ನ್ಯೂಯಾರ್ಕ್: 2022ರ ಡಿಸೆಂಬರ್ 30ರಂದು(rishabh pant accident date) ರಿಷಭ್ ಪಂತ್ ಅವರು ಚಲಾಯಿಸಿಕೊಂಡು ಹೋಗುತ್ತಿದ್ದ ಕಾರು ಡಿವೈಡರ್ಗೆ ಡಿಕ್ಕಿ(rishabh pant accident) ಹೊಡೆದಿತ್ತು. ಈ ಭೀಕರ ಅಪಘಾತದಲ್ಲಿ ಅವರ ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿತ್ತು. ಆದರೆ, ಪಂತ್ ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದರು. ಗಾಯದಿಂದ ಚೇತರಿಸಿಕೊಂಡು ಇದೀಗ ಸುಮಾರು ಒಂದೂವರೆ ವರ್ಷದ ಬಳಿಕ ಟೀಮ್ ಇಂಡಿಯಾ ಪರ ಆಡಲು ಸಜ್ಜಾಗಿರುವ ಪಂತ್ ಅವರು ಭಾರತದ ಸಮವಸ್ತ್ರ ಧರಿಸಿ ಆಡುವುದೇ ವಿಭಿನ್ನ ಅನುಭವ. ಈ ಕ್ಷಣವನ್ನು ತುಂಬಾ ಮಿಸ್ ಮಾಡಿಕೊಂಡಿದ್ದೆ. ಈಗ ಉತ್ತಮ ಪ್ರದರ್ಶನ ನೀಡುವ ಭರವಸೆಯಿದೆ’ ಎಂದು ಹೇಳಿದ್ದಾರೆ.
ಈ ಬಾರಿಯ ಐಪಿಎಲ್ ಮೂಲಕ ಪಂತ್ ಮತ್ತೆ ಕ್ರಿಕೆಟ್ ಕಮ್ಬ್ಯಾಕ್ ಮಾಡಿದ್ದರು. 14 ತಿಂಗಳ ಬಳಿಕ ಆಡಿದ್ದರೂ ಕೂಡ ಅವರ ಬ್ಯಾಟಿಂಗ್ ಮತ್ತು ಕೀಪಿಂಗ್ ಪ್ರದರ್ಶನದಲ್ಲಿ ಯಾವುದೇ ಸಮಸ್ಯೆ ಕಂಡುಬಂದಿರಲಿಲ್ಲ. ಹಿಂದಿನಂತೆ ತಮ್ಮ ಪ್ರದರ್ಶನ ತೋರಿದ್ದರು. ಆಡಿದ 13 ಪಂದ್ಯಗಳಿಂದ 446 ರನ್ ಬಾರಿಸಿದ್ದರು. ಕೀಪಿಂಗ್ ಕೂಡ ಉತ್ತಮ ಮಟ್ಟದಲ್ಲಿತ್ತು.
ಬಿಸಿಸಿಐ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಪಂತ್, ಭಾರತದ ಸಮವಸ್ತ್ರ ಧರಿಸಿ ಆಡುವುದೇ ವಿಭಿನ್ನ ಅನುಭವ. ತಂಡವನ್ನು ಸೇರಿಕೊಂಡಿರುವುದು, ಮತ್ತೆ ಸಹ ಆಟಗಾರರೊಂದಿಗೆ ಸಮಯ ಕಳೆಯಲು ಸಾಧ್ಯವಾಗಿರುವುದು, ಪರಸ್ಪರ ತಮಾಷೆ, ಸಂಭಾಷಣೆ, ನಿಜಕ್ಕೂ ಈ ಎಲ್ಲ ಕ್ಷಣಗಳನ್ನು ಆನಂದಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
ರಿಷಭ್ ಪಂತ್ ಅವರ ಗಂಭೀರ ಗಾಯವನ್ನು ಕಂಡ ಅನೇಕರು ಪಂತ್ ಕ್ರಿಕೆಟ್ ಬಾಳ್ವೆ ಇನ್ನು ಮಂದೆ ಕಷ್ಟ, ಒಂದೊಮ್ಮೆ ಅವರು ಕ್ರಿಕೆಟ್ಗೆ ಮರಳಬೇಕಾದರೂ ಹಲವು ವರ್ಷ ಬೇಕಾದಿತು ಹೀಗೆ ಹಲವು ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು. ಆದರೆ ಪಂತ್ ತಮ್ಮ ನಂಬಿಕೆ ಮತ್ತು ಕ್ರಿಕೆಟ್ಗೆ ಮರಳುವ ದೃಢ ಸಂಕಲ್ಪದಿಂದ ಕಠಿಣ ವ್ಯಾಯಾಮ ನಡೆಸಿ ಕೇವಲ 14 ತಿಂಗಳಲ್ಲಿ ಸಂಪೂರ್ಣ ಫಿಟ್ ಆಗಿ ಕ್ರಿಕೆಟ್ಗೆ ಮರಳಿದ್ದರು. ಇದೇ ಛಲ ವಿಶ್ವಕಪ್ ಗೆಲ್ಲುವಲ್ಲಿಯೂ ತಂಡಕ್ಕೆ ಇರಬೇಕು ಎನ್ನುವ ಅರ್ಥದಲ್ಲಿ ಪಂತ್ ಅವರನ್ನು ಬಿಸಿಸಿಐ ಈ ವಿಡಿಯೊದಲ್ಲಿ ತೋರಿಸಿದೆ.
ಇದನ್ನೂ ಓದಿ Rishabh Pant Video Calls: ನ್ಯೂಯಾರ್ಕ್ನಿಂದ ವಿಡಿಯೊ ಕಾಲ್ ಮಾಡಿ ರಿಂಕು ಸಿಂಗ್ಗೆ ಅಭಿನಂದಿಸಿದ ಪಂತ್
ಭಾರತ ತನ್ನ ಮೊದಲ ಲೀಗ್ ಪಂದ್ಯವನ್ನು ಜೂನ್ 5 ರಂದು ಐರ್ಲೆಂಡ್ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ಭಾರತೀಯ ಕ್ರಿಕೆಟ್ ಅಭಿಮಾನಿಗಳು ನೂತನ ಜೆರ್ಸಿ ತೊಟ್ಟು ತಂಡ ಕಪ್ ಗೆಲ್ಲಲಿ ಎಂದು ಹಾರೈಸಿದ್ದಾರೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.