ನವದೆಹಲಿ: ಕಾರು ಅಪಘಾತದಲ್ಲಿ ಗಾಯಗೊಂಡು ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಿಷಭ್ ಪಂತ್ ಆರೋಗ್ಯದಲ್ಲಿ(Rishabh Pant Health) ಗಣನೀಯ ಸುಧಾರಣೆ ಕಂಡುಬಂದಿದೆ. ಈ ವಿಚಾರವನ್ನು ಪಂತ್ ತಾಯಿ ಮತ್ತು ಕುಟುಂಬದ ಮೂಲಗಳು ತಿಳಿಸಿವೆ.
ಪಂತ್ ಅವರನ್ನು ಭೇಟಿಯಾದ ಕುಟುಂಬದ ಸದಸ್ಯರು ಮತ್ತು ಗೆಳೆಯರು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದಿದ್ದಾರೆ. ಪಂತ್ ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದ್ದ ಅಪಘಾತದಲ್ಲಿ ಗಾಯಗೊಂಡಿದ್ದರು. ತಲೆ, ಬೆನ್ನು, ಮಂಡಿ ಮತ್ತು ಕಾಲಿಗೆ ಗಾಯಗಳಾಗಿದ್ದವು. ಅಪಘಾತದಲ್ಲಿ ಕಾರು ಸುಟ್ಟು ಹೋಗಿದ್ದರೂ, ಪಂತ್ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದರು.
ಇದೀಗ ಪಂತ್ ಅವರ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿರುವ ಕುಟುಂಬ ಮೂಲಗಳು ” ಕಳೆದ ಒಂದೂವರೆ ದಿನದಲ್ಲಿ ಪಂತ್ ಆರೋಗ್ಯದಲ್ಲಿ ಗಣನೀಯ ಚೇತರಿಕೆ ಕಂಡುಬಂದಿದೆ. ಆದ್ದರಿಂದ ಸದ್ಯಕ್ಕೆ ಅವರನ್ನು ಬೇರೆ ಆಸ್ಪತ್ರೆಗೆ ದಾಖಲಿಸುವ ಯೋಚನೆ ಇಲ್ಲ” ಎಂದು ಪಂತ್ ಕುಟುಂಬದ ಗೆಳೆಯರಾದ ಉಮೇಶ್ ಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ | Rishabh Pant | ಐಪಿಎಲ್ಗೆ ರಿಷಭ್ ಪಂತ್ ಅಲಭ್ಯ; ಡೆಲ್ಲಿ ತಂಡಕ್ಕೆ ಡೇವಿಡ್ ವಾರ್ನರ್ ನಾಯಕ?