ನವದೆಹಲಿ: ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಟೀಮ್ ಇಂಡಿಯಾ ಆಟಗಾರ ರಿಷಭ್ ಪಂತ್(Rishabh Pant) ಅವರನ್ನು ಬಾಲಿವುಡ್ನ ಹಿರಿಯ ನಟರಾದ ಅನುಪಮ್ ಖೇರ್ ಮತ್ತು ಅನಿಲ್ ಕಪೂರ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಶನಿವಾರ ಡೆಹ್ರಾಡೂನ್ನಲ್ಲಿರುವ ಮ್ಯಾಕ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಅನುಪಮ್ ಖೇರ್ ಮತ್ತು ಅನಿಲ್ ಕಪೂರ್ ಅವರು ಪಂತ್ ಆರೋಗ್ಯ ವಿಚಾರಿಸಿದ್ದಾರೆ. ಪಂತ್ ಭೇಟಿ ಬಳಿಕ ಮಾತನಾಡಿದ ಅನಿಲ್ ಕಪೂರ್, ರಿಷಭ್ ಪಂತ್ ಚಿಕಿತ್ಸೆಗೆ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಶೀಘ್ರ ಗುಣಮುಖರಾಗಿ ಅವರು ಮತ್ತೆ ಕ್ರಿಕೆಟ್ ಅಂಗಳಕ್ಕೆ ಮರಳುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಅಪಘಾತದ ಪೋಟೊಗಳನ್ನು ಕಂಡು ನಾನು ಗಾಬರಿಯಾದೆ. ಅದೃಷ್ಟವಶಾತ್ ಪಂತ್ ಜೀವಾಪಾಯದಿಂದ ಪಾರಾಗಿದ್ದಾರೆ. ಎಲ್ಲ ದೇವರ ಆಶೀರ್ವಾದ. ಆದ್ದರಿಂದ ದೊಡ್ಡ ಅವಘಟ ತಪ್ಪಿಹೋಗಿದೆ. ಸದ್ಯ ಪಂತ್ ಉತ್ತಮ ಚೇತರಿಕೆ ಕಾಣುತ್ತಿದ್ದಾರೆ ಎಂದು ಅನುಪಮ್ ಖೇರ್ ಹೇಳಿದ್ದಾರೆ.
ಶುಕ್ರವಾರ ಉತ್ತರಾಖಂಡದ ರೂರ್ಕಿಯಲ್ಲಿರುವ ತಮ್ಮ ಮನೆಗೆ ಪಂತ್ ಪ್ರಯಾಣಿಸುತ್ತಿದ್ದ ವೇಳೆ ಕಾರು ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡಿದ್ದರು. ಹೆದ್ದಾರಿಯ ವಿಭಜಕಕ್ಕೆ ಡಿಕ್ಕಿಯಾದ ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡಿತ್ತು. ಬೆಂಕಿ ಆವರಿಸುವ ಮುನ್ನವೇ ಹೊರಬಂದ ಕಾರಣ ಪಂತ್ ಬದುಕುಳಿದಿದ್ದರು.
ಇದನ್ನೂ ಓದಿ | Rishabh Pant | ರಿಷಭ್ ಪಂತ್ಗೆ ಹೆಚ್ಚಿನ ಚಿಕಿತ್ಸೆ ಅಗತ್ಯಬಿದ್ದರೆ ದೆಹಲಿಗೆ ಏರ್ಲಿಫ್ಟ್; ಡಿಡಿಸಿಎ