ನವದೆಹಲಿ: ಭೀಕರ ಕಾರು ಅಪಘಾತದಲ್ಲಿ (Rishabh Pant Accident) ಗಂಭೀರವಾಗಿ ಗಾಯಗೊಂಡು ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಭಾರತ ಕ್ರಿಕೆಟ್ ತಂಡದ ಆಟಗಾರ ರಿಷಭ್ ಪಂತ್ (Rishabh Pant) ಸದ್ಯದ ಸ್ಥಿತಿಯ ಬಗ್ಗೆ ಅಪ್ಡೇಟ್ ಹೊರಬಿದ್ದಿದೆ.
ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ (DDCA secretary) ಕಾರ್ಯದರ್ಶಿ ಸಿದ್ಧಾರ್ಥ್ ಸಾಹಿಬ್ ಸಿಂಗ್ ಅವರು ಪಂತ್ ಆರೋಗ್ಯದ ಮಾಹಿತಿಯನ್ನು ಬಿಡುಗಡೆ ಮಾಡಿದ್ದಾರೆ. ‘ಅಪಘಾತಕ್ಕೀಡಾಗಿ ಚಿಕಿತ್ಸೆ ಪಡೆಯುತ್ತಿರುವ ಪಂತ್ ಆರೋಗ್ಯ ಸ್ಥಿರವಾಗಿದೆ ಮತ್ತು ಅವರು ಚಿಕಿತ್ಸೆಗೆ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಆದ್ದರಿಂದ ಯಾರೂ ಚಿಂತಿ ಪಡಬೇಕಿಲ್ಲ. ನಾವು ಡಿಡಿಸಿಎಯಲ್ಲಿ ಟ್ಯಾಬ್ ಇರಿಸುತ್ತಿದ್ದು, ಅವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಹಾರೈಸುತ್ತೇವೆ” ಎಂದು ಡಿಡಿಸಿಎ ಕಾರ್ಯದರ್ಶಿ ಸಿದ್ಧಾರ್ಥ್ ಸಾಹಿಬ್ ಸಿಂಗ್ (Siddharth Sahib Singh) ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಶುಕ್ರವಾರ ಪಂತ್ ತಮ್ಮ ಹುಟ್ಟೂರಾದ ಉತ್ತರಾಖಂಡದ ರೂರ್ಕಿಗೆ ಪ್ರಯಾಣಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ. ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಅವರ ಬಿಎಂಡಬ್ಲ್ಯು ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಪಂತ್ ಅವರ ಕಾರು ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಅವರ ತಲೆ, ಬೆನ್ನು ಮತ್ತು ಕಾಲಿಗೆ ತೀವ್ರ ಗಾಯಗಳಾಗಿವೆ. ತಕ್ಷಣವೇ ಅವರನ್ನು ಸಕ್ಷಮ್ ಆಸ್ಪತ್ರೆಗೆ ಕರೆದೊಯ್ಯಲಾಯಿತು ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಕ್ರಿಕೆಟ್‌ನಿಂದ ದೂರ
ಗಂಭೀರ ಗಾಯಗೊಂಡ ರಿಷಭ್ ಪಂತ್ ಕಾಲು ಮುರಿತವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಅವರು ಕ್ರಿಕೆಟ್‌ನಿಂದ ಸ್ವಲ್ಪ ದಿನ ದೂರ ಉಳಿಯಲಿದ್ದಾರೆ ಎಂದು ತಿಳಿದು ಬಂದಿದೆ. ಮೊಣಕಾಲು ಗಾಯದಿಂದ ಬಳಲುತ್ತಿದ್ದ ಪಂತ್ ಅವರನ್ನು ಶ್ರೀಲಂಕಾ ವಿರುದ್ಧದ ಟಿ20 ಮತ್ತು ಏಕ ದಿನ ಸರಣಿಯಿಂದ ಕೈ ಬಿಡಲಾಗಿತ್ತು. ಇದೀಗ ಈ ಘಟನೆಯ ಬಳಿಕ ಪಂತ್ ಸಂಕಷ್ಟ ಮತ್ತಷ್ಟು ಹೆಚ್ಚಿದೆ.
ಇದನ್ನೂ ಓದಿ | Rishabh Pant | ಡಿವೈಡರ್‌ಗೆ ಡಿಕ್ಕಿ ಹೊಡೆದು ಸುಟ್ಟು ಭಸ್ಮವಾದ ಕಾರು; ಖ್ಯಾತ ಕ್ರಿಕೆಟರ್ ರಿಷಭ್ ಪಂತ್ಗೆ ಗಂಭೀರ ಗಾಯ