ನವದೆಹಲಿ: ಭೀಕರ ರಸ್ತೆ ಅಪಘಾತದಲ್ಲಿ ಟೀಮ್ ಇಂಡಿಯಾ ಆಟಗಾರ ರಿಷಭ್ ಪಂತ್(Rishabh Pant Car Accident) ತೀವ್ರವಾಗಿ ಗಾಯಗೊಂಡು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವಘಡದ ಸ್ಥಳವನ್ನು ನೋಡಿದರೆ ಪ್ರಾಣ ಉಳಿದಿರುವುದೇ ಪವಾಡ ಎಂಬಂತಿದೆ. ರಿಷಭ್ ಪಂತ್ ಅವರು ಕಾಲು ಹಾಗೂ ತಲೆಗೆ ಪೆಟ್ಟು ಬಿದ್ದಿರುವ ಹೊರತಾಗಿಯೂ ಕಾರಿನಿಂದ ಹೊರ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಆದರೆ ಇದೇ ವೇಳೆ ಪಂತ್ ಅವರ ಕಾರಿನಲ್ಲಿದ್ದ ಕೆಲ ಬೆಳೆಬಾಳುವ ವಸ್ತುಗಳನ್ನು ಕಳವು ಮಾಡಲಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.
ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಕಾರು ಅಪಘಾತದಲ್ಲಿ ಗಾಯಗೊಂಡು ಪಂತ್ ರಸ್ತೆ ಬದಿಯಲ್ಲಿ ಬಿದ್ದು ನರಳಾಡುತ್ತಿದ್ದರು. ಇದೇ ವೇಳೆ ಅಲ್ಲಿಗೆ ಬಂದ ಕೆಲವು ಯುವಕರು, ಪಂತ್ ಅವರಿಗೆ ಸಹಾಯ ಮಾಡುವ ಬದಲು ಅವರ ಬಳಿ ಇದ್ದ ಬ್ಯಾಗ್‌ನಿಂದ ಹಣ ಕಳವುಗೈದು ಅಲ್ಲಿಂದ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.
ಈ ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು. ಇನ್ನಷ್ಟೆ ಸತ್ಯಾಂಶ ಬೆಳಕಿಗೆ ಬರಬೇಕಾಗಿದೆ. ಪಂತ್ ಅವರ ಕಾರು ಅಪಘಾತಗೊಂಡ ವಿಚಾರವನ್ನು ಹರಿಯಾಣ ರೋಡ್‌ವೇಸ್‌ನ ಚಾಲಕ ಮತ್ತು ಕಂಡಕ್ಟರ್ ಉತ್ತರಾಖಂಡ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ತಕ್ಷಣ ನಾರ್ಸಲ್ ಚೆಕ್‌ಪೋಸ್ಟ್‌ನಲ್ಲಿ ನಿಯೋಜಿಸಲಾದ ಉತ್ತರಾಖಂಡ ಪೊಲೀಸ್ ಸಿಬ್ಬಂದಿ ಅಪಘಾತ ಸ್ಥಳಕ್ಕೆ ಧಾವಿಸಿ ಕೂಡಲೇ ಪಂತ್ ಅವರನ್ನು ಪ್ರಥಮ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಸದ್ಯ ಪಂತ್ ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.
ಇದನ್ನೂ ಓದಿ | Rishabh Pant | ಕಾರು ಅವಘಡದಲ್ಲಿ ಗಾಯಗೊಂಡಿರುವ ರಿಷಭ್ ಪಂತ್ ಐಪಿಎಲ್, ವಿಶ್ವ ಕಪ್ಗೆ ಅಲಭ್ಯ?