ಮುಂಬಯಿ: ಕಾರು ಅಪಘಾತದಲ್ಲಿ ಗಾಯಗೊಂಡ ಕ್ರಿಕೆಟಿಗ ರಿಷಭ್ ಪಂತ್(Rishabh Pant) ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬುಧವಾರ ಡೆಹ್ರಾಡೂನ್‌ನಿಂದ ಮುಂಬೈಗೆ ವಿಮಾನದ ಮೂಲಕ ಸ್ಥಳಾಂತರಿಸಲಾಗಿದೆ. ಆದರೆ ಇದೀಗ ಬಂದಿರುವ ಮಾಹಿತಿ ಪ್ರಕಾರ ಅವರನ್ನು ಲಂಡನ್ಗೆ ಕಳುಹಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಡಿಸೆಂಬರ್ 30 ರಂದು ಸಂಭವಿಸಿದ್ದ ಕಾರು ಅಪಘಾತದಲ್ಲಿ ಪಂತ್ ಗಾಯ ಗೊಂಡಿದ್ದರು. ಬಳಿಕ ಡೆಹ್ರಾಡೂನ್ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಪಂತ್ಗೆ ಮುಖದ ಗಾಯಗಳಿಗೆ ಚಿಕಿತ್ಸೆ ನೀಡಿ ಪ್ಲಾಸ್ಟಿಕ್ ಸರ್ಜರಿ ಮಾಡಲಾಗಿತ್ತು. ಆದರೆ ಅವರ ಕಾಲುಗಳ ಅಸ್ಥಿಮಜ್ಜೆಯಲ್ಲಿ ಊತ ಕಾಣಿಸಿಕೊಂಡ ಕಾರಣ ಉನ್ನತಮಟ್ಟದ ಚಿಕಿತ್ಸೆಗಾಗಿ ಬಿಸಿಸಿಐ ಪಂತ್ ಅವರನ್ನು ಬುಧವಾರ ಮುಂಬೈಗೆ ಸ್ಥಳಾಂತರಿಸಲಾಗಿತ್ತು. ಇದೀಗ ಲಂಡನ್ಗೆ ಶಿಫ್ಟ್ ಮಾಡುವುದಾಗಿ ವರದಿಯಾಗಿದೆ.
ಲಂಡನ್ನಲ್ಲಿ ಶಸ್ತ್ರಚಿಕಿತ್ಸೆ!
ಸದ್ಯ ಪಂತ್ ಮುಂಬೈನ ಅಂಬಾನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಅವರಿಗೆ ಹೆಚ್ಚಿನ ಚಿಕಿತ್ಸೆ ನೀಡಲು ಮುಂಬೈಯಿಂದ ಲಂಡನ್ಗೆ ಸ್ಥಳಾಂತರಿಸುವ ಚಿಂತನೆ ನಡೆದಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಮಾಹಿತಿ ನೀಡಿರುವುದಾಗಿ ವರದಿಯಾಗಿದೆ. ಜತೆಗೆ ಪಂತ್ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಸುಮಾರು 9 ತಿಂಗಳು ಬೇಕಾಗಬಹುದು ಎಂದು ತಿಳಿದುಬಂದಿದೆ. ಆದರೆ ಈ ಬಗ್ಗೆ ಬಿಸಿಸಿಐ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.
ಇದನ್ನೂ ಓದಿ | Rishabh Pant | ನೀವೊಬ್ಬ ಫೈಟರ್; ರಿಷಭ್ ಪಂತ್ ಚೇತರಿಕೆಗೆ ಟೀಮ್ ಇಂಡಿಯಾ ಆಟಗಾರರ ಹಾರೈಕೆ