called him back again. What a beautiful scene! Lovely spirit of the game. The hug at the end was wonderful… pic.twitter.com/GvrpjXcJwB
— SportsTattoo Media (@thesportstattoo) September 23, 2023
ಏನಿದು ಮಂಕಡಿಂಗ್ ಔಟ್
ಕ್ರಿಕೆಟ್ ಆಟದಲ್ಲಿ ಬೌಲರ್ ಒಬ್ಬ ಚೆಂಡನ್ನು ಬ್ಯಾಟರ್ನತ್ತ ಎಸೆಯುವ ಮೊದಲೇ ನಾನ್ ಸ್ಟ್ರೈಕ್ ನಲ್ಲಿರುವ ಬ್ಯಾಟರ್ ಕ್ರೀಸ್ ಬಿಟ್ಟಿದ್ದರೆ ಆಗ ಬೌಲರ್ ಆತನನ್ನು ರನೌಟ್ ಮಾಡುವ ಅವಕಾಶವನ್ನು ಕ್ರಿಕೆಟ್ ಕಾನೂನಿನ 41.46 ನಿಯಮ ನೀಡುತ್ತದೆ. ನಾನ್ ಸ್ಟ್ರೈಕ್ನಲ್ಲಿರುವ ಬ್ಯಾಟರ್ ಒಬ್ಬನನ್ನು ಆತನ ಅರಿವಿಗೆ ಬರದಂತೆ ರನೌಟ್ ಮಾಡುವ ವಿಧಾನ ಇದಾಗಿದೆ. ಈ ಅವಕಾಶ ಆ ಓವರ್ ಬೌಲಿಂಗ್ ಮಾಡುತ್ತಿರುವ ಬೌಲರ್ಗೆ ಮಾತ್ರವೇ ಇರುತ್ತದೆ. ಮತ್ತು ಇದು ಸಂಪೂರ್ಣವಾಗಿ ಬೌಲರೊಬ್ಬನ ವಿವೇಚನೆಗೆ ಬಿಟ್ಟಿರುವ ವಿಚಾರವಾಗಿರುತ್ತದೆ.
ಇದನ್ನೂ ಓದಿ Litton Das: ಬಾಂಗ್ಲಾ ತಂಡಕ್ಕೆ ಲಿಟ್ಟನ್ ದಾಸ್ ನಾಯಕ
ಮಂಕಡಿಂಗ್ ಹೆಸರು ಬರಲು ಕಾರಣವೇನು?
1947ರಲ್ಲಿ ಭಾರತ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ ಕ್ವೀನ್ಸ್ ಲ್ಯಾಂಡ್ ವಿರುದ್ಧದ ಪಂದ್ಯವೊಂದರಲ್ಲಿ ಭಾರತದ ಎಡಗೈ ಸ್ಪಿನ್ನರ್ ವೀನೂ ಮಂಕಡ್ ಅವರು ಬಿಲ್ ಬ್ರೌನ್ ಅವರನ್ನು ನಾನ್ ಸ್ಟ್ರೈಕ್ ಭಾಗದಲ್ಲಿ ರನೌಟ್ ಮಾಡಿದ್ದರು. ಆ ಬಳಿಕ ಕ್ರಿಕೆಟ್ ನ ಈ ವಿಚಿತ್ರ ನಿಯಮಕ್ಕೆ ‘ಮಂಕಡ್’ ನಿಯಮ ಎಂದೇ ಪ್ರಸಿದ್ಧಿ ಪಡೆಯಿತು.
ಕ್ರಿಕೆಟ್
Mohammed Shami: 16 ವರ್ಷಗಳ ಬಳಿಕ ವಿಶೇಷ ದಾಖಲೆ ಬರೆದ ಮೊಹಮ್ಮದ್ ಶಮಿ
ಆಸ್ಟ್ರೇಲಿಯಾ ವಿರುದ್ಧ 5 ವಿಕೆಟ್ ಕಿತ್ತ ಮೂರನೇ ವೇಗಿ ಎಂಬ ಖ್ಯಾತಿಗೆ ಮೊಹಮ್ಮದ್ ಶಮಿ ಪಾತ್ರರಾಗಿದ್ದಾರೆ. ಆ ಮೂಲಕ ದಿಗ್ಗಜರಾದ ಕಪಿಲ್ ದೇವ್ ಹಾಗೂ ಅಜಿತ್ ಅಗರ್ಕರ್ ಅವರನ್ನೊಳಗೊಂಡ ಎಲೈಟ್ ಲಿಸ್ಟ್‌ಗೆ ಸೇರ್ಪಡೆಯಾಗಿದ್ದಾರೆ.
ಮೊಹಾಲಿ: ಆಸ್ಟ್ರೇಲಿಯಾ(India vs Australia, 1st ODI) ವಿರುದ್ಧ ಶುಕ್ರವಾರ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಘಾತಕ ಬೌಲಿಂಗ್ ಮೂಲಕ ಗಮನಸೆಳೆದ ಮೊಹಮ್ಮದ್ ಶಮಿ(Mohammed Shami) 16 ವರ್ಷಗಳ ಬಳಿಕ ದಾಖಲೆಯೊಂದನ್ನು ಬರೆದಿದ್ದಾರೆ. ಇದಕ್ಕೂ ಮುನ್ನ 2007ರಲ್ಲಿ ಜಹೀರ್ ಖಾನ್(Zaheer Khan) ಗೋವಾದಲ್ಲಿ ನಡೆದಿದ್ದ ಪಂದ್ಯದಲ್ಲಿ ಲಂಕಾ ವಿರುದ್ಧ 5 ವಿಕೆಟ್ ಸಾಧನೆ ಮಾಡಿದ್ದರು. ಇದೀಗ 16 ವರ್ಷಗಳ ಬಳಿಕ ಶಮಿ ತವರು ಅಂಗಣದಲ್ಲಿ 5 ವಿಕೆಟ್ ಸಾಧನೆ ಮಾಡಿದ್ದಾರೆ.
ಮೂರನೇ ವೇಗಿ
ಆಸ್ಟ್ರೇಲಿಯಾ ವಿರುದ್ಧ 5 ವಿಕೆಟ್ ಕಿತ್ತ ಮೂರನೇ ವೇಗಿ ಎಂಬ ಖ್ಯಾತಿಗೆ ಮೊಹಮ್ಮದ್ ಶಮಿ ಪಾತ್ರರಾಗಿದ್ದಾರೆ. ಆ ಮೂಲಕ ದಿಗ್ಗಜರಾದ ಕಪಿಲ್ ದೇವ್ ಹಾಗೂ ಅಜಿತ್ ಅಗರ್ಕರ್ ಅವರನ್ನೊಳಗೊಂಡ ಎಲೈಟ್ ಲಿಸ್ಟ್‌ಗೆ ಸೇರ್ಪಡೆಯಾಗಿದ್ದಾರೆ.
2019ರ ವಿಶ್ವಕಪ್ನಲ್ಲಿ ಬರ್ಮಿಂಗ್ ಹ್ಯಾಮ್ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ 69 ರನ್ಗೆ 5 ವಿಕೆಟ್ ಪಡೆದದ್ದು ಶಮಿಯ ಇದುವರೆಗಿನ ಶ್ರೇಷ್ಠ ಬೌಲಿಂಗ್ ಸಾಧನೆಯಾಗಿತ್ತು. ಆದರೆ ಆಸೀಸ್ ವಿರುದ್ಧ ಶಮಿ 51 ರನ್ಗೆ 5 ವಿಕೆಟ್ ಕೆಡವಿ ಈ ಸಾಧನೆಯನ್ನು ಉತ್ತಮ ಪಡಿಸಿಕೊಂಡರು. ಇದು ಏಕದಿನ ಕ್ರಿಕೆಟ್ನಲ್ಲಿ ಶಮಿ ಅವರ ಎರಡನೇ ಐದು ವಿಕೆಟ್ ಸಾಧನೆಯಾಗಿದೆ. ಒಟ್ಟಾರೆ 50 ಓವರ್ಗಳ ಸ್ವರೂಪದಲ್ಲಿ ಶಮಿ ಒಂಬತ್ತು ಬಾರಿ ನಾಲ್ಕು ವಿಕೆಟ್ಗಳನ್ನು ಕಿತ್ತ ಸಾಧನೆ ಮಾಡಿದ್ದಾರೆ.
For his brilliant bowling figures of 5/51, @MdShami11 is adjudged Player of the Match as #TeamIndia win by 5 wickets.
— BCCI (@BCCI) September 22, 2023
Take a 1-0 lead in the three match ODI series.
Scorecard – https://t.co/H6OgLtww4N…… #INDvAUS@IDFCFIRSTBank pic.twitter.com/gIZJFkWj2L
ಶಮಿ ಈಗ ಏಕದಿನ ಪಂದ್ಯಗಳಲ್ಲಿ ಕಾಂಗರೂ ಬಳಗದ ವಿರುದ್ಧ 37 ವಿಕೆಟ್ಗಳನ್ನು ಹೊಂದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯಗಳಲ್ಲಿ ಮೆನ್ ಇನ್ ಬ್ಲೂ ಪರ ಅತಿ ಹೆಚ್ಚು ವಿಕೆಟ್ (45) ಪಡೆದ ಕಪಿಲ್ ದೇವ್ ನಂತರ ಎರಡನೇ ಸ್ಥಾನದಲ್ಲಿದ್ದಾರೆ. ಮೊಹಾಲಿಯಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಭಾರತ 277 ರನ್ಗಳ ಗುರಿ ಬೆನ್ನತ್ತಿದಿದೆ. ಸರಣಿಯ ಎರಡನೇ ಪಂದ್ಯ ಇಂದೋರ್ನಲ್ಲಿ ಮತ್ತು ಮೂರನೇ ಮತ್ತು ಅಂತಿಮ ಏಕದಿನ ಪಂದ್ಯ ರಾಜ್ಕೋಟ್ನಲ್ಲಿ ನಡೆಯಲಿದೆ.
ಇದನ್ನೂ ಓದಿ IND vs AUS: ಆಸೀಸ್ಗೆ ಬೀಳಲಿ ಸರಣಿ ಸೋಲಿನ ಏಟು
ಪಂದ್ಯ ಗೆದ್ದ ಭಾರತ
ಇಲ್ಲಿನ ಐಎಸ್ ಬಿಂದ್ರಾ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡ 50 ಓವರ್ಗಳಲ್ಲಿ 276 ರನ್ಗಳಿಗೆ ಆಲ್ಔಟ್ ಆಯಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಭಾರತ ತಂಡ. 48.4 ಓವರ್ಗಳಲ್ಲಿ. 5 ವಿಕೆಟ್ ಕಳೆದುಕೊಂಡು 281 ರನ್ ಬಾರಿಸಿ ಜಯಶಾಲಿಯಾಯಿತು. ಭಾರತ ತಂಡದ ಪರ ಬೌಲಿಂಗ್ನಲ್ಲಿ 51 ರನ್ಗಳಿಗೆ 5 ವಿಕೆಟ್ ಉರುಳಿಸಿದ ಮೊಹಮ್ಮದ್ ಶಮಿ ಹಾಗೂ ಬ್ಯಾಟಿಂಗ್ ಮೂಲಕ ತಲಾ ಅರ್ಧ ಶತಕಗಳನ್ನು ಬಾರಿಸಿದ ಶುಭ್ಮನ್ ಗಿಲ್ (74) ಹಾಗೂ ಋತುರಾಜ್ ಗಾಯಕ್ವಾಡ್ (71), ಸೂರ್ಯಕುಮಾರ್ ಯಾದವ್ (50), ಮತ್ತು ಕೆ. ಎಲ್ ರಾಹುಲ್ (58*) ಗೆಲುವಿನ ರೂವಾರಿಗಳು ಎನಿಸಿಕೊಂಡರು. ಶಮಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಲಭಿಸಿತು.
ಕ್ರಿಕೆಟ್
‘ಎಂದಿಗೂ ಬದಲಾಗಬೇಡ’ ನವೀನ್ ಉಲ್ ಹಕ್ಗೆ ಜನ್ಮದಿನದ ಶುಭಾಶಯ ಕೋರಿದ ಗಂಭೀರ್; ಹಾರೈಕೆ ಹಿಂದಿದೆ ನರಿ ಬುದ್ಧಿ
ಐಪಿಎಲ್ನ ಲಕ್ನೋ ತಂಡದ ಜೆರ್ಸಿಯಲ್ಲಿ ಜತೆಗಿರುವ ಫೋಟೊವನ್ನು ಹಂಚಿಕೊಂಡು ನವೀನ್ ಉಲ್ ಹಕ್ಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿ, ನೀನು ಯಾವುದೇ ಕಾರಣಕ್ಕೂ, ಬದಲಾಗಬೇಡ, ನಿನ್ನಂತಹ ವ್ಯಕ್ತಿಗಳು ಸಿಗುವುದು ತುಂಬಾ ಕಡಿಮೆ” ಎಂದು ಗೌತಮ್ ಗಂಭೀರ್ ಬರೆದುಕೊಂಡಿದ್ದಾರೆ.
ಮುಂಬಯಿ: ವಿರಾಟ್ ಕೊಹ್ಲಿಯ(virat kohli) ಬದ್ಧ ಎದುರಾಳಿ ಅಫಘಾನಿಸ್ತಾನ ತಂಡದ ವೇಗಿ ನವೀನ್ ಉಲ್ ಹಕ್ (Naveen-ul-Haq) 24ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಅನೇಕರು ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಆದರೆ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಗೌತಮ್ ಗಂಭೀರ್(Gautam Gambhir) ಅವರ ಹಾರೈಕೆ ಮಾತ್ರ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿದೆ.
ವಿರಾಟ್ ಕೊಹ್ಲಿ ಅವರನ್ನು ಒಂದಲ್ಲ ಒಂದು ವಿಚಾರವಾಗಿ ಕೆಣಕುವ ಮತ್ತು ಅಪಹಾಸ್ಯ ಮಾಡುವ ಗಂಭೀರ್ ಈ ಬಾರಿಯೂ ಇದೇ ಕೀಳುಮಟ್ಟದ ಪ್ರವೃತ್ತಿಯನ್ನು ತೋರಿದ್ದಾರೆ. ಐಪಿಎಲ್ನ ಲಕ್ನೋ ತಂಡದ ಜೆರ್ಸಿಯಲ್ಲಿ ಜತೆಗಿರುವ ಫೋಟೊವನ್ನು ಹಂಚಿಕೊಂಡು ನವೀನ್ ಉಲ್ ಹಕ್ಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿ, ನೀನು ಯಾವುದೇ ಕಾರಣಕ್ಕೂ, ಬದಲಾಗಬೇಡ, ನಿನ್ನಂತಹ ವ್ಯಕ್ತಿಗಳು ಸಿಗುವುದು ತುಂಬಾ ಕಡಿಮೆ” ಎಂದು ಹರಸಿ ಕೊಹ್ಲಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.
ನವೀನ್ ಉಲ್ ಹಕ್ ವಿಚಾರದಲ್ಲಿ ಕೊಹ್ಲಿ ಜತೆ ಕಿರಿಕ್
ಈ ಬಾರಿಯ ಐಪಿಎಲ್ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಮೆಂಟರ್ ಆಗಿ ಕಾರ್ಯನಿರ್ವಹಿಸಿದ್ದ ಗೌತಮ್ ಗಂಭಿರ್ ಅವರು ನವೀನ್ ಉಲ್ ಹಕ್ ವಿಚಾರದಲ್ಲಿ ಕೊಹ್ಲಿ(virat kohli and naveen ul haq) ಜತೆ ಮೈದಾನದಲ್ಲೇ ವಾಗ್ವಾದ ನಡೆಸಿ ಕೈ ಕೈ ಮಿಲಾಯಿಸುವ ಹಂತದದ ವರೆಗೂ ಹೋಗಿದ್ದರು. ಅತ್ತ ನವೀನ್ ಕೂಡ ಕೊಹ್ಲಿಯನ್ನು ಪದೇಪದೆ ಕೆಣಕಿ ಅಗೌರವದಿಂದ ನಡೆದುಕೊಂಡಿದ್ದರು. ಇದಕ್ಕೆ ಕೊಹ್ಲಿ ಅಭಿಮಾನಿಗಳು ಗಂಭೀರ್ ಮತ್ತು ನವೀನ್ ಅವರನ್ನು ಕಂಡಾಗಲೆಲ್ಲಾ ಕೊಹ್ಲಿಯ ಹೆಸರನ್ನು ಜೋರಾಗಿ ಕರೆದು ಕೆಣಕುತ್ತಿದ್ದಾರೆ.
ಏಷ್ಯಾಕಪ್ನಲ್ಲಿಯೂ ಕೊಹ್ಲಿಯನ್ನು ಕೆಣಕಿದ್ದ ಗಂಭೀರ್
ಕಳೆದ ವಾರ ಮುಕ್ತಾಯ ಕಂಡ ಏಷ್ಯಾಕಪ್ ಟೂರ್ನಿಯಲ್ಲಿಯೂ ಕೊಹ್ಲಿಯನ್ನು ಗಂಭೀರ್ ಅಪಹಾಸ್ಯ ಮಾಡಿದ್ದರು. ಪಾಕಿಸ್ತಾನ ವಿರುದ್ಧದ ಮೊದಲ ಮುಖಾಮುಖಿಯಲ್ಲಿ ಕೊಹ್ಲಿ, ಶಾಹೀನ್ ಅಫ್ರಿದಿ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದ ವೇಳೆ ಲೈವ್ ಕಾಮೆಂಟ್ರಿಯಲ್ಲೇ ಟೀಕಿಸಿದ್ದರು. ವಿರಾಟ್ ಕೊಹ್ಲಿ ಔಟಾಗುತ್ತಿದ್ದಂತೆ “ಈ ಎಸೆತಕ್ಕೆ ಬ್ಯಾಟ್ ಬೀಸುವ ಅಗತ್ಯವೇ ಇರಲಿಲ್ಲ. ವಿಕೆಟ್ನ ಮುಂದೆ ಕೂಡ ಈ ಚೆಂಡು ಇರಲಿಲ್ಲ. ಸಂಪೂರ್ಣವಾಗಿ ವಿಕೆಟ್ ನಿಂದ ಚೆಂಡು ಹೊರ ಭಾಗದಲ್ಲಿತ್ತು. ವಿಶ್ವದ ಶ್ರೇಷ್ಠ ಬೌಲರ್ಗಳಲ್ಲಿ ಒಬ್ಬರಾಗಿರುವ ಶಾಹೀನ್ ಅಫ್ರಿದಿ ಅವರಂತ ಬೌಲರ್ಗಳ ಮುಂದೆ ಶ್ರೇಷ್ಠ ಬ್ಯಾಟರ್ ಈ ಎಸೆತಕ್ಕೆ ಮುಂದೆ ಹೋಗಬೇಕೋ ಅಥವಾ ಹಿಂದೆ ಹೋಗಬೇಕೋ ಎಂಬುದನ್ನು ತಿಳಿದಿರಬೇಕು” ಎಂದು ಹೇಳುವ ಮೂಲಕ ಗಂಭೀರ್ ಅವರು ಕೊಹ್ಲಿಯನ್ನು ಟೀಕಿಸಿ ವ್ಯಂಗ್ಯವಾಡಿದ್ದರು.
ಇದನ್ನೂ ಓದಿ IND vs PAK : ಭಾರತದ ಕ್ರಿಕೆಟಿಗರು ಪಾಕಿಸ್ತಾನದವರ ಕೈ ಕುಲುಕುವುದು ಸರಿಯಲ್ಲ; ಗಂಭೀರ್ ಹೀಗೆ ಹೇಳಿದ್ಯಾಕೆ?
ಇದಾದ ಬಳಿಕ ಪಾಕ್ ವಿರುದ್ಧದ ಸೂಪರ್ 4 ಪಂದ್ಯದಲ್ಲಿ ಕೊಹ್ಲಿ ಶತಕ ಬಾರಿಸಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದರು. ಇದನ್ನು ಗಂಭೀರ್ ಟೀಕಿಸಿದ್ದರು. 94 ಎಸೆತದಲ್ಲಿ 9 ಬೌಂಡರಿ ಮತ್ತು 3 ಸಿಕ್ಸರ್ ನೆರವಿನಿಂದ ಅಜೇಯ 122 ರನ್ ಗಳಿಸಿದ್ದರು. ಅಲ್ಲದೆ ಅತಿ ವೇಗವಾಗಿ 13 ಸಾವಿರ ರನ್ ಪೂರ್ತಿಗೊಳಿಸಿದ ದಾಖಲೆಯನ್ನು ನಿರ್ಮಿಸಿದ್ದರು. ಈ ಎಲ್ಲ ಕಾರಣದಿಂದ ಕೊಹ್ಲಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು ಆದರೆ ಗಂಭೀರ್ ಈ ಪ್ರಶಸ್ತಿಗೆ ಕೊಹ್ಲಿ ಅರ್ಹನಲ್ಲ ಎಂದು ಹೇಳಿದ್ದರು.
-
ಸುವಚನ3 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ವೈರಲ್ ನ್ಯೂಸ್14 hours ago
Viral Video : ಅಬ್ಬಾ ಏನು ಧೈರ್ಯ; ವೇಗವಾಗಿ ಚಲಿಸುತ್ತಿದ್ದ ಟ್ರಕ್ನ ಚಕ್ರದ ಪಕ್ಕದಲ್ಲಿಯೇ ಗಡದ್ದಾಗಿ ನಿದ್ದೆ ಹೊಡೆದ !
-
ಕರ್ನಾಟಕ19 hours ago
Suspicious death : ಮನೆಯಲ್ಲಿ ನೇತಾಡುತ್ತಿತ್ತು ಹೆಂಡ್ತಿ ಶವ; ಚಿತೆಯ ಫೋಟೊ ಹಾಕಿದ ಗಂಡ!
-
South Cinema16 hours ago
Silk Smitha: ಸಿಲ್ಕ್ ಸ್ಮಿತಾ ಶವದ ಮೇಲೆ ಅತ್ಯಾಚಾರ ; ನಟಿಯ ಪುಣ್ಯತಿಥಿಯಂದು ಅಚ್ಚರಿಯ ಸತ್ಯ ಹೊರಬಿತ್ತು!
-
ಪ್ರಮುಖ ಸುದ್ದಿ12 hours ago
Sandalwood : ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನೂತನ ಅಧ್ಯಕ್ಷರ ಆಯ್ಕೆ; ಗೆದ್ದವರ ವಿವರ ಇಲ್ಲಿದೆ
-
ದೇಶ23 hours ago
Kamal Haasan: ಸನಾತನ ಧರ್ಮದ ವಿಷಯದಲ್ಲಿ ‘ಮಗು’ ಉದಯನಿಧಿ ಮೇಲೆ ದಾಳಿ ಎಂದ ಕಮಲ್ ಹಾಸನ್
-
ಬಾಲಿವುಡ್19 hours ago
Rashmika Mandanna: ಕತ್ತಿನಲ್ಲಿ ತಾಳಿ, ಕೆಂಪು ಬಾರ್ಡರ್ ಸೀರೆಯುಟ್ಟು ಫಸ್ಟ್ ಲುಕ್ನಲ್ಲೇ ನಾಚಿ ನೀರಾದ ರಶ್ಮಿಕಾ!
-
ಕ್ರಿಕೆಟ್19 hours ago
Varanasi Stadium: ವಾರಾಣಸಿ ಕ್ರಿಕೆಟ್ ಸ್ಟೇಡಿಯಂ ಶಿವಮಯ; ಹೀಗಿರಲಿದೆ ಇದರ ವೈಭವ, ವೈಶಿಷ್ಟ್ಯ