ನವದೆಹಲಿ: ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟಿಗ ರಿಷಭ್ ಪಂತ್(Rishabh Pant) ಅವರು ‘ತಲೈವಾ’ ಖ್ಯಾತಿಯ ಸ್ಟಾರ್ ನಟ, ರಜನಿಕಾಂತ್(Star Actor Rajinikanth) ಅವರ ಶೈಲಿಯಲ್ಲೇ ಫೋಟೊ ಶೂಟ್ ಮಾಡಿಸಿಕೊಂಡಿದ್ದಾರೆ. 2016ರಲ್ಲಿ ತೆರೆ ಕಂಡ ಕಬಾಲಿ ಸಿನಿಮಾದಲ್ಲಿ ರಜನಿಕಾಂತ್ ಅವರು ಸೋಫಾದ ರೀತಿಯ ಕುರ್ಚಿಯೊಂದರಲ್ಲಿ ಕುಳಿತ ಶೈಲಿಯಲ್ಲೇ ಪಂತ್ ಕೂಡ ಕುಳಿತು ಫೋಟೊ(Thalaiva Look Rishabh Pant) ತೆಗೆಸಿಕೊಂಡಿದ್ದಾರೆ. ಈ ಫೋಟೊವನ್ನು ತಮ್ಮ ಇನ್ಸ್ಟಾಗ್ರಾಮ್ ಮತ್ತು ಟ್ವಿಟರ್ ಎಕ್ಸ್ನಲ್ಲಿ ಹಂಚಿಕೊಂಡಿರುವ ಪಂತ್ ‘ತಲೈವಾ’ ಎಂದು ಬರೆದುಕೊಂಡಿದ್ದಾರೆ. ಸದ್ಯ ಈ ಫೋಟೊ ವೈರಲ್ ಆಗುತ್ತಿದೆ.
ರಿಷಭ್ ಪಂತ್ ಅವರು ರಜನಿಕಾಂತ್ ಶೈಲಿಯಲ್ಲೇ ಫೋಟೊ ಶೂಟ್ ಮಾಡಿಸಿದನ್ನು ನೋಡುವಾಗ ಪಂತ್ ಮುಂದಿನ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡುವುದು ಬಹುತೇಕ ಖಚಿತ ಎನ್ನುವ ಸುಳಿವು ಬಿಟ್ಟುಕೊಟ್ಟಂತಿದೆ. ಕೆಲವು ದಿನಗಳ ಹಿಂದೆಯೇ ಪಂತ್ ಡೆಲ್ಲಿ ತಂಡದ ಪರ ರಿಟೈನ್ ಆಸಕ್ತಿ ಹೊಂದಿಲ್ಲ ಅವರು ಚೆನ್ನೈ ತಂಡ ಸೇರಲಿದ್ದಾರೆ ಎನ್ನಲಾಗಿತ್ತು. ಇದೀಗ ತಲೈವಾ ಎಂದು ರಜನಿಕಾಂತ್ ಶೈಲಿಯಲ್ಲೇ ಫೋಟೊ ತೆಗೆಸಿಕೊಂಡಿರುವುದನ್ನು ನೋಡುವಾಗ ಈ ವರದಿ ಸತ್ಯವಾದಂತೆ ತೋರುತ್ತಿದೆ. ಧೋನಿ ಕೂಡ 2016ರಲ್ಲಿ ರಜನಿಕಾಂತ್ ಶೈಲಿಯಲ್ಲೇ ಫೋಟೊ ಶೂಟ್ ಮಾಡಿಸಿದ್ದರು.
ಮಹೇಂದ್ರ ಸಿಂಗ್ ಧೋನಿ ಮುಂದಿನ ವರ್ಷ ಐಪಿಎಲ್ ಆಡುವುದು ಖಚಿತತೆ ಇಲ್ಲ. ಇಂಪ್ಯಾಕ್ಟ್ ನಿಯಮ ಇದ್ದರೆ ಆಡುವುದಾಗಿ ಫ್ರಾಂಚೈಸಿ ಮೂಲಗಳು ಈಗಾಗಲೇ ಮಾಹಿತಿ ನೀಡಿದೆ. ಈ ಬಾರಿಯೇ ಧೋನಿ ನಿವೃತ್ತಿಯಾಗಬೇಕಿತ್ತು. ಆದರೆ ಅವರು ಇನ್ನೂ ನಿವೃತ್ತಿ ಪ್ರಕಟಿಸಿಲ್ಲ. ತಂಡದಲ್ಲಿ ಸೂಕ್ತ ವಿಕೆಟ್ ಕೀಪರ್ ಇಲ್ಲದ ಕಾರಣ ಧೋನಿ ತಮ್ಮ ಕಾಲು ನೋವಿನ ಮಧ್ಯೆಯೂ ಸಂಪೂರ್ಣವಾಗಿ ಕೀಪಿಂಗ್ ನಡೆಸಿದ್ದರು. ಧೋನಿ ಸ್ಥಾನಕ್ಕೆ ಪಂತ್ ಅವರನ್ನು ಆಯ್ಕೆ ಮಾಡುವ ಸಾಧ್ಯತೆಯೊಂದು ಕಂಡುಬಂದಿದೆ.
ಮಹೇಂದ್ರ ಸಿಂಗ್ ಧೋನಿ ಮನೆಯ ಯಾವುದೇ ವಿಶೇಷ ಕಾರ್ಯಕ್ರಮದಲ್ಲೂ, ರಿಷಭ್ ಪಂತ್ ಕಾಣಿಸಿಕೊಳ್ಳುವುದು ಸರ್ವೇ ಸಾಮಾನ್ಯ. ಅಣ್ಣನ ಸ್ಥಾನದಲ್ಲಿ ನಿಂತು ಧೋನಿ ಅವರು ಪಂತ್ಗೆ ಸಲಹೆ ನೀಡುತ್ತಾರೆ. ಪಂತ್ ಕೂಡ ಧೋನಿ ಪರಿವಾರದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಹೀಗಾಗಿ ಧೋನಿಯೇ ಪಂತ್ ಅವರನ್ನು ಸಿಎಸ್ಕೆ ತಂಡಕ್ಕೆ ಆಹ್ವಾನಿಸಬಹುದು. ಪಂತ್ ಚೆನ್ನೈ ಸೇರಿದರೆ ಕೀಪಿಂಗ್ ನಡೆಸಬಹುದು. ಧೋನಿ ಇಂಪ್ಯಾಕ್ಟ್ ಆಟಗಾರನಾಗಿ ಬ್ಯಾಟಿಂಗ್ ಮಾತ್ರ ನಡೆಸುವ ಸಾಧ್ಯತೆ ಇದೆ.
ಇದನ್ನೂ ಓದಿ Rishabh Pant: ಕೀಪಿಂಗ್ ಬಿಟ್ಟು ಬೌಲಿಂಗ್ ನಡೆಸಿದ ರಿಷಭ್ ಪಂತ್; ವಿಡಿಯೊ ವೈರಲ್
ಬೌಲಿಂಗ್ ನಡೆಸಿದ್ದ ಪಂತ್
ಕೆಲ ದಿನಗಳ ಹಿಂದಷ್ಟೇ ರಿಷಭ್ ಪಂತ್ ದೆಹಲಿ ಪ್ರೀಮಿಯರ್ ಲೀಗ್ 2024 ರ(Delhi Premier League T20 2024) ಉದ್ಘಾಟನಾ ಆವೃತ್ತಿಯ ಪಂದ್ಯದಲ್ಲಿ ಬೌಲಿಂಗ್(rishabh pant bowling) ನಡೆಸುವ ಮೂಲಕ ಗಮನಸೆಳೆದಿದ್ದರು. ಪಂತ್ ಪಂದ್ಯದ ಅಂತಿಮ ಓವರ್ನಲ್ಲಿ ಎದುರಾಳಿ ಸೌತ್ ಡೆಲ್ಲಿ ತಂಡಕ್ಕೆ 6 ಎಸೆತಗಳಲ್ಲಿ ಗೆಲುವಿಗೆ ಒಂದು ರನ್ ಬೇಕಿದ್ದಾಗ ಸ್ಪಿನ್ ಬೌಲಿಂಗ್ ನಡೆಸಿದ್ದರು. ಬೌಲಿಂಗ್ ನಡೆಸಿದ್ದ ವಿಡಿಯೊ ವೈರಲ್ ಆಗಿತ್ತು.