ನವದೆಹಲಿ: ಭೀಕರ ಕಾರು ಅಪಘಾತಕ್ಕೀಡಾಗಿ ನೋವಿನಿಂದ ನರಳುತ್ತಿದ್ದ ಕ್ರಿಕೆಟಿಗ ರಿಷಭ್ ಪಂತ್ (Rishabh Pant) ಅವರ ಜೀವ ಉಳಿಸಿ ಮಾನವೀಯತೆ ಮೆರೆದ ಬಸ್ ಚಾಲಕ ಮತ್ತು ಕಂಡಕ್ಟರ್‌ಗೆ, ಜನವರಿ 26 ಗಣರಾಜ್ಯೋತ್ಸವದಂದು ಸನ್ಮಾನ ಮಾಡಲಾಗುವುದು ಎಂದು ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ.
ರಿಷಭ್ ಪಂತ್ ಜೀವ ಉಳಿಸುವಲ್ಲಿ ನೆರವಾಗಿದ್ದ ಹರ್ಯಾಣ ರೋಡ್‌ವೇಸ್‌ನ ಚಾಲಕ ಸುನೀಲ್ ಕುಮಾರ್ ಮತ್ತು ಕಂಡಕ್ಟರ್ ಪರಂಜೀತ್ ಅವರನ್ನು ಈಗಾಗಲೇ ಹರ್ಯಾಣ ರಾಜ್ಯ ಸಾರಿಗೆ ಸಂಸ್ಥೆ ಸನ್ಮಾನಿಸಿ, ಗೌರವಿಸಿದೆ. ಇದೀಗ ಉತ್ತರಾಖಂಡ್ ಸರ್ಕಾರ ಕೂಡ ಈ ಇಬ್ಬರನ್ನು ಸನ್ಮಾನಿಸಲು ನಿರ್ಧರಿಸಿದೆ.
ಜನವರಿ 26 ರಂದು ಸನ್ಮಾನ
ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ತಮ್ಮ ಸರ್ಕಾರ ಜನವರಿ 26, ಗಣರಾಜ್ಯೋತ್ಸವದಂದು ಈ ಇಬ್ಬರನ್ನೂ ಗೌರವಿಸಲಿದೆ ಎಂದು ಭಾನುವಾರ ಘೋಷಿಸಿದ್ದಾರೆ. ಸುದ್ದಿ ಸಂಸ್ಥೆ ಎಎನ್ಐ ಜತೆಗೆ ಮಾತನಾಡಿದ ಧಾಮಿ, “ಹರ್ಯಾಣ ರೋಡ್‌ವೇಸ್‌ನ ಚಾಲಕ ಮತ್ತು ಕಂಡಕ್ಟರ್ ಕ್ರಿಕೆಟಿಗ ರಿಷಭ್ ಪಂತ್ ಅವರ ಜೀವವನ್ನು ಉಳಿಸಿ ಮಾನವೀಯತೆ ತೋರಿದ್ದಾರೆ. ಹೀಗಾಗಿ ಅವರನ್ನು ಜನವರಿ 26 ರಂದು ಸನ್ಮಾನಿಸಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ | Rishabh Pant | ಅಪಘಾತದಿಂದ ಗಾಯಗೊಂಡಾಗಲೂ ತಾಯಿಯನ್ನೇ ಕನವರಿಸುತ್ತಿದ್ದ ರಿಷಭ್ ಪಂತ್!